ಸುಳ್ಯ
ಸುಳ್ಯ ಬಿಜೆಪಿ ಮಂಡಲ :ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅಧಿಕಾರ ಸ್ವೀಕಾರ -ಪ್ರಧಾನ ಕಾಯ೯ದಶಿ೯ಗಳಾಗಿ ವಿನಯಕುಮಾರ್ ಕಂದಡ್ಕ ಹಾಗೂ ಪ್ರದೀಪ್ ರೈ ಮನವಳಿಕೆ ಆಯ್ಕೆ
ಸುಳ್ಯ : ಸುಳ್ಯ ಬಿಜೆಪಿ ಮಂಡಲ ಕಾಯ೯ನಿವ೯ಹಣಾ ತಂಡದ ಸಭೆಯಲ್ಲಿ ಬಿಜೆಪಿ ಮಂಡಲ ಸಮಿತಿಯ ನೂತನ ಪದಾಧಿಕಾರಿಗಳ ಘೋಷಣೆ ಮಾಡಲಾಯಿತು. ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅಧಿಕಾರ ಸ್ವೀಕರಿಸಿದರು. ಸಭೆಯಲ್ಲಿ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ನೂತನ ಅಧ್ಯಕ್ಷ ವೆಂಕಟ್ ವಳಲಂಬೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಪ್ರಧಾನ ಕಾಯ೯ದಶಿ೯ಗಳಾಗಿ ವಿನಯಕುಮಾರ್ ಕಂದಡ್ಕ ಹಾಗೂ ಪ್ರದೀಪ್ ರೈ ಮನವಳಿಕೆ, ಉಪಾಧ್ಯಕ್ಷರಾಗಿ ಶ್ರೀನಾಥ್ ರೈ ಬಾಳಿಲ, ರಾಮಕೃಷ್ಣ ಭಟ್ ಕುರುಂಬಡೇಲು, ಶಿವಾನಂದ ಕುಕ್ಕುಂಬಳ, ಶುಭದ ಎಸ್. ರೈ, ರಮೇಶ್ ಕಲ್ಪುರೆ, ಭಾಸ್ಕರ ಗೌಡ ಇಚ್ಚಿಲಂಪಾಡಿ ನೇಮಕಗೊಂಡರು.
ಕಾಯ೯ದಶಿ೯ಗಳಾಗಿ ಶಿವಪ್ರಸಾದ್ ನಡುತೋಟ, ಗಣೇಶ್ ಉದನಡ್ಕ, ಜಯರಾಜ್ ಕುಕ್ಕೆಟ್ಟಿ, ಶಂಕರಲಿಂಗಂ ತೊಡಿಕಾನ, ತೇಜಸ್ವಿನಿ ಕಟ್ಟಪುಣಿ, ಯಶೋಧಾ ಬಾಳೆಗುಡ್ಡೆ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಸುಬೋದ್ ಶೆಟ್ಟಿ ಮೇನಾಲರವರು ನೇಮಕಗೊಂಡಿದ್ದಾರೆ ಎಂದು ಸಭೆಯಲ್ಲಿ ನೂತನ ಅಧ್ಯಕ್ಷ ವೆಂಕಟ್ ವಳಲಂಬೆ ಘೋಷಣೆ ಮಾಡಿದರು. ವಿವಿಧ ಮೋಚಾ೯ಗಳ ಪದಾಧಿಕಾರಿಗಳು ಹಾಗೂ ಮಂಡಲ ಸಮಿತಿ ಸದಸ್ಯರ ನೇಮಕ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷರು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾಯ೯ದಶಿ೯ ಕಿಶೋರ್ ಕುಮಾರ್ ಬೊಟ್ಯಾಡಿ, ರಾಜ್ಯ ರೈತ ಮೋಚಾ೯ ಕಾಯ೯ದಶಿ೯ ಎ.ವಿ. ತೀಥ೯ರಾಮ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಹುಳಿದೊಟ್ಟು, ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಕಾಯ೯ದಶಿ೯ ವಿನಯ ಮುಳುಗಾಡು, ಜಿಲ್ಲಾ ಎಸ್.ಟಿ. ಮೋಚಾ೯ ಪ್ರಧಾನ ಕಾಯ೯ದಶಿ೯ ಪೂವಪ್ಪ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಭೋದ್ ಶೆಟ್ಟಿ ಮೇನಾಲ ಸ್ವಾಗತಿಸಿ, ರಾಕೇಶ್ ರೈ ಕೆಡೆಂಜಿ ಕಾಯ೯ಕ್ರಮ ನಿರೂಪಿಸಿದರು. ಮುಖಂಡರಾದ ಎಸ್.ಎನ್. ಮನ್ಮಥ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್7 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ13 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು15 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized14 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್15 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ13 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್14 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















