ಪುತ್ತೂರು
ನದಿ ತಟದಲ್ಲಿ ನಡೆಯುವ ಏಕೈಕ ಕಂಬಳ ಉಪ್ಪಿನಂಗಡಿ ವಿಜಯ–ವಿಕ್ರಮ ಜೋಡುಕರೆ ಕಂಬಳ ಮಾ. 30-31ಕ್ಕೆ : ಈ ಬಾರಿ ನಡೆಯಲಿದೆ ಮೂರು ದಿನ ಕಂಬಳ : ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆಯಲಿದೆ ಜನಾಕರ್ಷಣೆಯ ಸಂಭ್ರಮ
ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ರೈ, ಈ ಬಾರಿ 3 ದಿನ ಕಂಬಳ ಕೂಟ ಜರಗಲಿದೆ ಎಂದರು.
ಕಂಬಳ ಪ್ರಾರಂಭದ ಹಿಂದಿನ ದಿನ ಮಾ.29ರಂದು ಜನಾರ್ಕಷಣೆಯ ಜಲ ಕ್ರೀಡೆ, ಸಾಂಸ್ಕೃತಿಕ , ಕೃಷಿ ಮೇಳ, ಸಸ್ಯ ಮೇಳ ಜರುಗಲಿದೆ ಎಂದರು.
ನೇತ್ರಾವತಿ ನದಿ ತಟದಲ್ಲಿ ಜರಗುವ ಉಪ್ಪಿನಂಗಡಿ ಕಂಬಳ ಕೂಟದಲ್ಲಿ ಮೊದಲ ಬಾರಿ ಜಲಕ್ರೀಡೆ ಹಾಗೂ ನದಿಗೆ ವಿದ್ಯುತ್ ದೀಪಾಲಂಕ ನಡೆಯಲಿದೆ ಎಂದು ಅಶೋಕ್ ರೈ ತಿಳಿಸಿದರು.
ಮಾ. 30ರಂದು ಬೆಳಿಗ್ಗೆ 8.30ಕ್ಕೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಿಂದ ಹೊರಡುವ ಮೆರವಣಿಗೆಗೆ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಚಾಲನೆ ನೀಡಲಿರುವರು. ಕಂಬಳದ ಸಭಾ ಕಾರ್ಯಕ್ರಮ ಸಂಜೆ 6ರಿಂದ ನಡೆಯಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿರುವರು. ಸಭಾಪತಿ ಯು. ಟಿ. ಖಾದರ್, ಯೋಜನಾ ಸಬಲೀಕರಣ ಕ್ರೀಡಾ ಹಾಗೂ ಪರಿಶಿಷ್ಟ ವರ್ಗಗಳ ಸಚಿವ ನಾಗೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಉದ್ಯಮಿ ಬಾಬುರಾಜ್, ಸಂಗೀತ ನಿರ್ದೇಶಕ ಗುರುಕಿರಣ್, ನಾಡೋಜ ಡಾ| ಬಿ. ಶಂಕರ್, ಅಧ್ಯಕ್ಷರು ಶ್ಯಾಮಿಲಿ ಫ್ಯಾಮಿಲಿ ಟ್ರಸ್ಟ್ ರಿ., ಸಹಕಾರ ರತ್ನ ಎಂ. ಎನ್. ರಾಜೇಂದ್ರ ಕುಮಾರ್ ಮೊದಲಾದವರು ಮುಖ್ಯ ಅತಿಥಿಗಳಾಗಿರುವರು.
ಕಂಬಳಕ್ಕೆ ಆರು ವಿಭಾಗಗಳ ಕೋಣಗಳು ಭಾಗವಹಿಸಲಿದ್ದು, ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ ವಿಭಾಗದ ಸ್ಪರ್ಧೆಗಳಿದ್ದು. ಹಿರಿಯ ವಿಭಾಗದ ಪ್ರಥಮ ವಿಜೇತ ಕೋಣಗಳಿಗೆ 1½ ಪವನ್ ಚಿನ್ನ. ದ್ವಿತೀಯ ವಿಜೇತ ಕೋಣಗಳಿಗೆ 1 ಪವನ್ ಚಿನ್ನ (8 ಗ್ರಾಂ) ಬಹುಮಾನ ಹಾಗೂ ಕಿರಿಯ ವಿಭಾಗಕ್ಕೆ ಪ್ರಥಮ ½ ಪವನ್ ಹಾಗೂ ದ್ವಿತೀಯ ½ ಪವನ್ ಚಿನ್ನದ ಬಹುಮಾನ ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ಅಲ್ಲದೆ ವಿಜೇತ ಕೋಣಗಳ ಮಾಲಕರಿಗೆ ಚಿನ್ನದೊಂದಿಗೆ ವಿಶೇಷ ಕೋಟಿ ಚೆನ್ನಯ ಟ್ರೋಫಿ ನೀಡಲಾಗುವುದು. ಭಾಗವಹಿಸುವ ಕೋಣಗಳಿಗೆ ಸುಸಜ್ಜಿತ ಬ್ಯಾಂಕ್ನೊಂದಿಗೆ ನೀರಿನ ವ್ಯವಸ್ಥೆ ಮಾಡಿರುತ್ತೇವೆ.
ಅಲ್ಲದೇ ಹೊನಲು ಬೆಳಕಿನ ವ್ಯವಸ್ಥೆ, ಸುಸಜ್ಜಿತ ಪ್ರೇಕ್ಷಕರ ಚಪ್ಪರ, ವೀಕ್ಷಕ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ, ಆಕರ್ಷಕ ವೇದಿಕೆ, ಮನಮೆಚ್ಚುವ ವೀಕ್ಷಕ ವಿವರಣೆ, ಉತ್ತಮ ಕರೆ ನಿರ್ಮಾಣ. ಕರೆಗೆ ಶುದ್ಧ ನೀರಿನ ವ್ಯವಸ್ಥೆ, ಸುಸಜ್ಜಿತ ಸ್ವಾಲ್ಗಳು, ಕೋಣಗಳ ಯಜಮಾನರಿಗೆ ಪ್ರತ್ಯೇಕ ಚಪ್ಪರದ ವ್ಯವಸ್ಥೆ ವರ್ಷಕ್ಕೊಂದು ಹೊಸತನದ ಸೇರ್ಪಡೆಯೊಂದಿಗೆ ಕಂಬಳ ಕ್ಷೇತ್ರದಲ್ಲೇ ಶ್ರೇಷ್ಠ ಕಂಬಳ ಎಂಬ ಹೆಸರನ್ನು ಪಡೆದಿದೆ ಎಂದರು.
ಉಬಾರ್ ಕಂಬಳಕ್ಕೆ ಲಕ್ಷಾಂತರ ಮಂದಿ ಪ್ರೇಕ್ಷಕರೂ ಹಲವಾರು ವಿದೇಶಿಯರು ಭಾಗವಹಿಸುತ್ತಿರುವುದು ಕಂಬಳಕ್ಕೆ ಪ್ರತಿಷ್ಠೆ ಎನಿಸಿದೆ. ಈ ವರ್ಷ ಸುಮಾರು 160 ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು ಅನೇಕ ಗಣ್ಯಾತಿಗಣ್ಯರು. ಖ್ಯಾತ ಚಲನ ಚಿತ್ರ ನಟ-ನಟಿಯರು ಮತ್ತು ಅನೇಕ ಮಾಧ್ಯಮದ ಮಿತ್ರರು. ಟಿ.ವಿ. ಮಾಧ್ಯಮದವರೂ ಭಾಗವಹಿಸಲಿದ್ದಾರೆ. ಅಲ್ಲದೆ ಸಸ್ಯಮೇಳ, ಆಹಾರಮೇಳ, ಕೃಷಿ ಯಂತ್ರೋಪಕರಣ ಮೇಳ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದರು.
ಈ ಬಾರಿ ಉಬಾರ್ ಕಂಬಳ ಉತ್ಸವವನ್ನು ಆಯೋಜಿಸಲಾಗಿದೆ. ಸಾಂಸ್ಕತಿಕ ಕಾರ್ಯಕ್ರಮ, ಸ್ವಾದಿಷ್ಟ ಆಹಾರ ಮೇಳ, ಬೋಟಿಂಗ್ ರೈಡ್, ಕೃಷಿ ಮೇಳ, ವ್ಯವಹಾರ ಮೇಳ, ಮಕ್ಕಳ ಮನೋರಂಜನಾ ಆಟಗಳನ್ನು ಮಾ. 29, 30, 31ರಂದು ಕಂಬಳ ಕರೆಯ ಬಳಿಯಲ್ಲೇ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ಕಂಬಳ ಸಮಿತಿ ಪ್ರಮುಖರಾದ ಉಮೇಶ್ ಶೆಣೈ, ನಿರಂಜನ್ ರೈ ಮಠಂತಬೆಟ್ಟು, ಮಹಮ್ಮದ್ ಬಡಗನ್ನೂರು, ಉಬಾರ್ ಕಂಬಳ ಉತ್ಸವದ ಸೈಫ್, ರಾಜೇಶ್ ಉಪಸ್ಥಿತರಿದ್ದರು.
ಶಿಕ್ಷಣ
Science Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.
ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಕುತೂಹಲ ಹಾಗೂ ಪ್ರಾಯೋಗಿಕ ಕಲಿಕೆಯನ್ನು ಬೆಳೆಸುವ ಉದ್ದೇಶದಿಂದ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.

ಶಾಲಾ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಯಶಸ್ವಿ ಪಯಣ:
“ಉತ್ತಮ ಜೀವನಕ್ಕಾಗಿ ವಿಜ್ಞಾನ” ಎಂಬ ಆಶಯದೊಂದಿಗೆ ಆರಂಭಗೊಂಡ ಈ ಅಭಿಯಾನದ ಮೊದಲ ಹಂತದಲ್ಲಿ ಜಿಲ್ಲೆಯ 41 ಗ್ರಾಮೀಣ ಶಾಲೆಗಳಲ್ಲಿ ಶಾಲಾ ಮಟ್ಟದ ವಿಜ್ಞಾನ ಮೇಳಗಳನ್ನು ಆಯೋಜಿಸಲಾಗಿತ್ತು. ಇದರಲ್ಲಿ 1,189 ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 650 ವಿನೂತನ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದರು. ಶಾಲಾ ಮಟ್ಟದಲ್ಲಿ ವಿಜೇತರಾದ ತಂಡಗಳು ಜಿಲ್ಲಾ ಮಟ್ಟದ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಜಿಲ್ಲಾ ಮಟ್ಟದ ಅಂತಿಮ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ 66 ಹಾಗೂ ಪ್ರೌಢಶಾಲಾ ವಿಭಾಗದ 57 ತಂಡಗಳು ಸೇರಿದಂತೆ ಒಟ್ಟು 123 ತಂಡಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಬಂಟರ ಭವನದಲ್ಲಿ ಸಂಪನ್ಮೂಲ ವ್ಯಕ್ತಿ ಅನಿರುದ್ಧ್ ವಾಗ್ಳೆ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾದಾಯಕ ಅವಧಿ ನಡೆಸಿಕೊಟ್ಟರು. ಮಾರ್ಗದರ್ಶಿ ಶಿಕ್ಷಕರಿಗಾಗಿ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯದಲ್ಲಿ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಿರಂತರ ಪರಿಶ್ರಮವಿದ್ದಾಗ ಮಾತ್ರ ಹೊಸ ಆವಿಷ್ಕಾರಗಳು ಸಾಧ್ಯವಾಗುತ್ತವೆ. ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು” ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ನ ಸಹ-ಸಂಸ್ಥಾಪಕ ಶ್ರೀ ಪ್ರವೀಣ್ ಕ್ಯಾಸ್ಟಲಿನೋ, “ವಿದ್ಯಾರ್ಥಿಗಳಲ್ಲಿರುವ ಕುತೂಹಲವೇ ಹೊಸ ಆವಿಷ್ಕಾರಗಳಿಗೆ ದಾರಿ ಮಾಡಿಕೊಡುತ್ತದೆ. ಪ್ರಶ್ನಿಸುವ ಹಾಗೂ ಪ್ರಯೋಗ ಮಾಡುವ ಮನೋಭಾವ ಬೆಳೆಸಿಕೊಂಡಾಗ ಗ್ರಾಮೀಣ ಪ್ರತಿಭೆಗಳು ದೊಡ್ಡ ಮಟ್ಟದ ಸಾಧನೆ ಮಾಡಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ನ ಆಪರೇಷನ್ಸ್ ಲೀಡ್ ಜೋಬಿನ್ ಜೋಸೆಫ್ ಹಾಗೂ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಡಾ. ಶ್ರೀಶ ಬೈಪದವು ಉಪಸ್ಥಿತರಿದ್ದರು. ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್. ಸ್ವಾಗತಿಸಿದರು. ರಾಜೇಶ್ವರಿ ಎನ್. ನಿರೂಪಿಸಿ, ನೇತ್ರಾ ಡಿ. ರಾವ್ ವಂದಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಪುತ್ತೂರು, ನ. 22: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ತರಬೇತಿ ಕಾರ್ಯಕ್ರಮವು ಕಾಲೇಜಿನ ನಿರಂತರ ಉದ್ಯೋಗ ಸಿದ್ಧತಾ (Placement Readiness) ಉಪಕ್ರಮದ ಭಾಗವಾಗಿದ್ದು, ವಿದ್ಯಾರ್ಥಿಗಳನ್ನು ಕ್ಯಾಂಪಸ್ ಮತ್ತು ಆಫ್-ಕ್ಯಾಂಪಸ್ ಉದ್ಯೋಗ ನೇಮಕಾತಿ ಪ್ರಕ್ರಿಯೆಗಳಿಗೆ ಸಮರ್ಥವಾಗಿ ಸಿದ್ಧಗೊಳಿಸುವ ಉದ್ದೇಶವನ್ನು ಹೊಂದಿದೆ. ಉದ್ಯಮಗಳ ಪ್ರಸ್ತುತ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳ ಡಿಜಿಟಲ್ಕೌ ಶಲ್ಯ, ಉದ್ಯೋಗಾರ್ಹ ಸಾಮರ್ಥ್ಯ, ಸಂವಹನ ಕೌಶಲ್ಯ ಹಾಗೂ ವೃತ್ತಿಪರ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ತರಬೇತಿಯನ್ನು ರೂಪಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence – AI) ಮತ್ತು ಉದ್ಯೋಗಾರ್ಹತಾ ಕೌಶಲ್ಯಗಳು (Employability Skills – Lifelong Profession) ಎಂಬ ಪ್ರಮುಖ ವಿಷಯಗಳ ಕುರಿತು ತರಬೇತಿ ನೀಡಲಾಯಿತು.

ತರಬೇತುದಾರರಾದ ದೀಪಕ್ ಬಡಿಗೇರ್ ಮತ್ತು ಆಯೆಶತ್ ಹಫೀಝಾ ಅವರು ವಿವಿಧ ಪ್ರಾಯೋಗಿಕ ಚಟುವಟಿಕೆಗಳು ಹಾಗೂ ಸಂವಾದಾತ್ಮಕ ಅಧಿವೇಶನಗಳ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಕೃತಕ ಬುದ್ಧಿಮತ್ತೆಯ ಮೂಲ ಪರಿಕಲ್ಪನೆಗಳು, ಉದಯೋನ್ಮುಖ ತಂತ್ರಜ್ಞಾನಗಳ ಬಳಕೆ, ಸಂವಹನ ಕೌಶಲ್ಯ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ ಹಾಗೂ ವೃತ್ತಿಪರ ಜೀವನಕ್ಕೆ ಅಗತ್ಯವಾದ ಸಾಮರ್ಥ್ಯಗಳ ಕುರಿತು ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ IBM SkillsBuild ಡಿಜಿಟಲ್ ಕಲಿಕಾ ವೇದಿಕೆಯ ಪರಿಚಯ
ಮಾಡಿಕೊಡಲಾಯಿತು. ನಿಗದಿತ ಕಲಿಕಾ ಅವಶ್ಯಕತೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ IBM SkillsBuild ವತಿಯಿಂದ ಪ್ರಮಾಣಪತ್ರಗಳನ್ನು ನೀಡಲಾಯಿತು. ಈ ಪ್ರಮಾಣಪತ್ರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆಯೊಂದಿಗೆ ಹೆಚ್ಚುವರಿ ವೃತ್ತಿಪರ ಕೌಶಲ್ಯಗಳನ್ನು ಗುರುತಿಸಲು ಸಹಕಾರಿಯಾಗಲಿವೆ.
ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕ್ಷೇತ್ರದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಸನ್ನದ್ಧರನ್ನಾಗಿಸುವ ನಿಟ್ಟಿನಲ್ಲಿ ಈ ಐದು ದಿನಗಳ ತರಬೇತಿ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.
ಉದ್ಯೋಗಮುಖಿ ಶಿಕ್ಷಣದೊಂದಿಗೆ ಉಜ್ವಲ ಭವಿಷ್ಯಕ್ಕೆ ಮುನ್ನುಡಿ!
ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯಮ ಕ್ಷೇತ್ರದ ಅಗತ್ಯಗಳಿಗೆ ಪೂರಕವಾದ ಕೌಶಲ್ಯಗಳನ್ನು ಬೆಳೆಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವಿ ಮಾತ್ರವಲ್ಲದೆ, ಡಿಜಿಟಲ್ ಜ್ಞಾನ, ಕೃತಕ ಬುದ್ಧಿಮತ್ತೆಯ ಅರಿವು, ಸಂವಹನ ಕೌಶಲ್ಯ ಮತ್ತು ವೃತ್ತಿಪರ ಸಾಮರ್ಥ್ಯಗಳೂ ಅತ್ಯಂತ ಅವಶ್ಯಕವಾಗಿವೆ.
ಸ್ವಾಯತ್ತ ಶಿಕ್ಷಣ ವ್ಯವಸ್ಥೆಯಡಿ ನವೀನ ಕಲಿಕಾ ವಿಧಾನಗಳು, ಕೌಶಲ್ಯಾಧಾರಿತ ತರಬೇತಿ, ಉದ್ಯೋಗ ನಿಯೋಜನೆಗೆ ಪೂರಕ ಕಾರ್ಯಕ್ರಮಗಳು ಹಾಗೂ ಉದ್ಯಮ ಸಂಪರ್ಕದ ಮೂಲಕ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕಾಲೇಜು ಬದ್ಧವಾಗಿದೆ.
ನಿಮ್ಮ ಉನ್ನತ ಶಿಕ್ಷಣದ ಕನಸುಗಳಿಗೆ ಸಂತ ಫಿಲೋಮಿನಾ ಕಾಲೇಜು ಸೂಕ್ತ ವೇದಿಕೆ. ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳೊಂದಿಗೆ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇಂದೇ ನಮ್ಮ ಕಾಲೇಜನ್ನು ಆಯ್ಕೆಮಾಡಿ. ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು – ನಿಮ್ಮ ಉಜ್ವಲ ಭವಿಷ್ಯದತ್ತ ಮೊದಲ ಹೆಜ್ಜೆ!
– ರೆವ್. ಡಾ. ಆಂಟನಿ ಪ್ರಕಾಶ್ ಮೊಂತೆರೋ
ಪ್ರಾಂಶುಪಾಲರು, ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.















