ಶಿಕ್ಷಣ
St. Philomena College-ಸಂತ ಫಿಲೋಮಿನಾ ಕಾಲೇಜಿಗೆ ಐಎಸ್ಒ 9001:2015 ಮಾನ್ಯತೆ
ಪುತ್ತೂರು ಮಾರ್ಚ್ 18: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣಸಂಸ್ಥೆಗಳಲ್ಲೊಂದಾದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಐಎಸ್ಒ 9001:2015 ಮಾನ್ಯತೆ ದೊರಕಿದೆ. “ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆಯಾದ ಸಂತ ಫಿಲೋಮಿನಾ ಕಾಲೇಜಿಗೆ 9001:2015 ಮಾನ್ಯತೆ ದೊರಕಿದುದು ಸಂತಸದ ವಿಚಾರವಾಗಿದೆ.

ಈ ಅಂತರಾಷ್ರೀಯ ಮನ್ನಣೆಯು ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ಶೈಕ್ಷಣಿಕ ಉತ್ಕೃಷ್ಟತೆಗಾಗಿ ನಮ್ಮ ನಿರಂತರ ಅನ್ವೇಶಣೆಯನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಒಬ್ಬ ವ್ಯಕ್ತಿಯಿಂದ ನಡೆಯುವ ಕಾರ್ಯವಲ್ಲ. ಇದರ ಹಿಂದೆ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯ ಗುಣಮಟ್ಟದ ಸೇವೆಗಾಗಿ ಅತ್ಯಂತ ಮುತುವರ್ಜಿಯಿಂದ ಮಾರ್ಗದರ್ಶನ ನೀಡುತ್ತಿರುವ ಸಂಚಾಲಕರು ಮತ್ತು ಆಡಳಿತ ಮಂಡಳಿ, ನಿರಂತರ ಸಮರ್ಪಣಾ ಮನೋಭಾವದಿಂದ ಶ್ರಮಿಸುತ್ತಿರುವ ಸಿಬ್ಬಂದಿ ವರ್ಗ, ಈ ನಿಟ್ಟಿನಲ್ಲಿ ನಮಗೆ ಸಂಪೂರ್ಣ ಬೆಂಬಲ ನೀಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ ಶಿಕ್ಷಕ ಸಂಘ, ನಮ್ಮ ಪ್ರಯೋಗಶೀಲತೆಗೆ ಸೂಕ್ತ ರೀತಿಯಲ್ಲಿ ಸಹಕಾರ ನೀಡುತ್ತಿರುವ ವಿದ್ಯಾರ್ಥಿವೃಂದ ಇವರೆಲ್ಲರ ಪಾಲು ಗಮನಾರ್ಗವಾದುದು.
ಈ ಮನ್ನಣೆಯು ಶಿಕ್ಷಣ ಕ್ಷೇತ್ರದಲ್ಲಿ ನಮ್ಮ ಕಾಲೇಜು ನೀಡುತ್ತಿರುವ ಸೇವೆಯನ್ನು ಇನ್ನಷ್ಟು ಉತ್ಕೃಷ್ಟಗೊಳಿಸಲು ನಮಗೆ ಸ್ಪೂರ್ತಿ ನೀಡಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋರವರು ಹೇಳಿದ್ದಾರೆ. ಕಾಲೇಜಿಗೆ ಐಎಸ್ಒ 9001:2015 ಮಾನ್ಯತೆ ದೊರಕಿದ ಬಗ್ಗೆ ಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ರಾದ ಪರಮಪೂಜ್ಯ ಪೀಟರ್ ಪಾವ್ಲ್ ಸಲ್ಡಾನ, ಕಾರ್ಯದರ್ಶಿ ಅತಿ ವಂ| ಆಂಟೊನಿ ಮೈಕೆಲ್ ಶೆರಾ, ನಿಯೋಜಿತ ಕಾರ್ಯದರ್ಶಿ ಅತಿ ವಂ| ಪ್ರವೀಣ್ ಲಿಯೋ ಲಸ್ರಾದೊ, ಕಾಲೇಜಿನ ಸಂಚಾಲಕರಾದ ಅತಿ ವಂ| ಲಾರೆನ್ಸ್ ಮಸ್ಕರೇನಸ್ ಹಾಗೂ ಕ್ಯಾಂಪಸ್ ನಿರ್ದೇಶಕರಾದ ವಂ| ಸ್ಟ್ಯಾನಿ ಪಿಂಟೋರವರು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋರವರಿಗೆ ಹಾಗೂ ಮಾನ್ಯತೆ ದೊರಕುವಲ್ಲಿ ಶ್ರಮವಹಿಸಿದ ಪ್ರತಿಯೋರ್ವರಿಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ವಿನಯಚಂದ್ರ ಹಾಗೂ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಅಭಿಷೇಕ್ ಸುವರ್ಣ ಮತ್ತು ತಂಡದವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.
