ನಿಧನ ವಾರ್ತೆ
Gopinath Shetty-ಶ್ರೀ ಗೋಪಿನಾಥ ಶೆಟ್ಟಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 1987ರಿಂದ 1990ರವರೆಗೆ 3 ವರ್ಷಗಳ ಕಾಲ ಉಪನ್ಯಾಸಕರಾಗಿ ಹಾಗೂ 1990ರಿಂದ 2022ರವರೆಗೆ 32 ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಹಿರಿಮೆಯನ್ನು ಎತ್ತಿಹಿಡಿದ ದಕ್ಷ, ಪ್ರಾಮಾಣಿಕ ಹಾಗೂ ಶಿಸ್ತಿನ ಸಿಪಾಯಿಯಾಗಿದ್ದ ಗೋಪಿನಾಥ ಶೆಟ್ಟಿಯವರು ಅಕಾಲಿಕವಾಗಿ ಮಾ.13ರಂದು ದೈವಾಧೀನರಾದರು. ಅವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘ, ಫಾರ್ಮಸಿ ಕಾಲೇಜು ಹಾಗೂ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.
ಸಭೆಗೆ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ಹಿತೈಷಿಗಳು, ಒಡನಾಡಿಗಳು ಹಾಗೂ ಅಧ್ಯಾಪಕ, ಅಧ್ಯಾಪಕೇತರ ಬಂಧುಗಳು ಶ್ರೀಯುತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡುತ್ತಾ, “ಸಂಘದ ಒಳಗಿರುವ ವ್ಯಕ್ತಿಗಳಲ್ಲಿರುವಂತಹ ಶಿಸ್ತು, ಶ್ರದ್ಧೆ, ಸೇವೆ ಸಮರ್ಪಣಾ ಗುಣಗಳನ್ನು ಹೊಂದಿದ ವ್ಯಕ್ತಿಯಾದ ಗೋಪಿನಾಥ ಶೆಟ್ಟಿಯವರು ಹಿರಿಯರಾದ ರಾಮಭಟ್ಟರ ಆಶಯದಂತೆ ಈ ಸಂಸ್ಥೆಯನ್ನು ಬೆಳೆಸುವ ನಿಟ್ಟಿನಲ್ಲಿ ತನ್ನನ್ನು ತಾನು ತಯಾರಿ ಮಾಡಿಕೊಂಡು ನಡೆದು ವಿವೇಕಾನಂದ ಪಾಲಿಟೆಕ್ನಿಕ್ ಜಿಲ್ಲೆಯ ಅತ್ಯುತ್ತಮ ಕಾಲೇಜು ಎಂಬುದಾಗಿ ರೂಪಿಸುವಲ್ಲಿ ಸಫಲರಾಗಿದ್ದರು. ವಿವೇಕಾನಂದ ಕ್ಯಾಂಪಸ್‌ನಲ್ಲಿರುವ ಪ್ರತಿಯೊಂದು ಕಟ್ಟಡದಲ್ಲೂ ಅವರ ಹೆಜ್ಜೆ ಗುರುತುಗಳಿವೆ. ಸಂಸ್ಥೆಯ ಎಲ್ಲಾ ನಿರ್ಧಾರಗಳಿಗೂ ಸಹಕರಿಸುತ್ತಾ ದೇವರ ಕೆಲಸಗಳಿಗೂ ಕೈಜೋಡಿಸುತ್ತಾ ತಪಸ್ವಿಯಂತೆ ನಿಷ್ಠೆಯಿಂದ ಸಂಸ್ಥೆಗೆ ದುಡಿದಿದ್ದಾರೆ. ಬಹಳ ಅಪರೂಪದ ವ್ಯಕ್ತಿತ್ವದವರಾಗಿದ್ದರು. ಸೇವಾ ನಿವೃತ್ತಿಯ ನಂತರ ಸಂಸ್ಥೆಯ ಹಿರಿಯರ ಕೇಳಿಕೆಯಂತೆ ಫಾರ್ಮಸಿ ಕಾಲೇಜಿನ ಅಧ್ಯಕ್ಷರಾಗಿ ಆ ಜವಾಬ್ದಾರಿಯನ್ನೂ ಕೂಡಾ ಹೊಂದಿದ್ದರು. ಯಾವುದೇ ಸಂದರ್ಭದಲ್ಲಿಯೂ ಭಯ ಎಂಬುದು ಅವರಿಗಿರಲಿಲ್ಲ. ಸಮರ್ಪಣೆ ಸೇವಾ ಮನೋಭಾವ ಪಕ್ಷಕ್ಕೆ ನಿಷ್ಟನಾಗಿರುವ ಗುಣ ಮುಂತಾದವುಗಳನ್ನು ಗುರುತಿಸಿ ಅವರನ್ನು ಪುತ್ತೂರು ನಗರದ ಸಹಸಂಘಚಾಲಕರಾಗಿ ಕೂಡಾ ನೇಮಕ ಮಾಡಿದ್ದರು. ಅಗಲಿದ ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಹಾಗೂ ಅವರ ಪತ್ನಿ ಪುತ್ರರಿಗೆ ಆ ನೋವನ್ನು ಭರಿಸುವ ಶಕ್ತಿಯನ್ನು ಕೊಟ್ಟು ಸಮಾಜಕ್ಕೋಸ್ಕರ ಬದುಕುವ ಶಕ್ತಿಯನ್ನು ಕರುಣಿಸಲಿ” ಎಂದು ತಮ್ಮ ನುಡಿಗಳ ಮೂಲಕ ನಮನವನ್ನು ಸಲ್ಲಿಸಿದರು.
ವಿವೇಕಾನಂದ ಪಾಲಿಟೆಕ್ನಿಕ್‌ನ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡುತ್ತಾ, “ ವಿವೇಕಾನಂದ ಪಾಲಿಟೆಕ್ನಿಕ್‌ನ ರೂವಾರಿಯಾಗಿ ಇದರ ಹೆಸರನ್ನು ಜಿಲ್ಲೆಯಾದ್ಯಂತ ವಿಸ್ತಾರ ಮಾಡುವ ಕೀರ್ತಿಯನ್ನು ಪಡೆದ ನಿವೃತ್ತ ಪ್ರಾಂಶುಪಾಲರಾದ ಶ್ರೀ ಗೋಪಿನಾಥ ಶೆಟ್ಟಿಯವರು ಈ ಸಂಸ್ಥೆಯಲ್ಲಿ 35 ವರ್ಷಗಳ ಕಾಲ ದುಡಿದಿದ್ದಾರೆ. ಆನಿರೀಕ್ಷಿತವಾಗಿ ಶಿವನ ಪಾದವನ್ನು ಸೇರಿದ ಇವರಿಗೆ ಸದ್ಗತಿ ಲಭಿಸಲಿ ಹಾಗೂ ಅವರ ಮನೆಯವರಿಗೆ ಶೋಕವನ್ನು ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ತಮ್ಮ ನಮನವನ್ನು ಸಲ್ಲಿಸಿದರು.
ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಚಂದ್ರಕುಮಾರ್ ಮಾತನಾಡುತ್ತಾ, “ ಆತ್ಮೀಯ ಗೆಳೆಯರಾದ ಶ್ರೀಯುತರು ಕಾಲೇಜಿನ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಹಾಗೂ ಉನ್ನತಿಯನ್ನು ಹೊಂದುವಲ್ಲಿ ಸಫಲರಾಗಿದ್ದಾರೆ.” ಎಂದರು. ಸಿವಿಲ್ ವಿಭಾಗ ಮುಖ್ಯಸ್ಥರಾದ ರವಿರಾಂ ಮಾತನಾಡುತ್ತಾ, “ ಗೋಪಿನಾಥ ಶೆಟ್ಟಿಯವರು ಜೊತೆಯಾಗಿ ಕೆಲಸಮಾಡಿಕೊಂಡಿದ್ದರು ಹಾಗೂ ಉತ್ತಮ ಒಡನಾಡಿಯಾಗಿದ್ದರು. ಶಿಸ್ತಿನ ಸಿಪಾಯಿಯಾಗಿದ್ದರೂ ಆಂರ‍್ಯದಲ್ಲಿ ಶ್ರೀಮಂತರಾಗಿದ್ದರು. ಸಂಸ್ಥೆಯ ಏಳಿಗೆಯನ್ನೇ ಬಯಸುತ್ತಿದ್ದರು. ಕಾಲೇಜಿನಲ್ಲಿ ಹೇಗೆ ಇರುತ್ತಿದ್ದರೋ ಅದಕ್ಕೆ ತದ್ವಿರುದ್ಧವಾಗಿ ಹೊರಗೆ ಬೆರೆಯುತ್ತಿದ್ದ ಅವರು ವಿಭಿನ್ನ ವ್ಯಕ್ತಿತ್ವದವರಾಗಿದ್ದರು. ಸುಧೀರ್ಘ ಅವಧಿಯಲ್ಲಿ ಅವರು ಹಣ ಗಳಿಕೆಯನ್ನು ಮಾಡಲೇ ಇಲ್ಲ. ಕೊಡುಗೈ ದಾನಿಯಾಗಿದ್ದರು. ಸ್ನೇಹಜೀವಿ ಹಾಗೂ ಕಾಳಜಿಯ ವ್ಯಕ್ತಿತ್ವ ಅವರದಾಗಿತ್ತು. ಅಂತೆಯೇ ಶಿಸ್ತಿಗೆ ಹೆಸರಾಗಿದ್ದರು. ವಿವೇಕಾನಂದ ಕ್ಯಾಂಪಸ್‌ನ ಎಲ್ಲಾ ಕಟ್ಟಡಗಳ ರೂವಾರಿಯಾಗಿದ್ದರು. ಜೊತೆಯಲ್ಲಿ ಬಂದವರನ್ನು ಒಳ್ಳೆಯ ರೀತಿಯಲ್ಲಿ ಕರೆದುಕೊಂಡೋಗುವ ಗುಣ ಅವರಲ್ಲಿತ್ತು. ಎಲ್ಲರ ಏಳಿಗೆ ಬಯಸುವ ಮನಸ್ಸು ಅವರಲ್ಲಿತ್ತು. ಈ ಕಾಲೇಜಿಗೆ ಒಳ್ಳೆಯ ಹೆಸರನ್ನು ಪಡೆಯುವಲ್ಲಿ ಅವರ ಪಾತ್ರ ಮಹತ್ವದ್ದು ಎಂದರು.
ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ವಿಭಾಗ ಮುಖ್ಯಸ್ಥರಾದ ಮುರಳೀಧರ್ ಯಸ್. ಮಾತನಾಡುತ್ತಾ “ ಸಂಸ್ಥೆಯಲ್ಲಿ ನಿಸ್ವಾರ್ಥ ಸೇವೆಯನ್ನು ಮಾಡಿ ಸಾರ್ಥಕ ಜೀವನವನ್ನು ನಡೆಸಿದ ಶ್ರೀಯುತರು ಹೆಚ್ಚಿನ ಸಮಯವನ್ನು ಕಾಲೇಜಿಗೆ ಸಮರ್ಪಣೆ ಮಾಡಿದ್ದಾರೆ. ಅವರ ಶಿಸ್ತು, ಸಮಯ ಪರಿಪಾಲನೆ ಗಂಭೀರತೆ ಎಲ್ಲವೂ ಆದರ್ಶಪ್ರಾಯ. ಸಂಸ್ಥೆಯ ಹಾಗೂ ಅಲ್ಲಿರುವವರು ಏಳಿಗೆಯನ್ನು ಕಾಣಬೇಕೆಂದು ಬಯಸಿ ರಾಜ್ಯಕ್ಕೇ ಮಾದರಿ ಸಂಸ್ಥೆಯನ್ನಾಗಿ ನಿರೂಪಿಸುವಲ್ಲಿ ಅವರ ಹಿರಿಮೆ ಅಪಾರ. ದೇವರು ಅವರಿಗೆ ಚಿರಶಾಂತಿ ಕೊಡಲಿ” ಎಂದು ಪ್ರಾರ್ಥಿಸಿದರು.
ಪುತ್ತೂರು ಪುರಸಭಾ ಸದಸ್ಯರಾದ ಶ್ರೀ ಜೀವಂದರ ಜೈನ್ ಮಾತನಾಡುತ್ತಾ, “ ಅನೇಕ ಸಂದರ್ಭಗಳಲ್ಲಿ ಉತ್ತಮ ಮಾರ್ಗದರ್ಶನ ನೀಡಿ ಕಷ್ಟಕಾಲದಲ್ಲಿ ಪರಿಹಾರ ನೀಡುತ್ತಿದ್ದರು. ಹಾಗೂ ಸಂಸ್ಥೆಯ ಪರವಾಗಿ ಮಾತನಾಡುತ್ತಿದ್ದರು. ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿತ್ವ ಅವರದಾಗಿತ್ತು.” ಎಂದು ತಮ್ಮ ನೆನಪನ್ನು ಹಂಚಿಕೊAಡರು.
ಪಾಲಿಟೆಕ್ನಿಕ್‌ನ ನಿಕಟಪೂರ್ವ ಸಂಚಾಲಕರಾಗಿದ್ದ ಮುರಳೀಧರ ಭಟ್ ಬಂಗಾರಡ್ಕ ಮಾತನಾಡುತ್ತಾ “ ಒಬ್ಬ ಉತ್ತಮ ಶಿಕ್ಷಕನಾಗಿ ವಿದ್ಯಾರ್ಥಿಯನ್ನು ಉನ್ನತ ಮಟ್ಟಕ್ಕೆ ಏರಿಸಬಹುದು ಎಂಬುದಕ್ಕೆ ಉದಾಹರಣೆಯಾಗಿ ಶಿಸ್ತುಬದ್ಧವಾಗಿ ಕೆಲಸಮಾಡುತ್ತಿದ್ದರು. ಬೆಳ್ಳಿಹಬ್ಬದ ಸಂದರ್ಭದಲ್ಲಿ ಎಲ್ಲಾ ಕಾರ್ಯಗಳು ವಿಜ್ರಂಭಣೆಯಿಂದ ನಡೆಯಲು ಸಹಕಾರಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಹಾಗೂ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ” ಎಂದು ನುಡಿದರು.
ಕಾಲೇಜಿನ ಮಾಜಿ ಅಧ್ಯಕ್ಷರಾಗಿದ್ದ ಬಲರಾಮ್ ಆಚರ‍್ಯರು ಮಾತನಾಡುತ್ತಾ, “ ಅವರು ಬಿಟ್ಟು ಹೋದ ಸ್ಥಳವನ್ನು ತುಂಬಿಸಲಿಕ್ಕಾಗುವುದಿಲ್ಲ. ಆಡಳಿತ ಮಂಡಳಿಯವರು ಹೇಳಿದ ಯಾವುದೇ ಕೆಲಸವನ್ನಾದರೂ ಮಾಡುತ್ತಿದ್ದರು. ಕಷ್ಟ ಸಾಧ್ಯವಾದ್ದನ್ನು ವಿವರಿಸಿ ತಿಳಿಸುತ್ತಿದ್ದರು. ಇದು ತುಂಬಾ ಅಪರೂಪದ ಗುಣ. ಅವರ ಬದ್ಧತೆ ಸ್ಮರಣೀಯ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ”ಎಂದರು.
