ರಾಜಕೀಯ
BJP-ಬಿಜೆಪಿಯಲ್ಲಿ 10 ಕ್ಷೇತ್ರಗಳಿಗೆ ಹೊಸ ಮುಖ? ಸಮೀಕ್ಷೆ ಆಧರಿಸಿ ವರಿಷ್ಠರ ಕ್ರಮ, ಮೈಸೂರು, ಉತ್ತರಕನ್ನಡ ಹಾಲಿ ಸಂಸದರಿಗೆ ಕೊಕ್ ನಿಶ್ಚಿತ
ಬೆಂಗಳೂರು: ಮಿಷನ್ -370 ಗುರಿ ಇಟ್ಟುಕೊಂಡು ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಅತ್ಯಂತ ಪ್ರಮುಖ ರಾಜ್ಯ ಕರ್ನಾಟಕ. ಕಳೆದ ಬಾರಿ ಇಲ್ಲಿ 25 ಸೀಟ್ ಗಳನ್ನು ತನ್ನದಾಗಿಸಿಕೊಂಡಿತ್ತು. ದೇಶದಲ್ಲಿ 370ರ ಗುರಿ ತಲುಪಬೇಕಾದರೇ ರಾಜ್ಯದಲ್ಲಿ ಅದು ಹಿಂದಿನ ಪ್ರದರ್ಶನವನ್ನು ಪುನಾರವರ್ತಿಸುವುದು ಅನಿವಾರ್ಯ. ಆದರೇ ರಾಜ್ಯದ ಹಲವು ಸಂಸದರ ವಿರುದ್ದ ಆಡಳಿತ ವಿರೋಧಿ ಅಲೆಯಿದೆ . ಹೀಗಾಗಿ ಹಲವು ಕಡೆ ಹಾಲಿ ಸಂಸದರನ್ನು ಬದಲಿಯಸಲೇ ಬೇಕಾದ ಸ್ಥಿತಿಯಲ್ಲಿ ಬಿಜೆಪಿ ಇದೆ.
ಮೈಸೂರು, ಉತ್ತರಕನ್ನಡ, ಬೆಳಗಾವಿ, ರಾಯಚೂರು, ಬೆಂಗಳೂರು ಉತ್ತರದ ಹಾಲಿ ಸಂಸದರನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್ ಮನ ಮಾಡಿದೆ. ಚಾಮರಾಜನಗರ, ತುಮಕೂರು, ಹಾವೇರಿಗೆ ಬೇರೆ ಆಯ್ಕೆ ಅನಿವಾರ್ಯವಾಗಿದೆ. ಬೀದರ್, ಕೊಪ್ಪಳ, ಚಿತ್ರದುರ್ಗ, ವಿಜಯಪುರ ಹಾಗೂ ದಾವಣಗೆರೆ ಕ್ಷೇತ್ರಗಳಿಗೆ ಬದಲಾವಣೆ ಪರಿಶೀಲನೆ ಮಾಡುತ್ತಿದ್ದರೂ ಪರ್ಯಾಯವಾಗಿ ಸಮರ್ಥ ಉಮೇದುವಾರರ ಕೊರತೆಯಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಕ್ಷೇತ್ರ ಸಂಸದರ ಮೇಲೂ ತೂಗುಗತ್ತಿ ತೂಗುತ್ತಿದೆ. ಆದರೇ ಕೊನೆ ಕ್ಷಣದಲ್ಲಿ ಅವರು ಬಚವಾಗಬಹುದು ಎಂದು ಹೇಳಲಾಗುತ್ತಿದೆ.
ಟಿಕೆಟ್ ಕೈ ತಪ್ಪಲಿದೆ ಎಂದು ಗೊತ್ತಾಗುತ್ತಲೇ, ಹಾಲಿ ಸಂಸದರು ಲಾಬಿ, ಗೊಂದಲ, ತರಹೇವಾರಿ ಒತ್ತಡ ತಂತ್ರಗಳಿಗೆ ಮುಂದಾಗಿದ್ದು, ಹೈಕಮಾಂಡ್ ಇದಕ್ಕೆ ಸೊಪ್ಪು ಹಾಕುವ ಲಕ್ಷಣಗಳೇ ಇಲ್ಲ. ಈ ಬಾರಿ ಲೋಕಸಭೆ ಚುನಾವಣೆಗೆ ಕನಿಷ್ಠ 10 ಕ್ಷೇತ್ರಗಳಲ್ಲಿ ಹೊಸ ಮುಖಗಳು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ರಾಜ್ಯ ನಾಯಕರ ಅಭಿಪ್ರಾಯಗಳನ್ನು ಪರಿಗಣಿಸಲಿದ್ದಾರೆ. ಆದರೆ ಕಾರ್ಯಕರ್ತರ ಹಿಮ್ಮಾಹಿತಿ, ಎರಡು ಹಂತದ ಸಮೀಕ್ಷೆ, ಗುಪ್ತದಳ ವರದಿಗಳು, ಸಂಸದರ ಕಾರ್ಯಸಾಧನೆಗೆ ಪ್ರಾಮುಖ್ಯತೆ ನೀಡುವುದು ವರಿಷ್ಠರ ಚಿಂತನೆಯಾಗಿದೆ.
ಮೈಸೂರಿಗೆ ಪ್ರತಾಪಸಿಂಹ ಬದಲು ರಾಜವಂಶಸ್ಥ ಯದುವೀರ್ ಒಡೆಯರ್ ಪರ ಒಲವಿದೆ. ಮನವೊಲಿಸಲು ತೆರೆಮರೆ ಪ್ರಯತ್ನ ನಡೆದಿದ್ದು, ಒಡೆಯರ್ ಒಪ್ಪದಿದ್ದರೆ ಪರ್ಯಾಯ ಅಭ್ಯರ್ಥಿಯನ್ನಾಗಿ ಡಾ.ಮಂಜುನಾಥ್ರನ್ನು ರೆಡಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಉತ್ತರಕನ್ನಡದಲ್ಲಿ ಅನಂತಕುಮಾರ್ ಹೆಗಡೆ ಬದಲಾವಣೆಗೆ ದೆಹಲಿ ನಾಯಕರು ಬಯಸಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ, ಹರಿಪ್ರಕಾಶ್ ಕೋಣೆಮನೆ, ಗೋಪಾಲ ನಾಗರಕಟ್ಟೆ ಹೆಸರುಗಳು ಚರ್ಚೆಯಲ್ಲಿವೆ ಎಂದು ತಿಳಿದಿದೆ.
ತುಮಕೂರಿನ ಮೇಲೆ ಮಾಜಿ ಮಂತ್ರಿ ವಿ.ಸೋಮಣ್ಣ ಆಸೆಯಿಟ್ಟು ಕೊಂಡಿದ್ದಾರೆ. ಆದರೆ ಸೋಮಣ್ಣ ಸ್ಪರ್ಧಿಸಿದರೆ ಪಕ್ಷಕ್ಕೆ ಹಿನ್ನೆಡೆಯಾಗಲಿದೆ ಎಂಬ ಸಮೀಕ್ಷಾ ವರದಿಯು ಚಿಂತೆಗೀಡು ಮಾಡಿದೆ. ಇದರಿಂದಾಗಿ ಮಂಡ್ಯ ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಂಡು, ತುಮಕೂರು ಜೆಡಿಎಸ್ಗೆ ಬಿಟ್ಟುಕೊಡಲು ಯೋಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ನಳಿನ್ ಜತೆಗೆ ಮಾಜಿ ಸೈನಿಕ ಬ್ರಜೇಶ್ ಚೌಟ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಇದರ ಜತೆಗೆ ಕೇಶವ ಬಂಗೇರ ಹಾಗೂ ಭರತ್ ಶೆಟ್ಟಿ ಹೆಸರು ಕೂಡ ಪಟ್ಟಿಯಲ್ಲಿದೆ. ಇನ್ನೂ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಕ್ಷೇತ್ರದಲ್ಲಿ ವಿರೋಧಿ ಅಲೆಯೊಂದು ಪ್ರಭಲವಾಗಿ ಕಂಡು ಬರುತ್ತಿದೆ. ಇದಕ್ಕೆ ಕೆಲ ಬಿಜೆಪಿ ನಾಯಕರೇ ಬೆಂಕಿ ಸುರಿಯುತ್ತಿದ್ದಾರೆ. ಹೀಗಾಗಿಯೂ ಶೋಭಾ ಹಿಂದೆ ಬಿಎಸ್ ವೈ ಪ್ರಭಲವಾಗಿ ನಿಂತಿರುವ ಕಾರಣ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಕಡಿಮೆ . ಕಾಂಗ್ರೆಸ್ ನೀಮದ ಬಿಜೆಪಿಗೆ ಬಂದಿರುವ ಪ್ರಮೋದ್ ಮಧ್ವರಾಜ್ ಹಾಗೂ ಮಾಜಿ ಸಚಿವ ಸಿಟಿ ರವಿ ಈ ಕ್ಷೇತ್ರದ ಇನ್ನಿತರ ಟಿಕೆಟ್ ಆಕಾಂಕ್ಷಿಗಳು ಆಗಿದ್ದಾರೆ.
ರಾಜ್ಯ ಪ್ರವಾಸ ಖಚಿತ : ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಖಚಿತವಾಗಿದೆ. ಶಿವಮೊಗ್ಗ ಸೇರಿ ಹಲವೆಡೆ ಪ್ರವಾಸ ಮಾಡಲಿದ್ದು, ದೊಡ್ಡ ಪ್ರಮಾಣದಲ್ಲಿ ಜನರನ್ನು ಸೇರಿಸುವ ಯೋಚನೆ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಪಕ್ಷದ ಪರ ವಾತಾವರಣ, ಮೋದಿ ಅಲೆಯಿದೆ. 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯಿದೆ. ನಾವು, ಜೆಡಿಎಸ್ ಸೇರಿ 28ರಲ್ಲಿ 25 ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತವೆಂದು ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸ್ಥಳೀಯ
UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಚನ್ನಪಟ್ಟಣ, ಅ.6: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಸಚಿವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನೂ ಪರಿಶೀಲಿಸಿದರು. ಕರ್ತವ್ಯದಲ್ಲಿದ್ದ ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.
ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಖಾದರ್ ಅವರು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
“ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಔಷಧಿಗಳಿದ್ದರೂ ರೋಗಿಗಳಿಗೆ ಹೊರಗಡೆ ಔಷಧಿ ಬರೆದುಕೊಡುವುದು ಏಕೆ?” ಎಂದು ಪ್ರಶ್ನಿಸಿದ ಸಚಿವರು, ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಷ್ಟನೆ ಪಡೆದರು.
ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಹಾಗೂ ಸಮಯೋಚಿತ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದರು.
ರಾಜಕೀಯ
DK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಬೆಂಗಳೂರು: ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ ₹5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗದ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.
ಪದಕ ವಿಜೇತರ ಬಹುಮಾನ ಮೊತ್ತ ಭಾರೀ ಹೆಚ್ಚಳ
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನೀಡುತ್ತಿದ್ದ ನಗದು ಬಹುಮಾನವನ್ನು ಸರ್ಕಾರ ಹೆಚ್ಚಿಸಿದೆ. ಈ ಹಿಂದೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿಗೆ ₹15 ಲಕ್ಷ ನೀಡಲಾಗುತ್ತಿತ್ತು.
ಇನ್ನು ಮುಂದೆ ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ.
ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ನೇರ ನೇಮಕಾತಿ
ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಒಲಿಂಪಿಕ್ಸ್ ತಯಾರಿಗೆ ತಲಾ ₹10 ಲಕ್ಷ
ಮುಂದಿನ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ಪ್ರೋತ್ಸಾಹ ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್. ಹಾಗೂ ಶ್ರೇಯಾಂಕಾ ಪಾಟೀಲ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು 2026-27ನೇ ಸಾಲಿನ ‘ಗುರಿ ಒಲಿಂಪಿಕ್ಸ್’ ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಇವರಿಗೆ ಒಲಿಂಪಿಕ್ಸ್ ತಯಾರಿಗಾಗಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುತ್ತದೆ.
ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ
ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಹಾಗೂ ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026ರಂದು ಅಧಿಸೂಚನೆ ಹೊರಡಿಸಲಾಗಿದೆ.
8 ಪದಕ ವಿಜೇತ ಕ್ರೀಡಾಪಟುಗಳು
ಶ್ರೇಯಾಂಕ ಆರ್. ಪಾಟೀಲ್ – ಮಹಿಳಾ ಕ್ರಿಕೆಟ್ ತಂಡ, ಚಿನ್ನ
ಎಂ.ಆರ್. ಪೂವಮ್ಮ – 4×400 ಮೀ. ಮಿಶ್ರ ರಿಲೇ, 4×400 ಮೀ. ಮಹಿಳಾ ರಿಲೇ – ಚಿನ್ನ ಮತ್ತು ಬೆಳ್ಳಿ
ತಿಲೋತ್ತಮಾ ಸೇನ್ – ಮಹಿಳೆಯರ 50 ಮೀ. ರೈಫಲ್, ಬೆಳ್ಳಿ
ಆಯುಷ್ ಆರ್. ಶೆಟ್ಟಿ – ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ
ಸ್ನೇಹಾ ಎಸ್.ಎಸ್. – 4×100 ಮೀ. ಮಿಶ್ರ ರಿಲೇ, ಕಂಚು
ಅದಿತಿ ಅಶೋಕ್ – ಮಹಿಳಾ ತಂಡ ಗಾಲ್ಫ್, ಬೆಳ್ಳಿ
ಪ್ರಣವಿ ಎಸ್. ಅರಸ್ – ಮಹಿಳಾ ತಂಡ ಗಾಲ್ಫ್ ಹಾಗೂ ವೈಯಕ್ತಿಕ ಸ್ಪರ್ಧೆ, ಬೆಳ್ಳಿ ಮತ್ತು ಚಿನ್ನ
ಮೋಹಿತ್ ಎಚ್.ಎಸ್. – ಪುರುಷರ ಹಾಕಿ ತಂಡ, ಚಿನ್ನ
ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು
ಯಶಸ್ ಪಾಲಾಕ್ಷ, ಸುಪ್ರಿಯಾ ಸಿಂಡಿಗೆರೆ ಬಸವರಾಜು, ಉನ್ನತಿ ಅಯ್ಯಪ್ಪ, ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಆಯುಷ್ ಶೆಟ್ಟಿ, ಶ್ರೇಯಾಂಕ ಆರ್. ಪಾಟೀಲ್, ಕೀರ್ತಿ ರಂಗಸ್ವಾಮಿ, ಫವಾದ್ ಮಿರ್ಜಾ, ಅದಿತಿ ಅಶೋಕ್, ಪ್ರಣವಿ ಎಸ್. ಅರಸ್, ಮೋಹಿತ್ ಎಚ್.ಎಸ್., ತಿಲೋತ್ತಮಾ ಸೇನ್, ಆಕಾಶ್ ಮಣಿ, ಶ್ರೀಹರಿ ನಟರಾಜ್, ದಕ್ಷಣ್ ಎಸ್., ಅನೀಶ್ ಗೌಡ, ಯಶಸ್ವಿನಿ ಘೋರ್ಪಡೆ, ಸಿಂಧುಶ್ರೀ ಹಾಗೂ ದೀಪು ಮಲ್ಲೇಶ್ ಅವರು ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದಿದ್ದಾರೆ.
ರಾಜಕೀಯ
Ashok Rai-ಅಶೋಕ ಜನಮನ-2026 ಪೂರ್ವಭಾವಿ ಸಭೆ; ವಿಧಾನಸಭಾ ಕ್ಷೇತ್ರದ ಪ್ರತೀ ಮನೆಗೂ ಆಮಂತ್ರಣ ನೀಡುತ್ತಿದ್ದೇನೆ: ಶಾಸಕ ಅಶೋಕ್ ರೈ
ದೀಪಾವಳಿ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಸ್ಸುಗೊಳಿಸಬೇಕು, ಟ್ರಸ್ಟ್ನ ಸದಸ್ಯರು ಗ್ರಾಮಗಳಿಗೆ ತೆರಳಿ ಪ್ರತೀ ಕುಟುಂಬಕ್ಕೂ ಆಹ್ವಾನ ನೀಡಲಿದ್ದಾರೆ ಎಂದು ಶಾಸಕರ ಕಚೇರಿ ಸಭಾಭವನದಲ್ಲಿ ಅ.5 ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕರು ತಿಳಿಸಿದರು.

ಪುತ್ತೂರು: ನ.8ರಂದು ದೀಪಾವಳಿ ಪ್ರಯುಕ್ತ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಸ್ಸುಗೊಳಿಸಬೇಕು, ಟ್ರಸ್ಟ್ನ ಸದಸ್ಯರು ಗ್ರಾಮಗಳಿಗೆ ತೆರಳಿ ಪ್ರತೀ ಕುಟುಂಬಕ್ಕೂ ಆಹ್ವಾನ ನೀಡಲಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.
ಅಶೋಕ ಜನಮನ ಕಾರ್ಯಕ್ರಮದ ಪ್ರಯುಕ್ತ ಶಾಸಕರ ಕಚೇರಿ ಸಭಾ ಭವನದಲ್ಲಿ ಅ.5 ರಂದು ನಡೆದ ಪೂರ್ವ ಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದರು.
ಕಳೆದ 14 ವರ್ಷದಿಂದ ದೀಪಾವಳಿ ಪ್ರಯುಕ್ತ ನಮ್ಮ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದೇವೆ. ಸಣ್ಣ ಮಟ್ಟದಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮ ಇಂದು ಲಕ್ಷಾಂತರ ಮಂದಿ ಸೇರುವ ಕಾರ್ಯಕ್ರಮವಾಗಿ ಮೂಡಿಬರುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತೀಯೊಬ್ಬರ ಆಶೀರ್ವಾದ ಮತ್ತು ಸಲಹೆ ಸಹಕಾರವೇ ಕಾರ್ಯಕ್ರಮ ಯಶಶ್ವಿಯತ್ತ ಸಾಗಲು ಕಾರಣವಾಗಿದೆ ಎಂದು ಹೇಳಿದರು. ಪ್ರತೀ ವರ್ಷದಂತೆ ಈ ವರ್ಷವೂ ನಮ್ಮ ಟ್ರಸ್ಟ್ ಸದಸ್ಯರು ಗ್ರಾಮ ಗ್ರಾಮಕ್ಕೆ ತೆರಳಿ ಕಾರ್ಯಕ್ರಮಕ್ಕೆ ಗ್ರಾಮಸ್ಥರನ್ನು ಆಹ್ವಾನಿಸಲಿದ್ದಾರೆ ಇದಕ್ಕಗಿ ಪ್ರತೀ ಗ್ರಾಮದಲ್ಲೂ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.
ವಿವಿಧ ಸಮಿತಿಗಳ ರಚನೆ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಸಮಿತಿಯನ್ನು ರಚನೆ ಮಾಡಲಾಗಿದ್ದು ಇದರಲ್ಲಿ ಟ್ರಸ್ಟ್ ಸದಸ್ಯರ ಜೊತೆಗೆ ಪಕ್ಷ ಬೇಧ ಮರೆತು ಗ್ರಾಮಸ್ಥರನ್ನು ನೇಮಿಸಲಾಗಿದೆ. ಮಹಿಳಾ ಪ್ರಚಾರ ಸಮಿತಿಯನ್ನು ರಚನೆ ಮಾಡಲಾಗಿದೆ. ಪ್ರತೀ ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚುಗಳಲ್ಲಿ ಕಾರ್ಯಕ್ರಮದ ಬಗ್ಗೆ ಪ್ರಚಾರ ನೀಡಲಾಗುವುದು. ಜಾತಿ, ಮತ, ಪಕ್ಷ, ಧರ್ಮ ಬೇಧವಿಲ್ಲದೆ ಎಲ್ಲರನ್ನೊಳಗೊಂಡು ಈ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕರು ತಿಳಿಸಿದರು.
ತಟ್ಟೆ-ಸೀರೆ-ಬೆಡ್‌ಶೀಟ್ ಆಯ್ಕೆ ನಿಮ್ಮದು
ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತೀಯೊಬ್ಬರಿಗೂ ದೀಪಾವಳಿ ಉಡುಗೋರೆಯನ್ನು ನೀಡಲಾಗುವುದು. ಈ ಬಾರಿ ಮೂರು ಬಗೆಯ ಉಡುಗೋರೆಗಳನ್ನು ನಿಮ್ಮ ಅಯ್ಕೆಗೆ ನೀಡಲಾಗಿದೆ. ತಟ್ಟೆ, ಸೀರೆ ಮತ್ತು ಬೆಡ್ ಶೀಟ್‌ಗಳನ್ನು ನೀಡಲಾಗುತ್ತಿದ್ದು ಇದರಲ್ಲಿ ಯಾವುದು ಬೇಕಾದರೂ ಒಂದು ಐಟಂನ್ನು ಪಡೆದುಕೊಳ್ಳಬಹುದಾಗಿದೆ. ನಮ್ಮ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಶೀರ್ವಾದ ಮಾಡಲು ಬರುವ ಬಂಧುಗಳಿಗೆ ಸಣ್ಣ ಉಡುಗೋರೆಯನ್ನಾಗಿ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ಇದನ್ನು ವಿನಯಪೂರ್ವಕವಾಗಿ ಸ್ವೀಕರಿಸಬೇಕು ಎಂದು ಶಾಸಕರು ಮನವಿ ಮಾಡಿದರು.
ವೇದಿಕೆಯಲ್ಲಿ ಟ್ರಸ್ಟ್ ಸದಸ್ಯರಾದ ಮುರಳೀಧರ್ ರೈ ಮಟಂತಬೆಟ್ಟು, ಮಹಮ್ಮದ್ ಬಡಗನ್ನೂರು, ಪದ್ಮನಾಭ ಪೂಜಾರಿ ಸಣ್ಣಗುತ್ತು, ನಿಹಾಲ್ ಪಿ ಶೆಟ್ಟಿ, ಡಾ. ರಾಜಾರಾಮ್ ಕೆ ಬಿ, ಕೃಷ್ಣಪ್ರಸಾದ್ ಆಳ್ವ, ಜಯಪ್ರಕಾಶ್ ಬದಿನಾರ್, ರಾಮಣ್ಣ ಪಿಲಿಂಜ, ಯೋಗೀಶ್ ಸಾಮಾನಿ ಹಾಗೂ ಟ್ರಸ್ಟ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಅಶೋಕಜನಮನ 2026 ರ ಕಾರ್ಯಕ್ರಮದ ಬಗ್ಗೆ ಪ್ರತೀ ಗ್ರಾಮಕ್ಕೆ ತೆರಳಿ ನಾವು ಪ್ರಚಾರ ಕಾರ್ಯವನ್ನು ಮಾಡಲಿದ್ದೇವೆ. ಪ್ರತೀಯೊಬ್ಬರೂ ಭಾಗವಹಿಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಇದು ದೀಪಾವಳಿ ಪ್ರಯುಕ್ತ ಶಾಸಕರು ನಡೆಸುವ ಕಾರ್ಯಕ್ರಮ ಇದರಲ್ಲಿ ಜಾತಿ, ಮತ ಬೇಧವಿಲ್ಲದೆ ಎಲ್ಲರೂ ಭಾಗವಹಿಸುವ ಮೂಲಕ ಆಶೀರ್ವದಿಸುವ ಕಾರ್ಯವನ್ನು ಮಾಡಬೇಕು, ಇದು ಎಲ್ಲರ ಕಾರ್ಯಕ್ರಮವಾಗಿದೆ.
-ಸುದೇಶ್ ಶೆಟ್ಟಿ, ಕಾರ್ಯಾದ್ಯಕ್ಷರು ರೈ ಚಾರಿಟೇಬಲ್ ಟ್ರಸ್ಟ್
-
Uncategorized22 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ಪುತ್ತೂರು24 hours agoಮುಳಿಯ ಶ್ಯಾಮ್ ಭಟ್ ನಿಧನ : ‘ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ ಅ.6ರಂದು ಮಧ್ಯಾಹ್ನ 2 ಗಂಟೆಯವರೆಗೆ ಶೋರೂಮ್ ಬಂದ್
-
Uncategorized21 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized9 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ10 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ11 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ದಕ್ಷಿಣ ಕನ್ನಡ3 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ10 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ


