ಏನಿದು ಐಎಸ್ಒ 9001:2015 ಮಾನ್ಯತೆ?: ಐಎಸ್ಒ 9001:2015 ಒಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಗುಣಮಟ್ಟ ನಿರ್ವಹಣಾ ಮಾನದಂಡವಾಗಿರುತ್ತದೆ. ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವ ಹಾಗೂ ನಿರಂತರವಾಗಿ ಗುಣಮಟ್ಟ ಸುಧಾರಣಾ ಪ್ರಕ್ರಿಯೆಗೊಳಗೊಳ್ಳಬಯಸುವ ಯಾವುದೇ ಸಂಸ್ಥೆಯೂ ಐಎಸ್ಒ 9001:2015 ಪ್ರಮಾಣೀಕರಣಕ್ಕೊಗಾಗಬಹುದಾಗಿದೆ. ಐಎಸ್ಒ 9001:2015 ಪ್ರಮಾಣೀಕರಣವು ಸಂಸ್ಥೆಗಳಿಗೆ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ, ಹಾಗೂ ಕಾರ್ಯದಕ್ಷತೆಯನ್ನು ಸುಧಾರಿಸುವ ಮೂಲಕ ಇನ್ನಷ್ಟು ಹೊಸ ಅವಕಾಶಗಳಿಗೆ ಅನುವುಮಾಡಿಕೊಡುತ್ತದೆ. ಇದು ಗುಣಮಟ್ಟದ ನಿರ್ವಹಣೆ ಮತ್ತು ಗ್ರಾಹಕರ ತೃಪ್ತಿಗೆ ಸಂಸ್ಥೆಯ ಬದ್ಧತೆಗೆ ಸಾಕ್ಷಿಯಾಗಿ ಕಾರ್ಯನಿರ್ವಹಿಸುತ್ತದೆ, ಸಂಸ್ಥೆಯ ಗುಣಮಟ್ಟದ ಬಗ್ಗೆ ಇತರರಿಗೆ ನಂಬಿಕೆ ಮತ್ತು ವಿಶ್ವಾಸವನ್ನು ಉಂಟುಮಾಡಲು ಸಹಾಯ ಮಾಡುತ್ತದೆ. ಈ ಪ್ರಮಾಣೀಕರಣಕ್ಕೊಳಗೊಳ್ಳಬಯಸುವ ಸಂಸ್ಥೆಯು ತನ್ನ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯನ್ನು ಐಎಸ್ಒ 9001:2015 ಸಂಸ್ಥೆಯ ಮಾನದಂಡಗಳ ಪ್ರಕಾರ ದಾಖಲಿಸಿ, ಆಂತರಿಕ ಹಾಗೂ ಬಾಹ್ಯ ಮೌಲ್ಯಮಾಪನಕ್ಕೊಳಗಾಗಬೇಕಾಗಿರುತ್ತದೆ. ಮೌಲ್ಯಾಂಕನಕ್ಕೊಳಗಾಗುವ ಸಂಸ್ಥೆಯ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯು ಐಎಸ್ಒ 9001:2015 ಮಾನದಂಡಗಳಿಗೆ ಅನುಗುಣವಾಗಿದ್ದಲ್ಲಿ ಆ ಸಂಸ್ಥೆಗೆ ಪ್ರಮಾಣೀಕರಣವನ್ನು ನೀಡಲಾಗುತ್ತದೆ.
ಈ ಅಂತರಾಷ್ಟ್ರೀಯ ಮನ್ನಣೆಯು ಸಂತ ಫಿಲೋಮಿನಾ ಕಾಲೇಜಿನ ಗುಣಮಟ್ಟ ನಿರ್ವಹಣಾ ಪ್ರಕ್ರಿಯ ಪ್ರಮುಖ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕಾಲೇಜಿನ ಎಲ್ಲ ದಾಖಲೆಗಳನ್ನು ಆಂತರಿಕ ಹಾಗೂ ಬಾಹ್ಯ ಮರು ಮೌಲ್ಯಮಾಪನಕ್ಕೆ ಒಳಪಡಿಸಿ ಮಾನ್ಯತೆ ನವೀಕರಿಸ ಕೊಳ್ಳಬೇಕಾಗುತ್ತದೆ. ಈ ಮಾನ್ಯತೆಗೆ 3 ವರ್ಷಗಳ ಕಾಲಾವಧಿಯಿರುತ್ತದೆ. ಮುಂಬರುವ ದಿನಗಳಲ್ಲಿ ಕಾಲೇಜು ಐಎಸ್ಒ 9001:2015 ಮಾನ್ಯತೆ ಮೂಲಕ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅವಕಾಶವನ್ನು ಒದಗಿಸುವುದು ಮತ್ತು ಅವರ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಸಾಧ್ಯವಾದಷ್ಟು ಉತ್ತಮ ಫಲಿತಾಂಶಗಳನ್ನು ಸಾಧಿಸುವುದು, ವಿದ್ಯಾರ್ಥಿಗಳ ಶೈಕ್ಷಣಿಕ ಉತ್ಕೃಷ್ಟತೆ ಮತ್ತು ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ಪ್ರಾಮುಖ್ಯತೆ ನೀಡುವುದು, ಅತ್ಯಾಧುನಿಕ ಕಲಿಕಾ ಸೌಕರ್ಯಗಳ ಮೂಲಕ ಅನುಕೂಲಕರ ಕಲಿಕೆಯ ವಾತಾವರಣವನ್ನು ನಿರ್ವಹಿಸುವುದು, ಅಧ್ಯಾಪಕರ ಸಾಮರ್ಥ್ಯದ ಮಟ್ಟವನ್ನು ಹೆಚ್ಚಿಸುವುದು, ಆಧುನಿಕ ಬೋಧನೆ-ಕಲಿಕೆಯ ತಂತ್ರಗಳು/ಪ್ರಕ್ರಿಯೆಗಳನ್ನು ಅಳವಡಿಸಿಕೊಳ್ಳಲು ಅವರನ್ನು ಪ್ರೋತ್ಸಾಹಿಸುವುದು, ಉದ್ಯಮ ಅಥವಾ ಇತರ ಸಂಸ್ಥೆಗಳೊಡನೆ ಸಹಯೋಗ ಹಾಗೂ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯ ನಿರಂತರ ಸುಧಾರಣೆಯನ್ನು ಖಚಿತಪಡಿಸಿಕೊಳ್ಳುವುದು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಸ್ಥಳೀಯ10 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಮಂಗಳೂರು5 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ9 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್10 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಸಿನೆಮಾ9 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ10 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್9 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ5 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!




















