ಸಾಮಾಜಿಕ ಮಾಧ್ಯಮ
Renew DL-ಅವಧಿ ಮುಗಿದ 30 ದಿನದಲ್ಲಿ ಡಿಎಲ್ ನವೀಕರಿಸಿ: ಹೈಕೋರ್ಟ್
ವಾಹನ ಚಾಲನಾ ಪರವಾನಗಿಯ ಅವಧಿ ಮುಗಿದ ಸಮಯದಿಂದ 30 ದಿನಗಳ ಒಳಗೆ ನವೀಕರಣ ಮಾಡಿಸಿಕೊಳ್ಳಬೇಕು. ಒಂದೊಮ್ಮೆ ಅರ್ಜಿಸಲ್ಲಿಸದೆ ಇದ್ದು, ಅಪಘಾತ ಸಂಭವಿಸಿದರೆ ಅದರ ಪೂರ್ಣ ಪ್ರಮಾಣದ ಹೊಣೆಯನ್ನು ಚಾಲಕ ಹೊರಬೇಕಾಗುತ್ತದೆ ಹಾಗೂ ವಾಹನದ ಮಾಲೀಕ ಸಂತ್ರಸ್ತರಿಗೆ ಕೈಯಿಂದ ಪರಿಹಾರ ಪಾವತಿಸಬೇಕಾಗುತ್ತವೆ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಆದೇಶ ನೀಡಿದೆ.
ಪರವಾನಗಿ ಅವಧಿ ಮುಗಿದ ದಿನದಿಂದ 30 ದಿನಗಳಲ್ಲಿ ನವೀಕರಣಕ್ಕೆ ಅರ್ಜಿ ಸಲ್ಲಿಸಿರುವ ಬಗ್ಗೆ ಸಾಕ್ಷ್ಯ ಒದಗಿಸದ ಅಂಶ ಪರಿಗಣಿಸಿರುವ ಹೈಕೋರ್ಟ್, ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡಿ ಅಪಘಾತಕ್ಕೆ ಕಾರಣವಾದ ಆ್ಯಂಬುಲೆನ್ಸ್ ಚಾಲಕನ ಮೇಲೆ ಮೋಟಾರು ಅಪಘಾತ ಪರಿಹಾರ ಕ್ಷೇಮ ನ್ಯಾಯಾಧಿಕರಣ ಹೊರಿಸಿದ್ದ ಶೇ.50ರಷ್ಟು ಹೊಣೆಗಾರಿಕೆಯನ್ನು ಶೇ.100ಕ್ಕೆ ಹೆಚ್ಚಿಸಿ ಆದೇಶಿಸಿದೆ.
ಅಪಘಾತ ಪ್ರಕರಣವೊಂದರ ಸಂಬಂಧ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀಷಾ ನಂದ ಅವರ ಪೀಠ ಈ ಆದೇಶ ಮಾಡಿದೆ.
ಪ್ರಕರಣದ ವಿವರ: 2010ರ ಮೇ 29ರಂದು ಚಿತ್ರದುರ್ಗದ ಜೋಗಿಮಟ್ಟಿ ಪ್ರದೇಶ ಸಮೀಪ ಮಹೀಂದ್ರ ಮ್ಯಾಕ್ಸಿಕ್ಯಾಬ್ ಮತ್ತು ಆ್ಯಂಬುಲೆನ್ಸ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದರು. ಆ್ಯಂಬುಲೆನ್ಸ್ ಚಾಲಕನ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಜತೆಗೆ, ಸ್ವಲ್ಪ ಪ್ರಮಾಣದ ನಿರ್ಲಕ್ಷ್ಯವನ್ನು ಮ್ಯಾಕ್ಸಿ ಕ್ಯಾಬ್ ಚಾಲಕನ ಮೇಲೆ ಹೊರಿಸಿದ್ದರು.
ಜೀವ ರಕ್ಷಣೆ ಮಾಡಬೇಕಾದ್ದರಿಂದ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಮ್ಯಾಕ್ಸಿಕ್ಯಾಬ್ ಚಾಲಕ ದಾರಿ ಮಾಡಿಕೊಡಬೇಕು. ಈ ಪ್ರಕರಣದಲ್ಲಿ ಮ್ಯಾಕ್ಸಿಕ್ಯಾಬ್ ಚಾಲಕ ವೇಗ ಕಡಿಮೆ ಗೊಳಿಸಿ, ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಡದ ಹಿನ್ನೆಲೆಯಲ್ಲಿ ಅಪಘಾತ ಉಂಟಾಗಿದೆ ಎಂದು ನಿರ್ಧರಿಸಿದ್ದ ನ್ಯಾಯಾಧಿಕರಣ, ಮ್ಯಾಕ್ಸಿಕ್ಯಾಬ್ ಮತ್ತು ಆ್ಯಂಬುಲೆನ್ಸ್ ಚಾಲಕನ ಮೇಲೆ ತಲಾ ಶೇ.50ರಷ್ಟು ಅಪಘಾತದ ಹೊಣೆಗಾರಿಕೆ ನಿಗದಿಪಡಿಸಿ 2012ರ ಏ.18ರಂದು ಆದೇಶಿಸಿತ್ತು. ಘಟನೆಯಲ್ಲಿ ಗಾಯಗೊಂಡವರಿಗೆ ಶೇ. 50:50 ಅನುಪಾತದಲ್ಲಿ ಪರಿಹಾರ ಪಾವತಿಸು ವಂತೆ ಆ ಎರಡೂ ವಾಹನಗಳಿಗೆ ವಿಮಾ ಪಾಲಿಸಿ ವಿತರಿಸಿದ್ದ ಕಂಪನಿಗಳಿಗೆ ನಿರ್ದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಮ್ಯಾಕ್ಸಿ ಕ್ಯಾಬ್‌ಗೆ ವಿಮಾ ಪಾಲಿಸಿ ವಿತರಿಸಿದ್ದ ಯುನೈಟೆಡ್ ಇಂಡಿಯಾ ಇನ್ನೂರೆನ್ಸ್ ಕಂಪನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಮೇಲ್ಮನವಿದಾರ ಕಂಪನಿ ಪರ ವಕೀಲರು, ಆ್ಯಂಬುಲೆನ್ಸ್ ಚಾಲಕನ ಚಾಲನಾ ಪರವಾನಗಿ ಅವಧಿ 2010ರ ಏ.24ರಂದು ಪೂರ್ಣಗೊಂಡಿದೆ. 2010ರ ಮೇ 31ರಂದು ಪರವಾನಗಿ ನವೀಕರಣಗೊಂಡಿದೆ. ಮೇ 29ರಂದು ಅಪ ಘಾತ ನಡೆದಿದ್ದು, ಈ ವೇಳೆ ಚಾಲಕ ಚಾಲನಾ ಪರವಾನಗಿ ಹೊಂದಿರಲಿಲ್ಲ. ಆದ್ದರಿಂದ ಮಾಕ್ಸಿ ಕ್ಯಾಬ್ ಮೇಲೆ ಹೊರಿಸಿರುವ ಶೇ.50ರಷ್ಟು ಹೊಣೆಗಾರಿಕೆಯನ್ನು ಆ್ಯಂಬುಲೆನ್ಸ್ ಮಾಲೀಕನ ಮೇಲೆ ವರ್ಗಾಯಿಸಬೇಕು ಎಂದರು. ಆ್ಯಂಬುಲೆನ್ಸ್‌ಗೆ ವಿಮಾ ಪಾಲಿಸಿ ನೀಡಿದ್ದ ಕಂಪನಿ ಪರ ವಕೀಲರು, ನಿಯಮಗಳ ಪ್ರಕಾರ ಚಾಲನಾ ಪರವಾನಗಿ ನವೀಕರಣಕ್ಕೆ 30 ದಿನ ಕಾಲಾವಕಾಶ ಅವಕಾಶವಿರುತ್ತದೆ. ಕಾರ್ಯ ವಿಧಾನ ವಿಳಂಬ ಸಾಧ್ಯತೆ ಕಾರಣ ಈ 30 ದಿನದೊಳಗೆ ಪರವಾನಗಿ ನವೀಕರಣಕ್ಕೆ ಅರ್ಜಿ ಸಲ್ಲಿಸಿದ್ದರೆ ಪರವಾನಗಿ ನೀಡುವ ಅವಧಿಯು 30 ದಿನಗಳವರೆಗೆ ವಿಸ್ತರಣೆಯಾಗುತ್ತದೆ.
