Uncategorized
Love Jihad ಉಳ್ಳಾಲ : ನಾಪತ್ತೆಯಾದ ಪುತ್ತೂರಿನ PHD ವಿದ್ಯಾರ್ಥಿನಿಯ ಸ್ಕೂಟರ್ ಸುರತ್ಕಲ್ʼನಲ್ಲಿ ಪತ್ತೆ – ಅನ್ಯಮತೀಯ ಯುವಕನಿಂದ ಡ್ರಗ್ಸ್ʼನ ಆಮೀಷವೊಡ್ಡಿ ಅಪಹರಣ : ಬಜರಂಗ ದಳ ಆರೋಪ ; ಹೊನ್ನಾವರ, ಬೆಂಗಳೂರಿನಲ್ಲಿ ಪೊಲೀಸರ ತನಿಖೆ
ಉಳ್ಳಾಲ ಸಮೀಪದ ಕೋಟೆಕಾರು ಮಾಡೂರು ಬಳಿಯ ಪಿಜಿಯಲ್ಲಿ ವಾಸ್ತವ್ಯವಿದ್ದ ಪುತ್ತೂರು ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಾರದ ಹಿಂದೆ ಪ್ರಕರಣ ದಾಖಲಾಗಿದ್ದು, ಫೆ.24ರಂದು ವಿದ್ಯಾರ್ಥಿನಿ ಬಳಸುತ್ತಿದ್ದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಮುಕ್ವೆ ನಿವಾಸಿ ದಿ. ಸತೀಶ್ ಹೆಬ್ಬಾರ್ ಪುತ್ರಿ ಚೈತ್ರಾ ಹೆಬ್ಬಾರ್ (27) ನಾಪತ್ತೆಯಾದವರು.
ಸದ್ಯ ಪುತ್ತೂರಿನ ಕೂರ್ನಡ್ಕದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿರುವ ಬಂಟ್ವಾಳ ಮೂಲದ ಅನ್ಯಮತೀಯ ಯುವಕ ವಿದ್ಯಾರ್ಥಿನಿಯನ್ನು ಅಪಹರಿಸಿರುವ ಸಾಧ್ಯತೆ ಇದ್ದು, ಆತನನ್ನು ಬಂಧಿಸಬೇಕು ಎಂದು ಬಜರಂಗದಳ ಒತ್ತಾಯಿಸಿದೆ. ಈ ಅನ್ಯಮತೀಯ ಯುವಕ ಮಾದಕ ವಸ್ತು ವ್ಯಸನಿ. ವಿದ್ಯಾರ್ಥಿನಿಯನ್ನು ಮಾದಕದ್ರವ್ಯದ ಆಮೀಷವೊಡ್ಡಿ ಈ ಯುವಕ ಅಪಹರಿಸಿದ್ದಾನೆ ಎಂದು ಬಜರಂಗ ದಳ ಆರೋಪಿಸಿದೆ.
ಚೈತ್ರಾರವರು ಕೋಟೆಕಾರು ಮಾಡೂರು ಬಳಿಯ ಖಾಸಗಿ ಪಿಜಿಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿನಿ ಆಹಾರ ಭದ್ರತೆ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದರು. ಫೆ. 17ರಂದು ಪಿ.ಜಿಯಿಂದ ಹೊರಗೆ ಹೋಗಿದ್ದ ಅವರು ಕಾಲೇಜಿಗೂ ಹೋಗದೆ, ಮರಳಿ ಪಿ.ಜಿಗೂ ಬಾರದೆ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯ ಚಿಕ್ಕಪ್ಪ ಪ್ರಕಾಶ್ ಹೆಬ್ಬಾರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತನಿಖೆ ಚುರುಕು
ನಾಪತ್ತೆಯಾಗಿರುವ ಚೈತ್ರಾ ಅವರ ಸ್ಕೂಟರ್ ಸುರತ್ಕಲ್ ಕೋಟೆಕಾರ್ ಸಮೀಪ ಹೋಟೇಲೊಂದರ ಬಳಿಯಲ್ಲಿ ಪತ್ತೆಯಾಗಿದೆ.ಆಕೆಯ ಮೊಬೈಲ್ ಫೋನ್ ಹೊಸಬೆಟ್ಟು ಬಳಿ ಕೊನೆಯ ಲೊಕೇಶನ್ ತೋರಿಸುತ್ತಿದ್ದು ಆ ಬಳಿಕ ಸ್ವಿಚ್ ಆಫ್ ಆಗಿದೆ. ಚೈತ್ರಾಳ ಬ್ಯಾಂಕ್ ಖಾತೆಯಲ್ಲಿ ಲಕ್ಷಾಂತರ ರೂಪಾಯಿ ಹಣವಿದ್ದು, ನಾಪತ್ತೆಯಾದ ಬಳಿಕ ಸುರತ್ಕಲ್ ನ ಎಟಿಎಂ ಒಂದರಲ್ಲಿ ಆಕೆ ಹಣ ವಿಥ್ ಡ್ರಾ ಮಾಡಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಬಿಸಿದೆ.
ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು ಈ ವೇಳೆ ಹಲವು ಸ್ಪೋಟಕ ಮಾಹಿತಿಗಳು ಪೊಲೀಸರಿಗೆ ಲಭಿಸಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಚೈತ್ರಾ ಅವರ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಆಗಿದೆ. ಆಕೆ ವಾಸವಿದ್ದ ಪಿಜಿಗೆ ಬಂದು ಹೋಗುತ್ತಿದ್ದ ಎನ್ನಲಾದ ಅನ್ಯಮತೀಯ ಯುವಕನ ಮೊಬೈಲ್ ಫೋನ್ ಕೂಡಾ ಸ್ವಿಚ್ ಆಫ್ ಆಗಿದೆ. ಮಂಗಳೂರು ಪಡೀಲ್ ನಲ್ಲಿ ಆತನ ಫೋನ್ ಕೊನೆಯ ಲೊಕೇಶನ್ ತೋರಿಸುತ್ತಿದ್ದು ಆ ಬಳಿಕ ಸ್ವಿಚ್ ಆಫ್ ಆಗಿರುವುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ಲಭಿಸಿದೆ.
ಇನ್ನೂ , ನಾಪತ್ತೆಯಾಗಿರುವ ಯುವತಿ ಒಬ್ಬರೇ ಬಸ್ಸಲ್ಲಿ ಹೋಗಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಯುವತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಳ್ಳಾಲ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣದ ಪತ್ತೆಗಾಗಿ ಮಂಗಳೂರು ಪೊಲೀಸ್ ಆಯುಕ್ತರು ಪೊಲೀಸರ ತಂಡ ರಚನೆ ಮಾಡಿದ್ದು ಪೊಲೀಸರ ಒಂದು ತಂಡ ಹೊನ್ನಾವರಕ್ಕೆ, ಇನ್ನೊಂದು ತಂಡ ಬೆಂಗಳೂರುಗೆ ತೆರಳಿದೆ.
ಡ್ರಗ್ಸ್ ಪೆಡ್ಲರ್ ನಿಂದ ಅಪಹರಣ : ಬಜರಂಗದಳ ಆರೋಪ
‘ವಿದ್ಯಾರ್ಥಿನಿ ಇದ್ದ ಪಿ.ಜಿಗೆ ಪುತ್ತೂರಿನ ಶಾರೂಕ್ ಎಂಬಾತ ಬಂದು ಹೋಗುತ್ತಿದ್ದ. ಆತ ಡ್ರಗ್ ಪೆಡ್ಲರ್ ಆಗಿರುವ ಸಾಧ್ಯತೆ ಇದೆ. ಸ್ಥಳೀಯರು ಇದನ್ನು ಬಜರಂಗದಳದ ಗಮನಕ್ಕೆ ತಂದಿದ್ದರು. ಸಂಘಟನೆ ವತಿಯಿಂದ ವಿದ್ಯಾರ್ಥಿನಿಯ ಚಿಕ್ಕಪ್ಪನನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿತ್ತು. ಕರೆದು ಮಾತನಾಡುವುದಾಗಿ ತಿಳಿಸಿದ ಮರುದಿನವೇ ವಿದ್ಯಾರ್ಥಿನಿ ಪಿಜಿಯಿಂದ ನಾಪತ್ತೆಯಾಗಿದ್ದಾಳೆ. ಶಾರೂಕ್‌ನ ಡ್ರಗ್ಸ್ ಜಾಲವೇ ವಿದ್ಯಾರ್ಥಿನಿಯನ್ನು ಅಪಹರಿಸಿರುವ ಸಾಧ್ಯತೆಯಿದೆ. ಶಾರುಕ್‌ನನ್ನು ತಕ್ಷಣ ಬಂಧಿಸಬೇಕು. ಮೂರು ದಿನಗಳ ಒಳಗೆ ಆರೋಪಿಯನ್ನು ಬಂಧಿಸದಿದ್ದರೆ ಬಜರಂಗದಳ ಹೋರಾಟ ತೀವ್ರಗೊಳಿಸಲಿದೆ’ ಎಂದು ಸಂಘಟನೆಯ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
-
ಬಿಗ್ ನ್ಯೂಸ್23 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್15 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ21 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು23 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized22 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್24 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ22 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್22 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















