ಅಂತರ ರಾಜ್ಯ
Rahul Gandhi-ದೇಶದ್ಯಾಂತ ರೈತರ ಸಾಲ ಮನ್ನಾ: ಹೊಸ ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ
ನಾಸಿಕ್: ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡಲಾಗುವುದು. ರೈತರ ರಕ್ಷಣೆಗೆ ಕಾಯ್ದೆ ರೂಪಿಸಲಾಗುವುದು ಹಾಗೂ ಜಿಎಸ್ಟಿ ವ್ಯಾಪ್ತಿಯಿಂದ ಕೃಷಿಯನ್ನು ಹೊರತರಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಸ್ತ್ರೀಯರಿಗೆ ವರ್ಷಕ್ಕೆ 1 ಲಕ್ಷ ರೂ ನೀಡುವುದೂ ಸೇರಿದಂತೆ 5 ಗ್ಯಾರಂಟಿಗಳನ್ನು ಘೋಷಿಸಿದ ಮರುದಿನವೇ ರೈತಸಮುದಾಯಕ್ಕೆ ಮತ್ತಷ್ಟು ಗ್ಯಾರಂಟಿ ರೂಪದ ಭರವಸೆಗಳನ್ನು ನೀಡಿದ್ದಾರೆ.
ಭಾರತ್ ಜೋಡೋ ನ್ಯಾಯ ಯಾತ್ರೆಯ ಅಂಗವಾಗಿ ಗುರುವಾರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಚಂದವಾಡದಲ್ಲಿ ರೈತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇಂಡಿಯಾ ಮೈತ್ರಿಕೂಟದ ಸರ್ಕಾರವು ರೈತ ಸಮುದಾಯದ ಧ್ವನಿಯಾಗಲಿದೆ. ರೈತರ ರಕ್ಷಣೆಗಾಗಿ ನಾವು ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಮತ್ತು ಕೃಷಿಯನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿರಿಸುತ್ತೇವೆ. ಹಾಗೆಯೇ, ಬೆಳೆ ವಿಮೆ ಯೋಜನೆಯ ಸ್ವರೂಪವನ್ನು ಬದಲಾಯಿಸುತ್ತೇವೆ’ ಎಂದರು.
‘ರೈತರಿಗಾಗಿ ನಮ್ಮ ಸರ್ಕಾರದ ಬಾಗಿಲು ಯಾವಾಗಲೂ ತೆರೆದಿರುತ್ತದೆ. ಅವರ ಸಾಲವನ್ನು ಮನ್ನಾ ಮಾಡುತ್ತೇವೆ. ರಫ್ತು ಮತ್ತು ಆಮದು ನೀತಿ ವಿನ್ಯಾಸಗೊಳಿಸುವಾಗ ರೈತರಿಗೆ ಬೆಲೆಯ ರಕ್ಷಣೆ ಸಿಗುವಂತೆ ನೋಡಿಕೊಳ್ಳುತ್ತೇವೆ. ಕೃಷಿಯನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿರಿಸಿ, ದೇಶದಲ್ಲಿ ಕೇವಲ ಒಂದೇ ತೆರಿಗೆ ಅಸ್ತಿತ್ವದಲ್ಲಿರುವಂತೆ ಮಾಡುತ್ತೇವೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಖಾತ್ರಿ ನೀಡಲು ಸ್ವಾಮಿನಾಥನ್ ಸಮಿತಿಯ ವರದಿ ಜಾರಿಗೊಳಿಸುತ್ತೇವೆ’ ಎಂದು ಹೇಳಿದರು. ಈ ವೇಳೆ ರಾಹುಲ್ ಜೊತೆ ವೇದಿಕೆಯಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಶಿವಸೇನೆ ಉದ್ಧವ್ ಠಾಕ್ರೆ, ಬಣದ ಸಂಜಯ್ ರಾವುತ್ ಇದ್ದರು.
ಎಷ್ಟು ಸಾಲ ಮನ್ನಾ?: ರಾಹುಲ್ ಭಾಷಣದ ಬಳಿಕ ಈ ಕುರಿತು ಸುದ್ದಿಗಾರರಿಗೆ ವಿವರ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಇಂಡಿಯಾ ಕೂಟ ಅಧಿಕಾರಕ್ಕೆ ಬಂದ ಮೇಲೆ ರೈತರ ಎಷ್ಟು ಸಾಲ ಮನ್ನಾ ಮಾಡಬೇಕು ಎಂಬುದನ್ನು ನಿರ್ಧರಿಸಲು ಪ್ರತ್ಯೇಕ ಆಯೋಗ ರಚಿಸಲಾಗುವುದು. ರೈತರ ಉತ್ಪನ್ನಗಳನ್ನು ಜಿಎಸ್ಟಿಯಿಂದ ಹೊರಗಿಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು’ ಎಂದು ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ನ ಫಾಸ್ಟ್ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್ಮೆಂಟ್ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಂತರ ರಾಜ್ಯ
Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.
ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.
ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.
ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.
ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.
ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.
ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.
ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.
ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.
ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
-
ಅಪರಾಧ9 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್6 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು7 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ6 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಅಂತರ ರಾಜ್ಯ7 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಸ್ಥಳೀಯ7 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು8 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಅಂತರ ರಾಜ್ಯ7 hours agoWhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ















