ಯಡಿಯೂರಪ್ಪನವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪತ್ರ ಚಳವಳಿ ಹಿಂದೆ […]" /> ಯಡಿಯೂರಪ್ಪನವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪತ್ರ ಚಳವಳಿ ಹಿಂದೆ […]"> Lok Sabha Election : BJP Candidates first list release in 3-4 days - ಲೋಕಸಭೆ ಚುನಾವಣೆ : 3-4 ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ - ಬಿ.ಎಸ್.ವೈ. - Nikhara News | Kannada News Website
Connect with us

ಸ್ಥಳೀಯ

Lok Sabha Election : BJP Candidates first list release in 3-4 days – ಲೋಕಸಭೆ ಚುನಾವಣೆ : 3-4 ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಬಿ.ಎಸ್.ವೈ.

Published

on

Ad Widget

Ad Widget

Ad Widget

Ad Widget

ಚಿಕ್ಕಮಗಳೂರು : ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಯಸ್.‌ ಯಡಿಯೂರಪ್ಪನವರು, ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

Ad Widget

Ad Widget

Ad Widget

Ad Widget

ಯಡಿಯೂರಪ್ಪನವರು ರಾಜ್ಯದ 28 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲುವ ವಾತಾವರಣ ಇದೆ. ಸಣ್ಣಪುಟ್ಟ ಗೊಂದಲಗಳು ಪರಿಹಾರವಾಗಲಿವೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಚರ್ಚೆಯಾಗಿಲ್ಲ. ಎರಡು ದಿನಗಳಲ್ಲಿ ಎಲ್ಲವೂ ಗೊತ್ತಾಗಲಿಯೆಂದು ಸುದ್ದಿಗಾರರಿಗೆ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಯಡಿಯೂರಪ್ಪನವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪತ್ರ ಚಳವಳಿ ಹಿಂದೆ ವ್ಯವಸ್ಥಿತ ಪಿತೂರಿ ಇದೆ. ಯಾರು ಮಾಡಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇದಕ್ಕೆಲ್ಲ ಅವರು ದೃತಿಗೆಡುವುದಿಲ್ಲ. ಕೇಂದ್ರ ಸಚಿವೆಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಕಳೆದ ಬಾರಿಗಿಂತ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ. ಈ ಬಗ್ಗೆ ಅನುಮಾನ ಬೇಡʼ ಎಂದು ಸ್ಪಷ್ಟಪಡಿಸಿದರು

Ad Widget

Ad Widget <> Ad Widget

Ad Widget
Click to comment

Leave a Reply

ಸ್ಥಳೀಯ

Subrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು

Published

on

Ad Widget

Ad Widget

Ad Widget

Ad Widget

ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಮನೆಗೆ ರಾತ್ರಿ ವೇಳೆ ಭೇಟಿ ನೀಡಿ ಊಟ ಮಾಡಿ, ದಿನಸಿ ಸಾಮಗ್ರಿಗಳನ್ನು ಪಡೆದು ತೆರಳಿದ್ದ ನಾಲ್ವರು ನಕ್ಸಲರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ ಜೈಲಿನಿಂದ ಕರೆತರಲಾದ ಮೂವರು ಮಾಜಿ ನಕ್ಸಲರಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ, ನ.23: ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಮನೆಗೆ ರಾತ್ರಿ ವೇಳೆ ಭೇಟಿ ನೀಡಿ ಊಟ ಮಾಡಿ, ದಿನಸಿ ಸಾಮಗ್ರಿಗಳನ್ನು ಪಡೆದು ತೆರಳಿದ್ದ ನಾಲ್ವರು ನಕ್ಸಲರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ ಜೈಲಿನಿಂದ ಕರೆತರಲಾದ ಮೂವರು ಮಾಜಿ ನಕ್ಸಲರಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

Ad Widget

Ad Widget alt="Ad Widget"/>

Ad Widget

2024ರ ಮಾರ್ಚ್ 23ರಂದು ರಾತ್ರಿ ನಾಲ್ವರು ನಕ್ಸಲರು ಐನೆಕಿದು ಗ್ರಾಮದ ಮನೆಯೊಂದಕ್ಕೆ ಭೇಟಿ ನೀಡಿ ಊಟ ಮಾಡಿದ್ದಲ್ಲದೆ, ದಿನಸಿ ಸಾಮಗ್ರಿಗಳನ್ನು ಪಡೆದುಕೊಂಡು ತೆರಳಿದ್ದರು. ಇದಕ್ಕೂ ಎರಡು ದಿನಗಳ ಮೊದಲು ಕಲ್ಮಕಾರು ಭಾಗದ ಕಡಮಕಲ್ ಎಸ್ಟೇಟ್‌ಗೂ ನಕ್ಸಲರು ಭೇಟಿ ನೀಡಿದ್ದರು ಎನ್ನಲಾಗಿತ್ತು.

Ad Widget

Ad Widget <> Ad Widget

ಈ ಘಟನೆ ಆ ಸಂದರ್ಭದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ನಕ್ಸಲ್ ನಿಗ್ರಹ ಪಡೆಗಳು ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದವು. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ನಕ್ಸಲರ ಭೇಟಿಯ ಬಗ್ಗೆ ಉಲ್ಲೇಖಿಸಲಾಗಿದ್ದರೂ, ಯಾರ ಹೆಸರನ್ನೂ ದಾಖಲಿಸಿರಲಿಲ್ಲ.

ಬಳಿಕ ಕರ್ನಾಟಕ ಸರಕಾರದ ಪ್ರಸ್ತಾವನೆಯಂತೆ ಶರಣಾಗಿದ್ದ ಈ ನಕ್ಸಲರು ತ್ರಿಶೂರ್ ಜೈಲಿನಲ್ಲಿದ್ದರು. ಪ್ರಕರಣದ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆಯ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ತ್ರಿಶೂರ್‌ಗೆ ತೆರಳಿ ನ.17ರಂದು ಮಾಜಿ ನಕ್ಸಲರಾದ ರವೀಂದ್ರ, ಸುಂದರಿ ಮತ್ತು ದಿಶಾ ಅವರನ್ನು ವಶಕ್ಕೆ ಪಡೆದಿದ್ದರು.

Ad Widget

Ad Widget

ನಂತರ ಕರ್ನಾಟಕ ಹೈಕೋರ್ಟ್‌ಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದ ಪೊಲೀಸರು, ಮೂವರನ್ನು ಐನೆಕಿದು ಗ್ರಾಮದ ತೋಟದಮಜಲು ಪ್ರದೇಶಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ನಕ್ಸಲರು ತಾವು ಭೇಟಿ ನೀಡಿದ್ದ ಮನೆ ಹಾಗೂ ದಿನಸಿ ಸಾಮಗ್ರಿಗಳನ್ನು ಪಡೆದುಕೊಂಡಿದ್ದ ಸ್ಥಳವನ್ನು ಪೊಲೀಸರಿಗೆ ತೋರಿಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳ ಮಹಜರು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮೂವರನ್ನು ಮತ್ತೆ ಹೈಕೋರ್ಟ್‌ಗೆ ಹಾಜರುಪಡಿಸಿ, ಅಲ್ಲಿಂದ ತ್ರಿಶೂರ್ ಜೈಲಿಗೆ ಕರೆದೊಯ್ದು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget
Continue Reading

ಬಿಗ್ ನ್ಯೂಸ್

High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Published

on

Ad Widget

Ad Widget

Ad Widget

Ad Widget

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

Ad Widget

Ad Widget <> Ad Widget

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ವಿನಯ್ ವಾದ ಮಂಡಿಸಿ, ಪ್ರಕರಣದ 10ನೇ ಪ್ರತಿವಾದಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.

Ad Widget

Ad Widget

ಪ್ರತಿವಾದಿಗಳ ಪರವಾಗಿ ಸರಕಾರಿ ವಕೀಲರು ನೋಟಿಸ್ ಸ್ವೀಕರಿಸಿದರು. ಇನ್ನು ಮೂರು ದಿನಗಳೊಳಗೆ ನೋಟಿಸ್ ಜಾರಿಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿತು.

ನೋಟಿಸ್‌ಗೆ ಉತ್ತರ ಸಲ್ಲಿಸಲು ಡಿಸೆಂಬರ್ 16ರವರೆಗೆ ಕಾಲಾವಕಾಶ ನೀಡಿರುವ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.16ಕ್ಕೆ ನಿಗದಿಪಡಿಸಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್‌ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್‌ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ವಿಜಯ ಬ್ಯಾಂಕ್‌ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!