ಫಾರ್ಮಸಿ ಕಾಲೇಜಿನ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ ಮಾತನಾಡುತ್ತಾ, “ ಶ್ರೀರಾಮನ ದರ್ಶನಕ್ಕೆ ಹೊರಟವರು ಶ್ರೀರಾಮನ ಪಾದವನ್ನೇ ಸೇರಿದರು. ಓರ್ವ ಉಪನ್ಯಾಸಕರಾಗಿ ಪ್ರಾಂಶುಪಾಲರಾಗಿ ತಮ್ಮ ಅಪಾರ ಅನುಭವವನ್ನು ಕಾಲೇಜಿಗೆ ಕೊಡುವ ಉದ್ದೇಶದಿಂದ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯನ್ನು ಬೆಳೆಸುವ ಆಶಯವನ್ನು ಹೊಂದಿದ್ದ ನಮಗೆ ಇದು ತುಂಬಲಾರದ ನಷ್ಟ. ಫಾರ್ಮಸಿ ಕಾಲೇಜಿನ ಪ್ರತಿಯೊಂದು ಕಂಬ ಗೋಡೆಗಳಲ್ಲೂ ಅವರ ಪರಿಶ್ರಮವನ್ನು ನಾವು ಕಾಣುತ್ತಿದ್ದೇವೆ. ಅವರ ಆತ್ಮಕ್ಕೆ ತೃಪ್ತಿ ಕೊಡುವ ಜವಾಬ್ದಾರಿಯನ್ನು ನಾವು ಖಂಡಿತಾ ನಿಭಾಯಿಸುತ್ತೇವೆ. ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಹಾಗೂ ಅವರ ಅಗಲುವಿಕೆಯ ದುಃಖ ಭರಿಸುವ ಶಕ್ತಿ ಅವರ ಮನೆಯವರಿಗೆ ಭಗವಂತನು ನೀಡಲಿ” ಎಂದು ಹೇಳಿದರು. ನಿಕಟಪೂರ್ವ ಅಧ್ಯಕ್ಷರಾದ ಪಸನ್ನಭಟ್ ಮಾತನಾಡುತ್ತಾ, “ ಕೊರೋನಾ ಸಂದರ್ಭದಲ್ಲಿ ಶ್ರೀ ಗೋಪಿನಾಥ ಶೆಟ್ಟಿಯವರು ಮುಖ್ಯ ರೂವಾರಿಯಾಗಿ ಕೆಲಸಮಾಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ” ಎಂದರು.
ಪುತ್ತೂರು ಘಟಕದ ಅಧ್ಯಕ್ಷರಾದ ಪ್ರಮೋದ್ ಮಾತನಾಡುತ್ತಾ “ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರಕ್ಕೆ ಅವರ ದೃಷ್ಟಿ ಹಾಗೂ ಕೊಡುಗೆ ತುಂಬಾ ಇದೆ. ನಮ್ಮ ಕ್ಷೇತ್ರಕ್ಕೆ ಅವರ ಅಗಲುವಿಕೆ ತುಂಬಾ ನಷ್ಟ ತಂದಿದೆ. ಅವರ ದೂರದೃಷ್ಟಿಯಂತೆ ನಾವು ನಡೆದರೆ ಅವರ ಆತ್ಮಕ್ಕೆ ಶಾಂತಿ ಲಭಿಸಿದಂತಾಗುತ್ತದೆ. ಭಗವಂತನು ಅವರ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿ ನೀಡಲಿ” ಎಂದರು.
ರೆಡ್‌ಕ್ರಾಸ್ ಕರ‍್ಯಕ್ರಮ ಸಂಯೋಜನಾ ಉಪಸಮಿತಿಯ ಮುಖ್ಯಸ್ಥರಾದ ಪ್ಯಾಟ್ರಿಕ್ ಮಸ್ಕರೇನಿಯಸ್ ಮಾತನಾಡುತ್ತಾ, “ ಈ ಸಂಸ್ಥೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಚಟುವಟಿಕೆಗಳನ್ನು ಆಯೋಜಿಸಲು ಸಂಪೂರ್ಣ ಬೆಂಬಲವನ್ನು ನೀಡಿದ್ದರು. ಬಹಳ ಅಚ್ಚುಕಟ್ಟಾಗಿ ನಡೆಸಲು ಸಹಾಯ ಮಾಡಿದ್ದಾರೆ.” ಎಂದು ನುಡಿದರು.
ಅನಿಲ ದೀಪಕ್ ರೈ ಮಾತನಾಡುತ್ತಾ “ ಈ ಸಂಸ್ಥೆಯು ರಾಷ್ಟ್ರೀಯ ಜನೌಷಧಿ ಪರಿಯೋಜನೆಯಡಿ 12 ಜನೌಷಧಿ ಕೇಂದ್ರಗಳನ್ನು ಗೋಪಿನಾಥ ಶೆಟ್ಟಿಯವರ ಮುಂದಾಳತ್ವದಲ್ಲಿ ಸ್ಥಾಪಿಸಿದೆ. ಅನೇಕ ಸಂದರ್ಭಗಳಲ್ಲಿ ಉತ್ತಮ ಮಾರ್ಗದರ್ಶನವನ್ನು ನೀಡಿ ಸಹಕರಿಸಿದ್ದಾರೆ.” ಎಂದರು.
ವಿವೇಕಾನಂದ ಪಾಲಿಟೆಕ್ನಿಕ್‌ನ ನಿಕಟಪೂರ್ವ ಸದಸ್ಯರಾದ ಸರ‍್ಯನಾಥ ಆಳ್ವ ಮಾತನಾಡುತ್ತಾ “ ಗೋಪಿನಾಥ ಶೆಟ್ಟಿಯವರು ಹೃದಯ ಶ್ರೀಮಂತರಾಗಿದ್ದರು. ಶಿಸ್ತು ಆತ್ಮೀಯತೆಗೂ ಹತ್ತಿರವಾಗಿದ್ದರು. ಪುತ್ತೂರಿನ ಅನೇಕ ಕಟ್ಟಡದ ರೂವಾರಿಯಾಗಿದ್ದರು. ಯಾವತ್ತೂ ದುಡ್ಡಿನ ಆಸೆಗೆ ಕೆಲಸ ಮಾಡಿದವರಲ್ಲ ಹಾಗೂ ಕೊಡುಗೈ ದಾನಿಯಾಗಿದ್ದರು. ಈ ವಿದ್ಯಾಸಂಸ್ಥೆಗೆ ಅವರ ಅಗಲುವಿಕೆ ತುಂಬಲಾರದ ನಷ್ಟ. ಅವರಿಗೆ ಹಾಗೂ ಮನೆಯವರಿಗೆ ಭಗವಂತನು ಶಾಂತಿಯನ್ನು ಕರುಣಿಸಲಿ ಎಂದರು.
ಕೊನೆಯದಾಗಿ ಸಹವರ್ತಿಯಾಗಿದ್ದ ನಾರಾಯಣ ಬೈಪಡಿತ್ತಾಯರು ಮಾತನಾಡುತ್ತಾ, “ 21 ವರ್ಷ ನನ್ನ ಒಡನಾಡಿಯಾಗಿದ್ದು, ನನ್ನೊಳಗಿನ ಚರ್ಚೆ, ಸಿಟ್ಟು ಮೊದಲಾದವುಗಳಿಗೆ ಕಡಿವಾಣ ಹಾಕುತ್ತಿದ್ದ ಆತ್ಮೀಯ ವ್ಯಕ್ತಿ. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿ ಕೊಟ್ಟು ಅವರ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ನಮಗೆಲ್ಲರಿಗೂ ಕೊಡಲಿ” ಎಂದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.ಶ್ರೀ ಗೋಪಿನಾಥ ಶೆಟ್ಟಿಯವರಿಗ ಭಾವಪೂರ್ಣ ಶ್ರದ್ಧಾಂಜಲಿ

ಕೊನೆಯದಾಗಿ ಸಹವರ್ತಿಯಾಗಿದ್ದ ನಾರಾಯಣ ಬೈಪಡಿತ್ತಾಯರು ಮಾತನಾಡುತ್ತಾ, “ 21 ವರ್ಷ ನನ್ನ ಒಡನಾಡಿಯಾಗಿದ್ದು, ನನ್ನೊಳಗಿನ ಚರ್ಚೆ, ಸಿಟ್ಟು ಮೊದಲಾದವುಗಳಿಗೆ ಕಡಿವಾಣ ಹಾಕುತ್ತಿದ್ದ ಆತ್ಮೀಯ ವ್ಯಕ್ತಿ. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿ ಕೊಟ್ಟು ಅವರ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ನಮಗೆಲ್ಲರಿಗೂ ಕೊಡಲಿ” ಎಂದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ನಿಧನ ವಾರ್ತೆ
Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.
ನಿಧನ ವಾರ್ತೆ
One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಅಪರಾಧ12 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್9 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ9 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು10 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಅಂತರ ರಾಜ್ಯ10 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್‌ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಸ್ಥಳೀಯ10 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು11 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ನಿಧನ ವಾರ್ತೆ5 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