Connect with us

ದಕ್ಷಿಣ ಕನ್ನಡ

ದೇವರಿಗೆ ಚಿನ್ನದ ಕವಚ ನೀಡುವ ತನಕ ಚಿನ್ನ ಧರಿಸುವುದಿಲ್ಲ ಎಂಬ ಪತಿಯ ಮನದಿಚ್ಚೆ ನೆರವೇರಿಸಲು ನಳೀಲು ಶ್ರೀ ಸುಬ್ರಹ್ಮಣ್ಯನಿಗೆ ಚಿನ್ನ  ಸಮರ್ಪಿಸಿದ ಡಾ.ವೀಣಾ ಸಂತೋಷ್ ರೈ

Published

on



Ad Widget

Ad Widget

Ad Widget

Ad Widget

ಪುತ್ತೂರು:  ಕಾರಣಿಕ ಪ್ರಸಿದ್ದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಅದ್ದೂರಿಯಾ ನಡೆಯುತ್ತಿದ್ದು, ಈ ವೇಳೆ ಶ್ರೀ ದೇವರಿಗೆ ಚಿನ್ನದ ಕವಚವದ ಸಮರ್ಪಣೆಯಾಗಿದೆ.

Ad Widget

Ad Widget

Ad Widget

Ad Widget

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ.ವೀಣಾ ಸಂತೋಷ್ ರೈ ಯವರು ಇದನ್ನು  ಸಮರ್ಪಿಸಿದ್ದಾರೆ.  ಪತಿಯ ಇಚ್ಚೆಯನ್ನು ಈಡೇರಿಸುವ  ಉದ್ದೇಶದಿಂದ  ತನ್ನ ಸ್ವಂತ ದುಡಿಮೆಯಿಂದ ಡಾ. ವೀಣಾರವರು ಈ ಸಮರ್ಪಣೆ ಮಾಡಿದ್ದಾರೆ. ಸಂತೋಷ್ ಕುಮಾರ್ ರೈ ಅವರು ಪತ್ನಿ ಮಗಳು ಸಮೇತರಾಗಿ ಶ್ರೀ ದೇವರಿಗೆ ಸಮರ್ಪಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಬಳಿಕ ಸಂತೋಷ್ ಕುಮಾರ್ ರೈ ಅವರ ತಾಯಿ ಗಿರಿಜಾ ರೈ ನಳೀಲು ಅವರು ದೇವರಿಗೆ ಚಿನ್ನದ ಮೋಹನ‌ ಮಾಲೆ ಸಮರ್ಪಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ  ಡಾ.ವೀಣಾ   ನಮ್ಮ ವಿವಾಹದ ಸಂದರ್ಭ  ಇದೊಂದು ಸಣ್ಣ ದೇವಸ್ಥಾನವಾಗಿತ್ತು. ಬಳಿಕ ಇದು ಅಭಿವೃದ್ದಿ ಪಥದತ್ತ ಸಾಗಿತ್ತು.  ನನ್ನ ಪತಿ ಭಕ್ತರನ್ನು ಒಗ್ಗೂಡಿಸಿಕೊಂಡು ದೇವಸ್ಥಾನದ ಅಭಿವೃದ್ದಿ ಮಾಡುತ್ತಾ ಸಾಗಿದರು ಎಂದು ಅವರು ವಿವರಿಸಿದರು.



Ad Widget

ಪ್ರಸಕ್ತ ಬ್ರಹ್ಮಕಲಶೋತ್ಸವದಲ್ಲಿ ನಾವೆಲ್ಲ ಇದ್ದೇವೆ. ಶ್ರೀ ಸುಬ್ರಹ್ಮಣ್ಯ ದೇವರು ನಮ್ಮ ಇಷ್ಠಾರ್ಥಗಳನ್ನು ಇಡೇರಿಸುತ್ತಾ ಬಂದಿದ್ದಾರೆ. ಈ ನಡುವೆ ನಮ್ಮ ಪತಿಯು  ದೇವರಿಗೆ ಚಿನ್ನದ ಕವಚ ನೀಡುವ ತನಕ ತಾನು ಚಿನ್ನ ಧರಿಸುವುದಿಲ್ಲ ಎಂದು ಸಂಕಲ್ಪ ಮಾಡಿಕೊಂಡಿದ್ದರು. ಪತಿಯು ಮದುವೆಯಾದ ಬಳಿಕ ನನಗೆ ಶಿಕ್ಷಣ ನೀಡಿ ಇಷ್ಟು ಎತ್ತರಕ್ಕೆ ಬೆಳೆಯಲು ಕಾರಣರಾಗಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಅವರು ಸಂಕಲ್ಪದಂತೆ ನನ್ನ ಸ್ವಂತ ಹಣದಿಂದ ಚಿನ್ನದ ಕವಚವನ್ನು ದೇವರಿಗೆ ಸಮರ್ಪಿಸಿದ್ದೇವೆ. ಅಲ್ಲದೆ ಪತಿಗೆ ಚಿನ್ನದ ಸರವನ್ನು ನೀಡಿದ್ದೇನೆ ಎಂದು ತಿಳಿಸಿದರು

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading