ಸ್ಥಳೀಯ
K.N. Janardhan-ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ
ಉಜಿರೆ: ಕೊಡಗು ವಿಶ್ವವಿದ್ಯಾನಿಲಯದ ಸಿಂಡಿಕೆಟ್ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ಧನರವರಿಗೆ ”ವಿಶೇಷ ಅಭಿನಂದನಾ ಕಾರ್ಯಕ್ರಮ” ಮಾ.14ರಂದು ಸಿರಿ ಕೇಂದ್ರ ಕಛೇರಿಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಖ್ಯಾತ ಚಲನಚಿತ್ರ ನಟ ಹಾಗೂ ಸಿರಿ ಬ್ರ್ಯಾಂಡ್ ರಾಯಭಾರಿಯೂ ಆಗಿರುವ ರಮೇಶ್ ಅರವಿಂದ್ ರವರು ಸಿರಿ ಎಂಡಿ ಜನಾರ್ಧನರವರನ್ನು ಪ್ರೀತಿಪೂರ್ವಕವಾಗಿ ಅಭಿನಂದಿಸಿ, ಗೌರವಾರ್ಪಣೆ ಸಲ್ಲಿಸಿದರು. ನಂತರ ಅವರು ಮಾತನಾಡಿ ಪೂಜ್ಯರ ಆದರ್ಶ ತತ್ವವನ್ನು ಮೈಗೂಡಿಸಿಕೊಂಡಿರುವಂತಹ ಜನಾರ್ಧನರವರು ಸದಾ ಕ್ರಿಯಾಶೀಲರಾಗಿದ್ದು, ಯಾವುದೇ ವ್ಯಕ್ತಿ ಇವರಲ್ಲಿ ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಂತಹ ಸಂದರ್ಭದಲ್ಲಿ ಕಿಂಚಿತ್ತೂ ಹಿಂಜರಿಯದೇ ತಮ್ಮ ಸಹಾಯಹಸ್ತವನ್ನು ಚಾಚುವ ಮೂಲಕ ಔದಾರ್ಯವನ್ನು ಮೆರೆದಿದ್ದಾರೆ.

ಇಂತಹ ಸಜ್ಜನಿಕೆ, ಸಹೃದಯವನ್ನು ಹೊಂದಿರುವ ವ್ಯಕ್ತಿ ಸಿರಿ ಸಂಸ್ಥೆಯ ಎಂಡಿಯಾಗಿರುವುದು ನಮ್ಮೆಲ್ಲರ ಸೌಭಾಗ್ಯ.
ಸದಾ ಸಿರಿ ಸಂಸ್ಥೆಯ ಉನ್ನತಿಗಾಗಿ ಹಗಳಿರುಳು ಶ್ರಮಿಸುತ್ತಾ, ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವಂತಹ ಸಿರಿ ಎಂಡಿಯವರೊಂದಿಗೆ ನಾವು, ನೀವೇಲ್ಲರೂ ಕೈಜೋಡಿಸಿ ರಾಜ್ಯದಾದ್ಯಂತ ಪ್ರಸಿದ್ಧಿ ಗಳಿಸಿರುವ ನಮ್ಮ ಸಿರಿ ಬ್ರ್ಯಾಂಡನ್ನು ಇಡೀ ಭಾರತ ದೇಶದಾದ್ಯಂತ ಸೂಪರ್ ಬ್ರ್ಯಾಂಡ್ ಆಗಿ ಎತ್ತಿ ಹಿಡಿಯುವಲ್ಲಿ ನಾವೆಲ್ಲರೂ ಶಕ್ತಿ ಮೀರಿ ಪ್ರಯತ್ನಿಸೋಣ ಎಂದು ಎಲ್ಲಾ ಸಿರಿ ಸಿಬ್ಬಂದಿಗಳಿಗೆ ಶುಭ ಹಾರೈಸಿದರು.

ಕೊಡಗು ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಫ್ರೊ| ಅಶೋಕ್ ಆಲೂರು ಮತ್ತು ಡಾಕ್ಟರೇಟ್ ಪದವಿ ಪುರಸ್ಕೃತರಾದ ಡಾ. ರೂಪಾ ಅಶೋಕ್ ಆಲೂರು ದಂಪತಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದು, ಸಿರಿ ಎಂಡಿ ಕೆ.ಎನ್ ಜನಾರ್ಧನರವರ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಅವರು ತಮ್ಮ ವೃತ್ತಿ ಜೀವನದಲ್ಲಿ ಸಾಧಿಸಿರುವಂತಹ ಅನೇಕ ಸಾಧನೆಗಳು ಹಾಗೂ ಪೂಜ್ಯರ ಮಾರ್ಗದರ್ಶನದಲ್ಲಿ ಅವರು ನಿರ್ವಹಿಸಿರುವಂತಹ ಸಮಾಜಮುಖಿ ಕೆಲಸಕಾರ್ಯಗಳ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿ, ಕೊಡಗು ವಿವಿ ಸೆನೆಟ್ ಸದಸ್ಯರಾಗಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಇವರಿಂದ ಇನ್ನಷ್ಟು ಜನಪರ ಕಾರ್ಯಗಳು ನೆರವೇರುವಂತಾಗಲಿ ಎಂದು ಹಾರೈಸಿ, ಗೌರವಾರ್ಪಣೆ ಸಲ್ಲಿಸಿದರು.

ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಧ.ಮಂ.ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಜನಾರ್ಧನ ಮೋಗರಾಜ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಿರಿ ಎಂ.ಡಿಯವರಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ .ಜನಾರ್ಧನರವರು ಮುಖ್ಯ ಅತಿಥಿ ಗಣ್ಯರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಬಾಲ್ಯದಿಂದ ಬಡತನದಲ್ಲಿಯೇ ತಾನು ಬೆಳೆದು ಬಂದ ದಿನಗಳನ್ನು ನೆನಪಿಸಿಕೊಂಡು, ಪೂಜ್ಯರು ಮತ್ತು ಮಾತೃಶ್ರೀ ಅಮ್ಮನವರ ಆಶೀರ್ವಾದ ಹಾಗೂ ಅವರ ಮಾರ್ಗದರ್ಶನದಲ್ಲಿ ಸಿರಿ ಎಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಜೊತೆಗೆ ವಿವಿಧ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿಯೂ ಸೇವೆಗೈಯ್ಯುವ ಸದಾವಕಾಶ ದೊರೆತಿರುವುದು ನನ್ನ ಸೌಭಾಗ್ಯ. ಸಿರಿ ಸಿಬ್ಬಂದಿಗಳೆಲ್ಲರೂ ಪ್ರಾಮಾಣಿಕತೆಯಿಂದ ಶ್ರಮವಹಿಸಿ ದುಡಿಯುವ ಮೂಲಕ ಸಂಸ್ಥೆಯು ಯಶಸ್ವಿಯಾಗಿ ನಡೆದು ಪೂಜ್ಯರ ಕನಸಾಗಿರುವ ಸಿರಿ ಸಂಸ್ಥೆಯನ್ನು ರಾಷ್ಟ್ರ ಮಟ್ಟದಲ್ಲಿ ಎತ್ತಿಹಿಡಿಯುವಲ್ಲಿ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ರಮೇಶ್ ಅರವಿಂದ್, ಕೊಡಗು ವಿವಿ ಉಪಕುಲಪತಿ ಅಶೋಕ್ ಆಲೂರು ಮತ್ತು ಡಾ. ರೂಪಾ ಅಶೋಕ್ ಆಲೂರು ದಂಪತಿಯನ್ನು ಸಿರಿ ಸಂಸ್ಥೆಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರಸನ್ನ ರವರು ಸ್ವಾಗತಿಸಿ, ಗೋದಾಮು ಪ್ರಬಂಧಕ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಸಲಹೆ ಅಧಿಕಾರಿ ಗಣೇಶ್ ಪ್ರಸಾದ್ ಎಸ್. ಕಾಮತ್ ರವರು ಧನ್ಯವಾದವಿತ್ತರು.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು13 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ17 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ18 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್11 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಬಿಗ್ ನ್ಯೂಸ್19 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ11 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು12 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ14 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















