ದಕ್ಷಿಣ ಕನ್ನಡ
Adyanadaka Bank Theft ವಿಟ್ಲ : ಬ್ಯಾಂಕ್ ಕಳ್ಳತನ ಪ್ರಕರಣ: ಮೈದಾನದಲ್ಲಿ ಹೂತಿಟ್ಟರೇ ಕದ್ದ ನಗ – ನಗದು ? ಲಾಕರ್ ತುಂಡರಿಸಲು ವೃತ್ತಿಪರ ವೆಲ್ಡರ್ ಬಳಕೆ …! ಆರೋಪಿಗಳ ಸುಳಿವು ಬಯಲಾದದ್ದೆ ರಣ ರೋಚಕ..!
ವಿಟ್ಲ: ಅಡ್ಯನಡ್ಕದ ಕರ್ಣಾಟಕ ಬ್ಯಾಂಕ್ ಶಾಖೆ ಲಾಕರ್ ಬ್ರೇಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು , ಪೊಲೀಸ್ ವಶದಲ್ಲಿರುವ ಕಳ್ಳರು ಕೃತ್ಯ ಹಾಗೂ ಕಳ್ಳತನದ ಮ್ಹಾಲು ಬಚ್ಚಿಟ್ಟ ಕುರಿತಾಗಿ ಹಲವು ಸ್ಪೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಕದ್ದ ಹಣ ಹಾಗೂ ಚಿನ್ನವನ್ನು ಕಳ್ಳರು ಕೇರಳ ರಾಜ್ಯದ ಮೈದಾನವೊಂದರಲ್ಲಿ ಹೂತಿಟ್ಟಿರುವುದಾಗಿಯೂ ಹಾಗೂ ಕೃತ್ಯದ ವೇಳೆ ಲಾಕರ್ ತುಂಡರಿಸಲು ವೆಲ್ಡಿಂಗ್ ಕೆಲಸದಲ್ಲಿ ನೈಪುಣ್ಯತೆಯನ್ನು ಹೊಂದಿದ ವ್ಯಕ್ತಿಯನ್ನು ಬಳಸಿಕೊಂಡಿರುವ ಮಾಹಿತಿಯನ್ನು ಪೊಲೀಸ್ ʼ ಟ್ರೀಟ್ ಮೆಂಟ್ʼ ವೇಳೆ ಆರೋಪಿಗಳು ಬಾಯ್ಬಿಟ್ಟಿರುವುದಾಗಿ ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದೆ ಕಳ್ಳತನದಲ್ಲಿ ಭಾಗಿಯಾದ ನಾಲ್ವರನ್ನ ಪೊಲೀಸರು ವಶಕ್ಕೆಪಡೆದಿದ್ದರು ಎನ್ನಲಾಗಿದೆ. ಆದರೇ ಈ ಕುರಿತ ಯಾವುದೇ ಅಧಿಕೃತ ಮಾಹಿತಿಯನ್ನು ಪೊಲೀಸ್ ಇಲಾಖೆ ಇವರೆಗೆ ಸಾರ್ವಜನಿಕವಾಗಿ ಹಂಚಿಕೊಂಡಿಲ್ಲ. ವಶದಲ್ಲಿರುವ ನಾಲ್ವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ನಗದು ಹಾಗೂ ಚಿನ್ನಾಭರಣವನ್ನು ಕೇರಳ ರಾಜ್ಯದ ಪೊಸಡಿ ಗುಂಪೆ ಗುಡ್ಡದ ತಪ್ಪಲಿನ ಸಂಜಂಕಿಲ ಸಮೀಪ ನಿರ್ಜನ ಪ್ರದೇಶದಲ್ಲಿರುವ ಆಟದ ಮೈದಾನವೊಂದರಲ್ಲಿ ಹೂತಿಟ್ಟಿರುವುದನ್ನು ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಪೊಲೀಸರು ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳುವ ಕಾರ್ಯದಲ್ಲಿ ಮಗ್ನವಾಗಿದ್ದು, ಕಳ್ಳರು ತೋರಿಸಿದ ಜಾಗದಲ್ಲಿ ಭೂಮಿಯನ್ನು ಆಗೆದು ಶೋಧ ನಡೆಸುತ್ತಿದ್ದಾರೆ. ಕಳೆದೆರಡು ದಿನಗಳಿಂದ ಪ್ರಕ್ರಿಯೆ ನಡೆದಿದ್ದು, ಇವರೆಗೆ ಯಾವುದೇ ಯಶಸ್ಸು ದಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.
ಬಯಲಿಗೆ ಬಂದದ್ದು ಹೀಗೆ
ಕೃತ್ಯದಲ್ಲಿ ಕಾಸರಗೋಡು ಭಾಗದ ಮೂವರ ಜತೆಗೆ ಬಾಯಾರಿನ ವ್ಯಕ್ತಿಯೊಬ್ಬ ಕೂಡ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಕೆಲವು ವರ್ಷಗಳಿಂದ ವೆಲ್ಡರ್ ಆಗಿ ಕೆಲಸ ನಿರ್ವಹಿಸುತ್ತಿರುವ ಬಾಯಾರು ಪೈವಳಿಕೆ ಗಾಳಿಯಡ್ಕ ನಿವಾಸಿ ಬ್ಯಾಂಕ್ ನ ಲಾಕರ್ ಗಳನ್ನು ತುಂಡರಿಸಲು ಕಳ್ಳರಿಗೆ ಸಾಥ್ ನೀಡಿದ್ದಾನೆ ಲಾಕರ್ ಗಳನ್ನು ತುಂಡರಿಸಿದ ಶೈಲಿಯನ್ನು ಗಮನಿಸಿದ ಪೊಲೀಸರಿಗೆ ಇದು ಕಬ್ಬಿಣ ತುಂಡರಿಸಿ ನೈಪುಣ್ಯತೆಯನ್ನು ಹೊಂದಿರುವ ವ್ಯಕ್ತಿಯ ಕಾರ್ಯ ಎಂದು ಗೊತ್ತಾಗಿದೆ. ವೆಲ್ಡರ್ ಹಾಗೂ ಬ್ಯಾಂಕ್ ನಲ್ಲಿ ಈ ಹಿಂದೆ ಇದ್ದ ಅಧಿಕಾರಿಯೊಬ್ಬರು ಸಂಬಂಧಿಕರಾಗಿದ್ದು, ಕೃತ್ಯ ಎಸಗಲು ಬೇಕಾದ ಮಾಹಿತಿಯನ್ನು ಅವರಿಂದ ಪಡೆಯಲಾಗಿತ್ತಾ? ಈ ಹಿಂದೆ ಬ್ಯಾಂಕ್ ನ ಕೆಲವು ವೆಲ್ಡಿಂಗ್ ಕೆಲಸವನ್ನು ಇದೇ ವ್ಯಕ್ತಿ ನಡೆಸಿದ್ದನಾ ಸಂಶಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಬ್ಯಾಂಕ್ ಲಾಕರ್ ಬ್ರೇಕ್ ನಡೆದ ಬಳಿಕ ಬಾಯಾರಿನ ವ್ಯಕ್ತಿ ಶ್ರೀಮಂತ ವ್ಯಕ್ತಿಯಂತೆ ಯೆಥೇಚ್ಚವಾಗಿ ಹಣ ಖರ್ಚು ಮಾಡುತ್ತಿದ್ದ. ಲಕ್ಷಾಂತರ ರೂ ಮೌಲ್ಯದ ಗೃಹಪಯೋಗಿ ಸಾಮಾಗ್ರಿ ಖರೀದಿಗೆ ಮುಂದಾಗಿದ್ದ. ಈತ ತನ್ನ ಸ್ನೇಹಿತರ ಜತೆ ʼ ತಿಂಡಿ – ತೀರ್ಥʼ ಗಳಿಗೆ ವಿಪರೀತವಾಗಿ ದುಡ್ಡು ಖರ್ಚು ಮಾಡಲು ಆರಂಭಿಸಿದ್ದ. ನಿತ್ಯ ಸ್ಥಳೀಯರು ವಾಲೀಬಾಲು ಆಡುವ ಸಂದರ್ಭದಲ್ಲಿ 3 ರಿಂದ 4ಸಾವಿರ ರೂಪಾಯಿ ಬೆಟ್ಟಿಂಗ್ ಗೆ ನಿಲ್ಲುವುದಕ್ಕೆ ಪ್ರಾರಂಭಿಸಿದ್ದಾನೆ. ಇದರಿಂದ ಅನುಮಾನಗೊಂಡ ಕೆಲವರು ಆತನನ್ನು ಪ್ರಶ್ನಿಸಿದಾಗ ತನಗೆ ಲಾಟರಿಯಲ್ಲಿ ಹಣ ಬಂದಿದೆ ಎಂದು ಹೇಳಿಕೊಂಡಿದ್ದ.
ಇದರಿಂದ ಸಂಶಯಕ್ಕಿಡಾದ ಒಂದಿಬ್ಬರು ಈತನಿಗೆ ಬಾರ್ ವೊಂದರಲ್ಲಿ ಸಿಕ್ಕಾಪಟ್ಟೆ ಕುಡಿಸಿ ಬಾಯ್ಬಿಡಿಸಿದ್ದಾರೆ. ಮದ್ಯದ ನಶೆಯಲ್ಲಿ ಆತ ಬ್ಯಾಂಕ್ ಕಳ್ಳತನದ ಬಹುತೇಕ ಮಾಹಿತಿ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಇದನ್ನು ಪೊಲೀಸರಿಗೆ ಸ್ಥಳೀಯರು ತಿಳಿಸಿದ ಹಿನ್ನಲೆಯಲ್ಲಿ ಪೊಲೀಸರಿಂದ ಸದ್ಯ ಲಾಕ್ ಆಗಿದ್ದಾನೆ. ಈತ ಈ ಹಿಂದೆ ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನಲೆಯಿಲ್ಲ.
ಫೆ.7 ರಂದು ರಾತ್ರಿ ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ನಡೆದಿದ್ದು, ಫೆ.8 ರಂದು ಬೆಳಗ್ಗೆ ಬ್ಯಾಂಕ್ ಅಧಿಕಾರಿಗಳು ಕಛೇರಿಗೆ ಬಂದ ವೇಳೆ ಕೃತ್ಯ ಬೆಳಕಿಗೆ ಬಂದಿತ್ತು. ಆ ಬಳಿಕ ಸ್ಥಳೀಯ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಿದ ತನಿಖಾಧಿಕಾರಿಗಳು,ವಿವಿಧ ಸಿಸಿಟಿವಿ ಕ್ಯಾಮಾರದ ನೆರವಿನಿಂದ ಶಂಕಿತ ವಾಹನದ ಚಲನವಲನಗಳನ್ನು ಪತ್ತೆ ಮಾಡಿದ್ದರು.
ಆದರೇ ಇದ್ಯಾವುದರಿಂದ ದೊಡ್ಡ ಪ್ರಯೋಜನವಾಗದಿದ್ದಾಗ, ಬಾಯಾರಿನ ಸ್ಥಳೀಯರು ನೀಡಿದ ಮಾಹಿತಿ ಪೊಲೀಸರಿಗೆ ಪ್ರಕರಣವನ್ನು ಭೇದಿಸಲು ಸಹಕಾರಿಯಾಯಿತು . ಕಳ್ಳತನ ನಡೆದ ದಿನ ಬೆಳಗ್ಗೆ ಸುಮಾರು 5.30ರ ಸುಮಾರಿಗೆ ಶಂಕಿತ ಕಾರು ಸಾರಡ್ಕ ಭಾಗದಿಂದ ಕುದ್ದುಪದವು ಕಡೆಗೆ ಸಾಗುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಪತ್ತೆಯಾಗಿರುವುದು, ಕಾರು ಬಾಯಾರಿಗೆ ಸಂಚರಿಸಿರುವುದಕ್ಕೆ ಪುಷ್ಠಿಯನ್ನು ನೀಡುತ್ತದೆ
ವಾರದ ಹಿಂದೆ ಕೃತ್ಯದ ಇಬ್ಬರು ಪ್ರಮುಖ ರುವಾರಿಗಳನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಕದ್ದ ಮಾಲನ್ನು ನಾಲ್ವರು ಆರೋಪಿಗಳು ನಾಲ್ಕು ಪಾಲು ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿತ್ತು.
..
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು20 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್18 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ19 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು19 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ24 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಅಪರಾಧ21 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ21 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ19 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!


















