ರಾಜಕೀಯ
Capitalist plan-ವಿದೇಶದಿಂದ ವಿಮಾನದಲ್ಲಿ ಅಡಿಕೆ ಬರುತ್ತಿರುವುದರ ಹಿಂದಿದೆ ದೊಡ್ಡ ಸಂಚು – ರೈತ ಮುಖಂಡರು ಬಿಚ್ಚಿಟ್ಟರು ಬಂಡವಾಳ ಶಾಹಿಗಳ ಪ್ಲ್ಯಾನ್
ಪುತ್ತೂರು: ಬ್ರಿಟಿಷರು ಕಾರ್ಖಾನೆಗಳಿಗೆ ಕಡಿಮೆ ಬೆಲೆಯಲ್ಲಿ ಕಚ್ಚಾ ವಸ್ತುಗಳು ಬೇಕೆಂದು ಕೃಷಿ ಉತ್ಪನ್ನಗಳ ಬೆಲೆಯನ್ನು ಹತೋಟಿಯಲ್ಲಿಟ್ಟಿದ್ದಂತೆ, ಸರ್ಕಾರಗಳು ಬಂಡವಾಳ ಶಾಹಿಗಳ ಕಪಿಮುಷ್ಠಿಯಲ್ಲಿ ಸಿಕ್ಕು ರೈತರ ಹೊಟ್ಟೆಗೆ ಹೊಡೆಯುತ್ತಿದ್ದರು. ರೈತರ ಫಲವತ್ತಾದ ಭೂಮಿಯನ್ನು ಹಾಳು ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ರೈತರ ಬಗ್ಗೆ ಕಳಕಳಿ ಇರುತ್ತಿದ್ದರೆ, ಇಂತಹ ದುಸ್ಥಿತಿ ಬರುತ್ತಿರಲಿಲ್ಲ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದರೂ, ಜಿಲ್ಲಾಧಿಕಾರಿಯವರು ರೈತರ ಸಭೆ ನಡೆಸಿಲ್ಲ. ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಮಾ.7ರಂದು ಮಧ್ಯಾಹ್ನ 2ರಿಂದ ಬಿಸಿರೋಡಿನಿಂದ ಟ್ರ್ಯಾಕ್ಟರ್ ಹಾಗೂ ವಾಹನ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಛೇರಿ ಎದುರು ಸಾಯಂಕಾಲ 4ಕ್ಕೆ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ರೈತ ಸಂಘಗಳ ಒಕ್ಕೂಟದ ಸಂಯೋಜಕ ಸನ್ನಿ ಡಿ.ಸೋಜ ಹೇಳಿದರು.
ಅಡಿಕೆ ಹಾಗೂ ತೆಂಗಿನ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಕಾರ್ಪೊರೇಟ್ ಕಂಪನಿಗಳ 14 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಸರಕಾರದ ತಪ್ಪು ನೀತಿಯಿಂದಾಗಿ ರೈತರು ಸಾಲಗಾರರಾಗಿದ್ದಾರೆ ಆದ್ದರಿಂದ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ದೆಹಲಿಯ ಗಡಿ ಪ್ರದೇಶದಲ್ಲಿ ಹೋರಾಟ ನಡೆಸುವ ರೈತರ ಮೇಲಿನ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕು. ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು. ಧಾರ್ಮಿಕ ಸಂಘರ್ಷದಲ್ಲಿ ಮೃತಪಟ್ಟವರಿಗೆ ಸರಕಾರವು ನೀಡಿದ 25 ಲಕ್ಷ ಸಹಾಯಧನ ಪ್ರಕಾರ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ನೀಡಬೇಕು. ಎಲೆ ಚುಕ್ಕಿ ರೋಗ ಹಾಗೂ ಹಳದಿ ಎಲೆ ರೋಗ ಭಾದಿತ ರೈತರಿಗೆ ಪ್ರತಿ ಎಕರೆಗೆ 25,000 ಸಹಾಯಧನವನ್ನು ನೀಡಬೇಕು. ಬಂಟ್ವಾಳದ ಮೂಲಕ ಹಾದುಹೋಗುವ 400 ಕೆ ವಿ ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸಬೇಕು ಎಂಬ ಪ್ರಮುಖ ಬೇಡಿಕೆಯನ್ನು ಇಟ್ಟುಕೊಂಡು ಹೋರಾಟ ನಡೆಯುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆರ್ಥಿಕ ಬೆನ್ನೆಲುಬಾಗಿರುವ ಅಡಿಕೆ ಆಮದು ಪ್ರಕ್ರಿಯೆಯಿಂದ ದರ ಕುಸಿತವಾಗಿದೆ, ತಕ್ಷಣ ಆಮದು ನಿಷೇಧ ಮಾಡಬೇಕು. ಉತ್ಪಾದನಾ ವೆಚ್ಚ ಮೂರು ಪಟ್ಟು ಹೆಚ್ಚಾಗಿದ್ದು, ಅಡಿಕೆ ಬೆಲೆ ನಿರಂತರ ಕುಸಿತವಾಗುತ್ತಿದೆ. ಎಲೆ ಚುಕ್ಕಿ ಹಾಗೂ ಹಳದಿ ಎಲೆ ರೋಗದಿಂದ ತತ್ತರಿಸಿ ಆತ್ಮಹತ್ಯೆ ಮಾಡಿರುವ ಮೂರು ಮಂದಿ ರೈತರಿಗೆ ಸರಿಯಾದ ಪರಿಹಾರವನ್ನು ಸರ್ಕಾರ ನೀಡಬೇಕು. ಅಡಿಕೆಯನ್ನು ಆಮದು ಮಾಡಿ ಮಿಶ್ರಣ ಮಾಡುವ ಮೂಲಕ, ದಕ್ಷಿಣ ಕನ್ನಡದ ಹೆಸರು ಕೆಡಿಸುವ ಕಾರ್ಯವಾಗುತ್ತಿದೆ. ಅಡಿಕೆ ಮಾರುಕಟ್ಟೆಯನ್ನು ಹಾಳು ಮಾಡುವ ನಿಟ್ಟಿನಲ್ಲಿ ವಿಮಾನಗಳ ಮೂಲಕ ತರಿಸಿಕೊಂಡು ಆತಂಕ ಸೃಷ್ಟಿಸುವ ಕಾರ್ಯವಾಗುತ್ತಿದೆ. ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಅಡಿಕೆ ಯಾರಿಗೆ ಸೇರಿದ್ದು, ಎಲ್ಲಿಗೆ ಹೋಗುವುದು ಎಂಬ ಸಂಪೂರ್ಣ ತನಿಖೆಯಾಗಬೇಕು. ಜಿಲ್ಲೆಯ ಸಣ್ಣ ಹಿಡುವಳಿದಾರರ ಜತೆಗೆ ಸರ್ಕಾರ ನಿಲ್ಲಬೇಕು ಎಂದರು.
ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. 29ರೂ.ಗೆ ಅಕ್ಕಿ ನೀಡುವುದರಿಂದ ಸರ್ಕಾರ ಏನು ಸಾಧಿಸಲು ಹೊರಟಿದೆ. ಇದರಿಂದ ಭತ್ತದ ಬೆಲೆ ಕುಸಿತವಾಗುತ್ತಿದೆ. ಬಂಡವಾಳ ಶಾಹಿಗಳ ಯಾವುದೇ ಉತ್ಪನ್ನವನ್ನೂ ಕಡಿಮೆ ಬೆಲೆಗೆ ನೀಡುತ್ತಿಲ್ಲ. ಸರ್ಕಾರದ ನೀತಿಯಿಂದ ರೈತ ಅನುಭವಿಸಿದ ನಷ್ಟವನ್ನು ಸಾಲ ಮನ್ನಾದ ಮೂಲಕ ಸರಿಪಡಿಸಿ ವೈಜ್ಞಾನಿಕ ಬೆಲೆ ಸಿಗುವಂತೆ ಮಾಡಬೇಕು. ದೇಶಕ್ಕೆ ಬೇಕಾದಷ್ಟು ಆಹಾರವನ್ನು ದೇಶದ ರೈತರು ಬೆಳೆಯುವ ಸಾಮರ್ಥ್ಯ ಹೊಂದಿದ್ದು, ಡಬ್ಲ್ಯು. ಎಚ್. ಒ. ಒಪ್ಪಂದದಿಂದ ಹೊರಬರಬೇಕು. ಜನರ ಸಮಸ್ಯೆಯ ಬಗ್ಗೆ ಮೂರು ಬಾರಿ ಆಯ್ಕೆಯಾಗಿ ಬಂದ ಸಂಸದ ಸರ್ಕಾರದ ಮುಂದೆ ಚಕಾರ ಎತ್ತುತ್ತಿಲ್ಲ ಎಂದು ತಿಳಿಸಿದರು.
ರೈತ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯರಾದ ಓಸ್ವಾಲ್ಡ್ಸ್ ಫೆರ್ನಾಂಡಿಸ್, ಅಮರನಾಥ ಆಳ್ವ, ಕಲೀಲ್ ಇಬ್ರಾಹಿಂ, ಭರತ್ ರೈ ಸೂಡಿಮುಳ್ಳು ಉಪಸ್ಥಿತರಿದ್ದರು.
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
-
ನಿಧನ ವಾರ್ತೆ13 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ13 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ12 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ12 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ13 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಸ್ಥಳೀಯ6 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಅಂತರ ರಾಜ್ಯ13 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ12 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















