ಕ್ರೈಂ
Bantwal – Auto Accident ಬಂಟ್ವಾಳ : ರಿಕ್ಷಾ ಅಪಘಾತ – ಪ್ರಕರಣ ದಾಖಲು
ಬಂಟ್ವಾಳ : ವಿಟ್ಲ ಸಮೀಪದ ಪಡಿ ಬಾಗಿಲು ಎಂಬಲ್ಲಿ ಎರಡು ರಿಕ್ಷಾಗಳ ಮಧ್ಯೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದ್ದು ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಕ್ಷಾ ಚಾಲಕ ರವಿ ಕುಮಾರ್ ಎಂಬವರ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮತ್ತೊಂದು ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರೊಬ್ಬರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಅಳಿಕೆ ಗ್ರಾಮ ಮತ್ತು ಅಂಚೆ ನಿವಾಸಿ ಶ್ರೀಮತಿ ಶರ್ಮಿಳ (39) ಎಂಬವರು ದೂರುದಾರರು. ಅವರು ತನ್ನ ಮಗಳೊಂದಿಗೆ, ಹಮೀದ್ ಎಂಬವರ ಆಟೋ ರಿಕ್ಷಾದಲ್ಲಿ ಇತರ ಪ್ರಯಾಣಿಕರೊಂದಿಗೆ ವಿಟ್ಲ ಕಡೆಗೆ ಬರುತ್ತಿದ್ದಾಗ, ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಪಡಿಬಾಗಿಲು ಎಂಬಲ್ಲಿ, ಎದುರುನಿಂದ ಬರುತ್ತಿದ್ದ ಆಟೋ ರಿಕ್ಷಾವನ್ನು, ಅದರ ಚಾಲಕ ರವಿಕುಮಾರವರು ಅಜಾಗರೂಕತೆ ಮತ್ತು ದುಡುಕುತನದಿಂದ ಚಲಾಯಿಸಿಕೊಂಡು ಬಂದು ತಾವು ಪ್ರಯಾಣಿಸುತ್ತಿದ್ದ ರಿಕ್ಷಾಕ್ಕೆ ಮುಖಾ-ಮುಖಿ ಡಿಕ್ಕಿ ಹೊಡೆದಿದ್ದಾರೆ ಎಂದು ದೂರು ನೀಡಿದ್ದಾರೆ.
ರಿಕ್ಷಾ ಮಗುಚಿ ಬಿದ್ದಿದ್ದು, ಕೂಡಲೇ ಅಲ್ಲಿ ಸೇರಿದವರು ರಿಕ್ಷಾವನ್ನು ಎತ್ತಿ ಅದರೊಳಗಿದ್ದ ಚಾಲಕ ಹಮೀದರವರನ್ನು ಸೇರಿ ಇತರೆ ಪ್ರಯಾಣಿಕರನ್ನು ಹೊರ ತೆಗೆದು ಉಪಚರಿಸಿ, ಗಾಯಗೊಂಡವರನ್ನು ಸ್ಥಳಕ್ಕೆ ಬಂದ ಬೇರೆ ಬೇರೆ ವಾಹನಗಳಲ್ಲಿ ಚಿಕಿತ್ಸೆಗೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು.
ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿ ತೀವ್ರ ಗಾಯಗೊಂಡ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಬೇರೆ-ಬೇರೆ ಆಸ್ಪತ್ರೆಗಳಿಗೆ ಕಳುಹಿಸಿದ್ದು, ಗಾಯಾಳುಗಳ ಪೈಕಿ ಅಮ್ಮು ಮೂಲ್ಯ ಎಂಬವರು ತೀವ್ರ ತರಹದ ಗಾಯಗೊಂಡು ಮೃತಪಟ್ಟಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ: 279,337,338, 304(A) ರಂತೆಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ಬಿಗ್ ನ್ಯೂಸ್23 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್22 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್21 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ21 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ20 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ20 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು19 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















