ಅಪರಾಧ
NIA Raid- ನಿಂತಿಕಲ್ಲು : ಬಿಜು ಅಬ್ರಾಹಂ ಮನೆಗೆ NIA ದಾಳಿ; ಇಬ್ಬರ ವಶ – ಮೊಬೈಲ್ ಸೀಝ್ ..!?? ಮನೆ ಮಾಲೀಕರು ಹೇಳಿದ್ದೇನು ?
ಪುತ್ತೂರು: ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆಯ ನಿಂತಿಕಲ್ಲು ಸಮೀಪದ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಗ್ರಾಮದ ಕಲ್ಲೇರಿಯ ಬಾಡಿಗೆ ಮನೆಯೊಂದಕ್ಕೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪ್ರಕರಣವೊಂದಕ್ಕೆ ಸಂಬಂಧಿಸಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳ ಇಡುಕಿ ಮೂಲದ ಬಿಜು ಅಬ್ರಾಹಂ ಯಾನೇ ಬಿಜು ಎಂ.ಎ (45) ಹಾಗೂ ಆತನ ಸಹಚರನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಶಂಕಿತ ಆರೋಪಿಗಳಿಬ್ಬರು 2 ದಿನಗಳ ಹಿಂದೆಯಷ್ಟೇ ಕಲ್ಲೇರಿಯ ಬಾಡಿಗೆ ಮನೆಗೆ ಬಂದಿದ್ದರು. ಈ ಮನೆ ಚಿದಾನಂದ ಎಂಬವರಿಗೆ ಸೇರಿದಾಗಿತ್ತು. ಮಂಗಳವಾರ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ NIA ತಂಡ ಬಿಜು ಬಾಡಿಗೆಗಿದ್ದ ಮನೆಗೆ ದಾಳಿ ನಡೆಸಿದೆ. ಬಿಜು ಮೂಲತ: ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯವನು. ಆದರೇ ಕಳೆದ ಕೆಲ ವರ್ಷಗಳಿಂದ ಈತ ಕಡಬ ತಾಲೂಕನ್ನು ತನ್ನ ಕಾರ್ಯಕ್ಷೇತ್ರವನ್ನಾಗಿಸಿಕೊಂಡಿದ್ದು, ಎಡಮಂಗಲದ ಕರಿಂಬಿಲದಲ್ಲಿ ರಬ್ಬರ್ ತೋಟ ಲೀಸಿಗೆ ಪಡೆದು ಟ್ಯಾಪರ್ ಆಗಿ ಕೆಲಸ ಮಾಡುತ್ತಿದ್ದ. ಆದರೇ ಇತ್ತೀಚೆಗೆ ಆ ರಬ್ಬರ್ ತೋಟದ ಲೀಸ್ ಅವಧಿ ಮುಗಿದ ಹಿನ್ನಲೆ ಅಲ್ಲಿಂದ ಕಲ್ಲೇರಿಯ ಚಿದಾನಂದ ರವರ ರಬ್ಬರ್ ತೋಟಕ್ಕೆ ಶಿಪ್ಟ್ ಆಗಿದ್ದ.
ಕಳೆದ 2-3 ದಿನಗಳಿಂದ ಎಣ್ಮೂರಿನ ಆಸುಪಾಸಿನ ಪ್ರದೇಶದಲ್ಲಿ ಬೀಡು ಬಿಟ್ಟಿದ್ದ NIA ಅಧಿಕಾರಿಗಳು, ಬಿಜು ಅಬ್ರಾಹಂನ ಚಲನವಲನದ ಮೇಲೆ ಕಣ್ಣಿಟ್ಟಿದ್ದರು ಎನ್ನಲಾಗಿದೆ. ಆತ ಮನೆ ಬದಲಾಯಿಸಿ ಕಲ್ಲೇರಿಗೆ ಬಂದಿರುವ ವಿಚಾರ ತಿಳಿಯುತ್ತಲೇ ಕಾರ್ಯಪ್ರವೃತ್ತರಾದ NIA ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳ್ಳಿಗೆ ಅಬ್ರಾಹಂಗೆ ಶಾಕ್ ನೀಡಿದ್ದಾರೆ. ದಾಳಿ ವೇಳೆ ಮನೆಯೊಳಗಡೆ ಅಬ್ರಾಹಂ ಜತೆ ಇನ್ನೊರ್ವ ಕೂಡ ಇದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಧಿಕಾರಿಗಳು ಬೆಳಿಗ್ಗೆಯಿಂದ ಸಂಜೆಯವರೆಗೆ ಅಬ್ರಾಹಂ ನ ಬಾಡಿಗೆ ಮನೆಯಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ಅಬ್ರಹಾಂ ಮೊಬೈಲ್ ನಲ್ಲಿ ಕೆಲವೊಂದು ಶಂಕಾಸ್ಪದ ಮಾಹಿತಿಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು, ಹೀಗಾಗಿ ಮೊಬೈಲ್ ಹಾಗೂ ಸಿಮ್ ಎರಡನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ತನಿಖಾ ತಂಡದ ಡಿವೈಎಸ್ ಪಿ ರಾಜನ್ ಪಿ.ವಿ., ಸಬ್ ಇನ್ಸ್ಪೆಕ್ಟರ್ ಮಂಜಪ್ಪ, ಸಿಬ್ಬಂದಿ ಸುರೇಶ್ ಸಿ. ನೇತೃತ್ವದ ತಂಡ ಬೆಳ್ಳಾರೆ ಪೊಲೀಸರ ಸಹಕಾರದಿಂದ ದಾಳಿಯನ್ನು ನಡೆಸಿದೆ.
