ಅಪರಾಧ
Mother Kills Baby ಎರಡು ವರ್ಷದ ಮಗಳನ್ನು ತಲೆದಿಂಬಿನಿಂದ ಉಸಿರುಕಟ್ಟಿಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ : ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸರಗೊಂಡು ತನ್ನ ಎರಡು ವರ್ಷದ ಮಗಳನ್ನು ಭೀಕರವಾಗಿ ಕೊಂದು ಬಳಿಕ ತಾಯಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ದಾರುಣ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪತಿ ಮತ್ತು ಅತ್ತೆ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದ ಚಿನ್ನಾ (24) ಎಂಬಾಕೆ ತನ್ನ ಎರಡು ವರ್ಷದ ಮಗು ಶ್ರೀಕಿತಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಾರ್ಚ್ 17 ರಂದು ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಘಟನೆ ನಡೆದಿದ್ದು, ಗೃಹಿಣಿ ಚಿನ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಮೂಲದ ಲಕ್ಷ್ಮೀ ನಾರಾಯಣ್, ಮೂರು ತಿಂಗಳ ಹಿಂದಷ್ಟೇ ಉದ್ಯೋಗ ಅರಸಿಕೊಂಡು ನಗರಕ್ಕೆ ಬಂದಿದ್ದರು. ಬಳಿಕ ಸಾಫ್ಟ್ವೇರ್ ಕಂಪನಿಯಲ್ಲಿ ನೌಕರಿ ಪಡೆದ ಆತ, ಸೀಗೇಹಳ್ಳಿಯಲ್ಲಿ ತನ್ನ ಪತ್ನಿ ಹಾಗೂ ಮಗಳ ಜತೆ ವಾಸವಾಗಿದ್ದರು. ಇತ್ತೀಚಿಗೆ ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಅಲ್ಲದೆ ಅನಾರೋಗ್ಯಕ್ಕೆ ಅವರ ಪತ್ನಿ ಚಿನ್ನಾ ತುತ್ತಾಗಿದ್ದಳು. ಈ ಎರಡು ಕಾರಣಗಳಿಂದ ಖಿನ್ನತೆಗೆ ಒಳಗಾದ ಆಕೆ, ತನ್ನ ಮಗಳ ಕೊಂದು ಆತ್ಮಹತ್ಯೆ ಯೋಜಿಸಿದ್ದಳು.
ಅಂತೆಯೇ ಭಾನುವಾರ ಸಂಜೆ ಪತಿ ಮನೆಯಿಂದ ಹೊರಹೋದಾಗ ಮಗಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ಚಾಕುವಿನಿಂದ ತನ್ನ ಕುತ್ತಿಗೆ ಸೀಳಿಕೊಂಡು ಆಕೆ ಆತ್ಮಹತ್ಯೆ ಯತ್ನಿಸಿದ್ದಾಳೆ. ಆಗ ಚೀರಾಟ ಕೇಳಿ ಪಕ್ಕದ ಮನೆಯವರು ಮನೆಯವರು ಬಂದಾಗ ರಕ್ತದ ಮಡುವಿಲ್ಲಿ ಚಿನ್ನಾ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ರಕ್ಷಿಸಿ ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತುರ್ತು ಚಿಕಿತ್ಸಾ ಘಟಕದಲ್ಲಿ ಆಕೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಚಿನ್ನಾ ತನ್ನ ಮಗುವನ್ನು ತಲೆದಿಂಬಿನಿಂದ ಉಸಿರುಕಟ್ಟಿಸಿ ಕೊಂದು ನಂತರ ಚಾಕುವಿನಿಂದ ಆಕೆಯ ಕುತ್ತಿಗೆ ಮತ್ತು ಮಣಿಕಟ್ಟನ್ನು ಕತ್ತರಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಅಪರಾಧ
Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್ನಲ್ಲಿ ‘INDIA STORES FOR YOU’ ಎಂಬ ಆನ್ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.
ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.
ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.
ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.
ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಅಪರಾಧ
Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಪಟ್ಟಣಗೆರೆಯ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್ನಲ್ಲಿ ಹಾಜರಿದ್ದರು ಎನ್ನಲಾಗಿದೆ.
ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.
‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಈಗಾಗಲೇ ಪಟ್ಟಣಗೆರೆ ಶೆಡ್ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.
ಧನ್ವಿರ್ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.
ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.
ಅಪರಾಧ
Excise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.
-
ಕ್ರೈಂ14 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ14 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು13 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ12 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ8 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್14 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ8 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ12 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
















