ಬಿಗ್ ನ್ಯೂಸ್
Modi Parivara | ಲೋಕಸಭಾ ಚುನಾವಣ ಹೊಸ್ತಿಲ್ಲಲೇ ‘ಮೋದಿ ಪರಿವಾರ’ ಪ್ರಾರಂಭ…! – ಘಟಾನುಘಟಿ ನಾಯಕರ ಸಾಮಾಜಿಕ ಜಾಲತಾಣದಲ್ಲಿ ಹೆಸರಿನ ಮುಂದೆ ಸೇರ್ಪಡೆ
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಬಿಜೆಪಿ ನಾಯಕರು “ಮೋದಿ ಕಾ ಪರಿವಾರ್” (Modi Parivara) ಎಂಬ ಸಾಮಾಜಿಕ ಅಭಿಯಾನ ಶುರು ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿ ತಮ್ಮ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳಲ್ಲಿ ತಮ್ಮ ಹೆಸರಿನ ಮುಂದೆ “ಮೋದಿ ಕಾ ಪರಿವಾರ್” ಎನ್ನುವುದನ್ನು ಸೇರಿಸಿದ್ದಾರೆ.
ಬಿಹಾರದ ಪಾಟ್ನಾದಲ್ಲಿ ಐಎನ್‌ಡಿಐಎ ಒಕ್ಕೂಟದಿಂದ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದರು. ನರೇಂದ್ರ ಮೋದಿ ಅವರಿಗೆ ಸ್ವಂತ ಕುಟುಂಬ ಇಲ್ಲ ಎಂದರೆ ನಾವು ಏನು ಮಾಡಬೇಕು ಎಂದು ಲಾಲು ಪ್ರಸಾದ್ ಯಾದವ್ ಕೇಳಿದ್ದರು. ಈ ಮೂಲಕ ಕುಟುಂಬ ರಾಜಕಾರಣದ ವಿರುದ್ಧ ಮೋದಿ ಮಾಡುತ್ತಿದ್ದ ಟೀಕೆಗಳಿಗೆ ತಿರುಗೇಟು ನೀಡಿದ್ದರು.
ಅದಲ್ಲದೇ, ಮೋದಿ ರಾಮ ಮಂದಿರದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಅವರು ನಿಜವಾದ ಹಿಂದೂ ಕೂಡ ಅಲ್ಲ. ಹಿಂದೂ ಸಂಪ್ರದಾಯದಲ್ಲಿ ತಂದೆ – ತಾಯಿಯ ಮರಣದ ನಂತರ ಮಗನು ತನ್ನ ತಲೆ ಕೂದಲು ಮತ್ತು ಗಡ್ಡವನ್ನು ತೆಗೆಯಬೇಕು. ಆದರೆ, ಮೋದಿ ಅವರು ತಮ್ಮ ತಾಯಿ ನಿಧನ ಹೊಂದಿದಾಗ ಮೋದಿ ಆ ರೀತಿ ಮಾಡಲಿಲ್ಲ ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದರು. ಇದರ ಬೆನ್ನಲ್ಲಿಯೇ ಐಎನ್‌ಡಿಐಎ ನಾಯಕರಿಗೆ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ. ಈ ಕಾರಣಕ್ಕಾಗಿ ಬಿಜೆಪಿ ನಾಯಕರು ತಮ್ಮ ಹೆಸರಿನ ಮುಂದೆ ಮೋದಿ ಕಾ ಪರಿವಾರ್ ಎಂದು ಬರೆದುಕೊಳ್ಳುತ್ತಿದ್ದಾರೆ.
ಈಗಾಗಲೇ ಅಮಿತ್ ಶಾ, ಜೆಪಿ ನಡ್ಡಾ, ನಿತಿನ್ ಗಡ್ಕರಿ, ಅನುರಾಗ್ ಠಾಕೂರ್ ಸೇರಿ ಬಹಳಷ್ಟು ನಾಯಕರು ಮೋದಿ ಕಾ ಪರಿವಾರ್ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.ಇನ್ನು, 2019ರಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಮೈನ್ ಭಿ ಚೌಕಿದಾರ್ ಎಂಬ ಅಭಿಯಾನವನ್ನು ಬಿಜೆಪಿ ನಡೆಸಿತ್ತು. ಆಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಉದ್ದೇಶಿಸಿ ಚೌಕಿದಾರ್ ಚೋರ್ ಹೈ ಎಂದು ಹೇಳಿದ್ದರು.
ಬಿಗ್ ನ್ಯೂಸ್
Rain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ಪುತ್ತೂರು : ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಕೋಲಾರ ರಾಮನಗರ ಬೆಂಗಳೂರು ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ದ.ಕ. ಉಡುಪಿ ಉ.ಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆ ಬರುವ ಸಾಧ್ಯತೆ ಇದೆ. ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದ್ದರೂ ವಾತಾವರಣದ ಹ್ಯುಮಿಡಿಟಿ ಕಡಿಮೆ ಆದರೇ ಮಳೆ ಪ್ರಮಾಣ ಕಡಿಮೆ ಆಗಿ ಮೋಡದ ವಾತಾವರಣ ಮುಂದುವರೆಯಬಹುದು ಎನ್ನಲಾಗಿದೆ. ನವೆಂಬರ್ 28 ತನಕ ಸಂಜೆ ಮೋಡ – ಮಳೆಯ ಸಾಧ್ಯತೆ ಮುಂದುವರೆಯಬಹುದು ಎಂದು ಹವಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಮಲೆನಾಡಿನಲ್ಲಿ ಸಂಜೆಯ ಮೋಡ ಬರಲಿದ್ದು ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು – ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 27 ತನಕ ಸಂಜೆ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ರಾಮನಗರ ಚಾಮರಾಜನಗರ ಮೈಸೂರು ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ತುಮಕೂರು ಚಿತ್ರದುರ್ಗ ದಾವಣಗೆರೆ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ನ 28 ರಿಂದ ಮಳೆ ಪೂರ್ತಿ ಕಡಿಮೆ ಆಗಬಹುದು.
ಉತ್ತರ ಒಳನಾಡಿನಲ್ಲಿ ಮೋಡದ ವಾತಾವರಣ ಬರಬಹುದು.ಬಳ್ಳಾರಿ ರಾಯಚೂರು ಹಾವೇರಿ ಗದಗ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ತುಂತುರು/ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೋಡ ಮಧ್ಯ ಕರ್ನಾಟಕ ಚಲಿಸುವ ಕಾರಣ ಒಂದೆರಡು ದಿನ ಸಣ್ಣ ಮಳೆಯಾಗಲಿದ್ದು ನಂತರ ಚಳಿ ಮುಂದುವರೆಯಬಹುದು.
ಬಂಗಾಳಕೊಲ್ಲಿಯಿಂದ ಬೀಸುವ ಪೂರ್ವದ ಮಾರುತಗಳಿಂದ ತಮಿಳುನಾಡು ಕೇರಳ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು ಮುಂದಿನ 3-4 ದಿನ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಡಿಸೆಂಬರ್ ಮೊದಲ ವಾರ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವಾಗಿ ದಕ್ಷಿಣ ಶ್ರೀಲಂಕಾ ಮೂಲಕ ಅರಬ್ಬೀಸಮುದ್ರದತ್ತ ಚಲಿಸುವ ಸಾಧ್ಯತೆಯೂ ಇದೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
ಸ್ಥಳೀಯ
Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್‌ನಿಂದ ‘ಡಬಲ್ ಟೋಲ್’ ಆತಂಕ..!
ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.
ಬಿ.ಸಿ.ರೋಡ್‌ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.
ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್‌ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.
8 ಲೇನ್‌ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್‌ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್‌ಗಳಿದ್ದು, ಅವುಗಳಲ್ಲಿ 6 ಲೇನ್‌ಗಳು ಡೆಡಿಕೇಟೆಡ್ ಲೇನ್‌ಗಳಾಗಿರಲಿವೆ. ಈ ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.
ಉಳಿದ ಎರಡು ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.
ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.
ಬ್ರಹ್ಮರಕೂಟ್ಲು ಟೋಲ್‌ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್‌ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್‌ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
-
ಕ್ರೈಂ24 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ18 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್‌ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ24 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ22 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ18 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಬಿಗ್ ನ್ಯೂಸ್24 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕ್ರೀಡೆ22 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















