Uncategorized
Big Breaking : Gas Lekeage : ಶಿರಾಡಿ ಘಾಟ್ : ಅಪಘಾತಗೊಂಡ ಗ್ಯಾಸ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ – ಮಧ್ಯರಾತ್ರಿಯವರೆಗೆ ಸಂಚಾರ ಬಂದ್ : ಹಾಸನ ಡಿಸಿ ಆದೇಶ
ಸಕಲೇಶಪುರ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿ ಗ್ಯಾಸ್ ತುಂಬಿದ ಟ್ಯಾಂಕರ್ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಈ ಘಾಟ್ ರಸ್ತೆಯಲ್ಲಿ ಇಂದು ( ಮಾ 13) ಮಧ್ಯರಾತ್ರಿಯವರೆಗೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿ ಹಾಸನ ಜಿಲ್ಲಾಧಿಕಾರಿ ನಿರ್ದೇಶಿಸಿದ್ದಾರೆ.
ಪಲ್ಟಿಯಾದ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಸನ ಡಿಸಿ ಸಿ ಸತ್ಯಭಾಮ ಈ ನಿರ್ದೇಶನ ನೀಡಿದ್ದಾರೆ. ಸಕಲೇಶಪುರ ಮೂಲಕ ಮಂಗಳೂರಿಗೆ ಹೋಗೋ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವಂತೆ ಸೂಚಿಸಿರುವ ಅವರು, ಬೆಂಗಳೂರಿನಿಂದ ಮಂಗಳೂರಿಗೆ ತೆರಳೋ ವಾಹನಗಳು ಹಾಸನ ಬೇಲೂರು, ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವಂತೆ ನಿರ್ದೇಶಿಸಿದ್ದಾರೆ. ಇನ್ನು ಮಂಗಳೂರಿನಿಂದ ಬೆಂಗಳೂರಿಗೆ ತೆರಳೋ ವಾಹನಗಳು ಸುಳ್ಯ, ಸಂಪಾಜೆ ಮಡಿಕೇರಿ ಮೂಲಕ ಸಂಚರಿಸಲು ನಿರ್ದೇಶನ ನೀಡಿ ಡಿಸಿ ಆದೇಶಿಸಿದ್ದಾರೆ ಸಕಲೇಶಪುರ ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಹೆದ್ದಾರಿಯ ತಿರುವಿನಲ್ಲಿ ಚಾಲಕನ ಹತೋಟಿ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್ ರಸ್ತೆಗೆ ಉರುಳುತ್ತಲೇ ಅದರಿಂದ ಅಪಾಯಕಾರಿ ಗ್ಯಾಸ್ ಸೋರಿಕೆಯಾಗಿದೆ. ಹೀಗಾಗಿ ಸುತ್ತ ಮುತ್ತಲಿನ ಪ್ರದೇಶದಲ್ಲಿ ಬೆಂಕಿ ಉರಿಸದಂತೆ ಹಾಗೂ ಬೆಂಕಿ ಕಡ್ಡಿ ಗೀರದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇನ್ನು ಇತ್ತ ಟ್ಯಾಂಕರ್ ಉರುಳಿ ಬಿದ್ದಿರುವುದರಿಂದ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಬಂದ್ ಆಗಿದೆ. ಃಇಗಾಗಿ ಘಾಟ್ ನಲ್ಲಿ ಕಿಮೀ ಗಟ್ಟಲೇ ವಾಹನಗಳು ರಸ್ತೆಯ ಎರಡು ಕಡೆಯೂ ನಿಂತಿದೆ.. ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ಧಾವಿಸಿದ್ದು, ಸೂಕ್ತ ಬಂದೋ ಬಸ್ತು, ಸಂಚಾರ ನಿಯಂತ್ರಣ ಹಾಗು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. . ಮಂಗಳೂರಿನ ಎಮ್. ಆರ್. ಪಿ. ಎಲ್ ನಿಂದ ತಜ್ಞರ ತಂಡ ಆಗಮಿಸಿದ್ದು, ಗ್ಯಾಸ್ ಸೋರಿಕೆ ನಿಲ್ಲಿಸಿ ರಸ್ತೆ ಸಂಚಾರಕ್ಕೇ ಮುಕ್ತಗೊಳಿಸಲು ಹರ ಸಾಹಸ ಪಡುತ್ತಿದ್ದಾರೆ
ಬದಲಿ ಮಾರ್ಗ
ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು22 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ16 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized23 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















