Connect with us

ರಾಜಕೀಯ

MLA Ashok Rai-ಕೋಡಿಂಬಾಡಿ ಗ್ರಾಮ: ಡೆಕ್ಕಾಜೆ- ಪರನೀರು ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ; 40 ವರ್ಷಗಳ ವಿವಾದ ಮಾತುಕತೆ ಮೂಲಕ ಇತ್ಯರ್ಥ: ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರ ಸಾಥ್

Published

on

Ad Widget

Ad Widget

Ad Widget

Ad Widget

ಪುತ್ತೂರು: ಕೋಡಿಂಬಾಡಿ ಗ್ರಾಮದ ಡೆಕ್ಕಾಜೆ ಪರನೀರು ರಸ್ತೆ ವಿವಾದ ಕೊನೆಗೂ ಇತ್ಯರ್ಥವಾಗಿದೆ, ಕಳೆದ 40 ವರ್ಷಗಳಿಂದ ಇದ್ದ ಈ ವಿವಾದವನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಮಾತುಕತೆ ಮೂಲಕ ಇತ್ಯರ್ಥ ಮಾಡಿದ್ದು ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ಅವರ ಮುತವರ್ಜಿಯಿಂದ ಭಾರೀ ವಿವಾದವೊಂದು ಇತ್ಯರ್ಥವಾಗಿದ್ದು ಮಾತ್ರವಲ್ಲದೆ ರಸ್ತೆ ನಿರ್ಮಾಣ ಕಾರ್ಯವೂ ನಡೆದಿದೆ.

Ad Widget

Ad Widget

Ad Widget

Ad Widget

ಏನಿದು ವಿವಾದ?
ಡೆಕ್ಕಾಜೆ ಪರನೀರು ರಸ್ತೆಯ ವಿವಾದ ಸೃಷ್ಟಿಯಗಿ ಸುಮಾರು 40 ವರ್ಷಗಳು ಕಳೆದಿದೆ. ರಸ್ತೆ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು. ಕೋಡಿಂಬಾಡಿ ಗ್ರಾಪಂನಿಂದ ಹಿಡಿದು ಹೈಕೋರ್ಟು, ಲೋಕಾಯುಕ್ತ ನ್ಯಾಯಾಲಯ ಬಹುಶ: ಎಲ್ಲಾ ನ್ಯಾಯಾಲಯಗಳಲ್ಲೂ ಈ ವ್ಯಾಜ್ಯ ತಲುಪಿತ್ತು. ಆದರೆ ಇದುವರೆಗೂ ಸ್ಪಷ್ಟವಾದ ಪರಿಹಾರ ಅಥವಾ ರಸ್ತೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶವೂ ಬಂದಿರಲಿಲ್ಲ. ಕೋಡಿಂಬಾಡಿ ಗ್ರಾಪಂ ಗ್ರಾಮಸಭೆ ಹಾಗೂ ಸಾಮಾನ್ಯ ಸಭೆಗಳಲ್ಲಿ ಈ ರಸ್ತೆ ವಿಚಾರ ಪ್ರತೀ ವರ್ಷವೂ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಹಲವು ಬಾರಿ ಇದೇ ಕಾರಣಕ್ಕೆ ಗ್ರಾಮಸಭೆಯೇ ಅಲ್ಲೋಲ ಕಲ್ಲೋಲವಾಗಿತ್ತು. ಆದರೆ ಪರಿಹಾರ ಅಥವಾ ವಿವಾದ ಇತ್ಯರ್ಥ ಮಾಡಲು ಸಾದ್ಯವಾಗಿರಲಿಲ್ಲ.

Ad Widget

Ad Widget alt="Ad Widget"/>

Ad Widget

ಸಂಘಟನೆಗಳ ಪ್ರಯತ್ನವೂ ವಿಫಲವಾಗಿತ್ತು
ವಿವಿಧ ಸಂಘಟನೆಗಳ ಮುಖಂಡರು, ಜಾತಿ ಸಂಘಟನೆಗಳ ಮುಖಂಡರು, ಧಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ವ್ಯಾಜ್ಯದ ಬಗ್ಗೆ ರಾಜಿಮಾತುಕತೆ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಮಾಜಿ ಶಾಸಕರ ಬಳಿಯೂ ಇದೇ ವಿಚಾರವನ್ನು ಕೊಂಡೊಯ್ಯಲಾಗಿತ್ತಾದರೂ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಪರನೀರು ಡೆಕ್ಕಾಜೆ ರಸ್ತೆ ವಿಚಾರ ಗ್ರಾಮದ ಪ್ರತೀಯೊಬ್ಬರಿಗೂ ಗೊತ್ತಿದೆ ಎನ್ನುವಷ್ಟರ ಮಟ್ಟಿಗೆ ಇಲ್ಲಿ ವಿವಾದ ಜೀವಂತವಾಗಿತ್ತು. ರಾಜಿಮಾತುಕತೆ ಎಲ್ಲವೂ ವಿಫಲವಾದಾಗ ಇನ್ನೇನು ಮಾಡಲು ಸಾಧ್ಯವಿಲ್ಲ ಎಂದು ರಸ್ತೆ ಬೇಡಿಕೆಯಿತ್ತ ಕುಟುಂಬಗಳು ರಸ್ತೆ ನಿರ್ಮಾಣದ ಆಸೆಯನ್ನೇ ಬಿಟ್ಟಿದ್ದರು.

Ad Widget

Ad Widget <> Ad Widget

ಕೊಂಡಿಯಂತೆ ಕೆಲಸ ಮಾಡಿದ ಗ್ರಾಪಂ ಉಪಾಧ್ಯಕ್ಷ
ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ರವರು ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ಕೊಂಡಿಯಂತೆ ಕೆಲಸ ಮಾಡಿದರು. ಇಲ್ಲಿನ ವಿವಾದವನ್ನು ಮುಗಿಸಲೇಬೇಕು ಎಂಬ ಉದ್ದೇಶದಿಂದ ತಾನು ಕೆಲವರನ್ನು ಸೇರಿಸಿ ಒಂದು ಹಂತದ ಮಾತುಕತೆಯನ್ನು ನಡೆಸಿದ ಬಳಿಕ ಪುತ್ತೂರು ಶಾಸಕರಾದ ಅಶೋಕ್ ರೈ ಗಮನಕ್ಕೆ ತಂದಿದ್ದಾರೆ. ವಿವಾದಕ್ಕೆ ವಿವಾದ ಮೊದಲೇ ಗೊತ್ತಿದ್ದ ಶಾಸಕರು ಎರಡೂ ಕಡೆಯವನರನ್ನು ಕರೆಸಿ ಮಾತುಕತೆ ನಡೆಸಿದರು. ಒಂದೆರು ಹಂತದ ಮಾತುಕತೆ ನಡೆಸಿದ ಬಳಿಕ ಎರಡೂ ಕಡೆಯವರು ಒಪ್ಪಿಕೊಂಡರು. ವಿವಾದವನ್ನು ಇತ್ಯರ್ಥ ಪಡಿಸುವುದು ಮತ್ತು ಈ ಹಿಂದೆ ರಸ್ತೆಗಳಾಗಿ ವಿವಿಆದ ಕಡೆಗಳಲ್ಲಿ ಹಾಕಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯುವುದು ಸೇರಿದಂತೆ ಎಲ್ಲಾ ವಿದದ ಮಾತುಕತೆಗಳನ್ನು ನಡೆಸಿದ ಶಾಸಕರು ಕೊನೆಗೂ 40 ವರ್ಷಗಳ ಹಿಂದಿನ ವಿವಾದವನ್ನು ಇತ್ಯರ್ಥ ಪಡಿಸಿದ್ದಾರೆ. ವಿವಾದ ಇತ್ಯರ್ಥವಾದ ಬಳಿಕ ಸುಮಾರು 15 ಅಡಿ ಅಗಲದ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ. ಈ ರಸ್ತೆಯನ್ನು ಶಾಸಕರು ಅಲ್ಲಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಅತ್ಯಂತ ಸಂತೋಷವಾಗಿದೆ: ಅಶೋಕ್ ರೈ
ಡೆಕ್ಕಾಜೆ -ಪರನೀರು ರಸ್ತೆ ವಿವಾದ ಇತ್ಯರ್ಥಗೊಂಡಿರುವುದು ನನಗೆ ಅತ್ಯಂತ ಸಂತೋಷವಾಗಿದೆ. ನಮ್ಮ ಮಾತಿಗೆ ಗೌರವ ಕೊಡುವ ಕೆಲಸ ಎರಡೂ ಕಡೆಯಿಂದ ಆಗಿದೆ, ಅವರ ಮಾತಿಗೂ ನಾವು ಗೌರವ ಕೊಡುತ್ತೇವೆ. ಏನೋ ಒಂದು ಸಣ್ಣ ಗಳಿಗೆಯಲ್ಲಿ ಉಂಟಾಗಿದ್ದ ವಿವಾದ 40 ವರ್ಷಗಳ ಬಳಿಕ ಇತ್ಯರ್ಥವಾಗಿದೆ. ರಸ್ತೆ ನಿರ್ಮಾಣ ಕಾರ್ಯವೂ ಆಗಿದೆ. ಮುಂದಿನ ದಿನಗಳಲ್ಲಿ ಈ ರಸ್ತೆಗೆ ಕಾಂಕ್ರೀಟ್ ಕೂಡಾ ಆಗಲಿದೆ. ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಶಾಸಕರು ಹೇಳಿದ್ದಾರೆ.

Ad Widget

Ad Widget

ಎಲ್ಲರಿಗೂ ಕೃತಜ್ಞತೆಗಳು: ಪದ್ಮಪ್ಪ ಪೂಜಾರಿ,ರಸ್ತೆ ಹೋರಾಟಗಾರರು
ಪುತ್ತೂರಿನ ಶಾಸಕರಾದ ಅಶೋಕ್ ರೈಯವರ ನೇತೃತ್ವ ಹಾಗೂ ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ಸಹಕಾರದಿಂದಾಗಿ ಕಳೆದ ೪೦ ವರ್ಷಗಳಿಂದ ಇದ್ದ ವಿವಾದ ಇತ್ಯರ್ಥವಾಗಿದೆ. ಓರ್ವ ಜನಪ್ರತಿನಿಧಿ ಮನಸ್ಸು ಮಾಡಿದರೆ ಏನೂ ಮಾಡಬಹುದು ಎಂಬುದಕ್ಕೆ ಅಶೋಕ್ ರೈ ಸಾಕ್ಷಿಯಾಗಿದ್ದಾರೆ. ಶಾಸಕರ ನೇತೃತ್ವ ಇಲ್ಲದೇ ಇರುತ್ತಿದ್ದರೆ ಈ ವಿವಾದ ಇತ್ಯರ್ಥ ವಾಗುತ್ತಿರಲಿಲ್ಲ. ಎಲ್ಲರಿಗೂ ಸಂತೋಷವಾಗಲಿ.

ಜಯಪ್ರಕಾಶ್ ಬದಿನಾರ್, ಗ್ರಾಪಂ ಉಪಾಧ್ಯಕ್ಷರು
40 ವರ್ಷಗಳ ವಿವಾದ ಇತ್ಯರ್ಥವಾಗಿದೆ, ನಾವೆಲ್ಲರೂ ಇದರಲ್ಲಿ ಭಾಗಿಯಾಗಿದ್ದರೂ ಶಾಸಕ ಅಶೋಕ್ ರೈಯವರು ರಾಜಿ ಮಾತುಕತೆಯ ನೇತೃತ್ವ ವಹಿಸಿಕೊಳ್ಳದೇ ಇರುತ್ತಿದ್ದರೆ ಇದು ಇತ್ಯರ್ಥವಾಗುತ್ತಲೇ ಇರಲಿಲ್ಲ. ಯಾರಿಂದಲೂ ಸಾಧ್ಯವಾಗದ ಕೆಲಸವನ್ನು ಶಾಸಕರು ಮಾಡಿದ್ದಾರೆ. ನಾಲ್ಕರಿಂದ 5 ಕುಟುಂಬಗಳನ್ನು ಒಂದುಗೂಡಿಸುವ ಪುಣ್ಯದ ಕಾರ್ಯವನ್ನು ಮಾಡಿದ್ದಾರೆ. ಓರ್ವ ಶಾಸಕನಾದವರು ಜನತೆಗೆ ಹೇಗೆ ಒಳಿತನ್ನು ಬಯಸಬಹುದು ಎಂಬುದಕ್ಕೆ ಶಾಸಕರು ಮಾದರಿಯಾಗಿದ್ದಾರೆ. ಶಾಸಕರ ಈ ಕಾರ್ಯಕ್ಕೆ ಗ್ರಾಮವೇ ಸಂತೋಷಗೊಂಡಿದೆ.

