ಮಂಗಳೂರು
Lok Sabha-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ ಎಷ್ಟು ಗೊತ್ತೇ ?
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಏ.26ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, 2024ರ ಮಾರ್ಚ್ 15ರ ವರೆಗೆ ಜಿಲ್ಲೆಯಲ್ಲಿ ಒಟ್ಟು 17,96,826 ಮತದಾರರಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಆಯೋಗದ ನಿರ್ದೇಶನದಂತೆ ಚುನಾವಣೆಗೆ ನಾಮಪತ್ರ ಸಲ್ಲಿಕೆಯ 10 ದಿನಗಳ ಮುಂಚಿನವರೆಗೆ ಅಂದರೆ ಮಾ.24ವರೆಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆ. ತಿದ್ದುಪಡಿಗೆ ಅವಕಾಶವಿದೆ. ಅರ್ಹ ಮತದಾರರು ನಿಗದಿತ ಸಮಯದೊಳಗೆ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.
ದ.ಕ. ಜಿಲ್ಲೆಯಲ್ಲಿ ಒಟ್ಟು 35.689 ಯುವ ಮತದಾರರನ್ನು ಗುರುತಿಸಲಾಗಿದ್ದು, 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನ 36082 ಮತದಾರರಿದ್ದಾರೆ ಮತದಾನದ ಹಿಂದಿನ ದಿನದವರೆಗೆ ಕಾಯುವ ಬದಲು ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಾತರಿಪಡಿಸಿಕೊಂಡು ತಮ್ಮ ಮತದಾನದ ಕೇಂದ್ರಗಳನ್ನು ತಿಳಿದುಕೊಳ್ಳುವುದು ಉತ್ತಮ. ಸಾರ್ವಜನಿಕರು ವೆಬ್ ಸೈಟ್ http //voter.ec.gov.npನಲ್ಲಿ ಮತದಾರರ ಪಟ್ಟಿಗೆ ಸಂಬಂಧಿತ ಅರ್ಜಿಗಳು ಮತ್ತು ಸೇವೆಗಳನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ವದಂತಿ ಹಬ್ಬಿಸಿದರೆ ಕ್ರಮ: ಡಿಜಿಟಲ್ ಅಥವಾ ಸಾಮಾಜಿಕ ಮಾಧ್ಯಮದ ಮೂಲಕ ಹಿಂದಿನ ಘಟನೆಗಳ ವೀಡಿಯೋ, ವರದಿ ಅಥವಾ ಫೋಟೋಗಳನ್ನು ಬಳಸಿ ವದಂತಿಗಳನ್ನು ಹಬ್ಬಿಸಿದರೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
8 ಮಾದರಿ ನೀತಿ ಸಂಹಿತೆ ತಂಡ, 24 ವೀಡಿಯೋ ವಿಚಕ್ಷಣ : ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಈಗಾಗಲೇ 8 ಮಾದರಿ ನೀತಿ ಸಂಹಿತೆ ತಂಡಗಳು, 24 ವೀಡೀಯೋ ವಿಚಕ್ಷಣ ತಂಡಗಳು, 8 ವೀಡಿಯೋ ಪರಿಶೀಲನಾ ತಂಡ, 72 ಫೈಯಿಗ್ ಸ್ಟಾಡ್ ಗಳು 186 ಸೆಕ್ಟರ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನೀತಿ ಸಂಹಿತೆ ಉಲ್ಲಂಘನೆ ದೂರಿಗೆ ಸಿವಿಜಿಲ್ನಲ್ಲಿ ಅವಕಾಶ: ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಸಿವಿಜಿಎಲ್ ಆಪ್ ಮೂಲಕ ಸಾರ್ವಜನಿಕರು ಮಾಹಿತಿ ಅಥವಾ ದೂರನ್ನು ನೀಡಬಹುದಾಗಿದೆ. ದೂರು ಅಥವಾ ಮಾಹಿತಿ ನೀಡುವವರ ಗುರುತು ಗೌಪ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮತದಾರರ ಆಕರ್ಷಣೆಗೆ ಸ್ವೀಪ್ ನಿಂದ ವಿಶೇಷ ಕಾರ್ಯಕ್ರಮ: 2019 ಲೋಕಸಭಾ ಚುನಾವಣೆಯಲ್ಲಿ ರಾಜ್ಯಕ್ಕೆ ಹೋಲಿಸಿದರೆ ದ.ಕ.ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಹೆಚ್ಚಾಗಿದ್ದು, ದ.ಕ.ಜಿಲ್ಲೆಯಲ್ಲಿ ಶೇ.78ರಷ್ಟು ಮತದಾನವಾಗಿತ್ತು. ಸುಮಾರು 57 ಮತಗಟ್ಟೆಗಳಲ್ಲಿ ಅತ್ಯಂತ ಕಡಿಮೆ ಮತದಾನ ಆಗಿರುವುದನ್ನು ಗುರುತಿಸಲಾಗಿದ್ದು, ಅವುಗಳು ಬಹುತೇಕವಾಗಿ ಮಂಗಳೂರು ನಗರ ದಕ್ಷಿಣ ಹಾಗೂ ಉತ್ತರ ಕ್ಷೇತ್ರಗಳಾಗಿದೆ. ಈ ನಗರದ ಮತದಾರರನ್ನು ಮತಗಟ್ಟೆಗಳಿಗೆ ಆಕರ್ಷಿಸುವ ನಿಟ್ಟಿನಲ್ಲಿ ಸ್ವೀಪ್ನಿಂದ ವಿಶೇಷ ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ತಿಳಿಸಿದರು.
ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಸಭೆ, ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಸಭೆ, ಪ್ರಚಾರ ಸಭೆ ನಡೆಸಲು ಸಾರ್ವಜನಿಕರು ಅಥವಾ ರಾಜಕೀಯ ಪಕ್ಷದವರು ಚುನಾವಣಾಧಿಕಾರಿಗಳು ಅಥವಾ ಸಹಾಯಕ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯಬೇಕಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರವಾರು ಪೈಯಿಂಗ್ ಸ್ಕ್ವಾಡ್ ಟೀಮ್, ಸ್ಟಾಟಿಕ್ ಸರ್ವೆಲೆನ್ಸ್ ಟೀಮ್, ವೀಡಿಯೋ ಸರ್ವೆಲೆನ್ಸ್ ಟೀಮ್ಗಳು ಎಲ್ಲಾ ರೀತಿಯ ಕಾರ್ಯಕ್ರಮಗಳ ಮೇಲೆ ನಿಗಾ ವಹಿಸಲಿವೆ. -ಮುಲೈ ಮುಗಿಲನ್, ದ.ಕ.ಜಿಲ್ಲಾಧಿಕಾರಿ
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
ನಿಧನ ವಾರ್ತೆ
Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ರಂಕದಗುತ್ತು, ಕಸಬಾ ಗ್ರಾಮದ ಮೂಲದ ಶ್ರೇಯಸ್ ಅ.4ರಂದು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು. ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರಿಗೆ ಬಂದು ಹುಲಿ ವೇಷದ ತರಬೇತಿಯಲ್ಲಿ ಭಾಗವಹಿಸಿದ್ದರು.
ತರಬೇತಿ ಮುಗಿದ ಬಳಿಕ ಶ್ರೇಯಸ್ ಹಾಗೂ ಸ್ನೇಹಿತರು ಸ್ಟೇಟ್ ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದರು. ಸಂಜೆ ಸುಮಾರು 4.30ರಿಂದ 5 ಗಂಟೆಯ ವೇಳೆಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದು, ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾರೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.
ಶ್ರೇಯಸ್ ನೀರು ಪಾಲಾದ ವಿಚಾರವನ್ನು ಆತನ ಅಪ್ರಾಪ್ತ ಸ್ನೇಹಿತರು ಭಯಗೊಂಡು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಚಾರ ಶ್ರೇಯಸ್ ಕುಟುಂಬಸ್ಥರಿಗೆ ತಿಳಿದುಬಂದಿದೆ.
ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಆಧಾರದಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಬಾಲಕನ ಪತ್ತೆಗಾಗಿ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿತ್ತು. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
-
ಅಂತರ ರಾಜ್ಯ12 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು7 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಮಂಗಳೂರು14 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
-
ಸ್ಥಳೀಯ12 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ13 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
-
ಅಂತರ ರಾಜ್ಯ12 hours agoFire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
-
ಉದ್ಯೋಗ8 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ6 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















