ದಕ್ಷಿಣ ಕನ್ನಡ
Arecanut Price Drop :ಅಡಿಕೆ ಅಕ್ರಮ ಆಮದಿನಿಂದ ದೇಶೀ ಅಡಿಕೆ ಮಾರುಕಟ್ಟೆಗೆ ತೀವ್ರ ಹೊಡೆತ – ಪ್ರಧಾನ ಮಂತ್ರಿಯವರ ಶೀಘ್ರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೋ ಆಗ್ರಹ
ಪುತ್ತೂರು : ಇತ್ತೀಚೆಗೆ ವಿದೇಶಿ ಅಡಿಕೆ ಅಕ್ರಮವಾಗಿ ಆಮದಾಗುತ್ತಿದ್ದು, ದೇಶದೊಳಗೆ ಬರುತ್ತಿದೆ. ಇದು ದೇಶೀ ಅಡಿಕೆ ಮಾರುಕಟ್ಟೆಗೆ ತೀವ್ರ ಹೊಡೆತವನ್ನು ನೀಡುತ್ತಿದೆ. ಆಮದು ಮಾಡಿಕೊಂಡ ಅಡಿಕೆಯನ್ನು ಕಡಿಮೆ ದರದಲ್ಲಿ ಹರಾಜು ಮೂಲಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದು, ಇದರಿಂದಾಗಿ ದೇಶದ ಅಡಿಕೆ ಮಾರುಕಟ್ಟೆ ನಾಶವಾಗುತ್ತಿರುವ ಬಗ್ಗೆ ಕ್ಯಾಂಪ್ಕೋ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ.
ಕೇಂದ್ರ ಸರಕಾರವು ಕ್ಯಾಂಪ್ಕೋದ ನಿರಂತರ ಪ್ರಯತ್ನವನ್ನು ಪರಿಗಣಿಸಿದ್ದು, ಇತ್ತೀಚೆಗೆ ಆಮದು ಬೆಲೆಯನ್ನು ಕನಿಷ್ಠ ಕಿಲೋಗೆ 351 ರೂಪಾಯಿಗೆ ನಿಗದಿಪಡಿಸಿತ್ತು. ಆದರೆ ಅಕ್ರಮ ಆಮದು ಅಡಿಕೆಯನ್ನು ಕಷ್ಟಮ್ಸ್, DRI ಅಥವಾ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡು ತಾವು ನಡೆಸುವ ಹರಾಜಿನಲ್ಲಿ ಕನಿಷ್ಠ ಆಮದು ಬೆಲೆಗಿಂತ ಕಡಿಮೆ ಬೆಲೆಯಲ್ಲಿ ವತ೯ಕರು ಖರೀದಿ ಮಾಡಿ ಮಾರುಕಟ್ಟೆಗೆ ಬಿಡುಗಡೆ ಮಾಡುವುದರಿಂದ ಪರಿಸ್ಥಿತಿ ಇನ್ನಷ್ಟು ಹದಕೆಟ್ಟಂತಾಗಿದೆ.
ವಿದೇಶಗಳಾದ ಇಂಡೋನೇಷ್ಯಾ, ಬಮಾ೯ ಮುಂತದವುಗಳಿಂದ ಆಮದಾಗುತ್ತಿರುವ ಅಡಿಕೆಯ ಗುಣಮಟ್ಟ ತುಂಬಾ ಕಳಪೆಯಾಗಿದ್ದು, ಇದು FSSAIನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತಿಲ್ಲ ಅಲ್ಲದೆ ಗ್ರಾಹಕರ ಉಪಯೋಗಕ್ಕೆ ಯೋಗ್ಯವಾಗಿರುವುದಿಲ್ಲ. ಆದುದರಿಂದ ವಶಪಡಿಸಿಕೊಂಡ ಅಡಿಕೆಯ ಗುಣಮಟ್ಟದ ಪರೀಕ್ಷೆಯನ್ನು ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಕಟ್ಟುನಿಟ್ಟಾಗಿ ನಡೆಸಬೇಕೆಂದು ಪ್ರಧಾನಮಂತ್ರಿಯವರನ್ನು ಕ್ಯಾಂಪ್ಕೋ ಆಗ್ರಹಿಸಿದೆ.
ಕ್ಯಾಂಪ್ಕೋ ಅಧ್ಯಕ್ಷರು, ಅಕ್ರಮ ಆಮದಾಗುತ್ತಿರುವ ಅಡಿಕೆ ದೇಶೀ ಮಾರುಕಟ್ಟೆಗೆ ತೀವ್ರ ರೀತಿಯ ಕೆಟ್ಟ ಪರಿಣಾಮ ನೀಡುವುತ್ತಿರುವುದರ ಬಗ್ಗೆ ಪ್ರಧಾನಮಂತ್ರಿಯವರ ಗಮನ ಸೆಳೆಯುವ ಪ್ರಯತ್ನವನ್ನು ಮಾಡಿದ್ದಾರೆ. ಕನಾ೯ಟಕದ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳ ರೈತರು ಜೀವನಾಧರಕ್ಕಾಗಿ ಅಡಿಕೆಯನ್ನೇ ಅವಲಂಭಿಸಿದ್ದು, ವಿದೇಶಿ ಅಡಿಕೆಯ ಆಮದು ಇಲ್ಲಿನ ರೈತರ ಜೀವನವನ್ನು ನರಕ ಸದೃಶಗೊಳಿಸಿದೆ.
ಪ್ರಧಾನ ಮಂತ್ರಿಯವರ ಮಧ್ಯಪ್ರವೇಶ ರೈತರ ಜೀವನವನ್ನು ಹಸನಾಗಿಸುವುದು ಮಾತ್ರವಲ್ಲದೆ, ನೆಲಕಚ್ಚಿರುವ ಮಾರುಕಟ್ಟೆಯ ಚೇತರಿಕೆಗೂ ದಾರಿಯಾಗಲಿದೆ ಎಂದು ಕ್ಯಾಂಪ್ಕೋ ಮನವಿ ಮಾಡಿದೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್14 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್7 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಮಂಗಳೂರು15 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ12 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
Uncategorized14 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್15 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ13 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್13 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

















