ಕ್ರೀಡೆ
Tulnad Trophy-ತುಳುನಾಡ ಜವನೆರ್ ಬೆಂಗಳೂರು(ರಿ) ಆಶ್ರಯದಲ್ಲಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ತುಳುನಾಡ್ ಟ್ರೋಫಿ
ತಾವರೆಕೆರೆ ಆರ್ ಎನ್ ಎಸ್ ವಿದ್ಯಾನಿಕೇತನ 2 ನಲ್ಲಿ ಆಯೋಜಿಸಲ್ಪಟ್ಟಿದ್ದ TJB ಪ್ರೀಮಿಯರ್ ಲೀಗ್ ನಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದು ಬೆಂಗಳೂರಿನಲ್ಲಿರುವ ತುಳುನಾಡಿನ ಯುವಕರು ಸಂಭ್ರಮಪಟ್ಟರು
ಪ್ರಥಮ ಬಹುಮಾನವನ್ನು ತುಳುನಾಡ ರಂಗ್ ರಾಜಾಜಿನಗರ ತನ್ನದಾಗಿಸಿದರೆ,ತುಳುನಾಡ ತುಡರ್ ಯಶವಂತಪುರ ದ್ವಿತೀಯ ವಿಜೇತ ತಂಡವಾಯಿತು,ತುಳುನಾಡ ಬಿರ್ಸೆರ್ ವೈಟ್ ಫೀಲ್ಡ್ ಹಾಗೂ ತುಳುನಾಡ ಬೊಲ್ಪು ಬನ್ನೇರುಘಟ್ಟ ತೃತೀಯ ಹಾಗೂ ಚತುರ್ಥ ಬಹುಮಾನ ಪಡೆಕೊಂಡ ತಂಡಗಳಾದವು.
ಇವುಗಳ ಜೊತೆಗೆ ತಂಡಗಳಾದ ತುಳುನಾಡ ಕೇಸರಿ ಯಲಹಂಕ,ತುಳುನಾಡ ಕುರಲ್ ಕೆಂಗೇರಿ,ತುಳುನಾಡ ಸೂರ್ಯಚಂದ್ರೆರ್ ವಿಜಯನಗರ,ತುಳುನಾಡ ಬೊಳ್ಳಿ ಅತ್ತಿಗುಪ್ಪೆ,ತುಳುನಾಡ ಪುರ್ಪ ಎಲೆಕ್ಟ್ರಾನಿಕ್ ಸಿಟಿ,ತುಳುನಾಡ ಸಿರಿ ಜೆಪಿನಗರ,ತುಳುನಾಡ ದಂಡ್ ಪೀಣ್ಯ ತಂಡಗಳು ರಾಜಧಾನಿಯ ವಿವಿಧ ಭಾಗಗಳಲ್ಲಿರುವ ತುಳುವರನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದವು. ಸೇವಾ ಚಟುವಟಿಕೆಯಾಗಿ ಬೆಂಗಳೂರಿನ ಎರಡು ಆಶ್ರಮಗಳಿಗೆ ವಸ್ತ್ರದಾನ ಹಾಗೂ ಅಕ್ಕಿ ಸಮರ್ಪಣೆ ನೆರವೇರಿತು.
ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಜೊತೆಗೆ ತುಳುವಿಗೆ ಪ್ರಾಧಾನ್ಯತೆ ನೀಡಬೇಕೆನ್ನುವ ನಿಟ್ಟಿನಲ್ಲಿ ದೇಶದ ಮಾನ್ಯ ಪ್ರಧಾನ ಮಂತ್ರಿಗಳಾ ನರೇಂದ್ರ ಮೋದೀಜಿಯವರಿಗೆ ಪತ್ರ ಮುಖೇನ ಮನವಿಯ ಮುಖೇನ 5000 ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ತುಳುನಾಡ ದ್ವಜಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ದೀಪೋಜ್ವಲನೆಯ ಮೂಲಕ ಸಂಸ್ಥೆಯ ಮಾರ್ಗದರ್ಶಕರಾದ ಸಂದೀಪ್ ಹೆಗ್ಡೆ ಹಾಗು ಸದಾನಂದ ಶೆಟ್ಟಿ ಚಾಲನೆ ನೀಡಿದರು. ದುರ್ಗಾಪ್ರಸಾದ್ ಕಡೆಶಿವಾಲಯ ಕಾರ್ಯಕ್ರಮ ನಿರೂಪಿಸಿದ್ದು ಸಂಚಾಲಕರಾದ ಶ್ರುತಿನ್ ಕಡೇಶಿವಾಲಯ ಪ್ರಸ್ತಾವನೆಯ ಜೊತೆಗೆ ಅಭಿನಂದನೆ ಗೈದರು. ಸಂಸ್ಥೆಯ ಅಧ್ಯಕ್ಷರಾದ ಮಹೇಶ್ ಬೈಲೂರು.ಕ್ರೀಡಾ ಕಾರ್ಯದರ್ಶಿ ಅರ್ಜುನ್ ಎರ್ಮಾಳ್.ಕೋಶಾಧಿಕಾರಿ ಅಮಿತ್.ಸಹಸಂಚಾಲಕ ಶಶಿ ಕಾವೂರ್ ಉಪಾಧ್ಯಕ್ಷ ಹರಿಪ್ರಸಾದ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
-
ಮಂಗಳೂರು19 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ24 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ18 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ24 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಕಾರ್ಯಕ್ರಮಗಳು19 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ13 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ18 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized20 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ















