Connect with us

ಬಿಗ್ ನ್ಯೂಸ್

Charmadi Forest | ಅಪಾಯಕಾರಿ ಚಾರ್ಮಾಡಿ ಅರಣ್ಯದಲ್ಲಿ ಪೊಲೀಸ್ ಅಧಿಕಾರಿಯ ಶಿಪಾರಸ್ಸಿನಲ್ಲಿ ಚಾರಣ ಕೈಗೊಂಡ ತಂಡದಿಂದ ತಪ್ಪಿಸಿಕೊಂಡ ಯುವಕ ಪತ್ತೆ : ಚಾರಣ ನಿಷೇಧವಿರುವ ಈ ಅರಣ್ಯಕ್ಕೆ ಪ್ರವೇಶಿಸಲು ಶಿಪಾರಸ್ಸು ಮಾಡಿದ ಅಧಿಕಾರಿಯ ವಿರುದ್ದ ಶಿಸ್ತುಕ್ರಮ ಯಾವಾಗ..? ಜನತೆಯ ಪ್ರಶ್ನೆ

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ, ಫೆ.26: ಬೆಂಗಳೂರಿನಿಂದ ಚಾರಣಕ್ಕೆಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮೀಸಲು ಅರಣ್ಯಕ್ಕೆ (Charmadi Forest) ಬಂದಿದ್ದ ಚಾರಣಿಗರ ಪೈಕಿ ನಾಪತ್ತೆಯಾಗಿದ್ದ ಯುವಕನೋರ್ವನನ್ನು ಪೊಲೀಸರು ತಡರಾತ್ರಿ ವೇಳೆ ಪತ್ತೆ ಹಚ್ಚಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರಿನಿಂದ ಚಾರಣಕ್ಕೆಂದು ಬಂದಿದ್ದ 10 ಮಂದಿಯ ತಂಡದಲ್ಲಿದ್ದ ಧನುಷ್ ಎಂಬವರು ನಾಪತ್ತೆಯಾದ ಯುವಕ, ಅರಣ್ಯದಲ್ಲಿ ಚಾರಣಕ್ಕೆ ಅವಕಾಶ ನಿರಾಕರಿಸಲಾಗಿದ್ದರೂ ಪೊಲೀಸ್ ಅಧಿಕಾರಿಯೊಬ್ಬರ ಶಿಫಾರಸಿನ ಮೂಲಕ ಇವರು ಚಾರಣಕ್ಕೆ ಅವಕಾಶ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ರವಿವಾರ ಬೆಳಗ್ಗೆ ಇವರು ಚಾರಣಕ್ಕೆ ಹೊರಟಿದ್ದು ಸಂಜೆಯ ವೇಳೆ ಗುಂಪಿನಿಂದ ಧನುಷ್ ಸೇರಿದಂತೆ ಇಬ್ಬರು ಆಕಸ್ಮಿಕವಾಗಿ ತಪ್ಪಿದ್ದರು. ಬಳಿಕ ಒಬ್ಬ ಮರಳಿ ಗುಂಪನ್ನು ಸೇರಿಕೊಂಡನೆನ್ನಲಾಗಿದೆ. ಬಳಿಕ ಚಾರಣ ತಂಡದವು ಧನುಷ್ ತಪ್ಪಿಸಿಕೊಂಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿ ಪೊಲೀಸರು ಹುಡುಕಾಟ ಆರಂಭಿಸಿದ್ದರು.

Ad Widget

Ad Widget <> Ad Widget

ದಟ್ಟ ಅರಣ್ಯದ ನಡುವೆ ಧನುಷ್ ಅವರ ಮೊಬೈಲ್‌ ನೆಟ್ ವರ್ಕ್ ಪತ್ತೆಯಾಗಿ ಅದನ್ನು ಕೇಂದ್ರೀಕರಿಸಿ ಹುಡುಕಾಟ ನಡೆಸಿದಾಗ ಮದ್ಯರಾತ್ರಿ ಯುವಕ ಪತ್ತೆಯಾಗಿದ್ದಾನೆ.



Ad Widget

ಅತ್ಯಂತ ಅಪಾಯಕಾರಿಯಾಗಿರುವ ಈ ಅರಣ್ಯ ಪ್ರದೇಶದಲ್ಲಿ ಚಾರಣಕ್ಕೆ ಅವಕಾಶ ನಿಷೇಧಿಸಲಾಗಿದೆ ಹಾಗೂ ಹಲವಾರು ನಿಬಂಧನೆಗಳನ್ನು ವಿಧಿಸಲಾಗಿದೆ. ಆದರೆ ಇದೆಲ್ಲವನ್ನೂ ಗಾಳಿಗೆ ತೂರಿ ಹೊರಗಿನಿಂದ ಬರುವ ಯುವಕರು ಇಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅಪಾಯದಲ್ಲಿ ಸಿಲುಕಿದ್ದಾರೆ. ಕೆಲವೇ ತಿಂಗಳುಗಳ ಹಿಂದೆ ಚಾರಣಕ್ಕೆ ಬಂದ ಯುವಕನೋರ್ವ ನಾಪತ್ತೆಯಾದ ಸಂದರ್ಭದಲ್ಲಿ ಹುಡುಕಾಟ ನಡೆಸಿದ ತಂಡವೇ ಕಾಡಾನೆಯ ಮುಂದೆ ಸಿಲುಕಿದ ಘಟನೆ ಸಂಭವಿಸಿತ್ತು.

Ad Widget

Ad Widget

ಪೊಲೀಸರ, ಅರಣ್ಯ ಇಲಾಖೆಯ ಹಾಗೂ ಸ್ಥಳೀಯರ ಪ್ರಯತ್ನದಿಂದ ನಾಪತ್ತೆಯಾಗಿದ್ದ ಯುವಕ ಸುರಕ್ಷಿತನಾಗಿ ಹೊರಬಂದಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್‌ ಸಂಪೂರ್ಣ ನಿಷೇಧ

Published

on



Ad Widget

Ad Widget

Ad Widget

Ad Widget

ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Ad Widget

Ad Widget <> Ad Widget

ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.



Ad Widget

ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget

Ad Widget

ಸವಾರರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ಹೆಲ್ಮೆಟ್‌ಗಳನ್ನು ಧರಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading