ಅಪರಾಧ
Kondana-ಕೊಂಡಾಣ ಕ್ಷೇತ್ರ ಭಂಡಾರ ಮನೆ ವಿವಾದ ; ಮೂಲ ಭಂಡಾರ ಮನೆಯಲ್ಲಿ ಹೂವಿನ ಪೂಜೆ –ದೈವಕ್ಕೆ ದೂರು ; 15 ಕೋಟಿ ಮೌಲ್ಯದ ದೈವದ ಪದ್ದೆಯಿ ಬಂಗಾರ್ ಈಗ ಎಲ್ಲಿದೆ ಗೊತ್ತೆ ?
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕೋಟೆಕಾರು ಗ್ರಾಮದ ಕಾರಣೀಕ ಕೊಂಡಾಣ ಕ್ಷೇತ್ರ ಪುರಾಣ ಪ್ರಸಿದ್ದ. ಇಲ್ಲಿನ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳು ಕಾರಣಿಕ ಹಿನ್ನಲೆಯುಳ್ಳವು. ದೈವಗಳ ಕಾರಣಿಕ, ಪವಾಡ, ಶ್ರದ್ದಾ ಭಕ್ತಿಗೆ ಹೆಸರುವಾಸಿಯಾಗಿದ್ದ ಈ ಕ್ಷೇತ್ರ ಇದೀಗ ಅನಪೇಕ್ಷಿತ ಕಾರಣಗಳಿಗೆ ಕಳೆದ ಹಲವು ದಿನಗಳಿಂದ ಪ್ರಚಾರದಲ್ಲಿದೆ.

ಕೊಂಡಾಣ ಕ್ಷೇತ್ರ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದ್ದು, ಇದು ದ.ಕ ಜಿಲ್ಲೆಯ ಅತೀ ಕಾರಣಿಕ ದೈವ ಕ್ಷೇತ್ರಗಳಲ್ಲಿ ಒಂದು. ಎರಡು ರಾಜಕೀಯ ಪಕ್ಷಗಳ ಮೇಲಾಟದಿಂದ ಈ ಕ್ಷೇತ್ರದಲ್ಲಿ ಕಳೆದ ಕೆಲ ಸಮಯದಿಂದ ಹಲವು ಅಹಿತಕರ ಘಟನೆಗಳು ನಡೆದಿವೆ.

ಯಾತಕ್ಕಾಗಿ ವಿವಾದ ?
ಈ ಕ್ಷೇತದ ದೈವಗಳಿಗೆ ಸಂಬಂದಿಸಿದ ಮೂಲಭಂಡಾರದ ಮನೆಗೆ 700 ವರ್ಷಗಳ ಇತಿಹಾಸವಿದೆ. ಇದು ಖಾಸಗಿ ವ್ಯಕ್ತಿಗಳ ಒಡೆತನದಲ್ಲಿದೆ. ಅದರಲ್ಲಿ ಕ್ಷೇತ್ರದ ದೈವಗಳಿಗೆ ಸಂಬಂಧಿಸಿದ ಹದಿನೈದು ಕೋಟಿಗೂ ಮಿಕ್ಕಿ ಬೆಲೆ ಬಾಳುವ ಒಡವೆಗಳಿವೆ. . ಈ ಮೂಲ ಭಂಡಾರ ಮನೆಯನ್ನ ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಶತಾಯಗತಾಯ ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಭಂಡಾರದ ಮನೆಯವರು ಹಾಗೂ ಕ್ಷೇತ್ರದ ಗುರಿಕಾರರು ಸುತಾರಂ ಒಪ್ಪಿರಲಿಲ್ಲ.

ಈ ಹಿನ್ನಲೆಯಲ್ಲಿ ಕೃಷ್ಣ ಶೆಟ್ಟಿ ತಾಮಾರ್ ನೇತ್ರತ್ವದ ವ್ಯವಸ್ಥಾಪನ ಸಮಿತಿಯವರು ಕ್ಷೇತ್ರಕ್ಕೆ ತಾಗಿಕೊಂಡ ಜಮೀನನ್ನು ಕ್ಷೇತ್ರದ ಬಾಬ್ತು ಖರೀದಿಸಿ ಅದರಲ್ಲಿ ನೂತನ ಭಂಡಾರ ಮನೆ ನಿರ್ಮಾಣಕ್ಕೆ ಕಾಮಗಾರಿ ಆರಂಭಿಸಿದರು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಎಂಭತ್ತು ಶೇಕಡಾ ಕಾಮಗಾರಿ ಸಂಪೂರ್ಣಗೊಂಡಿತ್ತು.ಇದೆ ವೇಳೆ ಆ ವ್ಯವಸ್ಥಾಪನ ಸಮಿತಿಯ ಆಡಳಿತಾವಧಿ ಫೆ 29ಕ್ಕೆ ಮುಕ್ತಾಯಗೊಂಡಿತ್ತು. ಇದಾಗಿ ಎರಡು ದಿನ ಕಳೆಯುತ್ತಲೇ ಮಾ 3 ರಂದು ಯಾರೋ ಜೆಸಿಬಿಯಿಂದ ಏಕಾ ಏಕಿ ನಿರ್ಮಾಣ ಹಂತದ ಭಂಡಾರ ಮನೆಯನ್ನ ನೆಲಸಮ ಮಾಡಿದ್ದಾರೆ. ರಾಜಕೀಯ ಕಾರಣಗಳಿಂದ ಈ ವಿವಾದ ಉಗ್ರ ಸ್ವರೂಪ ಪಡೆದಿದೆ ಎನ್ನುವುದು ಇಲ್ಲಿನ ಭಕ್ತರ ಅಭಿಪ್ರಾಯ.
ಮೂಲ ಭಂಡಾರದ ಮನೆಯವರಿಂದಲೇ ನೂತನ ಮನೆ ಧ್ವಂಸ…!

ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನಕ್ಕೆ ಒಟ್ಟು 16 ಗುರಿಕಾರರು ಇದ್ದಾರೆ. ಇವರೆಲ್ಲರೂ ನೂತನ ಭಂಡಾರ ಮನೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಧಾರ್ಮಿಕ ದತ್ತಿ ಕಮಿಷನರ್ ಹಾಗೂ ತಹಶೀಲ್ದಾರ್ಗೆ ದೂರು ನೀಡಲಾಗಿತ್ತು. ಹೀಗಿದ್ದರೂ ನೂತನ ಭಂಡಾರದ ಮನೆಗೆ ಕಾಮಗಾರಿ ನಡೆಯುತ್ತಿದ್ದ ಕಾರಣ ಧ್ವಂಸಗೈದಿರುವುದಾಗಿ ಮೂಲ ಭಂಡಾರದ ಮನೆಯವರು ತಪ್ಪೊಪ್ಪಿಕೊಂಡಿದ್ದರು. ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಣ್ಣ ಶೆಟ್ಟಿ, ಧೀರಜ್ ಮತ್ತು ಶಿವರಾಜ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ದಿನದ ಬಳಿಕ ಅವರು ಜಾಮೀನಿನ ಮೆಲೆ ಬಿಡುಗಡೆ ಹೊಂದಿದ್ದರು.

ದೇವಸ್ಥಾನದ ಎಲ್ಲಾ 16 ಗುರಿಕಾರರ ಅನುಮತಿಯಿಲ್ಲದೆ ನಿರ್ಮಿಸಲಾಗುತ್ತಿರುವ ಅಕ್ರಮ ಭಂಡಾರ ಮನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಮಂಗಳೂರು ಸಹಾಯಕ ಕಮಿಷನರ್ ಮತ್ತು ತಹಶೀಲ್ದಾರ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ಮಂಗಳೂರು ಪೊಲೀಸ್ ಕಮೀಷನರ್ ಆಗರ್ವಾಲ್ ತಿಳಿಸಿದ್ದರು.

ಮೂಲ ಭಂಡಾರದ ಮನೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಸಂಪತ್ತು ಜಿಲ್ಲಾಡಳಿತದ ಸುಪರ್ಧಿಗೆ
ನೂತನ ಭಂಡಾರದ ಮನೆ ಧ್ವಂಸದ ಬಳಿಕ ಮೂಲ ಭಂಡಾರ ಮನೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಸಂಪತ್ತನ್ನು ಜಿಲ್ಲಾಡಳಿತ ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಪಿಲಿ ಚಾಮುಂಡಿ ದೈವದ ಮೊಗ ಹಾಗೂ ಆಭರಣ ಸಹಿತ ಹಳೆಯ ಭಂಡಾರದ ಮನೆಯ ಆಭರಣಗಳನ್ನು ಖಜಾನೆ ಸಮೇತ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಭಂಡಾರ ಮನೆಯ ನೆಲಮಾಳಿಗೆಯಲ್ಲಿದ್ದ ಕೋಟ್ಯಾಂತರ ಮೌಲ್ಯದ ಆಭರಣಗಳು, ಲಾಕರ್ ಒಳಗೆ ಭಧ್ರವಾಗಿದ್ದ ದೈವದ ಆಭರಣಗಳ ಖಜಾನೆಯ ಕೀ ಜಿಲ್ಲಾಧಿಕಾರಿಯ ಬಳಿಯೇ ಇತ್ತು. ಆದರೆ ವಿವಾದದ ಹಿನ್ನಲೆಯಲ್ಲಿ ಭಂಡಾರ ಮನೆಯ ಖಜಾನೆಯನ್ನೇ ಇದೀಗ ಜಿಲ್ಲಾಡಳಿತ ತೆಗೆದುಕೊಂಡು ಹೋಗಿದೆ.
ದರ್ಶನದ ವೇಳೆ ಭಕ್ತರಿಂದ ದೈವಕ್ಕೆ ದೂರು
ಮನೆ ಧ್ವಂಸ ಕೃತ್ಯ ನಡೆದ 8 ದಿನಗಳ ಬಳಿಕ ಮಾ 11 ರಂದು ಸೋಮವಾರ ಕೊಂಡಾಣ ಮೂಲ ಭಂಡಾರ ಮನೆಯಲ್ಲಿ ಹೂವಿನ ಪೂಜೆ ಜರುಗಿತ್ತು. ಇದರಲ್ಲಿ ಸಾವಿರಾರು ಭಕ್ತರು, ಗ್ರಾಮಸ್ಥರು ಪಾಲ್ಗೊಂಡರು. ಈ ಸಂದರ್ಭ ದೈವ ದರ್ಶನದ ವೇಳೆ ಪಿಲಿಚಾಮುಂಡಿ ಬಂಟ ದೈವಕ್ಕೆ ದೂರನ್ನಿತ್ತ ಭಕ್ತರು ವಿವಾದಕ್ಕೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಪ್ರಾರ್ಥಸಿದರು. ಅಲ್ಲದೇ ಕೊಂಡಾಣ ಕ್ಷೇತ್ರದ ಭಕ್ತರು ಈ ವಿವಾದಕ್ಕೆ ದೈವದ ಮುಂದೆ ಬೇಸರವನ್ನು ವ್ಯಕ್ತಪಡಿಸಿದರು.
.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು22 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ16 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized23 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















