ದಕ್ಷಿಣ ಕನ್ನಡ
Bantwal: ಫೈನ್ ಹಾಕಿದ್ದಕ್ಕೆ ಎಸೈ ಹಾಗೂ ಪೊಲೀಸ್ ಜೀಪನ್ನೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಡಲು ಮುಂದಾದನೇ ಆಟೋ ಚಾಲಕ ಅನ್ಸಾರ್ ? ಬಂಟ್ವಾಳದಲ್ಲೊಂದು ವಿಲಕ್ಷಣ ಘಟನೆ
ಬಂಟ್ವಾಳ: ನಿಯಮ ಉಲ್ಲಂಘಿಸಿ ಆಟೋರಿಕ್ಷಾ ಓಡಿಸುತ್ತಿರುವುದಾಗಿ ಆರೋಪಿಸಿ , ವ್ಯಕ್ತಿಯೋರ್ವನನ್ನು ತಡೆದು ಟ್ರಾಫಿಕ್ ಪೋಲೀಸರು ದಂಡ ಹಾಕಿದ ಹಾಗೂ ಇದರಿಂದ ಆವೇಶಕ್ಕೊಳಗಾದ ಚಾಲಕ ತನ್ನ ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ.
ಆರೋಪಿ ಚಾಲಕನ ವಿರುದ್ದ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಹಾಗೂ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಯತ್ನಿಸದ ಆರೋಪದಡಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ.
ಟ್ರಾಫಿಕ್ ಎಸ್‌ಐ.ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ತಡೆದು ನಿಲ್ಲಿಸಿ ಆತನ ಮೇಲೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದರು. ಚಾಲಕ ಮಹಮ್ಮದ್ ಅನ್ಸಾರ್ ಐನಿಫಾರ್ಮ್ ಧರಿಸದೇ ಮೊಬೈಲ್ ನಲ್ಲಿ ಮಾತಾನಡುತ್ತಾ ಆಟೋ ಓಡಿಸುತ್ತಿದ್ದ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ದಂಡ ಹಾಕಿದ್ದರಿಂದ ಉದ್ವೇಗಕ್ಕೆ ಒಳಗಾದ ಚಾಲಕ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿದ್ದಾನೆ . ಇದನ್ನು ಪ್ರತ್ಯಕ್ಷದರ್ಶಿಯೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ. ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅನ್ಸಾರ್ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟುಹಾಕುವುದಾಗಿ ಬೆದರಿಸಿದ್ದಾನೆ .ಬಳಿಕ ಎಸ್ ಐ ಹಾಗೂ ಜೀಪ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ನೀಡಲು ಮುಂದಾಗಿರುವುದಾಗಿ ಎಸ್.ಐ.ಅವರು ಆತನ ಮೇಲೆ ದೂರು ನೀಡಿದ್ದಾರೆ.
ಅದರಂತೆ ಆಟೋ ಚಾಲಕನ ವಿರುದ್ದ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized18 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















