Connect with us

ದಕ್ಷಿಣ ಕನ್ನಡ

ಪೆರುವೋಡಿ ವಿಷ್ಣುಮೂರ್ತಿ ದೇವಾಲಯಕ್ಕೂ, ಮೇಲಿನ ಮುಕ್ಕೂರು ತರವಾಡು ಕ್ಷೇತ್ರಕ್ಕಿದೆ ಅವಿನಾಭಾವ ಸಂಬಂಧ..! ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಬೆಳಕಿಗೆ ಬಂತು ಅನಾದಿ ಕಾಲದ ಆಚರಣೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮುಕ್ಕೂರು : ಅನಾದಿ ಕಾಲದಲ್ಲಿ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೆಯ ದಿನದಂದು ಮೇಲಿನ ಮುಕ್ಕೂರು ತರವಾಡಿನ ಭಂಡಾರದ ಮನೆಯಿಂದ ಅರಸು ದೈವಗಳಾದ ಶ್ರೀ ರಕ್ತೇಶ್ವರಿ, ಶ್ರೀ ಉಳ್ಳಾಕುಲು ದೈವ ಸಹಿತ ಪರಿವಾರ ದೈವದ ಭಂಡಾರವು ಪೆರುವೋಡಿ ಕ್ಷೇತ್ರಕ್ಕೆ ಬಂದು ದೈವ-ದೇವರ ಭೇಟಿ ನಂತರ ವಿಜೃಂಭಣೆಯ ನೇಮ ನಡೆಯುತಿತ್ತು ಎಂಬ ಅಂಶವು ಮೇಲಿನ ಮುಕ್ಕೂರಿನಲ್ಲಿ ಅಷ್ಟಮಂಗಲ ಚಿಂತನೆಯಲ್ಲಿ ದಿನ ಕಂಡು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ಸ್ಥಳ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ದೈವಜ್ಞ ಗಣೇಶ್ ಭಟ್ ಮುಳಿಯ ನೇತೃತ್ವದಲ್ಲಿ ನಡೆದ ಎರಡನೆ ದಿನದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ.

Ad Widget

Ad Widget <> Ad Widget

ಅನಾದಿ ಕಾಲದಲ್ಲಿ ನಡೆಯುತಿತ್ತು ಉತ್ಸವ
ಮೇಲಿನ ಮುಕ್ಕೂರು ತರವಾಡು ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಇಲ್ಲಿನ ದೈವ-ದೇವಿ ಸಾನಿಧ್ಯ ತನ್ನ ಕಾರಣಿಕತೆಯಿಂದ ಪ್ರಸಿದ್ಧಿ ಪಡೆದಿತ್ತು. ಇದು ದೈವಗಳ ಭಂಡಾರದ ಮನೆ ಆಗಿದ್ದು ಇಲ್ಲಿಂದ ಅರಸು ದೈವಗಳಾದ ರಕ್ತೇಶ್ವರಿ, ಉಳ್ಳಾಕುಲು, ಗುಳಿಗ ದೈವದ ಭಂಡಾರವು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತೆರಳುತಿತ್ತು. ಅಲ್ಲಿ ದೈವ-ದೇವರ ಭೇಟಿಯಾಗಿ ನಂತರ ದೈವಗಳಿಗೆ ನೇಮ ನಡೆದು ಮರುದಿನ ಭಂಡಾರವನ್ನು ಮೇಲಿನ ಮುಕ್ಕೂರಿಗೆ ತರುತ್ತಿದ್ದ ಪದ್ಧತಿ ಇತ್ತು. ಕಾಲ ಕ್ರಮೇಣ ಅದು ನಿಂತು ಹೋಯಿತು. ಇದರ ಪರಿಣಾಮ ಕಷ್ಟ ನಷ್ಟಗಳು ಇಡೀ ಊರಿನ ಮೇಲಾಗಿದೆ ಎಂದು ದೈವಜ್ಣರು ವಿವರಿಸಿದರು.



Ad Widget

ಮತ್ತೆ ಪ್ರಾರಂಭವಾಗಲೆಬೇಕು..!
ಮೇಲಿನ ಮುಕ್ಕೂರಿನಿಂದ‌ ಪೆರುವೋಡಿ ವಿಷ್ಣುಮೂರ್ತಿ ದೇವಾಲಯದ ಜಾತ್ರೆ ಸಂದರ್ಭದಲ್ಲಿ ದೈವಗಳ ಭಂಡಾರ ಮತ್ತೆ ಹೋಗಬೇಕು. ಅಲ್ಲಿ ಶ್ರೀ ರಕ್ತೇಶ್ವರಿ, ಶ್ರೀ ಉಳ್ಳಾಕುಲು, ಗುಳಿಗ ದೈವಕ್ಕೆ ನೇಮ ಆಗಬೇಕು. ಮರುದಿನ ದೈವಗಳ ಭಂಡಾರವು ಮೇಲಿನ ಮುಕ್ಕೂರಿಗೆ ಬರಬೇಕು ಎಂದವರು ವಿವರಿಸಿದರು‌

Ad Widget

Ad Widget

ಮೇಲಿನ ಮುಕ್ಕೂರಿನಲ್ಲಿ ಸಾನಿಧ್ಯಗಳ ಜೀರ್ಣೋದ್ಧಾರದ ಬಳಿಕ ಸ್ಥಳದಲ್ಲೇ ಒಂದು ಬಾರಿ ದೈವಗಳಿಗೆ ನೇಮ ನೀಡಬೇಕು. ಅನಂತರ ಪ್ರತಿ ವರ್ಷ ಕಾಲ ಕಾಲಕ್ಕೆ ಪಂಚ ಪರ್ವ ಸೇವೆಗಳನ್ನು ಸಲ್ಲಿಸಿದರೆ ಸಾಕಾಗುತ್ತದೆ. ಆದರೆ ಪೆರುವೋಡಿ ಕ್ಷೇತ್ರದಲ್ಲಿ ಪ್ರತಿ ಜಾತ್ರಾ ಸಂದರ್ಭದಲ್ಲಿಯು ನೇಮ ನಡೆಯಲೆಬೇಕು.ಇದರಿಂದ ಊರಿಗೆ ಒಳಿತಾಗಲಿದೆ. ಎರಡೂ ಕ್ಷೇತ್ರಗಳು ಇನ್ನಷ್ಟು ‌ಬೆಳಗಲಿದೆ ಎಂದರು.

ಪೆರುವೋಡಿ ಕ್ಷೇತ್ರದಲ್ಲಿ ಪಕ್ಕದಲ್ಲೇ ರಕ್ತೇಶ್ವರಿ, ಉಳ್ಳಾಕುಲು ದೈವಗಳ ಭಂಡಾರ ಇರಿಸಲು ಛಾವಡಿ ಇತ್ತು. ಅದನ್ನು ಮತ್ತೆ ನಿರ್ಮಿಸಬೇಕು. ಅಲ್ಲಿ ಪ್ರತಿ ಸಂಕ್ರಮಣಕ್ಕೆ ದೀಪ ಬೆಳಗಿ ದೈವರಾಧನೆ ಮಾಡಬೇಕು ಎಂಬ ಅಂಶ ಪ್ರಶ್ನೆಯಲ್ಲಿ ಕಂಡು‌ ಬಂದಿದೆ.

ಈ ಸಂದರ್ಭದಲ್ಲಿ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಪ್ರಮುಖರಾದ ಎಂ.ಕೆ.ಬಾಲಚಂದ್ರ ರಾವ್ ಕೊಂಡೆಪ್ಪಾಡಿ, ಉಮೇಶ್ ರಾವ್ ಕೊಂಡೆಪ್ಪಾಡಿ, ಶ್ರೀಧರ ಬೈಪಡಿತ್ತಾಯ, ಮೋಹನ ಬೈಪಡಿತ್ತಾಯ, ವಸಂತ ಬೈಪಡಿತ್ತಾಯ, ಲಕ್ಷ್ಮೀಶ ಬೈಪಡಿತ್ತಾಯ, ರಾಘವೇಂದ್ರ ಬೈಪಡಿತ್ತಾಯ ಸಹಿತ ಊರ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ : Ashta Mangala ಮೇಲಿನ ಮುಕ್ಕೂರು : ತರವಾಡು ಕ್ಷೇತ್ರ  -ನಾಲ್ಕು ದಿನಗಳ ಅಷ್ಟಮಂಗಲ ಪ್ರಶ್ನಾ ಚಿಂತನೆ ಪ್ರಾರಂಭ

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget

Ad Widget

ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

Ad Widget

Ad Widget

ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ.  ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು

ಸ್ಪರ್ಧೆಯ ಫಲಿತಾಂಶ:

ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.

ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.

Ad Widget
Continue Reading

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಬಿಗ್ ನ್ಯೂಸ್

AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ

Published

on



Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget

Ad Widget

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.

Ad Widget

Ad Widget <> Ad Widget

ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.



Ad Widget

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.

Ad Widget

Ad Widget

ಇದು ಸಮಾಜ ಘಾತುಕ ಕೆಲಸ .ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಕೃತ್ಯದ ಹಿಂದಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ಅಧ್ಯಕ್ಷ ಡಾ. ಹರಿಕೃಷ್ಣ ಪಾಣಾಜೆ ಒತ್ತಾಯಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading