Connect with us

ಅಪರಾಧ

Acid Attack-ಕಡಬ: ಲವ್ ಫೆಯಿಲ್ಯೂರ್ : ಮೂವರು ಕಾಲೇಜ್ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ ಮಲಯಾಳಿ ಬಾಯ್

Published

on



Ad Widget

Ad Widget

Ad Widget

Ad Widget

ಪುತ್ತೂರು : ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ಮಾ 4 ರಂದು ಬೆಳ್ಳಿಗೆ ನಡೆದಿದೆ.ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಆಸಿಡ್ ಎರಚಿದ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿದೆ. ಕೇರಳ ರಾಜ್ಯದ ಮಲಪ್ಪುರಂ ನಿವಾಸಿ ಎಂಬಿ ಎ ವಿದ್ಯಾರ್ಥಿ ಅಬೀನ್ (23) ಕೃತ್ಯ ಎಸಗಿದ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಕಡಬ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ 17ರ ಹರೆಯದ ಅಲೀನಾ ಸಿ.ಬಿ., ಅರ್ಚನಾ, ಅಮೃತ ಎನ್ನುವವರ ಮೇಲೆ ಆ್ಯಸಿಡ್ ಎರಚಿ ದಾಳಿಗೊಳಗಾದವರು.ಇದರಲ್ಲಿ ಅಲಿನಾ ಗಂಭೀರವಾಗಿ ಗಾಯಗೊಂಡವಳು.ಈಕೆ ಕೂಡ ಕೇರಳ ಮೂಲದವಳು

Ad Widget

Ad Widget <> Ad Widget

ಆ್ಯಸಿಡ್‌ ದಾಳಿಗೊಳಗಾದ ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ರವಾನಿಸಲು ಸಿದ್ಧತೆ ನಡೆಯುತ್ತಿದೆ.



Ad Widget

ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದರು.

Click to comment

Leave a Reply

ಸ್ಥಳೀಯ

Satish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!

Published

on



Ad Widget

Ad Widget

Ad Widget

Ad Widget

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿ ಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನದ ಅರ್ಚಕನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಭೂತ-ದೆವ್ವ ಬಿಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಸತೀಶ್ ಪಾತ್ರಿಯ ಮೇಲಿದೆ. ಈ ಸಂಬಂಧ ಸಂತ್ರಸ್ತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ ಎನ್ನಲಾಗಿದೆ. ಬಳಿಕ ಕಾರ್ಯಾಚರಣೆ ನಡೆಸಿದ ಕೊಪ್ಪ ಠಾಣೆ ಪೊಲೀಸರು, ಬೆಂಗಳೂರಿನ ಜೆ.ಪಿ. ನಗರದಲ್ಲಿ ಆತನನ್ನು ಬಂಧಿಸಿದ್ದಾರೆ.



Ad Widget

ಸಂತ್ರಸ್ತೆಯ ದೂರಿನ ಆಧಾರದಲ್ಲಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಾಟಮಂತ್ರ ನಿಷೇಧ ಕಾಯ್ದೆಯಡಿ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿಯೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Ad Widget

Ad Widget

ಬಾಲಕಿಗೆ ಕೋಳಿ ರಕ್ತ ಕುಡಿಯಲು ಒತ್ತಾಯಿಸಿದ ಆರೋಪ

ಇದೇ ಆರೋಪಿಯ ವಿರುದ್ಧ ಈ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಕೋಳಿ ರಕ್ತ ಕುಡಿಯುವಂತೆ ಒತ್ತಾಯಿಸಿದ ಆರೋಪವೂ ಕೇಳಿಬಂದಿತ್ತು. ಈ ವಿಚಾರ ಬೆಳಕಿಗೆ ಬಂದ ಬಳಿಕ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ಪೊಲೀಸ್ ಕಾನ್‌ಸ್ಟೇಬಲ್ ಅಮಾನತು
ಆರೋಪಿಯ ಬಂಧನ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸ್ ಇಲಾಖೆಯೊಳಗಿಂದಲೇ ಸೋರಿಕೆ ಮಾಡಲಾಗುತ್ತಿತ್ತು ಎಂಬ ಆರೋಪವೂ ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಎನ್.ಆರ್.ಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಕಾಂತೇಶ್, ತನಿಖೆಯ ವಿವಿಧ ಹಂತಗಳ ಮಾಹಿತಿಯನ್ನು ಸತೀಶ್ ಪಾತ್ರಿಗೆ ಮುಂಚಿತವಾಗಿ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ದಾಳಿ ನಡೆಸುವ ಮುನ್ನವೇ ಆರೋಪಿ ಸ್ಥಳ ಬದಲಿಸಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಮಾಹಿತಿ ಸೋರಿಕೆ ಆರೋಪದ ಮೇಲೆ ಕಾನ್‌ಸ್ಟೇಬಲ್ ಕಾಂತೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

Ad Widget
Continue Reading

ಸುಳ್ಯ

Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.

Ad Widget

Ad Widget <> Ad Widget

ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.



Ad Widget

ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ad Widget
Continue Reading

ಅಪರಾಧ

Udupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್‌ ವಶಕ್ಕೆ..!

Published

on



Ad Widget

Ad Widget

Ad Widget

Ad Widget

ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ಅ.11: ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಎರಡು, ಕಾಪು, ಶಿರ್ವ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ಇನ್ನೂ ಎರಡು-ಮೂರು ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ದೂರುಗಳು ಲಭಿಸಿವೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಈ ಪ್ರಕರಣಗಳ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಸಂಬಂಧಪಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ತನಿಖೆಯ ಪ್ರಗತಿ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ವರದಿಗಳನ್ನು ಸಲ್ಲಿಸಲಾಗುತ್ತಿದೆ.



Ad Widget

ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಈ ಹಿಂದೆ ಉಡುಪಿ ಜಿಲ್ಲಾ ಪೊಲೀಸರು ಹೇಮಂತ್ ಪೂಜಾರಿಗಾಗಿ ಬಾಂಗ್ಲಾದೇಶದ ಗಡಿಯವರೆಗೂ ಶೋಧ ನಡೆಸಿದ್ದರು. ಆದರೆ, ಆ ಕಾರ್ಯಾಚರಣೆಯಲ್ಲಿ ಆತನ ಪತ್ತೆಯಾಗಿರಲಿಲ್ಲ. ಇದೀಗ ಬೆದರಿಕೆ ಕರೆಗಳ ಪ್ರಕರಣಗಳಲ್ಲಿನ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ.

Ad Widget

Ad Widget

ಕಾಪು ಪೊಲೀಸರ ವಶಕ್ಕೆ ಅನುಜ್ ಪಾಟೀಲ್
ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಶಾರ್ಪ್ ಶೂಟರ್‌ಗಳನ್ನು ಕಳುಹಿಸಿದ್ದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಗ್ಯಾಂಗ್‌ಸ್ಟರ್, ಬಿಹಾರದ ನಳಂದ ಜಿಲ್ಲೆಯ ಅನುಜ್ ಪಾಟೀಲ್ (35)ನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಈ ಹಿಂದೆ ಬೈಂದೂರು ಹಾಗೂ ಹೆಬ್ರಿ ಪೊಲೀಸರು ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಕಾಪು ಪೊಲೀಸರು ವಶಕ್ಕೆ ಪಡೆದು, ಹೇಮಂತ್ ಪೂಜಾರಿಯೊಂದಿಗಿನ ಆತನ ಸಂಪರ್ಕ ಹಾಗೂ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬಂದಿರುವ ಬೆದರಿಕೆ ಕರೆಗಳ ಆಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕರೆಗಳನ್ನು ಹೇಮಂತ್ ಪೂಜಾರಿಯೇ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರಿನಲ್ಲಿ ಬೇರೆ ಯಾರಾದರೂ ಬೆದರಿಕೆ ಹಾಕುತ್ತಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

ಪೊಲೀಸ್ ಆಯುಧ ಕಸಿದು ಗುಂಡು ಹಾರಿಸಲು ಯತ್ನಿಸಿದ್ದ ಆರೋಪ
2017ರಿಂದ ತಲೆಮರೆಸಿಕೊಂಡಿದ್ದ ಅನುಜ್ ಪಾಟೀಲ್ ಮುಂಬೈ ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ್ದಾಗಿವೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿತ್ತು.

ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ಕರೆತರುತ್ತಿದ್ದಾಗ, ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಮೂತ್ರ ವಿಸರ್ಜನೆಗೆಂದು ಪೊಲೀಸ್ ವಾಹನದಿಂದ ಕೆಳಗಿಳಿದಿದ್ದ ಅನುಜ್ ಪಾಟೀಲ್, ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್‌ಐ ವಿನಯ್ ಅವರ ಸೇವಾ ಆಯುಧವನ್ನು ಕಸಿದು ಗುಂಡು ಹಾರಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡ ಆತನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಚಿಕಿತ್ಸೆಯ ಬಳಿಕ ತನಿಖೆ ಮುಂದುವರಿಸಿರುವ ಪೊಲೀಸರು, ಬೈಂದೂರು ಮತ್ತು ಹೆಬ್ರಿ ಠಾಣೆಗಳ ನಂತರ ಇದೀಗ ಕಾಪು ಪೊಲೀಸರ ವಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅನುಜ್ ಪಾಟೀಲ್‌ನ ಅಪರಾಧ ಚಟುವಟಿಕೆಗಳು, ಹೇಮಂತ್ ಪೂಜಾರಿಯೊಂದಿಗಿನ ಸಂಪರ್ಕ ಹಾಗೂ ಬೆದರಿಕೆ ಕರೆಗಳ ಹಿಂದಿನ ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading