Connect with us

Uncategorized

ದಲಿತ ಕುಟುಂಬದ ಮನೆಯ ಮೇಲೆ ಅಪಾಯಕ್ಕೆ ಆಹ್ವಾನ್ವಿಸುವ ರೀತಿ ಮಣ್ಣಿನ ರಾಶಿ – ಮಡಿಕೇರಿ ಮಾದರಿ ದುರಂತದ ಆತಂಕ | ಬನ್ನೂರು ಗ್ರಾ.ಪಂ ದೌರ್ಜನ್ಯದ ವಿರುದ್ದ ಸಿಡಿದೆದ್ದ ದಲಿತರು

Published

on

Ad Widget

Ad Widget

Ad Widget

Ad Widget

ಪುತ್ತೂರು : ಡಿ 3 : ಕೌಶಲ್ಯ ಅಭಿವೃದ್ದಿ ತರಭೇತಿ ಕೇಂದ್ರಕ್ಕೆ ಮಂಜೂರಾದ ಜಾಗದಲ್ಲಿ ಬನ್ನೂರು ಪಂಚಾಯತ್ ವತಿಯಿಂದ ಮಣ್ಣು ಸಮತಟ್ಟು ಕಾಮಾಗಾರಿ ನಡೆಸುವ ವೇಳೆ ಎಸ್ ಸಿ ಸಮುದಾಯವರಿಗೆ ಸೇರಿದ ಮನೆಗೆ ಬೀಳುವ ರೀತಿ ಅಪಾಯಕಾರಿಯಾಗಿ ಮಣ್ಣು ರಾಶಿ ಹಾಕಿ ದಲಿತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಸಂತೃಸ್ತ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ, ಬಳಿಕ ಅಲ್ಲಿಗೆ ದಲಿತ ಸೇವಾ ಸಮಿತಿಯ ಮುಖಂಡರು ಆಗಮಿಸಿ ಬೆಂಬಲ ವ್ಯಕ್ತಪಡಿಸಿದ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಬೀರಿಗ ಎಂಬಲ್ಲಿ ಜ. 3 ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಳಿಕ ಸಂತೃಸ್ತ ಗ್ರಾಮಸ್ಥರು, ದಸೇಸ ಹಾಗೂ ಕಾಂಗ್ರೇಸ್ ಮುಖಂಡರು ಬನ್ನೂರು ಪಂಚಾಯತ್ ಗೆ ತೆರಳಿ ಗ್ರಾ. ಪಂ ಪಿಡಿಓ ಹಾಗೂ ಅಧ್ಯಕ್ಷರನ್ನು ತರಾಟೆ ತೆಗೆದುಕೊಂಡರು. ಈ ಸಂದರ್ಭ ಕೆಲ ದಿನಗಳಲ್ಲಿ ಮಣ್ಣು ತೆರವುಗೊಳಿಸುವ ಭರವಸೆಯನ್ನು ಪಿಡಿಓ ನೀಡಿದ್ದು, ವಾರದೊಳಗೆ ಮಣ್ಣು ತೆರವುಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ದಸೇಸ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ಅಧಿಕಾರಿಗಳಿಗೆ ನೀಡಿದರು.

Ad Widget

Ad Widget alt="Ad Widget"/>

Ad Widget

ಬನ್ನೂರು ಗ್ರಾ. ಪಂ ವ್ಯಾಪ್ತಿಯ ಬೀರಿಗ ದಲಿತ ಕಾಲೋನಿಯ ಸಮೀಪ ಸ್ಕಿಲ್ ಅಭಿವೃದ್ದಿ ತರಭೇತಿ ಕೇಂದ್ರ ಮಂಜೂರಾಗಿದ್ದು ಈ ಬಗ್ಗೆ ನೆಲ ಸಮತ್ತಟ್ಟು ಮಾಡುವ ಕಾರ್ಯವನ್ನು ಜೆಸಿಬಿ ಮೂಲಕ ಪಂಚಾಯತ್ ಇತ್ತೀಚೆಗೆ ಕೈ ಗೊಂಡಿತ್ತು.

