Connect with us

Uncategorized

ಲಕ್ಷದ್ವೀಪದ ಸಾರ್ವಭೌಮತ್ವ ರಕ್ಷಣೆಗೆ ಐಎನ್ಎಸ್ ಜಟಾಯು ಕಣ್ಗಾವಲು

Published

on



Ad Widget

Ad Widget

Ad Widget

Ad Widget

✒️ :- ಗಿರೀಶ್ ಲಿಂಗಣ್ಣ , ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ

Ad Widget

Ad Widget

Ad Widget

Ad Widget

Ad Widget

Ad Widget

Ad Widget alt="Ad Widget"/>

Ad Widget

ಭಾರತ ಲಕ್ಷದ್ವೀಪದ ದ್ವೀಪ ಸಮುಚ್ಚಯದಲ್ಲಿ ಅತ್ಯಂತ ದಕ್ಷಿಣಕ್ಕಿರುವ ಮಿನಿಕಾಯ್ ದ್ವೀಪದಲ್ಲಿ ತನ್ನ ನೂತನ ನೌಕಾನೆಲೆಯನ್ನು ಕಾರ್ಯಾಚರಿಸಲು ಸಿದ್ಧತೆ ನಡೆಸುತ್ತಿದೆ. ಈ ಸ್ಥಳ ಭಾರತದ ಮುಖ್ಯಭೂಮಿಯ ಕೊಚ್ಚಿಯಿಂದ 400 ಕಿಲೋಮೀಟರ್ ಪೂರ್ವದಲ್ಲಿ ಮತ್ತು ಮಾಲ್ಡೀವ್ಸ್ ದ್ವೀಪ ಸಮೂಹದಿಂದ 258 ಕಿಲೋಮೀಟರ್ ದಕ್ಷಿಣದಲ್ಲಿದೆ.

Ad Widget

Ad Widget <> Ad Widget

ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಐಎನ್ಎಸ್ ಜಟಾಯು ನೌಕಾನೆಲೆಯನ್ನು ಮಾರ್ಚ್ 6ರಂದು ಉದ್ಘಾಟಿಸಿದರು. ಇದು ಕವರತ್ತಿ ದ್ವೀಪದಲ್ಲಿರುವ ಐಎನ್ಎಸ್ ದ್ವೀಪರಕ್ಷಕ್ ಬಳಿಕ ಲಕ್ಷದ್ವೀಪದ ಎರಡನೇ ನೌಕಾನೆಲೆಯಾಗಿದೆ.



Ad Widget

ಐಎನ್ಎಸ್ ಜಟಾಯು ಕಾರ್ಯತಂತ್ರದ ದೃಷ್ಟಿಯಿಂದ ಹೆಚ್ಚಿನ ಮಹತ್ವ ಹೊಂದಿರುವ ದ್ವೀಪಗಳಲ್ಲಿ ಕ್ರಮೇಣ ಭದ್ರತಾ ಮೂಲಭೂತ ವ್ಯವಸ್ಥೆಗಳನ್ನು ಹೆಚ್ಚಿಸಬೇಕೆಂಬ ಭಾರತೀಯ ನೌಕಾಪಡೆಯ ಕಾರ್ಯತಂತ್ರದ ಭಾಗವಾಗಿದೆ.

Ad Widget

Ad Widget

“ಐಎನ್ಎಸ್ ಜಟಾಯು ಈ ಪ್ರದೇಶದ 90% ಜಾಗತಿಕ ವ್ಯಾಪಾರಕ್ಕೆ ಮಾರ್ಗವಾಗಿರುವ, ಮಹತ್ವದ 9 ಡಿಗ್ರಿ ಚಾನೆಲ್‌ನಿಂದ ಕೊಂಚ ಉತ್ತರದಲ್ಲಿದೆ. ಎರಡರಿಂದ ಮೂರು ದಶಕಗಳ ಹಿಂದೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅಭಿವೃದ್ಧಿ ಪಡಿಸಿದ ರೀತಿಯಲ್ಲೇ ಈಗ ಕಾರ್ಯತಂತ್ರದ ಅವಶ್ಯಕತೆಗಳ ಕಾರಣದಿಂದ ಭಾರತದ ಗಮನ ಲಕ್ಷದ್ವೀಪದ ಕಡೆಗೆ ಸರಿದಿದೆ. ಇದಕ್ಕೆ ಮಾಲ್ಡೀವ್ಸ್ ದಿನೇ ದಿನೇ ಚೀನಾಗೆ ಹೆಚ್ಚು ಆತ್ಮೀಯವಾಗುತ್ತಿರುವುದು ಮತ್ತು ಈ ಪ್ರದೇಶದಲ್ಲಿ ಚೀನಾದ ಪ್ರಭಾವ ಹೆಚ್ಚುತ್ತಿರುವುದು ಮುಖ್ಯ ಕಾರಣವಾಗಿದೆ” ಎಂದು ನಿವೃತ್ತ ಕ್ಯಾಪ್ಟನ್ ಡಿಕೆ ಶರ್ಮಾ ಹೇಳಿದ್ದಾರೆ.

9 ಡಿಗ್ರಿ ಚಾನೆಲ್ ಎನ್ನುವುದು ಲಕ್ಷದ್ವೀಪ ಸಮೂಹದ ಉತ್ತರಕ್ಕೆ, ಸಮಭಾಜಕ ವೃತ್ತದ ಸಮೀಪದಲ್ಲಿ ಇರುವ ನೌಕಾ ಮಾರ್ಗವಾಗಿದೆ. ಈ ಕಾಲುವೆಗೆ ಇದು ಇರುವ ಅಕ್ಷಾಂಶವಾದ, ಸಮಭಾಜಕ ವೃತ್ತದ 9 ಡಿಗ್ರಿ ಉತ್ತರದ ಹೆಸರನ್ನೇ ಇಡಲಾಗಿದೆ. ಅರಬ್ಬೀ ಸಮುದ್ರ, ಹಿಂದೂ ಮಹಾಸಾಗರಗಳು ಮತ್ತು ಅವುಗಳಾಚೆಯಿಂದ ಚಲಿಸುವ ನೌಕೆಗಳಿಗೂ ಇದು ಮಾರ್ಗವಾಗಿರುವುದರಿಂದ, ಇದನ್ನು ಒಂದು ಮಹತ್ವದ ಮಾರ್ಗ ಎಂದು ಪರಿಗಣಿಸಲಾಗಿದೆ. ಈ ಪ್ರದೇಶದಲ್ಲಿ ನಡೆಯುವ ಜಾಗತಿಕ ವ್ಯಾಪಾರದ 90% ಈ ಕಾಲುವೆಯ ಮೂಲಕ ನಡೆಯುತ್ತದೆ ಎಂಬ ಅಂಕಿಅಂಶವೇ ಅಂತಾರಾಷ್ಟ್ರೀಯ ಸಾಗಾಣಿಕೆ ಮತ್ತು ವ್ಯಾಪಾರದಲ್ಲಿ ಈ ಮಾರ್ಗಕ್ಕಿರುವ ಪ್ರಾಮುಖ್ಯತೆಯನ್ನು ಸಾಬೀತುಪಡಿಸುತ್ತದೆ. ಇಂತಹ ಕಾಲುವೆಗಳು ಜಗತ್ತಿನಾದ್ಯಂತ ದಕ್ಷವಾಗಿ ಸರಕುಗಳ ಸಾಗಾಣಿಕೆ ನಡೆಸಲು ಮುಖ್ಯವಾಗಿರುವೆ. ಆದ್ದರಿಂದ ಸಮುದ್ರ ಮಾರ್ಗಗಳನ್ನು ಸುರಕ್ಷಿತಗೊಳಿಸಿ, ವಾಣಿಜ್ಯಿಕ ನೌಕೆಗಳಿಗೆ ಸುರಕ್ಷಿತ ಮಾರ್ಗ ಕಲ್ಪಿಸುವ ಉದ್ದೇಶ ಹೊಂದಿರುವ ದೇಶಗಳಿಗೆ ಇಂತಹ ಕಾಲುವೆಗಳು ಕಾರ್ಯತಂತ್ರದ ಬಿಂದುಗಳಾಗಿವೆ.

ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು ಅವರು ಭಾರತೀಯ ಸೈನಿಕರನ್ನು ಮಾಲ್ಡೀವ್ಸ್‌ನಿಂದ ಹಿಂದಕ್ಕೆ ಕರೆಸಿಕೊಳ್ಳುವಂತೆ ಅಧಿಕೃತ ಮನವಿ ಸಲ್ಲಿಸಿದ್ದರು. ಆದರೆ ಅದನ್ನು ಪಾಲಿಸುವ ಮುನ್ನವೇ ಐಎನ್ಎಸ್ ಜಟಾಯು ಉದ್ಘಾಟನೆ ನಡೆದಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಐಎನ್ಎಸ್ ಜಟಾಯುವನ್ನು 1980ರ ದಶಕದಲ್ಲಿ ಮಿನಿಕಾಯ್‌ನ ನೌಕಾಪಡೆಯ ತುಕಡಿಯಾಗಿ ಸ್ಥಾಪಿಸಲಾಗಿತ್ತು. ಇದೊಂದು ಸಣ್ಣ ಘಟಕವಾಗಿದ್ದು, ಸೀಮಿತ ಜವಾಬ್ದಾರಿಗಳನ್ನು ಹೊಂದಿತ್ತು. ಆದರೆ ಈಗ ಐಎನ್ಎಸ್ ಜಟಾಯುವನ್ನು ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯಗಳನ್ನು ವೃದ್ಧಿಸಬಲ್ಲ ಸ್ವತಂತ್ರ ನೌಕಾನೆಲೆಯಾಗಿ ಅಭಿವೃದ್ಧಿ ಪಡಿಸಲಾಗಿದೆ. ಈ ವಿಸ್ತರಣೆಯಿಂದಾಗಿ, ಐಎನ್ಎಸ್ ಜಟಾಯು ಈ ಪ್ರದೇಶದಲ್ಲಿ ಏನಾದರೂ ಸಮಸ್ಯೆ ಎದುರಾದರೆ ಮೊದಲ ಪ್ರತಿಕ್ರಿಯೆ ನೀಡುವುದರ ಜೊತೆಗೆ, ಭಾರತದ ಮುಖ್ಯಭೂಮಿಯೊಡನೆ ದ್ವೀಪದ ಸಂಪರ್ಕವನ್ನೂ ವೃದ್ಧಿಸಲಿದೆ.

ಆರಂಭದಲ್ಲಿ ನೌಕಾ ತುಕಡಿಯನ್ನು ವಿಚಕ್ಷಣೆ, ಕಣ್ಗಾವಲು ಮತ್ತು ಉದ್ದೇಶಿತ ಪ್ರದೇಶಕ್ಕೆ ಭದ್ರತೆ ಒದಗಿಸಿ, ಅದರಲ್ಲೂ ಭಾರತದ ಸಮುದ್ರ ವ್ಯಾಪ್ತಿಯನ್ನು ರಕ್ಷಿಸಲು ಸ್ಥಾಪಿಸಲಾಗಿತ್ತು. ಆದರೆ ಕಾಲಕ್ರಮೇಣ ಮಿನಿಕಾಯ್ ದ್ವೀಪದ ಆರಂಭಿಕ ಘಟಕ ವಿಕಾಸಗೊಂಡು, ಐಎನ್ಎಸ್ ಜಟಾಯುವಿನಂತಹ ಗಮನಾರ್ಹ ನೌಕಾನೆಲೆಯಾಗಿ ರೂಪುಗೊಂಡಿದ್ದು, ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯ ಮತ್ತು ಕಾರ್ಯತಂತ್ರದ ಮಹತ್ವದ ಪ್ರದೇಶಗಳಲ್ಲಿ ಉಪಸ್ಥಿತಿಯನ್ನು ಹೆಚ್ಚಿಸಲಿವೆ.

ಐಎನ್ಎಸ್ ಜಟಾಯು ನೆಲೆಯ ಸ್ಥಾಪನೆಯೊಡನೆ, ಲಕ್ಷದ್ವೀಪದ ದ್ವೀಪ ಸಮುಚ್ಚಯದಲ್ಲಿ ಭಾರತೀಯ ನೌಕಾಪಡೆ ತನ್ನ ಸಾಗರ ಉಪಸ್ಥಿತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲಿದೆ.

ಲಕ್ಷದ್ವೀಪದ ಪ್ರಮುಖ ದ್ವೀಪಗಳ ಅನ್ವೇಷಣೆ

ಲಕ್ಷದ್ವೀಪ ಭಾರತದ ಕೇಂದ್ರಾಡಳಿತ ಪ್ರದೇಶವಾಗಿದ್ದು, ಇದು 36 ದ್ವೀಪಗಳನ್ನು ಒಳಗೊಂಡಿದೆ. ಇವುಗಳ ಪೈಕಿ 10 ದ್ವೀಪಗಳು ಜನರಹಿತವಾಗಿವೆ. ಈ ದ್ವೀಪಗಳ ಪೈಕಿ, ಪ್ರಮುಖವಾದ ಕೆಲವು ದ್ವೀಪಗಳು ಇಂತಿವೆ:

1. ಕವರತ್ತಿ: ಕವರತ್ತಿ ದ್ವೀಪ ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶದ ರಾಜಧಾನಿಯಾಗಿದೆ. ಕವರತ್ತಿ ಒಂದು ಅತ್ಯಂತ ಸುಂದರ ದ್ವೀಪವಾಗಿದ್ದು, ತನ್ನ ಸುಂದರ ಸಮುದ್ರ ತೀರಗಳು ಮತ್ತು ಸಾಗರ ಜೀವ ವೈವಿಧ್ಯತೆಗೆ ಹೆಸರಾಗಿದೆ.

2. ಮಿನಿಕಾಯ್: ಲಕ್ಷದ್ವೀಪದ ದ್ವೀಪ ಸಮುಚ್ಚಯದ ದಕ್ಷಿಣದ ಕೊನೆಯಲ್ಲಿರುವ ಮಿನಿಕಾಯ್, ಲಕ್ಷದ್ವೀಪದ ಎರಡನೇ ಅತಿದೊಡ್ಡ ದ್ವೀಪವಾಗಿದೆ. ಇಲ್ಲಿನ ಸಂಸ್ಕೃತಿ ಬಹಳಷ್ಟು ಭಿನ್ನವಾಗಿದ್ದು, ಮಾಲ್ಡೀವ್ಸ್ ಸಂಸ್ಕೃತಿಯನ್ನು ಹೋಲುತ್ತದೆ.

3. ಅಗತ್ತಿ: ಈ ದ್ವೀಪ ಲಕ್ಷದ್ವೀಪದ ಏಕೈಕ ವಿಮಾನ ನಿಲ್ದಾಣವನ್ನು ಹೊಂದಿದ್ದು, ಭಾರತದ ಮುಖ್ಯ ಭೂಮಿಯನ್ನು ಸಂಪರ್ಕಿಸುವ ಅತ್ಯಂತ ಮಹತ್ವದ ತಾಣವಾಗಿದೆ.

4. ಕಲ್ಪೇನಿ: ತನ್ನ ಪ್ರಕೃತಿ ಸೌಂದರ್ಯ ಮತ್ತು ಹವಳ ಜೀವಿಗಳಿಗೆ ಹೆಸರಾಗಿರುವ ಕಲ್ಪೇನಿ ಒಂದು ಪ್ರಸಿದ್ಧ ಪ್ರವಾಸಿ ತಾಣವಾಗಿದೆ.

5. ಬಂಗಾರಂ: ಮಾನವ ನಿವಾಸ ರಹಿತವಾಗಿರುವ ಬಂಗಾರಂ ದ್ವೀಪ ಒಂದು ಪ್ರಮುಖ ಪ್ರವಾಸಿ ತಾಣವಾಗಿದ್ದು, ಅಲ್ಲಿನ ರೆಸಾರ್ಟ್‌ಗಳು ಮತ್ತು ಸುಂದರ ಸಮುದ್ರ ತೀರಗಳಿಗೆ ಹೆಸರಾಗಿದೆ. ಈ ದ್ವೀಪ ಅಂತಾರಾಷ್ಟ್ರೀಯ ಪ್ರವಾಸಿಗರಿಗೂ ತೆರೆದಿದೆ.

ಈ ದ್ವೀಪಗಳು ಅರಬ್ಬೀ ಸಮುದ್ರದ ತಮ್ಮ ಕಾರ್ಯತಂತ್ರದ ಪ್ರಾಮುಖ್ಯತೆಯ ಜೊತೆಗೆ, ತಮ್ಮ ವಿಶಿಷ್ಟವಾದ ಪರಿಸರ ವ್ಯವಸ್ಥೆ, ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ ಸಾಮರ್ಥ್ಯಗಳಿಂದ ಮುಖ್ಯವಾಗಿವೆ.

(ಈ ಲೇಖನದ ಬರಹಗಾರರಾದ ಗಿರೀಶ್ ಲಿಂಗಣ್ಣ ಅವರು ಬೆಂಗಳೂರು ಮೂಲದ ರಕ್ಷಣಾ, ಏರೋಸ್ಪೇಸ್ ಮತ್ತು ರಾಜಕೀಯ ವಿಶ್ಲೇಷಕರು. ಅವರು ಎಡಿಡಿ ಇಂಜಿನಿಯರಿಂಗ್ ಜಿಎಂಬಿಎಚ್ ಜರ್ಮನಿಯ ಅಂಗಸಂಸ್ಥೆಯಾದ ಎಡಿಡಿ ಇಂಜಿನಿಯರಿಂಗ್ ಕಾಂಪೊನೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕರಾಗಿದ್ದಾರೆ. ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಅವರೊಡನೆ girishlinganna@gmail.com ಮೂಲಕ ತಿಳಿಸಬಹುದು)

Ad Widget
Click to comment

Leave a Reply

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’  ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’  ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ  ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.



Ad Widget
Ad Widget
Continue Reading

Uncategorized

Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.



Ad Widget

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.

Ad Widget

Ad Widget

ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:

ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.

ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.

Ad Widget
Continue Reading

Uncategorized

Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.

Ad Widget

Ad Widget <> Ad Widget

ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.



Ad Widget

ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.

Ad Widget

Ad Widget

ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು

ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ

ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading