Connect with us

Uncategorized

ಆ್ಯಸಿಡ್ ದಾಳಿಕೋರ ಕೃತ್ಯ ಎಸಗಲು ಭಾನುವಾರ ಕೇರಳದಿಂದ ರೈಲಿನಲ್ಲಿ ಬಂದಿದ್ದ …! ಆತ ಎಕ್ಸಾಂ ದಿವಸವನ್ನೆ ಆಯ್ಕೆ ಮಾಡಿದ್ದು ಯಾಕೇ ? ಅವನಿಗೆ ಯೂನಿಫಾರ್ಮ್‌ ಕೊಟ್ಟವರಾರು? ಸಿಸಿಟಿವಿಯಲ್ಲಿ ಸಿಕ್ಕಿತ್ತು ಮಹತ್ವದ ಸಾಕ್ಷಿ

Published

on

Ad Widget

Ad Widget

Ad Widget

Ad Widget

ಸೋಮವಾರ ಬೆಳಿಗ್ಗೆ  ಕಡಬದ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಅಭಿನ್ ಕೃತ್ಯ ಎಸಗಲೆಂದು ಭಾನುವಾರ ತನ್ನ ಹುಟ್ಟೂರಾದ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದ. ಅಭಿನ್‌ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು  ನಿವಾಸಿ. ಭಾನುವಾರ ಮಧ್ಯಾಹ್ನ ರೈಲಿನ ಮೂಲಕ ನೆಲಂಬೂರುನಿಂದ ಹೊರಟ ಆತ ರಾತ್ರಿ ವೇಳೆ ಮಂಗಳೂರು ರೈಲು ನಿಲ್ದಾಣ ತಲುಪಿದ್ದ. ಅಲ್ಲಿಯೇ ಬೆಳಿಗ್ಗೆಯವರೆಗೆ ಕಾಲ ಕಳೆದ ಆತ ಬಳಿಕ ಮಂಗಳೂರಿನಿಂದ ಬಸ್ಸು ಹಿಡಿದು ಕಡಬಕ್ಕೆ ಆಗಮಿಸಿದ್ದ.

Ad Widget

Ad Widget

Ad Widget

Ad Widget

ಅಬಿನ್ ಕಾಲೇಜ್‌ ಪ್ರವೇಶಿಸುವುದಕ್ಕೆ ಮುಂಚೆ  ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ, ನೀಲಿ ಪ್ಯಾಂಟ್ ಧರಿಸಿಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದಾನೆ. ಈ ಬಟ್ಟೆಯನ್ನು ಆತ ಕಡಬದ ಯಾವುದೋ ಸ್ಥಳದಲ್ಲಿ ಧರಿಸಿದ್ದ. ಕಪ್ಪು ಪ್ಯಾಂಟ್‌ ಹಾಗೂ ಕಪ್ಪು ಅಂಗಿ ಧರಿಸಿಕೊಂಡು ಮಂಗಳೂರಿನಿಂದ ಬಂದಿದ್ದ ಆತ, ಕಡಬ ಪೇಟೆಯಲ್ಲಿರುವ ಬೇಕರಿಯೊಂದರಲ್ಲಿ ತನ್ನಲ್ಲಿದ್ದ ಎರಡು ಮೊಬೈಲ್‌ ಫೋನ್‌ ಗಳನ್ನು ಚಾರ್ಜ್‌ ಗಿಟ್ಟಿದ್ದ. ಈ ವೇಳೆಯೂ ಅತ ಕಪ್ಪು ಫ್ಯಾಂಟ್‌ ಹಾಗೂ ಕಪ್ಪು ಅಂಗಿ ಧರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೇಕರಿಗೆ ಆತ ಬೆಳಗ್ಗಿನ ಜಾವ 8 ಗಂಟೆ ಸುಮಾರಿಗೆ ಬಂದಿದ್ದಾನೆ.

Ad Widget

Ad Widget alt="Ad Widget"/>

Ad Widget

ಮೊಬೈಲ್‌ ಚಾರ್ಜ್‌ ಗಿಟ್ಟ ಬಳಿಕ ಆತ ಕಡಬದಲ್ಲಿ ಸ್ನೇಹಿತರ ಸಹಾಯದಿಂದ ಸಮವಸ್ತ್ರದ ಬಟ್ಟೆಯನ್ನು ಧರಿಸಿದ್ದಾನೇ ಎನ್ನಲಾಗುತ್ತಿದೆ . ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದು ಮೂಲದ ಪ್ರಕಾರ ಅಭಿನ್‌ ತನ್ನ ಸ್ನೇಹಿತನೂ ಆಗಿರುವ ವಿದ್ಯಾರ್ಥಿನಿ ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ವಿದ್ಯಾರ್ಥಿಯೊಬ್ಬನಿಂದ ಈ ಯೂನಿಫಾರ್ಮ್‌ ಅನ್ನು ಎರವಲು ಪಡೆದಿದ್ದ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ ದುಷ್ಕೃತ್ಯ ಎಸಗಲು ಕೆಲ ಸಮಯದಿಂದ ಸಂಚು ರೂಪಿಸಿದ್ದ ದಾಳಿಕೋರನು , ಯೂನಿಫಾರ್ಮ್‌ನ್ನು ಹೋಲುವ ಬಣ್ಣದ ತನಗೊಪ್ಪುವ ಬಟ್ಟೆಯನ್ನು ಈ ಉದ್ದೇಶಕ್ಕಾಗಿಯೇ ಕೇರಳದಲ್ಲಿ ಹೊಲಿಸಿ ತಂದಿದ್ದ

Ad Widget

Ad Widget <> Ad Widget

ಎಕ್ಸಾಂ ದಿವಸವನ್ನೆ ಆಯ್ಕೆ ಮಾಡಿದ್ದು ಯಾಕೇ ?

ದುಷ್ಕರ್ಮಿಯೂ ಕೃತ್ಯ ಎಸಗಲು ಎಕ್ಸಾಂ ದಿವಸವನ್ನೆ ಆಯ್ಕೆ ಮಾಡಿರುವುದರ ಹಿಂದೆ ಒಂದು ತಂತ್ರಗಾರಿಕೆಯಿದೆ ಎನ್ನಲಾಗುತ್ತಿದೆ. ಸಂತ್ರಸ್ತ ವಿದ್ಯಾರ್ಥಿನಿ ಕಲಿಯುತ್ತಿದ್ದ  ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗ ಅಂತಿಮ ಪರೀಕ್ಷೆ ನಡೆಯುತ್ತಿದೆ. ಈ ಕಾಲೇಜು ಸೇರಿದಂತೆ ವಲಯದ ಮೂರು ಕಾಲೇಜಿನ ವಿದ್ಯಾರ್ಥಿಗಳು ಅದು ಪರೀಕ್ಷಾ ಕೇಂದ್ರವಾಗಿತ್ತು.

Ad Widget

Ad Widget

ಹೀಗಾಗಿ ಪರೀಕ್ಷೆ ಸಮಯ ಈ ಕಾಲೇಜಿಗೆ ಉಳಿದ ಕಾಲೇಜ್‌ ವಿದ್ಯಾರ್ಥಿಗಳು ಬರುವ ಕಾರಣ ಪಕ್ಕನೇ ಇವನ ಬಗ್ಗೆ ಅನುಮಾನ  ಉಂಟಾಗಲು ಸಾಧ್ಯವಿಲ್ಲ. ಹೀಗಾಗಿ ಯಾರಿಗೋ ಅನುಮಾನ ಬಾರದಂತೆ ಕೃತ್ಯ ಎಸಗಲು ಆತ ಎಕ್ಸಾಂ ದಿನವನ್ನೆ ಆಯ್ಕೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.  ಅಲ್ಲದೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗಡೆ ತೆರಳುವ ಕೊನೆಯ ಕ್ಷಣವನ್ನೆ  ಕೃತ್ಯ ಎಸಗಲು ಬಳಸಿರುವುದರ ಹಿಂದೆಯೂ ತಂತ್ರಗಾರಿಕೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿಗಳೆಲ್ಲ ಪರೀಕ್ಷಾ ಹಾಲ್‌ ಗೆ ತೆರಳುವ ತರಾತುರಿಯಲ್ಲಿರುವುದರಿಂದ ಹಾಗೂ ಶಿಕ್ಷಕರು ಎಕ್ಸಾಂ ಗೆ ಕೊನೆ ಕ್ಷಣದ ತಯಾರಿಯಲ್ಲಿ ಮಗ್ನವಾಗಿರುವುದರಿಂದ ಕೃತ್ಯ ಎಸಗಿ ಪರಾರಿಯಾಗಬಹುದು ಹವಣಿಕೆಯಲ್ಲಿ ದಾಳಿಕೋರ ಇದ್ದು, ಇದಕ್ಕಾಗಿಯೇ ಹಾಲ್‌ ಗೆ ತೆರಳುವ ಕೊನೆ ಕ್ಷಣವನ್ನೆ ಕೃತ್ಯಕ್ಕೆ ಆಯ್ಕೆ ಮಾಡಿದ್ದ. ಆದರೇ ಇಲ್ಲಿ ಮಾತ್ರ ಹವಣಿಕೆ ವಿಫಲವಾಗಿದೆ.  

ಕಡಬದಿಂದಲೇ ಖರೀದಿಸಿದ್ದ ಆ್ಯಸಿಡ್

ಬೆಳಿಗ್ಗೆ 7.30ರ ಸುಮಾರಿಗೆ ಬಂದಿಳಿದ ಆರೋಪಿಯು ಬಳಿಕ ಕಡಬ ಪೇಟೆಯ ಅಂಗಡಿಯೊಂದರಿಂದಲೇ ಆ್ಯಸಿಡ್ ಖರೀದಿಸಿದ್ದ. ಈ ಬಗ್ಗೆ ಆರೋಪಿಯು ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

 ಘಟನೆ ಹೇಗೆ ನಡೆಯಿತು ?

ಕಡಬದ ಈ ಕಾಲೇಜಿನಲ್ಲಿ  ಸೋಮವಾರ ಬೆಳಿಗ್ಗೆ ಕೂಡಾ ಪರೀಕ್ಷಾ ತಯಾರಿ ನಡೆಯುತ್ತಿತ್ತು. ವಿದ್ಯಾರ್ಥಿಗಳೆಲ್ಲರೂ ಶಾಲಾ ಕೊಠಡಿಯ ವರಾಂಡದಲ್ಲಿ ನಿಂತುಕೊಂಡು ಪರೀಕ್ಷೆಯ ಅಂತಿಮ ತಯಾರಿ ನಡೆಸುತ್ತಿದ್ದರು. ಸುಮಾರು 9.45ರಿಂದ 9.50 ರ ಸಮಯ ಉಪನ್ಯಾಸಕರು ಪ್ರಶ್ನೆ ಪತ್ರಿಕೆಯ ಕಟ್ಟನ್ನು ತೆರೆಯುವುದಕ್ಕೆ ಸಿದ್ದತೆ ನಡೆಸುತ್ತಿದ್ದರು.

ಮೊದಲೇ ಕಾಲೇಜು ಆವರಣಕ್ಕೆ ಆಗಮಿಸಿದ್ದ ಆರೋಪಿ ಅಭಿನ್ ಕಾಲೇಜಿನ ಆವರಣದ ಮೂಲೆಯೊಂದರಲ್ಲಿ ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ನಿಂತುಕೊಂಡಿದ್ದ. ತಾನು ಯಾರಿಗೆ ಆ್ಯಸಿಡ್ ಎರೆಚಬೇಕು ಎಂದು ನಿರ್ಧರಿಸಿರುವ ವಿದ್ಯಾರ್ಥಿನಿ ಹಾಗೂ ಇಬ್ಬರು ವಿದ್ಯಾಥಿನಿಯರು ಒಂದೇ ಡೆಸ್ಕ್ ನಲ್ಲಿ ಕುಳಿತು ಪರೀಕ್ಷೆಗ ಅಂತಿಮ ತಯಾರಿ ನಡೆಸುತ್ತಿದ್ದರು.

ಇನ್ನೇನು ಲಾಂಗ್ ಬೆಲ್ ಆಗಿ ವಿದ್ಯಾರ್ಥಿಗಳೆಲ್ಲರೂ ಪರಿಕ್ಷಾ ಕೊಠಡಿಗೆ ಪ್ರವೇಶಿಸುವ ಹಂತದಲ್ಲಿದ್ದರು. ಅಷ್ಟರಲ್ಲಿ ಮೂಲೆಯಲ್ಲಿದ್ದ ಅಬಿನ್ ಓಡಿ ಬಂದು ಕೈಯಲ್ಲಿದ್ದ ಆ್ಯಸಿಡ್ ಎರೆಚಿದ್ದಾನೆ. ಪರಿಣಾಮ ಆತ ಪ್ರೀತಿಸುತ್ತಿದ್ದ ವಿದ್ಯಾರ್ಥಿನಿಗೆ ಮುಖಕ್ಕೆ ಗಂಭೀರ ಗಾಯವಾದರೆ, ಉಳಿದ ಇಬ್ಬರು ವಿದ್ಯಾರ್ಥಿನಿಯರಿಗೆ ಮೈಗೆ ಆ್ಯಸಿಡ್ ಬಿದ್ದಿದೆ.ಮೂವರು ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ್ಯಸಿಡ್ ದಾಳಿಯಾಗುತ್ತಲೇ ಸಂತ್ರಸ್ತ ವಿದ್ಯಾರ್ಥಿನಿಯರು ಜೋರಾಗಿ ಕಿರುಚಾಡಿದ್ದು, ಪರೀಕ್ಷೆಯ ಒತ್ತಡ ಇದ್ದರೂ, ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಅಟ್ಟಾಡಿಸಿ ಹಿಡಿದಿದ್ದಾರೆ. ಈ ಮೂಲಕ ಪರಾರಿಯಾಗುವ ಯತ್ನದಲ್ಲಿ ವಿಫಲವಾಗಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಹಾಕಿಕೊಂಡಿದ್ದಾನೆ.

 ಕೃತ್ಯಕ್ಕೆ ಕಾರಣ

ಕಡಬ ತಾಲೂಕಿನ ರೆಂಜಲಾಡಿ ನಿವಾಸಿಯಾಗಿರುವ  ಪ್ರಧಾನ ಸಂತ್ರಸ್ತೆಯನ್ನು ಕಳೆದ ಎರಡು ವರ್ಷಗಳಿಂದ  ಆರೋಪಿ ಪೀತಿಸುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯ ತಾಯಿ ಮೂಲತಃ ಕೇರಳದವರು. ಆರೋಪಿ ಅಬಿನ್ ಕೂಡಾ ಆಕೆಯ ಮನೆಯ ಹತ್ತಿರದ ನಿವಾಸಿ. ವಿದ್ಯಾರ್ಥಿನಿಯ ಸಂಬಂಧಿಕರು ಆರೋಪಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು. ಅವರ ಮುಖಾಂತರ ಸಂತ್ರಸ್ತ ವಿದ್ಯಾರ್ಥಿನಿಯ ಪರಿಚಯವಾಗಿ ಪ್ರೇಮಕ್ಕೆ ತಿರುಗಿತ್ತು. ಈ ವಿಚಾರ ಯುವತಿಯ ತಾಯಿಗೆ ಗೊತ್ತಾಗಿ ಇದನ್ನು ಆಕ್ಷೇಪಿಸಿದ್ದರು. ಇದೇ ಕಾರಣಕ್ಕೆ ಯುವತಿ ಆರೋಪಿಯನ್ನು ಉಪೇಕ್ಷೆ ಮಾಡುತ್ತಿದ್ದಳು ಎಂದು ಹೇಳಲಾಗಿದ್ದು. ಇದರಿಂದ ಕುಪಿತಗೊಂಡು ಆರೋಪಿ ಆಸಿಡ್ ದಾಳಿಯ ಕೃತ್ಯ ನಡೆಸಿದ್ದಾನೆ ಎಂದು ಪೋಲೀಸ್ ಮೂಲದಿಂದ ತಿಳಿದು ಬಂದಿದೆ.

ಎಸ್ಪಿ ಏನೂ ಹೇಳಿದ್ರು ?

 ಘಟನೆಯ ಕುರಿತು ಮಾತನಾಡಿದ ದ.ಕ. ಜಿಲ್ಲಾ ಎಸ್ಪಿಯವರು ಕಡಬ ಸರಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗದಲ್ಲಿ) ಓದುತ್ತಿರುವ ವಿದ್ಯಾರ‍್ಥಿನಿಯ ಮೇಲೆ  ಸೋಮವಾರ ಬೆಳಗ್ಗೆ 9-55ಕ್ಕೆ ಅಬೀನ್‌ ಎನ್ನುವ ಹುಡುಗ   ಆ್ಯಸಿಡ್  ಎರಚಿದ್ದಾನೆ.  ಅದರ ಜೊತೆಗೆ ಇನ್ನಿಬ್ಬರು ಹುಡುಗಿಯರಿಗೂ ಕೂಡ ಆ್ಯಸಿಡ್ ಬಿದ್ದಿದೆ. ಅವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಆ್ಯಸಿಡ್ ಹಾಕಿದ ಹುಡುಗಿಯ ಮುಖದ ಮೇಲೆ ಗಾಯಗಳಾಗಿದೆ. ಅವರು ಈಗ ಅಪಾಯದಿಂದ ಹೊರಬಂದಿದ್ದಾರೆ. ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಆರೋಪಿ ಮೂಲತ: ಕೇರಳದ ಮಲ್ಲಪುರಂ ಜಿಲ್ಲೆಯವನಾಗಿದ್ದು ಇಬ್ಬರು ಒಂದೇ ಊರಿನವರಾಗಿದ್ದಾರೆ. ಲವ್‌ ರಿಜೆಕ್ಷನ್‌ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಆರೋಪಿ ಶಾಲೆಗೆ ಯೂನಿಫಾರ್ಮ್‌ ಹಾಕಿಕೊಂಡು ಬಂದಿದ್ದು ಅದು ಯಾರು ಕೊಟ್ಟದ್ದು ಎಂದು ತಿಳಿದು ಬಂದಿಲ್ಲ. ಆತನನ್ನು ಈಗಾಗಲೇ ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯ ಬಳಕ ಗೊತ್ತಾಗಬೇಕಾಗಿದೆ ಎಂದು ಹೇಳಿದ್ದಾರೆ.

Ad Widget

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!