ಮನೆ ಮಾಲೀಕರು ಹೇಳಿದ್ದೇನು?
ನಿಂತಿಕಲ್ಲು ಸಮೀಪದ ಕಲ್ಲೇರಿಯಲ್ಲಿ ಸಾಲ ಮಾಡಿ ಎರಡು ಕೊಠಡಿ, ಎರಡು ಮನೆ, ವಾಣಿಜ್ಯ ಬಳಕೆ ಅಂಗಡಿ ಕಟ್ಟಡ ನಿರ್ಮಾಣ ಮಾಡಿದ್ದು, ಎರಡು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಎಡಮಂಗಲ ಸಮೀಪದ ಕಂರ್ಬಿಲದಲ್ಲಿ ರಬ್ಬರ್ ತೋಟದಲ್ಲಿ ಕೆಲಸ ನಿರ್ವಹಿಸುವ ಕೇರಳ ಮೂಲದ ಇಬ್ಬರನ್ನು ಬಾಡಿಗೆಗೆ ಕರೆದುಕೊಂಡು ಬಂದಿದ್ದರು. ಸುಳ್ಯದಿಂದ ಮನೆಗೆ ಹೋಗಿ ಮಾಹಿತಿ ಪಡೆದುಕೊಳ್ಳಬೇಕೆನ್ನುವಷ್ಟರಲ್ಲಿ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಕಟ್ಟಡ ಮಾಲೀಕ ಸುಳ್ಯ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ನಿರ್ವಹಿಸುವ ಚಿದಾನಂದ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
2023ರ ಅಕ್ಟೋಬರ್ ನಲ್ಲಿ ಎನ್. ಐ. ಎ. ಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ಈ ದಾಳಿ ನಡೆದಿರುವುದಾಗಿಯೂ, ಬೆಂಗಳೂರು ಸುಲ್ತಾನ್ ಪಾಳ್ಯದಲ್ಲಿ ನಡೆದ ಉಗ್ರ ಚಟುವಟಿಕೆಗೂ ಇದಕ್ಕೂ ಸಂಬಂಧ ಇರುವುದಾಗಿಯೂ ರಾಜ್ಯ ಮಾಧ್ಯಮಗಳು ತಿಳಿಸಿವೆ.
ಏನಿದು ಸುಲ್ತಾನ್ ಪಾಳ್ಯ ಪ್ರಕರಣ ?
ರಾಜಧಾನಿ ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯ ನಡೆಸಿ, ಭಾರಿ ಅನಾಹುತ ಎಸಗಲು ಐವರು ಶಂಕಿತ ಉಗ್ರರು ಗ್ರೈನೇಡ್ ಸೇರಿದಂತೆ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು. ಶಂಕಿತ ಉಗ್ರ ನಾಸೀರ್ ಜೈಲಿನಲ್ಲಿದ್ದುಕೊಂಡೆ ಈ ಐವರು ಶಂಕಿತ ಉಗ್ರರ ಬ್ರೈನ್ ವಾಶ್ ಮಾಡಿದ್ದನು.
ಸುಲ್ತಾನ್ ಪಾಳ್ಯದ ಪ್ರಾರ್ಥನಾ ಸ್ಥಳ ಮತ್ತು ಆರ್.ಟಿ ನಗರದ ಕನಕ ಬಡಾವಣೆಯ ಸೈಯದ್ ಸುಹೇಲ್ ಬಾಡಿಗೆ ಮನೆಯಲ್ಲಿ ಸಭೆ ಸೇರಿ ಉಗ್ರ ಚಟುವಟಿಕೆ ಹಾಗೂ ಸ್ಫೋಟ ನಡೆಸುವುದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಚರ್ಚೆ ನಡೆಸಿದ್ದರು. ಈ ಮಾಹಿತಿ ತಿಳಿದ ಸಿಸಿಬಿ ಪೊಲೀಸರು ಜುಲೈ 19 ರಂದು ಕಾರ್ಯಾಚರಣೆ ನಡೆಸಿ ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್ ಎಂಬವರನ್ನು ಬಂಧಿಸಿದ್ದರು.
.ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಎನ್ಐಎ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು ಹಾಗೂ ಹಲವೆಡೆ ಶೋಧ ಕಾರ್ಯಾಚರಣೆ ನಡೆಸಿತ್ತು.ಪರಾರಿಯಾಗಿರುವ ಆರೋಪಿಗಳಾಗಿರುವ ಜುನೈದ್ ಅಹ್ಮದ್ ಮತ್ತು ಸಲ್ದಾನ್ ಖಾನ್ ಸೇರಿ ಎಂಟು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿರುವ ಎನ್ಐಎ, ಪರಾರಿಯಾಗಿರುವ ಆರೋಪಿಗಳು ಲಷ್ಕರ್ ಇ ತೊಯ್ದಾ ಉಗ್ರ ಸಂಘಟನೆ ಚಟುವಟಿಕೆಗಳನ್ನು ಉತ್ತೇಜಿಸಲು ಅನಾಮಧೇಯವಾಗಿ ದೇಶಾದ್ಯಂತ ಜಾಲ ರೂಪಿಸಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿತ್ತು
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
-
ಸ್ಥಳೀಯ4 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್3 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ5 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ4 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ















