ಬೆಂಗಳೂರು
Gold Rate Today : ಚಿನ್ನ ತಟಸ್ಥ – ಬೆಳ್ಳಿ ತುಸು ಇಳಿಕೆ – ಇಲ್ಲಿದೆ ಇಂದಿನ ದರ ಪಟ್ಟಿ
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ, ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ: 60,800 ರೂ.
24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ: 66,330ರೂ.
ಬೆಳ್ಳಿ ಬೆಲೆ 1 ಕೆಜಿ: 75,500 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,590 ರೂಪಾಯಿ ಇತ್ತು. ಆದರೆ ಇಂದು 60,380 ರೂಪಾಯಿ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 66,100 ರೂಪಾಯಿ ಇತ್ತು. ಆದರೆ ಇಂದು 65,870 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರೆಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 60,800ರೂ.
ಮುಂಬೈ: 60,800 ರೂ
ದೆಹಲಿ: 60,950 ರೂ.
ಕೇರಳ: 60,800ರೂ.
ಅಹ್ಮದಾಬಾದ್: 60,850 ರೂ.
ಜೈಪುರ್: 60,950 ರೂ
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
ಶಿಕ್ಷಣ
Special classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು: ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.
ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರಿಂದ ಕಡ್ಡಾಯವಾಗಿ ಲಿಖಿತ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಇಲಾಖೆ ಸೂಚಿಸಿದೆ.
ಅಲ್ಲದೆ, ವಿಶೇಷ ತರಗತಿಗಳನ್ನು ನಡೆಸುವ ಕುರಿತು ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ನಡವಳಿ ದಾಖಲಿಸಬೇಕು. ತರಗತಿಗಳನ್ನು ನಡೆಸುತ್ತಿರುವ ಮಾಹಿತಿಯನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ನೀಡುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.
ಬಿಗ್ ನ್ಯೂಸ್
KRS-ಕೆಆರ್‌ಎಸ್‌ಗೆ ಎತ್ತಿನಹೊಳೆ ನೀರು..! ನೀರಿನ ಮಟ್ಟ ಹೆಚ್ಚಿಸಲು ಹೊಸ ಮಾರ್ಗ
ಮಳೆ ಕೊರತೆ ಹಾಗೂ ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್‌ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ.
ಸಕಲೇಶಪುರ: ಮಳೆ ಕೊರತೆ ಹಾಗೂ ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್‌ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ನಾಗರ ಗ್ರಾಮದ ವಿತರಣಾ ಘಟಕದಿಂದ ಕಳೆದ ಒಂದು ವಾರದಿಂದ ಎತ್ತಿನಹೊಳೆ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ. ಅಲ್ಲಿಂದ ಗೊರೂರು ಜಲಾಶಯದ ಮೂಲಕ ಕಾವೇರಿ ನದಿಗೆ ಸೇರಿ ಕೆಆರ್‌ಎಸ್ ಅಣೆಕಟ್ಟಿನತ್ತ ನೀರು ಸಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಸಕ್ತ ವರ್ಷ ಮಳೆ ಪ್ರಮಾಣ ಕಡಿಮೆಯಾಗಿದ್ದು, ಕಾವೇರಿ ನೀರಾವರಿ ನಿಯಂತ್ರಣ ಪ್ರಾಧಿಕಾರದ ನಿರ್ದೇಶನದಂತೆ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ ಎತ್ತಿನಹೊಳೆ ನೀರನ್ನು ಪರ್ಯಾಯವಾಗಿ ಬಳಸಲಾಗುತ್ತಿದೆ ಎನ್ನಲಾಗಿದೆ.
ಎತ್ತಿನಹೊಳೆ ಯೋಜನೆಯಡಿ ಮೇ 15ರಿಂದ ಅಕ್ಟೋಬರ್ ಅಂತ್ಯದವರೆಗೆ ಎಂಟು ಚೆಕ್‌ಡ್ಯಾಮ್‌ಗಳಿಂದ ನೀರನ್ನು ಮೇಲೆತ್ತಿ ಬೇಲೂರು-ಅರಸೀಕೆರೆ ಮಾರ್ಗವಾಗಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬರಪೀಡಿತ ಏಳು ಜಿಲ್ಲೆಗಳಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಆದರೆ ಅರಸೀಕೆರೆ ಹಾಗೂ ತುಮಕೂರು ಭಾಗಗಳಲ್ಲಿ ಯೋಜನೆಯ ಕಾಮಗಾರಿಗಳು ಇನ್ನೂ ಸಂಪೂರ್ಣಗೊಂಡಿಲ್ಲ.
ಯೋಜನಾ ಪ್ರದೇಶದ 32ನೇ ಕಿ.ಮೀ. ವ್ಯಾಪ್ತಿಯ ಬೆಟ್ಟದಲೂರು ಸಮೀಪ ಕಾಗೇಹಳ್ಳಕ್ಕೆ ನೀರು ಹರಿಸಿ, ಮಾರಿಕಣಿವೆ ಮೂಲಕ ಎತ್ತಿನಹೊಳೆ ನೀರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರಕ್ಕೆ ತಲುಪಿಸುವ ವ್ಯವಸ್ಥೆ ಇದೆ. ಈ ಮಾರ್ಗದಲ್ಲಿರುವ ಬಹುತೇಕ ಕೆರೆಕಟ್ಟೆಗಳು ಈಗಾಗಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
2024ರಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಯಾಗಿದ್ದು, ಆ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಮೇಲೆತ್ತಲು ಸಾಧ್ಯವಾಗಿರಲಿಲ್ಲ. 2025ರಲ್ಲಿ ಸುಮಾರು 4.5 ಟಿಎಂಸಿ ನೀರನ್ನು ಮೇಲೆತ್ತಲಾಗಿತ್ತು. ಪ್ರಸಕ್ತ ವರ್ಷದ ಸೆಪ್ಟೆಂಬರ್ ಅಂತ್ಯದವರೆಗೆ 1.57 ಟಿಎಂಸಿ ನೀರನ್ನು ಮಾತ್ರ ಮೇಲೆತ್ತಲಾಗಿದೆ ಎಂದು ತಿಳಿದುಬಂದಿದೆ.
ಇದರಲ್ಲಿ ಸುಮಾರು 57 ಕ್ಯುಸೆಕ್ ನೀರನ್ನು ಹೇಮಾವತಿ ನದಿಗೆ ಹರಿಸಲಾಗಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆಯಡಿ ಮೇಲೆತ್ತಿದ ಸಂಪೂರ್ಣ ನೀರನ್ನು ಕಾಗೇಹಳ್ಳಕ್ಕೆ ಹರಿಸಿದರೆ ರೈತರ ಜಮೀನುಗಳು ಜಲಾವೃತವಾಗುವ ಸಾಧ್ಯತೆ ಇರುವುದರಿಂದ, ಸದ್ಯ ಅಲ್ಪ ಪ್ರಮಾಣದ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
ಪುತ್ತೂರು21 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್24 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು23 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್22 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ23 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ22 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ23 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ23 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















