ಮಂಗಳೂರು
Manglore – criticism-trolls-first open your eye- see Dakshina Kannada Development – Nalin Kumar Kateel : ಟೀಕೆ, ಟ್ರೋಲ್ ಮಾಡುವವರು ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಕಣ್ಣುಬಿಟ್ಟು ನೋಡಿ – ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ರವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು, ಬಂಟ್ವಾಳ ಸೇರಿದಂತೆ ರೈಲ್ವೆ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳಾಗಿದ್ದು, ಹೆಚ್ಚುವರಿ ರೈಲು ಸೇವೆಗಳು ಹಾಗೂ ವ್ಯವಸ್ಥೆಗಳು ಉತ್ತಮವಾಗಲು ಕೋಟ್ಯಂತರ ರೂಪಾಯಿ ವಿನಿಯೋಗಿಸಲಾಗಿದೆ. ಟ್ರೋಲ್, ಟೀಕೆ ಮಾಡುವವರು ಕಣ್ಣುಬಿಟ್ಟು ಅಭಿವೃದ್ಧಿ ಕಾರ್ಯಗಳನ್ನು ನೋಡಿ ಎಂದು ಹೇಳಿದ್ದಾರೆ.
ಮೈಸೂರು ವಿಭಾಗದ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಸಭೆಯ ಮೂಲಕ ನಿಲ್ದಾಣವನ್ನು ʼಎಬಿಎಸ್ಎಸ್ʼ ಯೋಜನೆಯಡಿ 28. 49 ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಲು ರೈಲ್ವೇ ನಿಲ್ದಾಣದ ಮರು ನಿರ್ಮಾಣ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿದ ಸಂದರ್ಭ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಕೊಡಬೇಕು ಎಂದಿದ್ದರೆ, ಲೋಕಸಭೆಯ ಸದಸ್ಯರ ಪ್ರಯತ್ನವೂ ಇದೆ. ಬಂಟ್ವಾಳದ ಸೇತುವೆಗೆ 91ನೇ ಇಸವಿಯಲ್ಲಿ ಶಿಲಾನ್ಯಾಸ ಆಗಿತ್ತು. 2001ರಲ್ಲಿ ಉದ್ಘಾಟನೆ ಆಯಿತು. ಕೇಂದ್ರ ರಾಜ್ಯದಲ್ಲಿ ನಮ್ಮ ಆಡಳಿತವಿರಲಿಲ್ಲ. ಆಗ ತಡವಾದದ್ದಕ್ಕೆ ಚರ್ಚೆ ಇರಲಿಲ್ಲ. ಆದರೆ ನಾನು ಲೋಕಸಭಾ ಸದಸ್ಯನಾದ ಬಳಿಕ ನಡೆದ ಹಾಗೂ ನಡೆಯುತ್ತಿರುವ ಕೆಲಸಗಳ ಕುರಿತು ಮಾತುಗಳು ಕೇಳಿಬರುತ್ತಿದೆ. ಟೀಕೆ ಮಾಡುವವರು ಕಣ್ಣು ಬಿಟ್ಟು ನೋಡಿ ಎಂದು ನಳಿನ್ ಸಾಧನೆಗಳ ಪಟ್ಟಿಯನ್ನೇ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ 10 ವರ್ಷಗಳಲ್ಲಿ 2650 ಕೋಟಿ
ತಾನು ಸಂಸದನಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ವೇಗದಿಂದ ಆಗಿವೆ. ಕಳೆದ 10 ವರ್ಷಗಳಲ್ಲಿ 2650 ಕೋಟಿ ರೂಗಳನ್ನು ನರೇಂದ್ರ ಮೋದಿ ಸರ್ಕಾರ ಕೊಟ್ಟಿದೆ. ಇದು ತನ್ನ ಪ್ರಯತ್ನದಿಂದ ಆಗಿದೆ. ಪಾಲ್ಘಾಟ್ನಿಂದ ಮಂಗಳೂರಿನ ಎಲೆಕ್ಟ್ರಿಫಿಕೇಶನ್ ಮುಗಿದಿದೆ. ಪುತ್ತೂರು ರೈಲ್ವೆ ನಿಲ್ದಾಣ ಆದರ್ಶ ಯೋಜನೆಯಡಿ ಅಭಿವೃದ್ಧಿಗೊಂಡರೆ, ಇಂದು ಬಂಟ್ವಾಳ ಮತ್ತು ಸುಬ್ರಹ್ಮಣ್ಯ ಸಂಪೂರ್ಣ ಬದಲಾಗಲಿದೆ. ನೇರಳಕಟ್ಟೆ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಅಳಪೆ, ಪಡೀಲ್, ಜಪ್ಪು ಕುಡುಪಾಡಿ, ಮಹಾಕಾಳಿಪಡ್ಪು, ಪುತ್ತೂರು ಎಪಿಎಂಸಿ, ವಿವೇಕಾನಂದ ಕಾಲೇಜು ಬಳಿ ಮೇಲ್ಸೇತುವೆ ನಿರ್ಮಾಣ ಕಾರ್ಯಗಳಲ್ಲಿ ಹೆಚ್ಚಿನವು ಆಗಿದ್ದು, ಒಂದೆರಡು ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.
ವಂದೇ ಭಾರತ್ ರೈಲು ಮಂಗಳೂರಿಗೆ ಬಂದಿದೆ. ತಿರುವನಂತಪುರ ಕಾಸರಗೋಡು ರೈಲು ಈಗ ಮಂಗಳೂರಿಗೆ ವಿಸ್ತರಣೆಗೊಂಡಿದ್ದರೆ, ಗೋವಾ ಮಂಗಳೂರು ಸಂಪರ್ಕ ವಂದೇ ಭಾರತ್ ಆರಂಭವಾಗಿ ಜನಪ್ರಿಯತೆ ಗಳಿಸಿದೆ. ಬೇಡಿಕೆ ಇರುವ ಎಲ್ಲ ಕೆಲಸಗಳೂ ನಡೆಯುತ್ತಿವೆ. ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಬೇಕಾದ ಕಾರ್ಯಗಳಲ್ಲಿ ಯಡಿಯೂರಪ್ಪ ಸರ್ಕಾರವಿದ್ದಾಗ ನೀಡಿದ ಅನುದಾನದ ಕಾರ್ಯಗಳು ಪೂರ್ಣಗೊಳ್ಳುತ್ತಿವೆ. ಈ ಬಾರಿ 7524 ಕೋಟಿ ರೂಪಾಯಿ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಒದಗಿಸಲಾಗಿದೆ. ತನ್ನ ಕ್ಷೇತ್ರದಲ್ಲಿ 2650 ಕೋಟಿ ರೂಪಾಯಿಯ ಕೆಲಸ ರೈಲ್ವೆಗೆ ಸಂಬಂಧಿಸಿ ಆಗಿದೆ ಪರಿವರ್ತಿತ ಭಾರತ, ವಿಕಸಿತ ಭಾರತ ಇಂದು ನಿರ್ಮಾಣವಾಗಿದೆ. ರೈಲ್ವೆ ಕುದುರೆ ವೇಗ ಪಡೆದಿದೆ ಎಂದು ನಳಿನ್ ಹೇಳಿದರು.
ದೇಶದಲ್ಲೇ ಪ್ರಥಮ, ಮಂಗಳೂರಿನಲ್ಲಿದೆ
ಪ್ಲಾಸ್ಟಿಕ್ ಪಾರ್ಕ್ ದೇಶದಲ್ಲೇ ಪ್ರಥಮ ಮಂಗಳೂರಿನಲ್ಲಿದೆ. ಕೋಸ್ಟ್ ಗಾರ್ಡ್ ತರಬೇತಿ ಕೇಂದ್ರ ಮಂಗಳೂರಿಗೆ ಬರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆಗಳು ಹತ್ತು ವರ್ಷಗಳ ಹಿಂದೆ ಹೇಗಿದ್ದವು, ಈಗ ಹೇಗಾಗುತ್ತಿದೆ ಎಂಬುದನ್ನು ಗಮನಿಸಿ ಎಂದು ಹೇಳಿದ ನಳಿನ್, ಚಾರ್ಮಾಡಿ ಘಾಟಿ 350 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಮಾಣಿ ಮೈಸೂರು ರಸ್ತೆ ಅಭಿವೃದ್ಧಿ ಆಗಿದ್ದು, ಇನ್ನು ಚತುಷ್ಪಥವಾಗಲಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿಯಾಗಿದೆ. ಮೋದಿ ಕಲ್ಪನೆಯಂತೆ ಮಂಗಳೂರು ಸ್ಮಾರ್ಟ್ ಸಿಟಿಯಾಗಿ ಬದಲಾಗುತ್ತಿದೆ. ಮಂಗಳೂರಿನ ಮನೆ ಮನೆಗಳಲ್ಲಿ ಗ್ಯಾಸ್ ಪೈಲ್ ಲೈನ್ನಲ್ಲಿ 75 ಸಾವಿರ ಮನೆಗಳಿಗೆ ಪೈಪ್ ಲೈನ್ ಮೂಲಕ ಗ್ಯಾಸ್ ಕೊಟ್ಟಿದ್ದೇವೆ. ಎರಡೇ ವರ್ಷಗಳಲ್ಲಿ ಬಂಟ್ವಾಳದ ಮನೆ ಮನೆಗಳಿಗೆ ಗ್ಯಾಸ್ ಪೈಪ್ ಲೈನ್ ಬರಲಿದೆ ಎಂದು ನಳಿನ್ ವಿಶ್ವಾಸ ವ್ಯಕ್ತಪಡಿಸಿದರು
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್ಪ್ರೆಸ್ ಬಸ್ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್ಪ್ರೆಸ್ ಬಸ್ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ನಿಧನ ವಾರ್ತೆ9 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು7 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ9 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ8 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ9 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಮಂಗಳೂರು5 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ10 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized10 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP


















