ರಾಜಕೀಯ
Sadananda Gowda | ಟಿಕೇಟ್ ಘೋಷಣೆಗೆ ಕೆಲವೇ ಕ್ಷಣಗಳ ಮೊದಲು ‘ಧನ್ಯವಾದ’ ಸಮರ್ಪಿಸಿದ ಅದೃಷ್ಟ ರಾಜಕಾರಣಿ ಡಿವಿ ಸದಾನಂದ ಗೌಡ
ಬೆಂಗಳೂರು: ಬಿಜೆಪಿ ಟಿಕೇಟ್ ಘೋಷಣೆಗೆ ಕೆಲವೇ ಕ್ಷಣಗಳ ಮೊದಲು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (Sadananda Gowda) ‘ಧನ್ಯವಾದ’ ಸಮರ್ಪಿಸಿ ಚರ್ಚೆಗೆ ಗ್ರಾಸವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಡಿವಿಎಸ್ ,
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,
ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ
ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು .
ಇಂತಿ ನಿಮ್ಮವನೇ ಆದ
ಡಿ.ವಿ. ಸದಾನಂದ ಗೌಡ
ಎಂದು ಪೋಸ್ಟನ್ನು ಹಾಕಿದ್ದು, ಅದೃಷ್ಟ ರಾಜಕಾರಣಿ ಡಿವಿ ಸದಾನಂದ ಗೌಡ ತನ್ನ ರಾಜಕೀಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ ಎಂದು ಚರ್ಚೆ ಪ್ರಾರಂಭವಾಗಿದೆ.
ಅಂತರ ರಾಜ್ಯ
Controversial statement-“ಅಮೆರಿಕ–ಪಾಕ್ ಯುದ್ಧ ನಡೆದರೆ ಪಾಕಿಸ್ತಾನದ ಪರ ನಿಲ್ಲುತ್ತೇವೆ” – ರಾಜಸ್ಥಾನ ಬಿಜೆಪಿ ಅಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ..!
ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.
ಹೊಸದಿಲ್ಲಿ: ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.
ಗುರುವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮದನ್ ರಾಥೋರ್, “ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಯ ರಾಷ್ಟ್ರವಾಗಿರುವುದರಿಂದ ನಾವು ಅದರ ಪರವಾಗಿ ನಿಲ್ಲುತ್ತೇವೆ. ಆದರೆ, ನಮ್ಮ ಆಂತರಿಕ ವಿಷಯಗಳ ವಿಚಾರದಲ್ಲಿ ಭಾರತದ ಪರವಾಗಿ ನಿಲ್ಲುತ್ತೇವೆ. ಈ ವ್ಯತ್ಯಾಸವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.
ಕಾಂಗ್ರೆಸ್ನಿಂದ ತೀವ್ರ ಖಂಡನೆ
ರಾಥೋರ್ ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್, ಇದನ್ನು ರಾಷ್ಟ್ರವಿರೋಧಿ ಹೇಳಿಕೆ ಎಂದು ಟೀಕಿಸಿದ್ದಾರೆ. ಭಾರತದ ಸೈನಿಕರು ಮತ್ತು ನಾಗರಿಕರ ಸಾವಿಗೆ ಕಾರಣವಾಗುವ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ನಾಯಕನ ಹೇಳಿಕೆಗೆ ಪಕ್ಷದ ವರಿಷ್ಠರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
“ಪಾಕಿಸ್ತಾನದ ಪರವಾಗಿ ನಿಲ್ಲುವುದಾಗಿ ರಾಜಸ್ಥಾನ ಬಿಜೆಪಿ ಅಧ್ಯಕ್ಷರು ಹೇಳಿರುವುದು ಬಿಜೆಪಿಯ ನಿಲುವಿನ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದೇ ಅಭಿಪ್ರಾಯ ಹೊಂದಿದ್ದಾರೆಯೇ? ಇಲ್ಲದಿದ್ದರೆ, ಈ ಹೇಳಿಕೆ ನೀಡಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಶಮಾ ಮೊಹಮ್ಮದ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಸಂದೀಪ್ ಗುಪ್ತಾ ಕೂಡ ರಾಥೋರ್ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ. ಈ ಹೇಳಿಕೆಯು ಪಾಕಿಸ್ತಾನದ ಬಗ್ಗೆ ಬಿಜೆಪಿಗಿರುವ ಒಲವನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿರುವ ಅವರು, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ–ಪಾಕಿಸ್ತಾನ ಒಂದೇ ಡಿಎನ್ಎ: ಎಎಪಿ ಟೀಕೆ
ಈ ವಿವಾದಕ್ಕೆ ಆಮ್ ಆದ್ಮಿ ಪಕ್ಷದ ನಾಯಕರೂ ಧ್ವನಿಗೂಡಿಸಿದ್ದಾರೆ. ದಿಲ್ಲಿ ಎಎಪಿ ಘಟಕದೊಂದಿಗೆ ಗುರುತಿಸಿಕೊಂಡಿರುವ ಯುವ ಘಟಕದ ರಾಜ್ಯಾಧ್ಯಕ್ಷ ರಮೇಶ್ ಮಟಿಯಾಲ ಹಾಗೂ ಎಎಪಿ ನಾಯಕ ವಿನಯ್ ಮಹಾಬಲ್ ಮಿಶ್ರಾ ಅವರು ರಾಥೋರ್ ಅವರ ಭಾಷಣದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇದೇ ವೇಳೆ, ಬಿಜೆಪಿ ಮತ್ತು ಪಾಕಿಸ್ತಾನದ ನಡುವೆ ಸೈದ್ಧಾಂತಿಕ ಸಾಮ್ಯತೆಯಿದೆ ಎಂದು ಆರೋಪಿಸಿರುವ ಎಎಪಿ ಉತ್ತರ ಪ್ರದೇಶ ಘಟಕದ ಉಪಾಧ್ಯಕ್ಷ ರಾಮ್ ಗುಪ್ತಾ, ರಾಥೋರ್ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.
“ಇನ್ನೂ ಯಾರಿಗಾದರೂ ಅನುಮಾನವಿದೆಯೇ? ಬಿಜೆಪಿ ಮತ್ತು ಪಾಕಿಸ್ತಾನ ಎರಡೂ ಒಂದೇ ಡಿಎನ್ಎ ಹೊಂದಿವೆ. ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ನಾವು ಪಾಕಿಸ್ತಾನದ ಪರವಾಗಿ ನಿಲ್ಲುತ್ತೇವೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ಹೇಳಿದ್ದಾರೆ” ಎಂದು ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ರಾಥೋರ್ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತು ಎಎಪಿ ನಾಯಕರು ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದು, ಈ ವಿಚಾರ ರಾಜಕೀಯ ವಲಯದಲ್ಲಿ ವಾಗ್ವಾದಕ್ಕೆ ಕಾರಣವಾಗಿದೆ.
ರಾಜಕೀಯ
Sting operation case-ಸ್ಟಿಂಗ್ ಆಪರೇಷನ್ ಕೇಸ್ : ಎಸ್ಐಟಿ ಅಥವಾ ಸಿಐಡಿ? ಸಚಿವ ಸಂಪುಟದಲ್ಲಿ ಏನು ನಿರ್ಧಾರ ಆಯಿತು ?
ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಬೇಕೇ? ನಡೆಸುವುದಾದರೆ ಯಾವ ತನಿಖಾ ಸಂಸ್ಥೆಗೆ ವಹಿಸಬೇಕು? ಎಂಬ ವಿಚಾರ ಸಂಪುಟ ಸಭೆಯಲ್ಲಿ ಮತ್ತೆ ಪ್ರಸ್ತಾಪವಾಗಿದೆ. ಆದರೆ, ತನಿಖೆಯ ಸ್ವರೂಪದ ಕುರಿತು ಸಚಿವರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರು, ಅ. 15: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಬೇಕೇ? ನಡೆಸುವುದಾದರೆ ಯಾವ ತನಿಖಾ ಸಂಸ್ಥೆಗೆ ವಹಿಸಬೇಕು? ಎಂಬ ವಿಚಾರ ಸಂಪುಟ ಸಭೆಯಲ್ಲಿ ಮತ್ತೆ ಪ್ರಸ್ತಾಪವಾಗಿದೆ. ಆದರೆ, ತನಿಖೆಯ ಸ್ವರೂಪದ ಕುರಿತು ಸಚಿವರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲಾಗಿದೆ ಎಂದು ವರದಿಯಾಗಿದೆ.
ಸಭೆಯ ಆರಂಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸಂಪುಟದ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವುದು ಸೂಕ್ತ ಎಂದು ಕೆಲವು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಇನ್ನು ಕೆಲವು ಸಚಿವರು ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎನ್ನಲಾಗಿದೆ.
ಎಸ್ಐಟಿ ರಚನೆಯಾಗುತ್ತಾ? ಸಿಐಡಿ ತನಿಖೆಯಾಗುತ್ತಾ?
ಪ್ರಕರಣದ ತನಿಖೆಗೆ ಹಿರಿಯ ಹಾಗೂ ಸಮರ್ಥ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೇ ಅಥವಾ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವಹಿಸಬೇಕೇ ಎಂಬ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ, ತನಿಖೆ ನಡೆಸುವ ಅಗತ್ಯ ಮತ್ತು ಅದರ ಸ್ವರೂಪದ ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.
ಸಚಿವರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೆ ಬಿಡಲಾಗಿದೆ ಎಂದು ತಿಳಿದುಬಂದಿದೆ.
ಸಂಪುಟ ಸಭೆಯ ಬಳಿಕ ಮಾತನಾಡಿದ ಕೆಲವು ಸಚಿವರು, ಈ ವಿಷಯ ಚರ್ಚೆಯಾಗಿಲ್ಲ ಎಂದು ಹೇಳಿದರೆ, ಇನ್ನು ಕೆಲವರು ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಮುಕ್ತ ಮತ್ತು ಪಾರದರ್ಶಕ ತನಿಖೆಗೆ ಒತ್ತು
ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಗತ್ಯವಿದ್ದರೆ ಪ್ರಕರಣದ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
“ಪ್ರಕರಣ ನಡೆದು ಈಗಷ್ಟೇ ಎರಡು ದಿನಗಳಾಗಿವೆ. 48 ಗಂಟೆಗಳಲ್ಲಿ ಮಾಡಬೇಕಾದ ಕೆಲಸಗಳನ್ನೆಲ್ಲ ಮಾಡಿದ್ದೇವೆ. ತನಿಖೆ ಮುಕ್ತ ಮತ್ತು ಪಾರದರ್ಶಕವಾಗಿರಬೇಕು ಎಂಬುದು ನಮ್ಮ ಆಶಯ. ಸಿದ್ದರಾಮಯ್ಯ ಅವರ ಘನತೆಗಿಂತ ಹೆಚ್ಚಿನದು ಯಾವುದೂ ಇಲ್ಲ” ಎಂದು ಅವರು ತಿಳಿಸಿದ್ದಾರೆ.
ಒಟ್ಟಿನಲ್ಲಿ, ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗುತ್ತದೆಯೇ ಅಥವಾ ಸಿಐಡಿಗೆ ಒಪ್ಪಿಸಲಾಗುತ್ತದೆಯೇ ಎಂಬ ಕುತೂಹಲ ಮುಂದುವರಿದಿದ್ದು, ಮುಖ್ಯಮಂತ್ರಿ ಅವರ ಮುಂದಿನ ನಿರ್ಧಾರದತ್ತ ರಾಜಕೀಯ ವಲಯ ಗಮನ ಹರಿಸಿದೆ.
ರಾಜಕೀಯ
H.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮೊದಲ ಆಡಳಿತಾವಧಿಯಲ್ಲಿ ಕೃಪಾ ಆಳ್ವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು ಎಂದು ಹೇಳಿದರು. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಗೃಹ ಸಚಿವರ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಅಧಿಕಾರ ಇದೆ ಎಂಬ ಕಾರಣಕ್ಕೆ ಏನು ಬೇಕಾದರೂ ಮಾಡಬಹುದೇ ಎಂದು ಪ್ರಶ್ನಿಸಿದರು. “ಗೃಹ ಇಲಾಖೆ ನಿಮ್ಮಪ್ಪನದ್ದಾ? ನನ್ನ ಕಾರ್ಯಕರ್ತರನ್ನು ಬಂಧಿಸುತ್ತೀರಾ? ನಾನೇ ನಿಮ್ಮ ಕಚೇರಿಗೆ ಬರುತ್ತೇನೆ. ತಾಕತ್ತಿದ್ದರೆ ನನ್ನನ್ನೇ ಬಂಧಿಸಿ ನೋಡೋಣ” ಎಂದು ಸವಾಲು ಹಾಕಿದರು.
ತಮ್ಮ ಮೇಲೆ ಅನುಮಾನ ಬಂದರೆ ಬಂಧಿಸುವುದಾಗಿ ಹೇಳುವವರು, ಮುಖ್ಯಮಂತ್ರಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಗ್ಗೆ ಏಕೆ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಯನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ತಮ್ಮ ಪುತ್ರನ ಪೋಸ್ಟರ್ ಅಂಟಿಸಿದ ಘಟನೆ ಉಲ್ಲೇಖಿಸಿದ ಕುಮಾರಸ್ವಾಮಿ, ಈ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಹೆದರಿಕೆ, ಬೆದರಿಕೆಗಳಿಗೆ ತಾವು ಬಗ್ಗುವುದಿಲ್ಲ. ಬೇಕಾದರೆ ಕಮಿಷನರ್ ಕಚೇರಿಗೆ ಬರುತ್ತೇನೆ, ಬಂಧಿಸಿ ಎಂದು ಸವಾಲು ಹಾಕಿದರು.
ಜೆ.ಪಿ. ನಗರದ ಮನೆಯಲ್ಲಿ ತಾವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಇಟ್ಟುಕೊಂಡಿದ್ದೇವೆಯೇ ಎಂದು ಪ್ರಶ್ನಿಸಿದ ಅವರು, ಅಧಿಕಾರವನ್ನು ನ್ಯಾಯಯುತವಾಗಿ ಬಳಸಬೇಕು ಎಂದರು. ಸ್ಟಿಂಗ್ ಆಪರೇಷನ್ ನಡೆಸಿದವರನ್ನು ಏಕೆ ಬಂಧಿಸಿಲ್ಲ? ಪೊಲೀಸ್ ಅಧಿಕಾರಿಯನ್ನು ಕೊಲೆ ಮಾಡುವುದಾಗಿ ಹೇಳಿದ ವ್ಯಕ್ತಿಯ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ಇದೇ ವೇಳೆ, ತಾವು ಬಳಸಿದ ಪದಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ತಾವು ಈ ಮಟ್ಟದ ಪದಗಳನ್ನು ಬಳಸಿರಲಿಲ್ಲ. ಆದರೆ, ಮತ್ತೊಬ್ಬರು ಬಳಸಿದ ಪದಗಳಿಂದ ಆಕ್ರೋಶಗೊಂಡು ಪ್ರತಿಕ್ರಿಯಿಸಿದ್ದೇನೆ. ಇದಕ್ಕಾಗಿ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ನಿಧನ ವಾರ್ತೆ14 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಅಂತರ ರಾಜ್ಯ14 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಸ್ಥಳೀಯ8 hours agoKadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!
-
ಅಂತರ ರಾಜ್ಯ12 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಕಾರ್ಯಕ್ರಮಗಳು12 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ಅಪರಾಧ13 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ13 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?


