ಅಲ್ಲದೇ ಅವಧಿ ಮುಗಿದಿದ್ದರೂ ನವೀಕರಣ ಗೊಂಡ ರೀತಿಯಲ್ಲೇ ಪರವಾನಗಿದಾರನಿಗೆ ಪ್ರಯೋಜನ ಸಿಗುತ್ತದೆ ಎಂದು ತಿಳಿಸಿದರು. ಆ್ಯಂಬುಲೆನ್ಸ್ ವಿಮಾ ಕಂಪನಿಯ ವಕೀಲರ ವಾದ ಸ್ವೀಕಾರಾರ್ಹ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ, ಆದರೆ, ಈ ಪ್ರಕರಣದಲ್ಲಿ ಆ್ಯಂಬುಲೆನ್ಸ್ ಚಾಲಕನ ಪರವಾನಗಿ ಅವಧಿ ಮುಗಿದ ನಂತರದ 30 ದಿನಗಳ ಒಳಗೆ ನವೀಕರಣಕ್ಕೆ ಆರ್‌ಟಿಒಗೆ ಅರ್ಜಿ ಸಲ್ಲಿಸಿದ್ದ ಮತ್ತು ಅಪಘಾತ ನಡೆದ ದಿನ ಆ ಅರ್ಜಿ ಕುರಿತ ಪ್ರಕ್ರಿಯೆ ಬಾಕಿಯಿತ್ತು ಎಂಬ ಬಗ್ಗೆ ಯಾವುದೇ ಸಾಕ್ಷ್ಯ ಒದಗಿಸಿಲ್ಲ, ಇದರಿಂದ ಅಪಘಾತ ನಡೆದ ವೇಳೆ ಆ್ಯಂಬುಲೆನ್ಸ್ ಚಾಲಕ ಅಧಿಕೃತ ಪರವಾನಗಿ ಹೊಂದಿರಲಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಇದರಿಂದ ಮ್ಯಾಕ್ಸಿಕ್ಯಾಬ್ ಚಾಲಕನ ಮೇಲಿದ್ದ ಶೇ.50ರಷ್ಟು ಹೊಣೆಗಾರಿಕೆಯನ್ನು ಆ್ಯಂಬುಲೆನ್ಸ್ ಚಾಲಕನ ಮೇಲೆ ಹೊರಿಸುವುದು ಸೂಕ್ತವಾಗಿದೆ ಎಂದು ಹೈಕೋರ್ಟ್ ತೀರ್ಮಾನಿಸಿದೆ. ಅಲ್ಲದೆ, ಪ್ರಕರಣದ ಗಾಯಾಳುಗಳಿಗೆ ಸುಮಾರು 10 ಲಕ್ಷ ರೂ ಪರಿಹಾರ ಮೊತ್ತವನ್ನು ಶೇ.6ರಷ್ಟು ಬಡ್ಡಿದರದಲ್ಲಿ ಆ್ಯಂಬುಲೆನ್ಸ್ ಮಾಲೀಕನೇ ಪಾವತಿಸಬೇಕು. ಆ್ಯಂಬುಲೆನ್ಸ್‌ಗೆ ವಿಮಾ ಪಾಲಿಸಿ ವಿತರಿಸಿದ್ದ ಕಂಪನಿ ಸಹ ಯಾವುದೇ ಪರಿಹಾರ ಪಾವತಿಸುವಂತಿಲ್ಲ ಎಂದು ಆದೇಶಿಸಿದೆ.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ಅಂತರ ರಾಜ್ಯ23 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು17 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್18 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ21 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್23 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ21 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಅಂತರ ರಾಜ್ಯ21 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್
-
ಸ್ಥಳೀಯ24 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ



















