ರಾಷ್ಟ್ರೀಯ
“CAA ಬರ್ತಾ ಇದೆ, ದಾರಿ ಬಿಡಿ”: ಸೂಕ್ಷ್ಮ ಸಂದೇಶ ರವಾನಿಸಿದ ಅಮಿತ್ ಶಾ ಕಾರ್ ನಂಬರ್
ಹೊಸದಿಲ್ಲಿ: ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರ ಖಾಸಗಿ ಕಾರಿನ ನಂಬರ್ ಹಾಗೂ ಪೌರತ್ವ ನೋಂದಣಿ ತಿದ್ದುಪಡಿ ಕಾಯಿದೆಗೂ (Citizen Amendment Act – CAA) ಸಂಬಂಧವಿದೆಯಾ ಎಂಬ ಪ್ರಶ್ನೆಯೊಂದು ಸಾಮಾಜಿಕ ಜಾಲತಾಣದಲ್ಲಿ ಮೂಡಿದೆ. ಟಿಕೆಟ್ ಹಂಚಿಕೆ ಕುರಿತ ಬಿಜೆಪಿ ಹೈಕಮಾಂಡ್ ನ ಮಹತ್ವದ ಸಭೆಗೆ ದಿಲ್ಲಿಯ ಬಿಜೆಪಿ ಕಚೇರಿಗೆ ಅಮಿತ್ ಶಾ ಆಗಮಿಸಿದ ಕಾರಿನ ನಂಬರ್ ಈಗ ಎಲ್ಲರ ಗಮನ ಸೆಳೆಯುತ್ತಿದೆ.
ಅವರ ಕಾರಿನ ನಂಬರ್ ಪ್ಲೇಟ್ ನಲ್ಲಿ ಸಿಎಎ ಇದೆ. `DL1 CAA 4421′ ಎಂಬುದು ಈ ಕಾರಿನ ನಂಬರ್.
ಅಮಿತ್ ಶಾ ಅವರು ಸಿಎಎ ಜಾರಿಗೆ ಟೊಂಕ ಕಟ್ಟಿದ್ದಾರೆ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಲೋಕಸಬೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಶಾ ಪದೆ ಪದೆ ಸಿಎಎ ಜಾರಿ ಮಾಡುವ ಬಗ್ಗೆ ಹೇಳುತ್ತಿದ್ದಾರೆ. ಇತ್ತೀಚೆಗೆ ಅಮಿತ್ ಶಾ ಅವರು ಸಿಎಎ ಲೋಕಸಭೆ ಚುನಾವಣೆಗೂ ಮುನ್ನ ಜಾರಿಯಾಗಲಿದೆ ಎಂದು ಹೇಳಿದ್ದರು. ಇತ್ತೀಚೆಗೆ ಗೃಹ ಸಚಿವಾಲಯ ಸಿಎಎ ಜಾರಿಗೆ ಬೇಕಾದ ನಿಯಮಾವಳಿಗಳನ್ನು ಹೊರಡಿಸಲಿದೆ ಎಂದು ಹೇಳಿತ್ತು. ಸಿಎಎ ಜಾರಿಯಿಂದ ಹಿಂದೂ ಮತಗಳ ದ್ರುವಿಕರಣವಾಗುವ ಸಾಧ್ಯತೆಯಿರುವುದರಿಂದ ಈ ಚುನಾವಣೆಗೆ ಮುಂಚೆಯೇ ಅದು ಅನುಷ್ಟಾನ ಆಗುವ ಸಾಧ್ಯತೆಯಿದೆ.
ಅಮಿತ್ ಶಾ ಕಾರಿನ ನಂಬರಿನ ವಿಡಿಯೋ ವೀಕ್ಷಿಸಿದ ಆನ್‌ಲೈನ್ ಜಾಣರು ತಮ್ಮದೇ ಅಭಿಪ್ರಾಯಗಳನ್ನು ಈ ಕುರಿತು ತೇಲಿಬಿಟ್ಟಿದ್ದಾರೆ. “ಅಮಿತ್ ಶಾ ಸಿಎಎ ಜಾರಿ ಬಗ್ಗೆ ಎಷ್ಟು ಸೀರಿಯಸ್ ಆಗಿದ್ದಾರೆ ಅನ್ನೋದು ಇದರಲ್ಲೇ ಗೊತ್ತಾಗುತ್ತದೆ” ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. “ಇದು ಸೂಕ್ಷ್ಮ ಸಂದೇಶ” “CAA ಬರ್ತಾ ಇದೆ, ದಾರಿ ಬಿಡಿ” “ಇದು ಕಾಕತಾಳೀಯ ಆಗಿರಲಿಕ್ಕಿಲ್ಲ” “ಇದು ಮೊದಲೇ ನಮ್ಮ ಕಣ್ಣಿಗೆ ಯಾಕೆ ಬೀಳ್ಲಿಲ್ಲ?” ಎಂದೂ ಇನ್ನೂ ಹಲವರು ಕಾಮೆಂಟ್ ಮಾಡಿದ್ದಾರೆ.
2019ರಲ್ಲೇ ಸಿಎಎ ತಿದ್ದುಪಡಿ ಜಾರಿಯಾದರೂ ನಿಯಮಗಳ ಅಧಿಸೂಚನೆ ಹೊರಡಿಸಿರಲಿಲ್ಲ. ಈ ಕಾಯ್ದೆಯ ಅನ್ವಯ ಆಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಹಿಂದೂಗಳು, ಸಿಖ್‌ಗಳು, ಬೌದ್ಧರು, ಪಾರ್ಸಿಗಳು, ಜೈನರು ಮತ್ತು ಕ್ರಿಶ್ಚಿಯನ್ನರು ಡಿಸೆಂಬರ್ 31, 2014 ರಂದು ಅಥವಾ ಮೊದಲು ಭಾರತಕ್ಕೆ ಪ್ರವೇಶಿಸಿದ್ದರೆ ಅಂಥವರಿಗೆ ಭಾರತೀಯ ಪೌರತ್ವವನ್ನು ಒದಗಿಸುವ ಅವಕಾಶವನ್ನು ಈ ಸಿಎಎ ಒದಗಿಸುತ್ತದೆ. ಕೇವಲ ಧರ್ಮವೇ ಭಾರತೀಯ ಪೌರತ್ವ ಪಡೆಯಲು ಮಾನದಂಡವಾದ್ದರಿಂದ ದೇಶಾದ್ಯಂತ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು.
ಸಿಎಎ ವಿರೋಧಿಸಿ 2019 ರಲ್ಲಿ ಭಾರೀ ಪ್ರತಿಭಟನೆಗಳು ಕೂಡ ನಡೆದವು. ಅನೇಕ ರಾಜಕೀಯ ನಾಯಕರು ಸಿಎಎ ಅನ್ನು ರಾಷ್ಟ್ರೀಯ ನಾಗರಿಕರ ನೋಂದಣಿ(NRC)ಗೆ ಸಂಪರ್ಕ ಕಲ್ಪಿಸಿದ್ದರಿಂದ ಗೊಂದಲವು ಉಂಟಾಯಿತು. ಈ ಮಧ್ಯೆ, ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಜೋರಾದ್ದರಿಂದ ಪ್ರತಿಭಟನೆಗಳನ್ನು ಕೈ ಬಿಡಲಾಯಿತು.
ಅಲ್ಲದೇ, ಕೋವಿಡ್ ಕಾರಣದಿಂದಾಗಿ ಸಿಎಎ ಜಾರಿ ಸಂಬಂಧ ನಿಯಮಗಳನ್ನು ರೂಪಿಸುವಲ್ಲಿ ಕೇಂದ್ರ ಸರ್ಕಾರ ಕೂಡ ವಿಳಂಬ ಮಾಡಿತು. ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸುವುದು ಮೊದಲ ಆದ್ಯತೆಯಾದ್ದರಿಂದ ನಿಯಮಗಳನ್ನು ರಚಿಸಲು ಕೇಂದ್ರ ಸರ್ಕಾರವು ಮುಂದಾಗಲಿಲ್ಲ. ಈಗ ಮತ್ತೆ ಸಿಎಎ ಕುರಿತು ಅಧಿಸೂಚನೆ ಹೊರಡಿಸಲು ಸರ್ಕಾರವು ಈಗ ಮುಂದಾಗಿದೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಅದೇ ಕಾರಣಕ್ಕೆ ಕೇಂದ್ರ ಸರ್ಕಾರವು ಮತ್ತೆ ಸಿಎಎಯತ್ತ ತನ್ನ ಕಣ್ಣು ನೆಟ್ಟಿದೆ ಎಂದು ಹೇಳಲಾಗುತ್ತಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ಬಿಗ್ ನ್ಯೂಸ್12 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ನಿಧನ ವಾರ್ತೆ7 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಅಪರಾಧ13 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ11 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ12 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ10 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ12 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ6 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















