Connect with us

ಉಡುಪಿ

Manohar Prasad: ಕರಾವಳಿಯ ಪತ್ರಿಕಾರಂಗದ ಮೇರು ಪ್ರತಿಭೆ, ಹಿರಿಯ ಪತ್ರಕರ್ತ ಮನೋಹರ್‌ ಪ್ರಸಾದ್‌ ಇನ್ನಿಲ್ಲ

Published

on

Ad Widget

Ad Widget

Ad Widget

Ad Widget

ಮಂಗಳೂರು :ಉದಯವಾಣಿ ದಿನ ಪತ್ರಿಕೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ  ಹಿರಿಯ ಪತ್ರಕರ್ತ ಮಂಗಳೂರು ನಿವಾಸಿ ಮನೋಹರ್ ಪ್ರಸಾದ್(65)  ಮಾ. 1 ರಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಅಲ್ಪಕಾಲದ ಅಸ್ವಸ್ತತೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಮಂಗಳಾ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಅಲ್ಲಿ ಅವರು ಇಂದು ಮುಂಜಾನೆ ನಿಧನ ಹೊಂದಿದರು.  

Ad Widget

Ad Widget

Ad Widget

Ad Widget

ಉದಯವಾಣಿ ದಿನ ಪತ್ರಿಕೆಯಲಿ ಸುಧೀರ್ಘವಾದ ಸೇವೆ ಸಲ್ಲಿಸಿದ್ದ ಮನೋಹರ್ ಪ್ರಸಾದ್ ದ.ಕ ಜಿಲ್ಲೆಯ ರಾಜಕೀಯ,ಸಾಂಸ್ಕೃತಿಕ ಸೇರಿದಂತೆ ಎಲ್ಲಾ ವಿಭಾಗದಲ್ಲೂ ಅಪೂರ್ವ ಜ್ಞಾನ ಹೊಂದಿದ್ದರು. 3 ದಶಕಗಳ ಕಾಲ ಉದಯವಾಣಿ ಪತ್ರಿಕೆಯಲ್ಲಿ  ಕಾರ್ಯನಿರ್ವಹಿಸಿದ್ದ ಅವರು ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು.  ನಿವೃತ್ತಿ ಹೊಂದುವಾಗ ಉದಯವಾಣಿಯ ಮಂಗಳೂರು ಸುದ್ದಿ  ವಿಭಾಗದ ಮುಖ್ಯಸ್ಥರಾಗಿದ್ದರು.

Ad Widget

Ad Widget alt="Ad Widget"/>

Ad Widget

ನಿವೃತ್ತಿಯ ಬಳಿಕವು  ಅನಾರೋಗ್ಯದ ನಡುವೆಯೂ ಸಮಾಜಮುಖಿ ಕಾರ್ಯಕ್ರಮಗಳಲ್ಲಿ  ಮನೋಹರ್ ಪ್ರಸಾದ್ ಭಾಗವಹಿಸುತ್ತಿದ್ದರು. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದವರಾದರೂ ಮಂಗಳೂರಿನಲ್ಲಿ ಪತ್ರಕರ್ತರಾಗಿ ಪ್ರಸಿದ್ದಿ ಪಡೆದಿದ್ದರು.

Ad Widget

Ad Widget <> Ad Widget

ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಪ್ರಶಸ್ತಿ ಪುರಸ್ಕರ

Ad Widget

Ad Widget

ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಮೊದಲಾದ ಹಲವು ಗೌರವ ಗಳಿಗೆ ಭಾಜನರಾಗಿದ್ದಾರೆ

Ad Widget
Click to comment

Leave a Reply

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಉಡುಪಿ

H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ

Published

on

Ad Widget

Ad Widget

Ad Widget

Ad Widget

ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget alt="Ad Widget"/>

Ad Widget

ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.

ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

ಕೊಲ್ಲೂರು ಬಳಿಕ ಕಾಪು ಹೊಸ ಮಾರಿಗುಡಿ ದೇವಿ ಸನ್ನಿಧಾನದಕ್ಕೆ ಹೆಚ್ ಡಿಕೆ ಕುಟುಂಬ ಭೇಟಿ ನೀಡಲಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!