ಸಾಮಾಜಿಕ ಮಾಧ್ಯಮ
‘Panchamitra’ WhatsApp chat-ದೇಶದಲ್ಲೆ ಪ್ರಥಮ ‘ಪಂಚ ಮಿತ್ರ’ ವಾಟ್ಸ್ಯಾಪ್ ಚ್ಯಾಟ್-ಗ್ರಾ ಪಂ ಸೇವೆ, ಸಮಸ್ಯೆ ನಿವೇದನೆ, ಪರಿಹಾರಕ್ಕೆ ಏಕಗವಾಕ್ಷಿ ವ್ಯವಸ್ಥೆ
ಬೆಂಗಳೂರು, ಮಾ. 1: ಗ್ರಾಮ ಪಂಚಾಯತ್ಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಮತ್ತು ಗ್ರಾಮ ಪಂಚಾಯತ್ ಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಪಂಚಮಿತ್ರ ವಾಟ್ಸ್ಆಪ್ ಚಾಟ್ನ್ನು ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ಖರ್ಗೆ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಂಚಮಿತ್ರ ಪೋರ್ಟಲ್ನ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಅವರು, ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಪಂಗಳ ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಮತ್ತು ಗ್ರಾಪಂಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ ಸೈಟ್ ಮತ್ತು ಪೋರ್ಟಲ್ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೆ ಎಲ್ಲ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ ನಿವಾರಿಸಿಕೊಳ್ಳಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್ಗಳು ಇರಲಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಬರುವ ರಾಜ್ಯದ ಎಲ್ಲ ಗ್ರಾಪಂಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ವಾಟ್ಸ್ಆಪ್ಚಾಟ್ ತಂತ್ರಜ್ಞಾನವನ್ನು ದೇಶದಲ್ಲೇ ಪ್ರಪ್ರಥಮವಾಗಿ ಅನುಷ್ಟಾನಗೊಳಿಸಲಾಗಿದೆ ಎಂದರು.
ಇನ್ನು ಮುಂದೆ ಗ್ರಾಪಂಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಮತ್ತು ಕುಂದುಕೊರತೆಗಳನ್ನು ವಾಟ್ಸ್ಅಪ್ ಚಾಟ್ ಸಂಖ್ಯೆ 8277506000 ಮೂಲಕ ದಾಖಲಿಸಬಹುದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹದೇವನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
ಏನಿದು ಪಂಚಮಿತ್ರ?
ಪಂಚಮಿತ್ರ ಪೋರ್ಟಲ್ ಮೂಲಕ ಗ್ರಾಪಂಗಳ ಮಾಹಿತಿಗಳಾದ ಚುನಾಯಿತ ಪ್ರತಿನಿಧಿಗಳ ವಿವರ, ಸಿಬಂದಿ ವಿವರ, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿ, ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಗ್ರಾ.ಪಂ.ಗಳ ಮತ್ತು ಉಪಕ್ರಮಗಳು, 4(1) (ಎ) 4(1) (ಬಿ) ಆರ್.ಟಿಐ ದಾಖಲೆಗಳ ವಿವರಗಳನ್ನು ಪಡೆಯಬಹುದಾಗಿದೆ.
ಯಾವೆಲ್ಲ ಸೇವೆ ಲಭ್ಯ?
ಗ್ರಾಪಂಗಳಿಗೆ ಸಂಬಂಧಿಸಿ ಕಟ್ಟಡ ನಿರ್ಮಾಣ ಪರವಾನಿಗೆ (ಲೈಸೆನ್ಸ್), ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜು ಸಂಪರ್ಕದ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಿಗೆ, ಸ್ವಾಧೀನ ಪ್ರಮಾಣಪತ್ರ, ರಸ್ತೆ, ಆಗೆಯಲು ಅನುಮತಿ, ಕೈಗಾರಿಕೆ/ಕೃಷಿ ಆಧಾರಿತ ಉತ್ಪಾದನ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣ ಪತ್ರ, ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ ಅಥವಾ ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ, ನಿಯಮಿತಗೊಳಿಸುವಿಕೆ, ಓವರ್ಗ್ರೌಂಡ್ಕೇಬಲ್ಮೂಲಸೌಕರ್ಯ, ಭೂಗತ ಕೇಬಲ್ಮೂಲಸೌಕರ್ಯಕ್ಕಾಗಿ ಅನುಮತಿ, ನಮೂನೆ 9/11ವಿ, ನಮೂನೆ 11ಬಿ ಸೇವೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ ಹಾಗೂ ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್ನಿಂದ ಇಂಟರ್ನೆಟ್ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್ನಲ್ಲಿ ಹೃತಿಕ್ ರೋಷನ್ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್ಗಾಗಿ ಸಖತ್ ಆಗಿ ಜಿಮ್ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ಸ್ಥಳೀಯ22 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ15 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು15 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್21 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್17 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು16 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ15 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
















