ಕ್ರೈಂ
Bangalore Bomb Blast ಬೆಂಗಳೂರು ಬಾಂಬ್ ಬ್ಲಾಸ್ಟ್ : ಬಾಂಬರ್ʼ ನ ಮಾಹಿತಿ ನೀಡಿದವರಿಗೆ ₹10 ಲಕ್ಷ ಬಹುಮಾನ – ಎನ್ಐಎ ಘೋಷಣೆ
ಹೊಸದಿಲ್ಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸುಳಿವು ಸಿಗದೇ ಒದ್ದಾಡುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂ ನಗದು ಬಹುಮಾನ ಘೋಷಿಸಿದೆ.
ಸುಳಿವು ಕೊಟ್ಟವರ ಬಗ್ಗೆ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಬೆಂಗಳೂರು ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದ್ದು, ಆರೋಪಿಯ ಸಿಸಿಟಿವಿ ಚಿತ್ರವನ್ನು ಬಹಿರಂಗ ಪಡಿಸಿದೆ. ಸಿಸಿಟಿವಿ ಫೋಟೊದಲ್ಲಿ ಶಂಕಿತನ ಮುಖ ಕಾಣಿಸುವುದಿಲ್ಲ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕ್ಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಚಿತ್ರವನ್ನು ಪ್ರಕಟಣೆಯಲ್ಲಿ ನೀಡಲಾಗಿದೆ. ಜತೆಗೆ ಬಾಂಬ್ ಇಟ್ಟ ದುಷ್ಕರ್ಮಿಯ ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡುವ ಆಶ್ವಾಸನೆಯನ್ನು ನೀಡಿದೆ.
ಬಾಂಬರ್ನ ಮಾಹಿತಿ ಇದ್ದರೆ 080- 29510900, 8904241100 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು. ಅಥವಾ info.blr.nia@gov.in ವಿಳಾಸಕ್ಕೆ ಇ – ಮೇಲ್ ಕಳುಹಿಸಬಹುದಾಗಿದೆ. ಅಂಚೆ ಮೂಲಕ ಮಾಹಿತಿ ರವಾನಿಸಲು ಬಯಸುವವರಿಗೆ ಕೂಡ ಬೆಂಗಳೂರಿನಲ್ಲಿನ ಎನ್ಐಎ ಕಚೇರಿ ವಿಳಾಸ ನೀಡಲಾಗಿದೆ. ಇಂದಿರಾ ನಗರ 2ನೇ ಹಂತದಲ್ಲಿರುವ ಎಚ್ಎಎಲ್ 80 ಅಡಿ ರಸ್ತೆಯ ಬಿಎಸ್ಎನ್ಎಲ್ ಟೆಲಿಫೋನ್ ಎಕ್ಸ್ಚೇಂಜ್ ಕಚೇರಿಯ 3ನೇ ಮಹಡಿಯಲ್ಲಿನ ಕಚೇರಿಗೆ ಮಾಹಿತಿ ಕಳುಹಿಸಬಹುದಾಗಿದೆ.

ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಮಧ್ಯಾಹ್ನ ನಡೆದ ಸ್ಫೋಟದಲ್ಲಿ 9 ಜನ ಗಾಯಗೊಂಡಿದ್ದರು. ಆರಂಭದಲ್ಲಿ ಸಿಲಿಂಡರ್ ಸ್ಫೋಟ ಎಂದು ಭಾವಿಸಲಾಗಿತ್ತು. ಇದು ಉದ್ದೇಶಪೂರ್ವಕ ಕೃತ್ಯ ಎನ್ನುವುದು ಖಚಿತವಾದ ಬಳಿಕ ಕೇಂದ್ರ ಗೃಹ ಸಚಿವಾಲಯವು ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಿತ್ತು.
ಮಧ್ಯಾಹ್ನ 1 ಗಂಟೆಗೆ ಸ್ಫೋಟ ಸಂಭವಿಸಿತ್ತು. ಕೆಫೆಯ ಒಳಗೆ ಶಂಕಿತ ವ್ಯಕ್ತಿಯೊಬ್ಬ ಟೈಮ್ ಬಾಂಬರ್ ತುಂಬಿಸಿದ್ದ ಚೀಲವನ್ನು ಇರಿಸಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ಪತ್ತೆಯಾಗಿತ್ತು. ಆತ ಟೊಪ್ಪಿ ಹಾಗೂ ಮಾಸ್ಕ್ ಧರಿಸಿದ್ದರಿಂದ ಎಲ್ಲಿಯೂ ಆತನ ಮುಖ ಸ್ಪಷ್ಟವಾಗಿ ಗೋಚರಿಸಿರಲಿಲ್ಲ.
ಕ್ರೈಂ
Murder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಏಳು ಮಂದಿಯನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಬಳಿಕ ಮೃತದೇಹಗಳ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಆರೋಪಿ, ಸೆಲೋ ಟೇಪ್ ಸುತ್ತಿ ಗೋಣಿ ಚೀಲ ಹಾಗೂ ಬೆಡ್ಶೀಟ್ಗಳಲ್ಲಿ ಪ್ಯಾಕ್ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಮೃತದೇಹಗಳ ಮೇಲೆ ಖಾರದ ಪುಡಿ ಸಿಂಪಡಿಸಿ, ಒಣಮೆಣಸಿನಕಾಯಿಗಳನ್ನೂ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿರಾಡಿಘಾಟ್ನಲ್ಲಿ ಪತ್ತೆಯಾದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳ ಪರಿಶೀಲನೆ ವೇಳೆ ಒಣಮೆಣಸಿನಕಾಯಿ ಹಾಗೂ ಖಾರದ ಪುಡಿ ಪತ್ತೆಯಾಗಿದೆ. ಪ್ರಾಣಿ, ಪಕ್ಷಿಗಳು ಮೃತದೇಹಗಳನ್ನು ಕಿತ್ತು ತಿನ್ನದಂತೆ ತಡೆಯಲು ಹಾಗೂ ಪೊಲೀಸ್ ಶ್ವಾನಗಳಿಗೆ ಮೃತದೇಹಗಳ ಸುಳಿವು ಸಿಗದಂತೆ ಮಾಡಲು ಆರೋಪಿ ಈ ತಂತ್ರ ಅನುಸರಿಸಿದ್ದ ಎನ್ನಲಾಗಿದೆ. ಇದರಿಂದ ಪೊಲೀಸರಿಗೆ ತನ್ನನ್ನು ಪತ್ತೆಹಚ್ಚಲು ಕಷ್ಟವಾಗಬಹುದು ಎಂದು ಆತ ಭಾವಿಸಿದ್ದ ಎಂದು ಮೂಲಗಳು ತಿಳಿಸಿವೆ.
ಮಗಳಿಗೆ 10 ದಿನಗಳ ಪೊಲೀಸ್ ವಶ
ಸರಣಿ ಹತ್ಯೆ ಪ್ರಕರಣದಲ್ಲಿ ತಂದೆಗೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಮಗಳನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ ಪೊಲೀಸರು, 10 ದಿನಗಳ ವಶಕ್ಕೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಪೊಲೀಸ್ ವಶದಲ್ಲಿರುವ ಇಂದುಶೇಖರ್ನನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿಯ ಕಿರುಕುಳದ ಆರೋಪದ ಜೊತೆಗೆ ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆಸಿರುವ ಸಾಧ್ಯತೆಯ ಆಯಾಮದಲ್ಲಿಯೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಮನೆಗೆ ಲುಮಿನಾಲ್ ಪರೀಕ್ಷೆ
ಹತ್ಯೆಯಾದವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮತ್ತೊಂದೆಡೆ, ಆರೋಪಿಯ ಮನೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಸುಕೋ ತಂಡಗಳು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿವೆ.
ಆರೋಪಿ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಮನೆಯ ಹಾಲ್, ಸ್ನಾನಗೃಹ ಹಾಗೂ ರುಬ್ಬುವ ಕಲ್ಲಿನ ಮೇಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಣ್ಣಿಗೆ ಕಾಣದ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ತಜ್ಞರು ಮನೆಯಲ್ಲಿ ಲುಮಿನಾಲ್ ಪರೀಕ್ಷೆ ನಡೆಸಿದ್ದಾರೆ.
ಏನಿದು ಲುಮಿನಾಲ್ ಪರೀಕ್ಷೆ?
ಲುಮಿನಾಲ್ ಪರೀಕ್ಷೆಯು ಕಣ್ಣಿಗೆ ಕಾಣದ ರಕ್ತದ ಕಲೆಗಳನ್ನು ಪತ್ತೆಹಚ್ಚಲು ಬಳಸುವ ವೈಜ್ಞಾನಿಕ ವಿಧಾನವಾಗಿದೆ. ರಕ್ತವಿರುವ ಸ್ಥಳವನ್ನು ಸ್ವಚ್ಛಗೊಳಿಸಿದರೂ ರಕ್ತದಲ್ಲಿರುವ ಹಿಮೋಗ್ಲೋಬಿನ್ನ ಅಂಶಗಳು ಉಳಿದಿರಬಹುದು. ಅಂತಹ ಸ್ಥಳಗಳಿಗೆ ನಿರ್ದಿಷ್ಟ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದಾಗ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಳಕು ಕಾಣಿಸಿಕೊಳ್ಳುತ್ತದೆ. ಈ ಮೂಲಕ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿಯೂ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.
ಲುಮಿನಾಲ್ ಪರೀಕ್ಷೆ ವೇಳೆ ಸಂಗ್ರಹಿಸಿದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ
Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.
ಕ್ರೈಂ
Seven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಪತ್ನಿ ಹಾಗೂ ಆಕೆಯ ತವರು ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಲಾಗದೆ ಎಲ್ಲರನ್ನೂ ಮನೆಗೆ ಕರೆಸಿ ಹತ್ಯೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಆದರೆ, ಕೌಟುಂಬಿಕ ಕಲಹವೇ ಹತ್ಯೆಗಳಿಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆ ಉದ್ದೇಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಮೂರ್ನಾಲ್ಕು ಕೋಟಿ ಆಸ್ತಿಗಾಗಿ ಹತ್ಯೆ ಸಂಚು?
ಶ್ರೀರಾಂಪುರದಲ್ಲಿ ಅಜ್ಜಿಗೆ ಸೇರಿದ ಸುಮಾರು ₹3ರಿಂದ ₹4 ಕೋಟಿ ಮೌಲ್ಯದ ಆಸ್ತಿ ಇದೆ. ಈ ಆಸ್ತಿಯಲ್ಲಿ ಅತ್ತೆ, ಮಾವ ಸೇರಿದಂತೆ ಕುಟುಂಬದ ಇತರ ಸದಸ್ಯರಿಗೂ ಪಾಲು ನೀಡಬೇಕಾಗುತ್ತದೆ. ಎಲ್ಲರನ್ನೂ ಹತ್ಯೆ ಮಾಡಿದರೆ ಆಸ್ತಿಯನ್ನು ಯಾರೊಂದಿಗೂ ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಆರೋಪಿ ಇಂದುಶೇಖರ್ ತನ್ನ ಮಗಳಿಗೆ ಆಮಿಷವೊಡ್ಡಿ ಸಂಚಿನಲ್ಲಿ ಭಾಗಿಯಾಗಿಸಿದ್ದ ಎನ್ನಲಾಗಿದೆ.
ತಂದೆಯ ಮಾತು ನಂಬಿದ ಪಿಯುಸಿ ವಿದ್ಯಾರ್ಥಿನಿ ಹತ್ಯೆ ಕೃತ್ಯದಲ್ಲಿ ಸಹಕರಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ವಿಚಾರಣೆ ವೇಳೆ, ‘ತಂದೆ ಹೇಳಿದ ಕೆಲಸವನ್ನಷ್ಟೇ ಮಾಡುತ್ತಿದ್ದೆ. ಬೇರೆ ಏನೂ ಗೊತ್ತಿಲ್ಲ’ ಎಂದು ಆಕೆ ಹೇಳಿದ್ದಾಳೆ ಎನ್ನಲಾಗಿದೆ.
ವಿಚಾರಣೆಗೆ ತಂದೆ ಮತ್ತು ಮಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅಪ್ರಾಪ್ತ ವಯಸ್ಸಿನ ಕಾರಣ ಕಾನೂನು ರಕ್ಷಣೆ?
ಹತ್ಯೆ ನಡೆದ ಸಂದರ್ಭದಲ್ಲಿ ಆರೋಪಿಯ ಮಗಳಿಗೆ 17 ವರ್ಷ ವಯಸ್ಸಾಗಿತ್ತು. ನವೆಂಬರ್ 8ರಂದು ಆಕೆ 18 ವರ್ಷಕ್ಕೆ ಕಾಲಿಟ್ಟಿದ್ದಾಳೆ. ಕೃತ್ಯ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿದ್ದ ಕಾರಣ ಬಾಲ ನ್ಯಾಯ ಕಾಯ್ದೆಯಡಿ ಕಾನೂನು ರಕ್ಷಣೆ ದೊರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದ್ದಾರೆ.
ಮೃತದೇಹ ಸಾಗಣೆ, ಸಾಕ್ಷ್ಯ ನಾಶಕ್ಕೂ ಸಂಚು!
ಏಳು ಮಂದಿಯ ಹತ್ಯೆಯ ಬಳಿಕ ಮೃತದೇಹಗಳನ್ನು ಸಾಗಿಸುವುದು ಹಾಗೂ ಸಾಕ್ಷ್ಯಗಳನ್ನು ನಾಶಪಡಿಸುವುದಕ್ಕೂ ಆರೋಪಿ ಮೊದಲೇ ಯೋಜನೆ ರೂಪಿಸಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈಗಾಗಲೇ ಮೃತರ ಅಂತ್ಯಕ್ರಿಯೆ ನೆರವೇರಿಸಿರುವ ಕುಟುಂಬದವರು ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಏಳು ಮಂದಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹತ್ಯೆಗೆ ಬಳಸಿದ ವಿಧಾನ ಸೇರಿದಂತೆ ಹಲವು ಮಹತ್ವದ ಸಂಗತಿಗಳು ತಿಳಿದುಬರಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಸ್ತಿ ವಿವಾದವೂ ಹತ್ಯೆಗೆ ಪ್ರಮುಖ ಕಾರಣ: ಪೊಲೀಸ್ ಆಯುಕ್ತ
ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತನಾಡಿ, ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿಯ ವೈಯಕ್ತಿಕ ದ್ವೇಷದ ಜತೆಗೆ ಹಣಕಾಸಿನ ವಿಚಾರವೂ ಪ್ರಮುಖ ಕಾರಣವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ತನಿಖಾಧಿಕಾರಿಯೂ ಆಗಿರುವ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
-
ಬಿಗ್ ನ್ಯೂಸ್23 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ6 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ6 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















