Connect with us

ರಾಜಕೀಯ

Sanjeeva Matanduru-ಪುತ್ತೂರು ಶಾಸಕರು ಬ್ಯಾನರ್ ನಲ್ಲಿ ಹಾಕಿರುವ ಅನುದಾನ ಯಾವ ವರ್ಷ? ಯಾವ ಸರಕಾರ? ಯಾವ ಶಾಸಕರ ಅವಧಿಯಲ್ಲಿ ಬಂತು ? ಸಂಜೀವ ಮಠಂದೂರು

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಈಗಿನ ಶಾಸಕರ ಅವಧಿಯಲ್ಲಿ ಪುತ್ತೂರಿಗೆ ಹಣದ ಹೊಳೆಯೇ ಹರಿದು ಬಂದಿದೆ. ಶಿಲಾನ್ಯಾಸ ಮಾಡಲು ಸಮಯ ಇಲ್ಲದಷ್ಟು ಅನುದಾನ ಬಂದಿದೆ ಎಂದು ಹೇಳುತ್ತಾ ಪುತ್ತೂರಿನ ಪ್ರಜ್ಞಾವಂತ ಮತದಾರರನ್ನು ದಾರಿ ತಪ್ಪಿಸುವ ಕೆಲಸ ಈಗಿನ ಪುತ್ತೂರು ಶಾಸಕರಿಂದ ಆಗುತ್ತಿದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಶಾಸಕ ಅಶೋಕ್ ರೈ ಹೆಸರು ಉಲ್ಲೇಖಿಸದೆ ಟಾಂಗ್ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರಿನ ವಾರ್ತಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಡಿದ ಅವರು , ಪುತ್ತೂರಿಗೆ 1474.29 ಕೋಟಿ ಅನುದಾನ ಬಂದಿದೆ ಎಂದು ಬ್ಯಾನರ್ ಬರೆದು ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆಯ ಶಬ್ದದೊಂದಿಗೆ ನುಗ್ಗಿ ದಾಂಧಲೆ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಹಾಲಿ ಶಾಸಕರು ಪ್ರಕಟಿಸಿರುವ ಬ್ಯಾನರ್ನಲ್ಲಿ ಮತ್ತು ಅವರು ಭಾಷಣಗಳಲ್ಲಿ ಘೋಷಿಸುವ ಅನುದಾನಗಳು ಪ್ರಸ್ತುತ ಅವರ ಅವಧಿಯಲ್ಲಿ ಬಿಡುಗಡೆಗೊಂಡ ಅನುದಾನಗಳ ಮೊತ್ತ ಎಷ್ಟು.? ಹಿಂದಿನ ಭಾಜಪಾ ಸರಕಾರ ಇದ್ದಾಗ ಬಿಡುಗಡೆಗೊಂಡ ಅನುದಾನಗಳು ಎಷ್ಟು.? ಎಲ್ಲವೂ ನಮ್ಮದೇ ಸರಕಾರ ಸಾಧನೆ, ನಾನೇ ಮಾಡಿದ್ದು ಎನ್ನುವ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಅವರು ಬ್ಯಾನರ್ ನಲ್ಲಿ ಹಾಕಿರುವ ಅನುದಾನ ಯಾವ ವರ್ಷ? ಯಾವ ಸರಕಾರ? ಯಾವ ಶಾಸಕರ ಅವಧಿಯಲ್ಲಿ ಬಂತು ? ಎಂದು ಪ್ರಶ್ನಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಸುಮಾರು 300 ದಿವಸಗಳು ಆಗಿದ್ದು ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ತಾವು ಚುನಾವಣೆ ಸಂದರ್ಭ ಘೋಷಿಸಿದ ಗ್ಯಾರಂಟಿಗಳಿಸ್ಕೋರ ಒಂದು ವರ್ಷದ ಅವಧಿಗೆ ಯಾವುದೇ ಅಭಿವೃದ್ಧಿ ಅನುದಾನ (2023-24ರ ಅವಧಿಗೆ) ದೊರೆಯುವುದಿಲ್ಲ ಎಂದಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲಾ ಶಾಸಕರು ಸಹಕಾರ ಮಾಡಬೇಕು ಎಂದು ವಿನಂತಿಸಿರುವ ಈ ಸಂದರ್ಭದಲ್ಲಿ ಬಹಳಷ್ಟು ಕಾಂಗ್ರೇಸ್ ಪಾರ್ಟಿಯ ಶಾಸಕರು ಅಪಸ್ವರ ಎಬ್ಬಿಸಿರುವ ವರದಿಯನ್ನು ಪತ್ರಿಕೆಗಳಲ್ಲಿ ನೋಡಿದ್ದೇವೆ. ಆದರೆ ಪುತ್ತೂರಿನ ಶಾಸಕರು ಮಾತ್ರ ಸುಳ್ಯ ಕ್ಷೇತ್ರಕ್ಕೆ ಬಂದ ಅನುದಾನವನ್ನು ತನ್ನ ಲೆಕ್ಕಕ್ಕೆ ಸೇರಿಸಿ ತನ್ನದೇ ಸಾಧನೆ ಎಂಬಂತೆ ಪ್ರಚಾರ ಪಡಿಸುತ್ತಿದ್ದಾರೆ ಎಂದರು.

Ad Widget

Ad Widget <> Ad Widget

ಶಾಸಕರು ಬ್ಯಾನರ್ ನಲ್ಲಿ ಪ್ರಕಟಿಸಿರುವ ಯೋಜನೆಗಳಲ್ಲಿ ಪ್ರಮುಖ ಯೋಜನೆಗಳು ಈ ಹಿಂದೆ ನಾನು ಪುತ್ತೂರಿನ ಶಾಸಕರಾಗಿದ್ದಾಗ ನಮ್ಮ ಭಾಜಪಾ ಸರಕಾರದ ಅವಧಿಯಲ್ಲಿ ಬಿಡುಗಡೆಗೊಂಡಿರುವ ಅನುದಾನಗಳು ಮತ್ತು ನಡೆದ ಕಾಮಗಾರಿಗಳಾಗಿವೆ. ಇವರು ಸುಳ್ಳು ಹೇಳುತ್ತಿದ್ದು, ಇವರು ತಂದಿರುವುದಾಗಿ ಹೇಳುತ್ತಿರುವ 1474.29 ಕೋಟಿ ಅನುದಾನಗಳಲ್ಲಿ 1219 ಕೋಟಿ ರೂ ಮೊತ್ತದ ಯೋಜನೆ ನಮ್ಮ ಸರಕಾರದ ಯೋಜನೆ. ಇದರಲ್ಲಿ ಪುತ್ತೂರು ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಪುತ್ತೂರು ನಗರ ಸಭೆ ವ್ಯಾಪ್ತಿಯ ಜಲ ಸಿರಿ ಯೋಜನೆ ಸೇರಿದೆ ಎಂದು ಮಠಂದೂರು ಹೇಳಿದರು.



Ad Widget

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಡದ ನಮ್ಮ ಭಾಜಪಾದ ಶಾಸಕರಿರುವ ಸುಳ್ಯ ಕ್ಷೇತ್ರದ ಕೊಯಿಲಾ ಪಶು ವೈದ್ಯಕೀಯ ಕಾಲೇಜು, ನೀರಿನ ಸರಬರಾಜು ಮತ್ತು ಕೊಯಿಲಾ ಸಬ್ಸ್ಟೇಷನ್ ಸೇರಿ 483 ಕೋಟಿಯ ಯೋಜನೆಯನ್ನು ತಮ್ಮ ಅನುದಾನದ ಲೆಕ್ಕಕ್ಕೆ ಸೇರಿಸಿದ್ದಾರೆ. . ಇದು ನಮ್ಮ ಹಿಂದಿನ ಸರಕಾರದ ಸಾಧನೆ. ಇವೆರಡನ್ನು ಕಾಂಗ್ರೇಸ್ನ ಶಾಸಕರ ಪ್ರಕಟಿಸಿರುವ ಅನುದಾನಗಳಲ್ಲಿ ಕಡಿತಗೊಳಿಸಿದರೆ ಕೇವಲ 104 ಕೋಟಿ ಇವರ ಅವಧಿಯದ್ದು ಕಾಣಬಹುದು. ಆದರೆ ಇದು ಅವರ ಬರೀ ಆಶ್ವಾಸನೆಯೂ ಎಂಬುದನ್ನು ಕಾಲವೇ ಉತ್ತರಿಸಬೇಕು.
ಇನ್ನು ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಮಂಜೂರು ಆದದ್ದು ಸಂಪೂರ್ಣವಾಗಿ ಈ ಹಿಂದಿನ ಸರಕಾರ ಮಾಡಿರುವಂತದ್ದು ಇದರ ಬಗ್ಗೆ ಆಗ ಸಾಕಷ್ಟು ಚರ್ಚೆಗಳು ನಡೆದಿದೆ. ಪತ್ರಿಕೆಗಳಲ್ಲಿಯೂ ವರದಿಗಳು ಪ್ರಕಟಗೊಂಡಿವೆ. ಆದರೆ ಶಾಸಕರು ತಮ್ಮದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ.

ರಾಜಕೀಯ

Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ

Published

on



Ad Widget

Ad Widget

Ad Widget

Ad Widget

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

Ad Widget

Ad Widget <> Ad Widget

2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.



Ad Widget

ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.

Ad Widget

Ad Widget

ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.

ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್‌ ಮಾಜಿ ಅಧ್ಯಕ್ಷ ಸೌಕತ್‌ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.



Ad Widget

ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

Ad Widget

Ad Widget

ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.

ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.

Ad Widget
Continue Reading

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading