Uncategorized
Arun Puttila: ಉಳ್ಳಾಲ ಠಾಣೆಗೆ ಅರುಣ್ ಪುತ್ತಿಲ ಭೇಟಿ : ನಾಪತ್ತೆಯಾಗಿರುವ ಪುತ್ತೂರಿನ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ಶೀಘ್ರ ಪತ್ತೆಗೆ ಒತ್ತಾಯ – ಇದರ ಹಿಂದಿರುವ ಕುಖ್ಯಾತ ಡ್ರಗ್ಸ್ ಪೆಡ್ಲರ್ ಶಾರುಖ್ ಹೆಡೆಮುರಿ ಕಟ್ಟಲು ಆಗ್ರಹ
ಪುತ್ತೂರು ಮೂಲದ , ಉಳ್ಳಾಲದ ಕೋಟೆಕಾರಿನ ಖಾಸಗಿ ಪಿಜಿಯಲ್ಲಿ ವಾಸ್ತವ್ಯ ಹೂಡಿ ವ್ಯಾಸಂಗ ಮಾಡುತ್ತಿದ್ದ ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ (chaitra Hebbar) ನಾಪತ್ತೆ ಪ್ರಕರಣಕ್ಕೆ (Missing Case) ಸಂಬಂಧಪಟ್ಟಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಂಗಳವಾರ ಉಳ್ಳಾಲ ಠಾಣೆಗೆ ತೆರಳಿ ಠಾಣಾಧಿಕಾರಿಯವರಲ್ಲಿ ಮಾತುಕತೆ ನಡೆಸಿದರು.
ಗಾಂಜಾ ಪ್ರಕರಣದ ಆರೋಪಿ, ಕುಖ್ಯಾತ ಡ್ರಗ್ಸ್ ಪೆಡ್ಲರ್ ಶಾರೂಕ್ ಶೇಕ್ ಎಂಬಾತ ಡ್ರಗ್ಸ್ ಹಾಗೂ ಇನ್ನಿತರ ಮೋಸದಾಟವಾಡಿ ಆಕೆಯನ್ನು ಅಪಹರಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ಸ್ಥಳೀಯವಾಗಿ ಇರುವ ಅನುಮಾನದ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮನದಟ್ಟು ಮಾಡುವ ಕಾರ್ಯವನ್ನು ಪುತ್ತಿಲರವರು ಈ ಸಂದರ್ಭ ಮಾಡಿದರು
ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಯನ್ನು ಫೆ.17ರಂದು ರೈಲಿನಲ್ಲಿ ಈತ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು ಇಲಾಖೆ ಈ ಕುರಿತು ತೀವ್ರ ತನಿಖೆ ನಡೆಸುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಆಕೆಯನ್ನು ಕರೆತರಲಾಗುವುದು ಎಂದು ಠಾಣಾಧಿಕಾರಿಯವರು ಪುತಿಲರಿಗೆ ಮಾಹಿತಿ ನೀಡಿದ್ದಾರೆ.

ಶಾರುಕ್ ಶೇಖ್ ಕತಾರಿನಲ್ಲಿದ್ದಾಗ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಎನ್ನಲಾಗಿದೆ . ಆನಂತರ ಊರಿಗೆ ಬಂದು ಕುಖ್ಯಾತ ಡ್ರಗ್ಸ್ ಪೆಡ್ಲರ್ ಆಗಿ ಹಲವು ಯುವ ಜನತೆಯನ್ನು ಡ್ರಗ್ಸ್ ಜಾಲಕ್ಕೆ ಸಿಲುಕಿಸಿದ್ದ. ಯಾವುದೇ ಉದ್ಯೋಗವಿಲ್ಲದೇ ಈತ ಗಾಂಜಾ ವ್ಯವಹಾರದ ಹಣದಲ್ಲೇ ಬದುಕುತಿದ್ದ ಎನ್ನುವ ಮಾಹಿತಿಗಳು ವಿವಿಧ ಮಾದ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಪುತ್ತಿಲರು ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದಾರೆ . , ಈ ಕುಖ್ಯಾತ ಡ್ರಗ್ ಪೆಡ್ಲರ್ ಶಾರೂಕ್ ನನ್ನು ಶೀಘ್ರ ಬಂಧಿಸಿ ಈತನ ಜಾಲದ ಹಿಂದಿನ ಕಾಣದ ಕೈಗಳನ್ನು ಬಂಧಿಸಬೇಕೆಂದು ಠಾಣಾಧಿಕಾರಿಗಳನ್ನು ಒತ್ತಾಯಿಸಿದರು.
ಉಳ್ಳಾಲದಲ್ಲಿ ಡ್ರಗ್ಸ್ ಜಾಲದಲ್ಲಿ ಯುವತಿಯನ್ನು ಸಿಲುಕಿಸಿ ಬಳಿಕ ಲವ್ ಜಿಹಾದ್ ಮೂಲಕ ಭಯೋತ್ಪಾದನೆಗೆ ಬಳಸಿರುವುದು ಈಗಾಗಲೇ ಜಗಜ್ಜಾಹೀರು ಆಗಿದೆ. ಹೀಗಿರುವಾಗ ಈ ಪ್ರಕರಣವನ್ನು ಪರಿಗಣಿಸಬೇಕು ಎಂದು ಅವರು ಸರಕಾರ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು. ಉಳ್ಳಾಲದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿರುವುದು ಇಡೀ ಜಿಲ್ಲೆಗೆ ಅಪಾಯಕಾರಿ ಬೆಳವಣಿಗೆ, ಇದನ್ನು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಮಾರಕವಾಗಲಿದೆ ಎಂದು ಅರುಣ್ ಪುತ್ತಿಲ ಠಾಣಾಧಿಕಾರಿಗಳಲ್ಲಿ ಹೇಳಿದರು.

ಶಿಕ್ಷಣ ಕಾಶಿಯಾಗಿರುವ ತುಳುನಾಡಿನಲ್ಲಿ ಕೆಲಸ ಇಲ್ಲದ ಕೆಲ ಯುವಕರು ಗಾಂಜಾ ಡ್ರಗ್ಸ್ ವ್ಯವಹಾರ ಮೂಲಕ ವಿದ್ಯಾರ್ಥಿಗಳ ಜೀವನವನ್ನೇ ಹಾಳು ಮಾಡುತ್ತಿದ್ದಾರೆ. ಕೆಲಸ ಇಲ್ಲದೆ ಶೋಕಿ ಮಾಡುವ ಕೆಲವರ ಬಗ್ಗೆ ಇಲಾಖೆ ಗಮನಿಸಬೇಕು ಹಾಗೂ ಪಿಜಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸದರು.
ಪೊಲೀಸ್ ಇಲಾಖೆಯವರು ಇದಕ್ಕೆ ಸೂಕ್ತ ರೀತಿ ಸ್ಪಂದಿಸುವುದಾಗಿ ಭರವಸೆ ನೀಡಿರುವುದಾಗಿ ತಿಳಿದು ಬಂದಿದೆ. ಉಳ್ಳಾಲದ ಹಿಂದೂ ಮುಖಂಡ ಅರುಣ್ ಉಳ್ಳಾಲ, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಸ್ಥಳೀಯ7 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್6 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ8 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಬಿಗ್ ನ್ಯೂಸ್2 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಶಿಕ್ಷಣ8 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಕಾರ್ಯಕ್ರಮಗಳು1 hour agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ2 minutes agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ















