Connect with us

ಬಿಗ್ ನ್ಯೂಸ್

ST Somashekar Shivaram Hebbar | ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ..! ಸೋಮಶೇಖರ್-ಹೆಬ್ಬಾರ್ ಅಡ್ಡ ಮತದಾನ – ಇಂದು ಸಂಜೆ ಬಿಜೆಪಿಗೆ ರಾಜೀನಾಮೆ ಸಾಧ್ಯತೆ..?

Published

on



Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್ ಹೆಬ್ಬಾರ್ (ST Somashekar Shivaram Hebbar) ಅವರು ಕಾಂಗ್ರೆಸ್‌ ಅಭ್ಯರ್ಥಿ ಪರ ಮತ ಹಾಕಿದ್ದಾರೆ ಎಂದು ವರದಿಯಾಗಿದೆ. ಅಡ್ಡ ಮತದಾನ ಮಾಡುವ ಮೂಲಕ ಸ್ವಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ.

Ad Widget

Ad Widget

Ad Widget

Ad Widget

“ಮತ ಚಲಾಯಿಸುವ ಮೊದಲು ಎಸ್.ಟಿ.ಸೋಮಶೇಖರ್‌ ಅವರು, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಆಗಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಲಿಲ್ಲ. ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದರು

Ad Widget

Ad Widget

Ad Widget alt="Ad Widget"/>

Ad Widget

.ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಮತಹಾಕಿದ್ದಾರೆ ಎಂದು ವರದಿಯಾಗಿದೆ. “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ ಮತ ಪತ್ರವನ್ನು ಚುನಾವಣಾ ಏಜೆಂಟ್‌ ಗೆ ತೋರಿಸಿದ್ದೇನೆ” ಎಂದು ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ.

Ad Widget

Ad Widget <> Ad Widget

ಇಂದು ಸಂಜೆ ಬಿಜೆಪಿಗೆ ರಾಜೀನಾಮೆ..? : ಅಡ್ಡಮತದಾನ ಮಾಡಿದ ಇಬ್ಬರು ಶಾಸಕರ ವಿರುದ್ಧ ಬಿಜೆಪಿ ಶಿಸ್ತುಕ್ರಮ ಕೈಗೊಳ್ಳುವ ಯೋಚನೆ ನಡೆಯುತ್ತಿರುವಾಗಲೇ ಇಬ್ಬರು ಸಂಜೆ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೇಸ್‍ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದರೆ ಇಂದು ಸಂಜೆ ಫಲಿತಾಂಶದ ಬಳಿಕ ರಾಜೀನಾಮೆ ನೀಡಲಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.



Ad Widget
Ad Widget
Click to comment

Leave a Reply

ಬಿಗ್ ನ್ಯೂಸ್

Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.

Ad Widget

Ad Widget

Ad Widget

Ad Widget

ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.

Ad Widget

Ad Widget <> Ad Widget

ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.



Ad Widget

ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್‌-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Continue Reading

ಸಿನೆಮಾ

Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

Ad Widget

Ad Widget <> Ad Widget

ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.



Ad Widget

ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಆನೆಗಳ ಸಂಚಾರ ಹೆಚ್ಚಳ ಹಿನ್ನೆಲೆ; ದಿಡುಪೆ ಫಾಲ್ಸ್ ವೀಕ್ಷಣೆಗೆ ನಿರ್ಬಂಧ

Published

on



Ad Widget

Ad Widget

Ad Widget

Ad Widget

ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ನಿರ್ಬಂಧ ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶ ಹೊರಬೀಳುವವರೆಗೆ ಪ್ರವಾಸಿಗರಿಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ವನ್ಯಜೀವಿ ವಲಯದ ಅರಣ್ಯಾಧಿಕಾರಿ ಶರ್ಮಿಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆನೆಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading