ರಾಷ್ಟ್ರೀಯ
Big Breaking: LPG Price Drop ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಘೋಷಣೆ ಪ್ರಧಾನಿ – ಲೋಕಸಭಾ ಚೂನಾವಣೆ ಪೂರ್ವದಲ್ಲಿ ಮಹಿಳೆಯರಿಗೆ ಮೋದಿ ಕೊಡುಗೆ
ನವದೆಹಲಿ, ಮಾರ್ಚ್ 8: ಲೋಕಸಬಾ ಚುನಾವಣೆಗೆ ದಿನಾಂಕ ಘೋಷಣೆಗೆ ದೇಶದಲ್ಲಿ ಕ್ಷಣಗಣನೆ ಆರಂಭವಾಗಿದ್ದು, ಇದರ ಬೆನ್ನಲೇ ಪ್ರಧಾನಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. (LPG Cylinder Price) ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ ನಿನ್ನೆಯಷ್ಟೆ ಕೇಂದ್ರ ಸಂಪುಟ ಉಜ್ವಲ ಯೋಜನೆಯಡಿ ಸಿಲಿಂಡರ್ ಬೆಲೆಯ ಮೇಲಿನ 300 ರೂಪಾಯಿ ರಿಯಾಯಿತಿಯನ್ನು ಮುಂದಿನ ಒಂದು ವರ್ಷಕ್ಕೆ ಮುಂದುವರಿಸಲು ತೀರ್ಮಾನ ಕೈಗೋಂಡಿತ್ತು.
ಈ ಎರಡು ಯೋಜನೆಗಳು ಮಹಿಳಾ ಮತದಾರರನ್ನು ಗುರಿಯಾಗಿಸಿ ಕೇಂದ್ರ ಸರಕಾರ ಕೈಗೊಂಡ ತೀರ್ಮಾನವಾಗಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ದಿನವೇ ಪ್ರಧಾನಿ ಮೋದಿ (Narendra Modi) ದೇಶದ ಜನತೆಗೆ ಈ ಉಡುಗೊರೆ ಘೋಷಿಸಿರುವುದು ವಿಶೇಷ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಈ ಮಹತ್ವದ ಘೋಷಣೆ ಮಾಡಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.
‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.
ಮಾರ್ಚ್ 1ರಂದು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 25 ರೂ. ಹೆಚ್ಚಳ ಮಾಡಿದ್ದವು. ಆದರೆ, ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಕಳೆದ 6 ತಿಂಗಳುಗಳಿಂದ ಪರಿಷ್ಕರಣೆ ಮಾಡಿರಲಿಲ್ಲ
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ಬಿಗ್ ನ್ಯೂಸ್22 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized23 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ21 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized22 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು10 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ8 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ರಾಜಕೀಯ10 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಸ್ಥಳೀಯ8 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















