Connect with us

ರಾಜಕೀಯ

Yaduveer Wadiyar : ಬಿಜೆಪಿ ಟಿಕೆಟ್ ಪಡೆದ ಒಡೆಯರ್ʼಗೆ ಸಿದ್ದು ಶಾಕ್ ; ಬೆಂಗಳೂರು ಅರಮನೆ ಮೈದಾನ ವ್ಯಾಜ್ಯ ರೀ ಓಪನ್

Published

on

Ad Widget

Ad Widget

Ad Widget

Ad Widget

ಬೆಂಗಳೂರಿನ ಅರಮನೆ ಮೈದಾನದ (ಮೈಸೂರು ಅರಸರ ಕುಟುಂಬದ ಸುಪರ್ದಿಯಲ್ಲಿರುವ ಜಾಗ) ಜಾಗದ ವ್ಯಾಜ್ಯ ಬಹಳ ಕಾಲದಿಂದ ಸುಪ್ರೀಂಕೋರ್ಟ್ನಲ್ಲಿ ವಿಚಾರಣಾ ಹಂತದಲ್ಲಿದ್ದು, ಚುನಾವಣಾ ಹೊಸ್ತಿಲಲ್ಲಿ ಇದಕ್ಕೆ ಮರು ಜೀವ ಕೊಡುವ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಯದುವೀರ್ ಒಡೆಯರ್ಗೆ ಘೋಷಣೆ ಆದ ಮರು ದಿನವೇ ಈ ಪ್ರಕರಣದ ಬಗ್ಗೆ ರಾಜ್ಯ ಸರಕಾರ ವಿಶೇಷ ಆಸಕ್ತಿ ವಹಿಸಿರುವುದು ಕುತೂಹಲ ಸೃಷ್ಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ನಾಲ್ಕು ಪಾಲು ಇದೆ. ಅವರ ಸಹೋದರಿಯರಿಗೆ ತಲಾ 28 ಎಕರೆ ಸೇರಿದೆ. ಓರ್ವ ಸಹೋದರಿಯ ಪುತ್ರರಾಗಿರುವ ಯದುವೀರ್ಗೆ ಇನ್ನೂ ನೇರ ಹಕ್ಕು ಬಂದಿಲ್ಲ. ಅಲ್ಲದೆ ಪಾಲು ಹಂಚಿಕೆ ವಿಚಾರದಲ್ಲಿ ಶ್ರೀಕಂಠದತ್ತ ಒಡೆಯರ್ ವಿರುದ್ಧ ಅವರ ಸಹೋದರಿಯರು ಹೂಡಿರುವ ಪ್ರತ್ಯೇಕ ಪ್ರಕರಣ ನ್ಯಾಯಾಲಯದಲ್ಲಿದೆ. ಇಷ್ಟರ ಹೊರತಾಗಿ ಇಡೀ ಜಾಗ ಸರ್ಕಾರ ವಶಕ್ಕೆ ಪಡೆಯಲು ಕಾನೂನು ಮಾಡಿದ್ದು, ರಾಜ್ಯ ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಸರ್ಕಾರದ ಪರ ತೀರ್ಪು ಬಂದಿದೆ. ಬಳಿಕ ಒಡೆಯರ್ ಕುಟುಂಬ ಸುಪ್ರಿಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದ ಬಳಿಕ ಸುಪ್ರಿಂಕೋರ್ಟ್ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದೆ. ಹೀಗಾಗಿ ಒಡೆಯರ್ ಕುಟುಂಬದ ಹಿಡಿತದಲ್ಲೇ ಆ ಜಾಗ ಇದೆ.

Ad Widget

Ad Widget alt="Ad Widget"/>

Ad Widget

ಆ ಜಾಗವನ್ನು ಸರ್ಕಾರದ ತೆಕ್ಕೆಗೆ ತೆಗೆದುಕೊಳ್ಳುವ ಕುರಿತು ಬಲವಾದ ವಾದ ಮಂಡಿಸಲು ಪ್ರಬಲ ವಕೀಲರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಉತ್ತಮ ವಕೀಲ ರನ್ನು ನಿಯೋಜಿಸಿ ಮೂಲ ದಾವೆಯನ್ನು ಇತ್ಯರ್ಥಪಡಿಸಿ. ಇಷ್ಟು ವರ್ಷಗಳಾದರೂ ದಾವೆ ಯಥಾಸ್ಥಿತಿಯಲ್ಲಿದೆ ಎಂದರೆ ಅದಕ್ಕೆ ನಿಮ್ಮ ನಿರ್ಲಕ್ಷ್ಯ ಕಾರಣವಲ್ಲವೇ?’ ಎಂದು ಕಿಡಿಕಾರಿದರು.

Ad Widget

Ad Widget <> Ad Widget

ಅರಮನೆ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳಲು 1996ರಲ್ಲಿ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗಲೇ ವಿಧೇ ಯಕ ಮಂಡಿಸಿ ಅಂಗೀಕಾರ ಪಡೆದು ಕಾಯ್ದೆ ಮಾಡಲಾಗಿದೆ. ಜಾಗವನ್ನು ಸಾರ್ವಜನಿಕಬಳಕೆಗೆ ಉದ್ದೇಶಿಸಲಾಗಿತ್ತು. ರಾಜಮನೆತನ ದವರು ಹೈಕೋರ್ಟ್ಗೆ ಹೋಗಿದ್ದರೂ ಹೈಕೋರ್ಟ್ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಈ ಬಗ್ಗೆ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಹೋಗಿದ್ದರು. ಸುಪ್ರೀಂ ಯಥಾಸ್ಥಿತಿ ಇರುವಂತೆ ನೀಡಿದ್ದ ಆದೇಶ ಇನ್ನು ಇದೆ ಎಂದರೆ ಏನರ್ಥ’ ಎಂದು ಅವರು ಪ್ರಶ್ನಿಸಿದರು.

ಪ್ರಕರಣದ ವಿವರ :
ರಾಜ್ಯ ಸರ್ಕಾರವು 1996ರಲ್ಲಿ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಕಾಯಿದೆ -1996ರ ಅಡಿ ಒಟ್ಟು 472.16 ಎಕರೆ ವಿಸ್ತೀರ್ಣದ ಬೆಂಗಳೂರು ಅರಮನೆ (ರಾಜ್ಮಹಲ್ ವಿಲಾಸ್) ಜಾಗವನ್ನು ನಿಗದಿತ ಪರಿಹಾರ ನೀಡಿ ಸ್ವಾಧೀನಪಡಿಸಿಕೊಳ್ಳಲು ಕಾಯಿದೆ ಮಾಡಿತ್ತು. ಕಾಯಿದೆಯನ್ನು 1996ರ ನವೆಂಬರ್ 21ರಿಂದ ಅನ್ವಯ ವಾಗುವಂತೆ ಅನುಷ್ಠಾನಗೊಳಿಸಿತ್ತು.

Ad Widget

Ad Widget

ಇದನ್ನು ಪ್ರಶ್ನಿಸಿ ಶ್ರೀಕಂಠದತ್ತ ನರಸಿಂಹರಾಜ್ ಒಡೆ ಯರ್ ಹೈಕೋರ್ಟ್ ಮೆಟ್ಟಿಲೇರಿದ್ದರು.ಆದರೆಹೈಕೋರ್ಟ್ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಇದರ ವಿರುದ್ಧ ಸುಪ್ರೀಂ ಮೊರೆ ಹೋದ ಅವರು, ಆಸ್ತಿಯಲ್ಲಿ ತಮ್ಮ ಸಹೋದರಿಯರಿಗೂ ಪಾಲು ಈಗಾಗಲೇ ನೀಡಿರುವು ದಾಗಿ ಹೇಳಿ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹಾ ಗೂ ಯಾವುದೇ ಶಾಶ್ವತ ಕಟ್ಟಡಗಳನ್ನು ನಿರ್ಮಾಣ ಮಾಡ ದಂತೆ ಆದೇಶಿಸಿದೆ. ಈ ದಾವೆಯ ಅಂತಿಮ ತೀರ್ಪು ಯಾರ ಪರ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

Ad Widget

ಅಂತರ ರಾಜ್ಯ

Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!

Published

on

Ad Widget

Ad Widget

Ad Widget

Ad Widget

ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget alt="Ad Widget"/>

Ad Widget

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.

Ad Widget

Ad Widget <> Ad Widget

ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.

Ad Widget

Ad Widget

ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.

ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.

ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.

ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.

ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.

ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.

ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

Ad Widget
Continue Reading

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!