ಶಾಸಕರಿಗಾಗಿ ನಾವು ಒಂದಾಗಿದ್ದೇವೆ: ವೀರಪ್ಪ ಪೂಜಾರಿ
ಶಾಸಕರಾದ ಅಶೋಕ್ ರೈಯವರ ಮನವಿ ಮಾಡಿದ ಕಾರಣಕ್ಕೆ ನಾವು ಎಲ್ಲ ವಿಚಾರವನ್ನು ಬದಿಗಿಟ್ಟು ಶಾಸಕರಿಗಾಗಿ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಿದ್ದೇವೆ. ಶಾಸಕರು ಈ ವಿಚಾರದಲ್ಲಿ ಕೈ ಹಾಕದೇ ಇರುತ್ತಿದ್ದರೆ ಇನ್ನಷ್ಟು ವರ್ಷ ವಿವಾದ ಹಾಗೆಯೇ ಇರುತ್ತಿತ್ತು. ಶಾಸಕರ ತಂದೆಯವರು ನಮ್ಮ ಗುರುಗಳಾಗಿದ್ದಾರೆ. ಒಳ್ಳೆಯದಕ್ಕೆ ರಸ್ತೆ ಆಗುವುದಾದರೆ ನಮ್ಮ ಅಭ್ಯಂತರವಿಲ್ಲ. ಪರಸ್ಪರ ಸಹಕಾರದಿಂದ ಏನೂ ಬೇಕಾದರೂ ಮಾಡಬಹುದು. ಶುಭವಾಗಲಿ ಎಂದು ಸ್ಥಳೀಯರಾದ ವೀರಪ್ಪ ಪೂಜಾರಿಯವರು ಅಭಿಪ್ರಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಪರವಾಗಿ ಶಾಸಕರನ್ನು ಗೌರವಿಸಲಾಯಿತು. ಶಾಸಕರು ರಸ್ತೆ ನಿರ್ಮಾಣಕ್ಕೆ ಜಾಗ ನೀಡಿದ ಎಲ್ಲರನ್ನೂ ಗೌರವಿಸಿದರು. ಕಾರ್ಯಕ್ರಮದಲ್ಲಿ ಮುರಳೀಧರ್ ರೈ ಮಟಂತಬೆಟ್ಟು, ನಿರಂಜನ್ ರೈ ಮಠಂತಬೆಟ್ಟು, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜಾರಾಂ ಕೆ ಬಿ, ಕೋಡಿಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾ ದ ಮೋನಪ್ಪ ಗೌಡ, ಕೋಡಿಂಬಾಡಿ ಗ್ರಾಪಂ ಅಧ್ಯಕ್ಷೆ ಮಲ್ಲಿಕಾ, ಹಿರಿಯರಾದ ಸೀತಾರಾಮ ಶೆಟ್ಟಿ ಹಗ್ಗಡೆಹಿತ್ಪು, ಪದ್ಮಪ್ಪ ಪೂಜಾರಿ,ಪಂಜಿಗುಡ್ಡೆ ಈಶ್ವರಭಟ್, ರೂಪೇಶ್ ಶೆಟ್ಟಿ ಅಲಿಮಾರ್, , ಸದಸ್ಯರಾದ ಪುಷ್ಪಾ ನಾಯ್ಕ, ವೀರಪ್ಪ ಪೂಜಾರಿ ಡೆಕ್ಕಾಜೆ, ಕೃಷ್ಣ ಪ್ರಭು ಕೋಲಾಜೆ, ಪದ್ಮನಾಭ ಶೆಟ್ಟಿ ರೆಂಜಾಜೆ, ವಿಕ್ರಂ ಶೆಟ್ಟಿ ಅಂತರ, ಯೋಗೀಶ್ ಸಾಮಾನಿ, ಪದ್ಮನಾಭ ಆಚಾರಿ ಪರನೀರು, ಶಿವಪ್ರಸಾದ್ ಕೋಡಿಂಬಾಡಿ, ಸುಬ್ರಹ್ಮಣ್ಯ ಶೆಟ್ಟಿ ರೆಂಜಾಜೆ, ಪ್ರೇಮ ಪರನೀರು, ಪ್ರೇಮ ಡೆಕ್ಕಾಜೆ ಮೊದಲಾದವರು ಉಪಸ್ಥಿತರಿದ್ದರು.

Ad Widget
Click to comment

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!