Connect with us

ಅಪರಾಧ

Calling Darling is Sexual Harassment ಅಪರಿಚಿತ ಮಹಿಳೆಯನ್ನು ʼಡಾರ್ಲಿಂಗ್‌ʼ ಎನ್ನುವುದು ಅಪರಾಧ –ಹಾಗೇ ಕರೆದ ವ್ಯಕ್ತಿಗೆ ಶಿಕ್ಷೆ – ಹೈ ಕೋರ್ಟು ತೀರ್ಪಿನಲ್ಲಿ ಏನಿದೆ ಗೊತ್ತೇ?

Published

on



Ad Widget

Ad Widget

Ad Widget

Ad Widget

ಕೋಲ್ಕತ್ತ:  ಡಾರ್ಲಿಂಗ್ ಎಂಬ ಪದ ಲೈಂಗಿಕತೆಯ ಸೂಚಕವಾಗಿದ್ದು,  ಅಪರಿಚಿತ ಮಹಿಳೆಯರನ್ನು ಈ ರೀತಿಯಲ್ಲಿ ಕರೆಯು ವುದು ಅಪರಾಧ ಎಂದು ಕಲ್ಕತಾ ಹೈಕೋರ್ಟ್ ಹೇಳಿದೆ.  9 ವರ್ಷಗಳ ಹಿಂದೆ ದುರ್ಗಾಪೂಜೆ ವೇಳೆ ಕುಡಿದ ಮತ್ತಿನಲ್ಲಿದ್ದ ಜಾನಕ್ ರಾಮ್ ಎಂಬ ವ್ಯಕ್ತಿ, ‘ಏನ್ ಡಾರ್ಲಿಂಗ್ ಚಲನ್ ನೀಡಲು ಬಂದಿದ್ದೀಯಾ’ ಎಂದು ಮಹಿಳಾ ಪೊಲೀಸ್‌ ಪೇದೆಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದ.

Ad Widget

Ad Widget

Ad Widget

Ad Widget

ಈ ಬಗ್ಗೆ ಮಹಿಳಾ ಪೇದೆ ದೂರು ದಾಖಲಿಸಿದ್ದಳು. ಈ ಕುರಿತು ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯ ‘ಡಾರ್ಲಿಂಗ್ ಎಂದು ಕರೆಯುವುದು ಲೈಂಗಿಕ ಸೂಚಕ ಎಂದು ಪರಿಗಣಿಸಲಾಗಿದ್ದು ಅಪರಾಧವಾಗಿದೆ’ ಎಂದು ಹೇಳಿ ಶಿಕ್ಷೆ ವಿಧಿಸಿತ್ತು. ಇದನ್ನು ರಾಮ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ . ಇದೀಗ ಹೈ ಕೋರ್ಟು ಕೂಡ ಅಧೀನ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಮುಂದುವರಿದು ಅದು,  ಐಪಿಸಿ ಸೆಕ್ಷನ್ 354 ಎ (ಐ) ಪ್ರಕಾರ ಲೈಂಗಿಕ  ಸುಛಕ ಹೇಳಿಕೆಗಳು ದಂಡನೀಯ ಎಂದು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ

Ad Widget

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ ?

Ad Widget

Ad Widget <> Ad Widget

 ದೂರುದಾರ ಪೇದೆ ಮತ್ತು ಇತರ ಪೊಲೀಸ್‌ ಸಿಬ್ಬಂದಿಯನ್ನು ದುರ್ಗಾಪೂಜೆಯ ಮುನ್ನಾದಿನ ಪ. ಬಂಗಾಲದ  ಲಾಲ್‌ ಟಿಕ್ರಿ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೇಮಿಸಲಾಗಿತ್ತು. ಈ ವೇಳೆ ಜನರಿಗೆ ಉಪಟಳ ನೀಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿದ ಪೊಲೀಸರ ಒಂದು ತಂಡ ಆತನನ್ನು ಠಾಣೆಗೆ ಕರೆದೊಯ್ಯಿತು. ಈ ವೇಳೆ ಸಂತ್ರಸ್ತೆ ಸೇರಿದಂತೆ ಇತರೆ ಕೆಲ ಪೊಲೀಸರು ಅವರಿದ್ದ ಸ್ಥಳದಲ್ಲಿ ಕತ್ತಲು ಆವರಿಸಿದ್ದರಿಂದ ಸಮೀಪದಲ್ಲಿಯೇ ಬೆಳಕಿದ್ದ ಅಂಗಡಿಯೊಂದರ ಮುಂದಕ್ಕೆ ಬಂದು ನಿಂತರು. ಈ ಸಂದರ್ಭದಲ್ಲಿ ಅಲ್ಲಿಯೇ ಅಂಗಡಿಯ ಮುಂದೆ ನಿಂತಿದ್ದ ಮೇಲ್ಮನವಿದಾರನಾದ ಆರೋಪಿಯು ಸಂತ್ರಸ್ತೆಯನ್ನು ಕುರಿತಾಗಿ “ಕ್ಯಾ ಡಾರ್ಲಿಂಗ್, ಚಲನ್ ಕರ್ನೆ ಆಯಿ ಹೈ ಕ್ಯಾ?” (ಏನು ಡಾರ್ಲಿಂಗ್, ದಂಡ ವಿಧಿಸಲು ಬಂದಿದ್ದೀಯಾ?) ಎಂದು ಪ್ರಶ್ನಿಸಿದ್ದ



Ad Widget

ಉತ್ತರ ಮತ್ತು ಮಧ್ಯ ಅಂಡಮಾನ್‌ನ ಪ್ರಥಮ ದರ್ಜೆ ಜುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಮೇಲ್ಮನವಿದಾರನನ್ನು ದೋಷಿ ಎಂದು ಘೋಷಿಸಿ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು (ಐಪಿಸಿ) ಸೆಕ್ಷನ್ 354 ಎ (1) (4) ಮತ್ತು 509 (ಮಹಿಳೆಯ ಘನತೆಗೆ ಧಕ್ಕೆ ತರುವ ಉದ್ದೇಶದ ಪದ, ಸನ್ನೆ ಅಥವಾ ಕೃತ್ಯ) ಅಡಿಯ ಅಪರಾಧಗಳಿಗಾಗಿ ತಲಾ ರೂ 500 ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿದ್ದ ಆತನ ಮೇಲ್ಮನವಿಯನ್ನು ಉತ್ತರ ಮತ್ತು ಮಧ್ಯ ಅಂಡಮಾನ್‌ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಕೂಡ ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಆತ ಹೈಕೋರ್ಟ್‌ ಮೆಟ್ಟಿಲೇರಿದ್ದ.

Ad Widget

Ad Widget

ಅಪರಿಚಿತ ಮಹಿಳೆಯನ್ನು, ಆಕೆ ಪೊಲೀಸ್ ಕಾನ್‌ಸ್ಟೇಬಲ್‌ ಆಗಿರಲಿ ಅಥವಾ ಇಲ್ಲದಿರಲಿ, ಆರೋಪಿ ಕುಡಿದಿರಲಿ ಅಥವಾ ಕುಡಿಯದಿರಲಿ, ‘ಡಾರ್ಲಿಂಗ್’ ಎಂಬ ಪದದಿಂದ ಬೀದಿಯಲ್ಲಿ ಸಂಬೋಧಿಸುವುದು ಸಂಪೂರ್ಣವಾಗಿ ಅಪಮಾನಕರವಾಗಿದ್ದು ಪದ ಮೂಲತಃ ಲೈಂಗಿಕ ಛಾಯೆಯ ಹೇಳಿಕೆಯಾಗಿದೆ” ಎಂದು ಏಕ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ತಾನು ಕುಡಿದಿದ್ದೆ ಎನ್ನುವುದಕ್ಕೆ ಯಾವುದೇ ಸಾಕ್ಷಿಯಿಲ್ಲ ಎಂದು ಆರೋಪಿ ಹೇಳಿಕೊಂಡಿದ್ದನ್ನು ತಿಳಿದ ನ್ಯಾಯಾಲಯ “ಅಮಲುರಹಿತ ಸ್ಥಿತಿಯಲ್ಲಿ ಇದನ್ನು ಹೇಳಿದ್ದರೆ ಅಪರಾಧದ ಗಂಭೀರತೆ ಬಹುಶಃ ಇನ್ನೂ ಹೆಚ್ಚಾಗಿರುತ್ತಿತ್ತು” ಎಂದು ‘ಕಪಾಳಮೋಕ್ಷʼ ಮಾಡಿತು.

Ad Widget
Click to comment

Leave a Reply

ಅಂತರ ರಾಜ್ಯ

Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ

Published

on



Ad Widget

Ad Widget

Ad Widget

Ad Widget

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಗಢ್ ಬಾರಿಯಾ ಪುರಸಭೆಯ ಅಗ್ನಿಶಾಮಕ ವಾಹನವು ಧನ್‌ಪುರ್ ತಾಲೂಕಿನಲ್ಲಿರುವ ಬಿಜೆಪಿ ಶಾಸಕ ಬಚುಭಾಯ್ ಖಬಾದ್ ಅವರ ನಿವಾಸದ ಬಳಿ ನಿಂತಿದ್ದು, ಸಿಬ್ಬಂದಿ ಬಂಗಲೆಯ ಆವರಣ ಹಾಗೂ ಗೋಡೆಗಳಿಗೆ ಪೈಪ್ ಮೂಲಕ ನೀರು ಸಿಂಪಡಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

Ad Widget

Ad Widget <> Ad Widget

ವಿಡಿಯೋ ವೈರಲ್ ಆದ ಬಳಿಕ ತುರ್ತು ಸೇವೆಗೆ ಮೀಸಲಾಗಿರುವ ಅಗ್ನಿಶಾಮಕ ವಾಹನವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಖಬಾದ್ ಅವರಿಂದ ₹2,700 ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Ad Widget

ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದೇವಗಢ್ ಬಾರಿಯಾ ಪುರಸಭೆ ಅಧ್ಯಕ್ಷ ಘಮೇಶ್ ಕಲಾಲ್, ಅಗ್ನಿಶಾಮಕ ವಾಹನ ಕಳುಹಿಸುವಂತೆ ಶಾಸಕರು ಕರೆ ಮಾಡಿದ್ದರು. ಯಾವುದಾದರೂ ಗಂಭೀರ ಘಟನೆ ಸಂಭವಿಸಿರಬಹುದು ಎಂದು ಭಾವಿಸಿ ತಕ್ಷಣ ಅಗ್ನಿಶಾಮಕ ದಳವನ್ನು ಸಂಪರ್ಕಿಸಿ ವಾಹನ ಕಳುಹಿಸಿದ್ದಾಗಿ ತಿಳಿಸಿದ್ದಾರೆ.

Ad Widget

Ad Widget

ಆದರೆ, ಬಂಗಲೆ ಸ್ವಚ್ಛಗೊಳಿಸುವ ಉದ್ದೇಶಕ್ಕಾಗಿ ಅಗ್ನಿಶಾಮಕ ವಾಹನವನ್ನು ಬಳಸಲಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಬಂಗಲೆ ತೊಳೆಯಲು ವಾಹನ ಬಳಸಲಾಗುತ್ತದೆ ಎಂಬ ಮಾಹಿತಿ ಮುಂಚಿತವಾಗಿ ನೀಡಲಾಗಿರಲಿಲ್ಲ. ಈ ಕಾರಣದಿಂದ ಅಚಾತುರ್ಯ ಸಂಭವಿಸಿದೆ. ಇದೀಗ ತಪ್ಪಿತಸ್ಥರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ವಿಡಿಯೋದಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬೃಹತ್ ಬಂಗಲೆಯೊಂದರ ಮುಂಭಾಗ ಅಗ್ನಿಶಾಮಕ ವಾಹನ ನಿಂತಿರುವುದು ಕಾಣಿಸುತ್ತದೆ. ಅಗ್ನಿಶಾಮಕ ಸಿಬ್ಬಂದಿ ಪೈಪ್‌ಗಳ ಮೂಲಕ ಬಂಗಲೆಯ ಕಂಪೌಂಡ್ ಹಾಗೂ ಗೋಡೆಗಳಿಗೆ ನೀರು ಸಿಂಪಡಿಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.

Ad Widget
Continue Reading

ಅಪರಾಧ

FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR

Published

on



Ad Widget

Ad Widget

Ad Widget

Ad Widget

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್‌ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.



Ad Widget

ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.

Continue Reading

ಅಂತರ ರಾಜ್ಯ

YouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ತಮ್ಮ ಮನೆಯಲ್ಲಿ 118 ಸವರನ್ ಚಿನ್ನಾಭರಣ ಕಳುವಾಗಿದ್ದ ಬಗ್ಗೆ ದೂರು ನೀಡಿ ಸುದ್ದಿಯಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಮಧುಮಿತಾ ಅವರ ಪ್ರಕರಣಕ್ಕೆ ಇದೀಗ ಅನಿರೀಕ್ಷಿತ ತಿರುವು ಸಿಕ್ಕಿದೆ. 2022ರಲ್ಲಿ 89 ವರ್ಷದ ವೃದ್ಧ ಕಟ್ಟಡ ಗುತ್ತಿಗೆದಾರರ 5 ಸವರನ್ ತೂಕದ ಚಿನ್ನದ ಸರ ಕಳವು ಮಾಡಿದ ಆರೋಪದಲ್ಲಿ ರಾಜಕ್ಕಮಂಗಲಂ ಪೊಲೀಸರು ಮಧುಮಿತಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ನಾಗರಕೋಯಿಲ್, ಅ.6: ತಮ್ಮ ಮನೆಯಲ್ಲಿ 118 ಸವರನ್ ಚಿನ್ನಾಭರಣ ಕಳುವಾಗಿದ್ದ ಬಗ್ಗೆ ದೂರು ನೀಡಿ ಸುದ್ದಿಯಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಮಧುಮಿತಾ ಅವರ ಪ್ರಕರಣಕ್ಕೆ ಇದೀಗ ಅನಿರೀಕ್ಷಿತ ತಿರುವು ಸಿಕ್ಕಿದೆ. 2022ರಲ್ಲಿ 89 ವರ್ಷದ ವೃದ್ಧ ಕಟ್ಟಡ ಗುತ್ತಿಗೆದಾರರ 5 ಸವರನ್ ತೂಕದ ಚಿನ್ನದ ಸರ ಕಳವು ಮಾಡಿದ ಆರೋಪದಲ್ಲಿ ರಾಜಕ್ಕಮಂಗಲಂ ಪೊಲೀಸರು ಮಧುಮಿತಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ತಿರುನಲ್ವೇಲಿ ಮೂಲದ 89 ವರ್ಷದ ಗುತ್ತಿಗೆದಾರರೊಬ್ಬರು ಈ ಕುರಿತು ದೂರು ನೀಡಿದ್ದಾರೆ. ಬೆನ್ನುನೋವಿನ ಸಮಸ್ಯೆಗೆ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮಧುಮಿತಾ ಅವರ ಪರಿಚಯವಾಗಿತ್ತು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

2022ರಲ್ಲಿ ಮಧುಮಿತಾ ಕರೆ ಮಾಡಿ ತಿರುನಲ್ವೇಲಿ ನ್ಯಾಯಾಲಯದ ಬಳಿ ಕರೆದುಕೊಂಡು ಹೋಗಿ ಬಸ್ ನಿಲ್ದಾಣದಲ್ಲಿ ಬಿಡುವಂತೆ ಮನವಿ ಮಾಡಿದ್ದರು. ಅದರಂತೆ ಗುತ್ತಿಗೆದಾರರು ತಮ್ಮ ಕಾರಿನಲ್ಲಿ ಆಕೆಯನ್ನು ಕರೆದುಕೊಂಡು ಹೋಗಿ ಬಿಟ್ಟಿದ್ದರು. ಆದರೆ, ಮಧುಮಿತಾ ಕಾರಿನಿಂದ ಇಳಿದು ಹೋದ ಬಳಿಕ ತಮ್ಮ ಕತ್ತಿನಲ್ಲಿದ್ದ 5 ಸವರನ್ ತೂಕದ ಚಿನ್ನದ ಸರ ಕಾಣೆಯಾಗಿರುವುದು ಗಮನಕ್ಕೆ ಬಂದಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.



Ad Widget

ಈ ಕುರಿತು ಮಧುಮಿತಾ ಅವರನ್ನು ಪ್ರಶ್ನಿಸಿದಾಗ ಸರವನ್ನು ಹಿಂದಿರುಗಿಸದೆ ಜೀವ ಬೆದರಿಕೆ ಹಾಕಿದ್ದರು ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಮಾನಹಾನಿ ಹಾಗೂ ಅವಮಾನಕ್ಕೆ ಹೆದರಿ ಅಂದು ಪೊಲೀಸರಿಗೆ ದೂರು ನೀಡಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget

ದೂರಿನ ಆಧಾರದ ಮೇಲೆ ರಾಜಕ್ಕಮಂಗಲಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಘಟನೆ ನಡೆದ ಸ್ಥಳ ತಿರುನಲ್ವೇಲಿ ಪೊಲೀಸ್ ವ್ಯಾಪ್ತಿಗೆ ಬರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ತಿರುನಲ್ವೇಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಲಾಗಿದೆ. ಮಧುಮಿತಾ ವಿರುದ್ಧದ ಆರೋಪಗಳು ಸದ್ಯಕ್ಕೆ ಸಾಬೀತಾಗಿಲ್ಲ.

118 ಸವರನ್ ಚಿನ್ನ ಕಳವು ಪ್ರಕರಣದಲ್ಲಿ ಸಂತ್ರಸ್ತೆಯಾಗಿದ್ದ ಯೂಟ್ಯೂಬರ್

ನಾಗರಕೋಯಿಲ್ ಬಳಿಯ ತಂಬತುಕೋಣಂನಲ್ಲಿರುವ ಮಧುಮಿತಾ ಅವರ ಮನೆಯಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಸುಮಾರು 118 ಸವರನ್ ಚಿನ್ನಾಭರಣ ಕಳವಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರನ್ನು ಬಂಧಿಸಿ 98 ಸವರನ್ ಚಿನ್ನವನ್ನು ವಶಪಡಿಸಿಕೊಂಡಿದ್ದರು.

ಮಧುಮಿತಾ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಚಿನ್ನಾಭರಣ ಹಾಗೂ ಹಣವನ್ನು ಪ್ರದರ್ಶಿಸುತ್ತಿದ್ದ ವೀಡಿಯೊಗಳನ್ನು ಗಮನಿಸಿದ್ದ ಕಳ್ಳರು, ಅದರಿಂದ ಪ್ರೇರಿತರಾಗಿ ಕಳ್ಳತನ ನಡೆಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿತ್ತು ಎನ್ನಲಾಗಿದೆ.

ತಮ್ಮ ಮನೆಯಲ್ಲಿನ ಭಾರೀ ಕಳ್ಳತನದ ಪ್ರಕರಣದಲ್ಲಿ ಸಂತ್ರಸ್ತೆಯಾಗಿ ಸುದ್ದಿಯಾಗಿದ್ದ ಮಧುಮಿತಾ ವಿರುದ್ಧವೇ ಇದೀಗ 2022ರ ಹಳೆಯ ಕಳವು ಆರೋಪದಡಿ ದೂರು ದಾಖಲಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading