ರಾಜಕೀಯ
Ashok Rai-ಹಲವು ವರ್ಷಗಳಿಂದ ಇದ್ದ ರಸ್ತೆ ವಿವಾದ ಇತ್ಯರ್ಥಪಡಿಸಿದ ಪುತ್ತೂರು ಶಾಸಕ ಅಶೋಕ್ ರೈ 50 ಲಕ್ಷ ಅನುದಾನ – ಹೊಸ ರಸ್ತೆಗೆ ಶಿಲಾನ್ಯಾಸ
ಪುತ್ತೂರು: ಪುಣಚ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ತೆರಳುವ ರಸ್ತೆ ವಿವಾದಕ್ಕೆ ಅನೇಕ ವರ್ಷಗಳ ಬಳಿಕ ತೆರೆ ಎಳೆಯಲಾಗಿದ್ದು ಪುತ್ತೂರು ಶಾಸಕರಾದ ಅಶೋಕ್ರೈ ಯವರ ಸಂಧಾನ ಮಾತುಕತೆ ಸಫಲವಾಗಿದೆ. ಈ ರಸ್ತೆಗೆ 50 ಲಕ್ಷ ರೂ ಅನುದಾನವನ್ನು ಒದಗಿಸಿ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು.
ದೇವಸ್ಥಾನಕ್ಕೆ ತೆರಳುವ ಪ್ರಮುಖ ಪ್ರವೇಶದ್ವಾರದ ಬಳಿ ಜಾಗದ ತಕರಾರು ಇರುವ ಕಾರಣ ರಸ್ತೆ ಅಭಿವೃದ್ದಿಗೆ ಅಡ್ಡಿಯಾಗಿತ್ತು. ಜಾಗದ ಮಾಲಕರಾದ ಸದಾನಂದ ಎಂಬವರನ್ನು ಕರೆಸಿ ಮಾತುಕತೆ ನಡೆಸಿದ ಶಾಸಕರು ದೇವಸ್ಥಾನದ ರಸ್ತೆ ಅಭಿವೃದ್ದಿಗೆ ಸಹಕಾರ ಮಾಡುವಂತೆ ಮತ್ತು ಈ ಹಿಂದೆ ಇದೇ ವಿಚಾರದಲ್ಲಿ ಮಾಡಲಾಗಿರುವ ಕೇಸುಗಳನ್ನು ಹಿಂಪಡೆದು ಭಕ್ತರಿಗೆ ನೆರವಾಗಲು ರಸ್ತೆ ವಿವಾದವನ್ನು ಇತ್ಯರ್ಥ ಪಡಿಸಬೇಕು ಮತ್ತು ಈ ವಿಚಾರದಲ್ಲಿ ಸಹಕಾರ ನೀಡುವಂತೆ ಶಾಸಕರು ಕೇಳಿಕೊಂಡಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಜಾಗದ ಮಾಲಿಕ ಸದಾನಂದರವರು ಪುತ್ತೂರು ಶಾಸಕರು ಹೇಳುವುದಾದರೆ ನಾನು ಏನು ಮಾಡಲು ಬೇಕಾದರೂ ಸಿದ್ಧ ಎಂದು ಹೇಳಿ ಅನೇಕ ವರ್ಷಗಳಿಂದ ತಕರಾರಿನಿಂದ ಬಾಕಿಯಾಗಿದ್ದ ರಸ್ತೆ ಕಾಮಗಾರಿಗೆ ಚಾಲನೆ ಸಿಕ್ಕಂತಾಗಿದೆ.
ಪುಣಚ ಗ್ರಾಮಕ್ಕೆ ಒಟ್ಟು 1.95 ಕೋಟಿ ರೂ ಕಾಮಗಾರಿಗೆ ಶಾಸಕರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು ದೇವಸ್ಥಾನದ ರಸ್ತೆ ಅಭಿವೃದ್ದಿಯಾಗದೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ವಿವಾದ ಇತ್ಯರ್ಥಪಡಿಸಿ ರಸ್ತೆ ಅಭಿವೃದ್ಧಿಗೂ ಅನುದಾನ ಇರಿಸಿದ್ದೇನೆ, ಅದೇ ರೀತಿ ಪುಣಚ ಗ್ರಾಮದ ವಿವಿಧ ವಾರ್ಡುಗಳ ರಸ್ತೆಗೂ ಅನುದಾನವನ್ನು ನೀಡಿದ್ದೇನೆ ಎಂದು ಹೇಳಿದ ಶಾಸಕರು ಗ್ಯಾರಂಟಿ ಯೋಜನೆ ಹೇಗೆ ಜನರ ಮನೆ ಮನೆಗೆ ತಲುಪಿದೆಯೋ ಅದೇ ರೀತಿ ಅಭಿವೃದ್ದಿ ಕೆಲಸಗಳು ಪ್ರತೀ ಗ್ರಾಮಗಳಿಗೂ ತಲುಪಿದೆ ಎಂದು ಹೇಳಿದರು.
ದೇವಳದ ರಸ್ತೆಗೆ ಮೊದಲ ಬಾರಿಗೆ ಹಣ ಇಟ್ಟದ್ದು ನಾನು: ಎಂ. ಎಸ್. ಮಹಮ್ಮದ್
ನಾನು ಜಿಪಂ ಉಪಾಧ್ಯಕ್ಷನಾಗಿದ್ದ ವೇಳೆ ಈ ದೇವಳದ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಇಟ್ಟಿದ್ದೆ ಆ ಬಳಿಕ ಇಲ್ಲಿಗೆ ಯಾರೂ ಅನುದಾನವನ್ನು ನೀಡಿಲ್ಲ. ಅನುದಾನ ಕೊಟ್ಟ ನನ್ನನ್ನು ದೇವಳದ ವತಿಯಿಂದ ಸನ್ಮಾನವನ್ನು ಮಾಡಿದ್ದರು. ಇದೀಗ ಈ ರಸ್ತೆ ಸಂಪೂರ್ಣ ದುರಸ್ಥಿಯಾಗಲಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದರು.ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟ ಸದಾನಂದ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಎಂ. ಎಸ್. ಮಹಮ್ಮದ್ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾಟ. ರಾಜಾರಾಂ ಕೆ.ಬಿ, ಡಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಕಾರ್ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಪರಿಯಾಲ್ತಡ್ಕ ಶಾಲಾ ನಿವೃತ್ತ ಮುಖ್ಯ ಗುರು ಹರ್ಷಶಾಸ್ತ್ರಿ ಮಣಿಲ, ರಮಾನಾಥ್ ವಿಟ್ಲ, ರಶೀದ್ ವಿಟ್ಲ, ನವೀನ್ ರೈ ಚೆಲ್ಯಡ್ಕ, ಅಶ್ರಫ್, ರೈತ ಸೇನಾ ಮುಖಂಡ ಶ್ರೀಧರ ಶೆಟ್ಟಿ ಬೈಲುಗುತ್ತು, ವಲಯ ಕಾರ್ಯದರ್ಶಿ ಮಹಮ್ಮದ್ ಸಿರಾಜ್ ಮನಿಲ, ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಸದಸ್ಯರಾದ ಲಲಿತಾ, ಗಿರಿಜ, ಹರೀಶ್, ಪ್ರಮುಖರಾದ ಪ್ರತಿಭಾ ಶ್ರೀಧರ್ ಶೆಟ್ಟಿ, ರಾಜೇಂದ್ರ ರೈ ಬೈಲುಗುತ್ತು, ನಾರಾಯಣ ಪೂಜಾರಿ ನೀರುಮಜಲು, ಜಯರಾಂ ಶಾಸ್ತ್ರಿ ಮಣಿಲ, ನಾರಾಯಣ ನಾಯ್ಕ, ಅಲ್ಬರ್ಟ್ ಡಿಸೋಜಾ, ಕ್ಷೇವಿಯರ್ ಡಿಸೋಜಾ, ವೆಂಕಪ್ಪ ಗೌಡ ಅಜೇರು ಮಜಲು, ಕುಂಞಣ್ಣ ರೈ, ಸೀತಾರಾಮ ಪಟಿಕಲ್ಲು, ಮಹಾಲಿಂಗ ನಾಯ್ಕ, ಕರೀಂ ಕುದ್ದುಪದವು, ಮೌರಿಸ್ಟೆಲ್ಲಿಸ್, ದಿವಾಕರ ತೋರಣಕಟ್ಟೆ, ಮೋಹನ ಎಚ್, ಶಿವರಾಮ ನಾಯ್ಕ ಪಾವಳುಮೂಲೆ, ಪೂವಪ್ಪ ಎರ್ಮೆತೊಟ್ಟಿ, ಗೋವಿಂದ ನಾಯ್ಕ ಆಜೇರು, ಹಮೀದ್ ಎಂ.ಎಸ್, ಇಸ್ಮಾಯಿಲ್ ಪಾಲಸ್ತಡ್ಕ, ಮುಸ್ತಫ ಗರಡಿ, ಅಬ್ದುಲ್ಲ ಕೆಪಿ, ವಾಮನ ನಾಯ್ಕ, ಹರೀಶ್ ಕುಮಾರ್ ಆಜೇರುಮಜಲು, ಶರೀಫ್ ಕೊಲ್ಲಪದವು, ರಮೇಶ್ ದಂಬೆ, ಶ್ರೀನಿವಾಸ ನಾರ್ಣಡ್ಕ ಸೇರಿದಂತೆ ಹಲವು ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪುಣಚ ವಲಯಾಧ್ಯಕ್ಷ ಬಾಲಕೃಷ್ಣ ಪೂಜಾರಿ ಹಿತ್ತಿಲು ಸ್ವಾಗತಿಸಿ, ವಂದಿಸಿದರು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು22 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ16 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized23 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