Ad Widget

Ad Widget <> Ad Widget

ಕೌಶಲ್ಯ ಕೇಂದ್ರಕ್ಕೆ ಮಂಜೂರಾದ ಜಾಗವು ಎತ್ತರದ ಪ್ರದೇಶವಾಗಿದ್ದು ಅದರ ಕೆಳಗಡೆ ಎಸ್ ಸಿ ಸಮುದಾಯಕ್ಕೆ ಸೇರಿದ ಅನಂದ ಹಾಗೂ ಮಾಲತಿ ದಂಪತಿಗಳ ಮನೆಯಿದೆ. ಇದೀಗ ಕಾಮಗಾರಿಯ ವೇಳೆ ತೆಗೆದ ಮಣ್ಣನ್ನು ಈ ಮನೆಯ ಮೇಲ್ಬಾಗದಲ್ಲಿ ಗುಡ್ಡೆ ಹಾಕಲಾಗಿದೆ. ಇದು ಅಪಾಯವನ್ನು ಅಹ್ವಾನಿಸುವಂತಿದ್ದು ಜೋರಾದ ಮಳೆಗೆ ಅ ಮಣ್ಣಿನ ರಾಶಿ ದಲಿತರ ಮನೆಗೆ ಬೀಳುವ ಸಾಧ್ಯತೆಯಿದೆ ಎನ್ಮುವ ಆರೋಪವನ್ನು ಇಲ್ಲಿನ ಸ್ಥಳೀಯರು ಮಾಡುತ್ತಿದ್ದಾರೆ. ಮಡಿಕೇರಿ ಮಾದರಿಯ ಅನಾಹುತ ಸಂಭವಿಸುವ ಎಲ್ಲ ಸಾಧ್ಯತೆಗಳಿದ್ದು ಅಡಳಿತಶಾಹಿ ಗಂಭೀರ ನಿರ್ಲಕ್ಷ್ಯ ತೋರಿದೆ ಎನ್ನುವ ಗುರುತರ ಆರೋಪ ಸಂತ್ರಸ್ತರದು.

ಕೌಶಲ್ಯ ಅಭಿವೃದ್ದಿ ಕೇಂದ್ರಕ್ಕೆ ಚಿಕ್ಕಮುಡ್ನೂರು ಗ್ರಾಮದಲ್ಲಿರುವ ಸರ್ವೆ ನಂಬ್ರ 72 ರಲ್ಲಿ 0.75 ಸೆಂಟ್ಸ್ ಮಂಜೂರಾಗಿದೆ. ಇದರ ಅಸುಪಾಸಿನಲ್ಲಿರುವ 170 ಸರ್ವೆ ನಂಬ್ರದಲ್ಲಿದ್ದ ಸರಕಾರಿ ಭೂಮಿಯನ್ನು ಡಿ ನೋಟಿಪಿಕೇಷನ್ ಮಾಡಿ ಸುಮಾರು 10 ಕುಟುಂಬಗಳಿಗೆ 1964 ರಲ್ಲಿ ಸಾಗುವಳಿ ಚೀಟಿ ನೀಡಿದೆ. ಇದಾಗಿ 56 ವರ್ಷ ಕಳೆದರೂ ಕಂದಾಯ ಇಲಾಖೆ ಈ ಕುಟುಂಬಗಳಿಗೆ ಗಡಿ ಗುರುತು ಮಾಡಿ ಕೊಟ್ಟಿಲ್ಲ ಹಾಗೂ ಪಹಣಿಯನ್ನು ಮಾಡಿ ಕೊಟ್ಟಿಲ್ಲ. ಈ ಬಗ್ಗೆ ಹಲವು ಬಾರಿ ಸಂತೃಸ್ತರು ಮನವಿ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ.

Ad Widget

Ad Widget

ಈಗ ಕೌಶಲ್ಯ ಕೇಂದ್ರಕ್ಕೆ ಬನ್ನೂರು ಪಂಚಾಯತ್ ವತಿಯಿಂದ ಸಮತಟ್ಟು ಮಾಡಿದ ಜಾಗದಲ್ಲಿ ಈ ದಲಿತ ಕುಟುಂಬಕ್ಕೆ ಸೇರಿದ ಜಾಗವು ಇದೆ. ಯಾರದೋ ಕುಮ್ಮಕಿಗೆ ಪಂಚಾಯತ್ ನಮ್ಮ ಜಾಗವನ್ನು ಅತಿಕ್ರಮಿಸಿದೆ. ಇದರ ಹೊರತಾಗಿಯೂ ಹಲವು ಎಕ್ರೆ ಸರಕಾರಿ ಜಾಗ ಚಿಕ್ಕಮುಡ್ನೂರು ಗ್ರಾಮದಲ್ಲಿದೆ. ಹಾಗಿದ್ದರೂ ಇದೇ ಜಾಗವನ್ನು ಕೌಶಲ್ಯ ಕೇಂದ್ರಕ್ಕೆ ಒದಗಿಸುವ ಮೂಲಕ ದಲಿತ ಜಾಗವನ್ನು ಅತಿಕ್ರಮಿಸುವ ಹುನ್ನಾರ ಪಂಚಾಯತ್ ಮಾಡಿದೆಯೆಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

⅞

ಸೋಮವಾರ ಮಧ್ಯಾಹ್ನ ಅಲ್ಲಿಗೆ ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳಿಧರ ರೈ ಮಠಂತಬೆಟ್ಟು, ದಸೇಸ ಜಿಲ್ಲಾಧ್ಯಕ್ಷರಾದ ಸೇಸಪ್ಪ ಬೆದ್ರಕಾಡು , ಪುತ್ತೂರು ಸಮಿತಿ ಅಧ್ಯಕ್ಷ ಅಣ್ಣಪ್ಪ ಕಾರೆಕ್ಕಾಡು, ಬಂಟ್ವಾಳ ಸಮಿತಿ ಮಾಜಿ ಅಧ್ಯಕ್ಷ ಗಣೇಶ್ ವಿಟ್ಲ , ದಲಿತ ಪರ ಹೋರಾಟಗಾರ ಕಾಂಗ್ರೇಸ್ ಎಸ್ ಸಿ ಘಟಕದ ಅಧ್ಯಕ್ಷರಾದ ಕೇಶವ ಪಡೀಲ್ ಹಾಗೂ ಯುವ ಕಾಂಗ್ರೇಸ್ಸಿನ ಅಭಿಷೇಕ್ ಬೆಳ್ಳಿಪ್ಪಾಡಿ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಸಂತೃಸ್ತರಿಗೆ ನೈತಿಕ ಸ್ಥೈರ್ಯ ತುಂಬಿ ಬೆಂಬಲದ ಭರವಸೆ ನೀಡಿದರು . ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯವರನ್ನು ಪೋನ್ ಮೂಲಕ ಸಂಪರ್ಕಿಸಿದ ಬೆದ್ರೆಕಾಡು ಅವರು ಪರಿಸ್ಥಿತಿಯ ಗಂಭೀರತೆಯನ್ನು ಅವರಿಗೆ ಮನದಟ್ಟು ಮಾಡಿದರು . ಈ ವೇಳೆ ಇಒ ಅವರು ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದರು ಎನ್ನಲಾಗಿದೆ

ಬಳಿಕ ಸೇಸಪ್ಪ ಬೆದ್ರಕಾಡು ಅವರ ನಿರ್ದೇಶನದಂತೆ ಸಂತ್ರಸ್ಥರು ಬನ್ನೂರು ಗ್ರಾ. ಪಂ ಗೆ ತೆರಳಿ ಅಲ್ಲಿ ಪಿಡಿಒ ಚಿತ್ರಾಕ್ಷಿಯವರನ್ನು ಹಾಗೂ ಗ್ರಾ. ಪಂ ಅಧ್ಯಕ್ಷರಾದ ಜಯ ಏಕ ಅವರನ್ನು ಪಂಚಾಯತ್ ನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪಿಡಿಓರವರು ಕೂಡಲೇ ಮಣ್ಣು ತೆಗೆಸುವ ಭರವಸೆ ನೀಡಿದ್ದರು. ವಾರದೊಳಗೆ ಮಣ್ಣು ತೆರವುಗೊಳಿಸದಿದ್ದಲ್ಲಿ ಪಂಚಾಯತ್ ಮುಂದೆ ಧರಣಿ ಸತ್ಯಾಗ್ರಹ ನಡೆಸುವ ಎಚ್ಚರಿಕೆಯನ್ನು ಸೇಸಪ್ಪರವರು ನೀಡಿದ್ದು ಬಳಿಕ ಸಂತೃಸ್ತರು ಅಲ್ಲಿಂದ ತೆರಳಿದರು.

ಕೋಡಿಂಬಾಡಿ ಗ್ರಾ.ಪಂ ಸದಸ್ಯ ಜಯಪ್ರಕಾಶ್ ಬದಿನಾರು, ದಸೇಸ ಸದಸ್ಯ ಚಂದ್ರ ಬೀರಿಗ, ಮಾಜಿ ಗ್ರಾ. ಪಂ ಸದಸ್ಯ ಮಾಂಕು, ಕಿಟ್ಟ ಬೀರಿಗ, ಶುಭಕರ, ಮಾಲತಿ, ಅನಂದ, ಭಾಗೀರಥಿ, ಹೇಮ, ನಳಿನಿ ಉಪಸ್ಥಿತರಿದ್ದರು

ಕೆಳಗಡೆ ದಲಿತರ ಮನೆಯಿದ್ದು ಇಲ್ಲಿ ಈ ರೀತಿ ಅಪಾಯಕಾರಿಯಾಗಿ ಮಣ್ಣು ಸುರಿಯುವ ಮೂಲಕ ದೌರ್ಜನ್ಯ ಎಸಗಲಾಗಿದೆ. ಇದನ್ನು ಕೂಡಲೇ ತೆರವುಗೊಳಿಸಬೇಕು ಹಾಗೂ ಇಲ್ಲಿನ ಹತ್ತು ದಲಿತ ಕುಟುಂಬಗಳಿಗೆ ಸರಕಾರ ಮಂಜೂರು ಮಾಡಿದ ದರ್ಖಾಸನ್ನು ಗಡಿ ಗುರುತು ಮಾಡಿ ಪಹಣಿ ಮಾಡಿ ಕೊಡಬೇಕು

ಸೇಸಪ್ಪ ಬೆದ್ರಕಾಡು

ಮಾನವೀಯತೆ ಮರೆತು ನಮ್ಮ ಮನೆಯ ಮೇಲ್ಗಡೆ ಈ ರೀತಿ ಮಣ್ಣು ಸುರಿದಿದ್ದಾರೆ . ನಮ್ಮ ಜೀವಕ್ಕೇನಾದರೂ ಅನಾಹುತ ಸಂಭವಿಸಿದರೆ ಜಿಲ್ಲಾಡಳಿತ ನೇರ ಹೊಣೆ

ಅನಂದ, ಸಂತ್ರಸ್ತ
Ad Widget
Click to comment

Leave a Reply

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.

ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.

Ad Widget

Ad Widget

ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ  ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!