ಮಂಗಳೂರು
Padmaraj R ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಶಿಷ್ಯ ಪದ್ಮರಾಜ್ ರಾಮಯ್ಯ ಗೆ ಒಲಿದ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ –
ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಗಳೂರು ಲೋಕಸಭಾ ಕ್ಷೇತ್ರದಿಂದ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ , ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್ ರಾಮಯ್ಯನವರಿಗೆ ಟಿಕೆಟ್ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ ನೀಡುವ ಮೂಲಕ ಸಮಾಜಕ್ಕೊಬ್ಬ ಮಾದರಿ ವಕೀಲರಾಗಿದ್ದಾರೆ.
ಪದ್ಮರಾಜ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರುನಲ್ಲಿ ವಾಸ್ತವ್ಯವಿದ್ದ ಮಂಗಳೂರು ಮೂಲದ ಎಚ್.ಎಂ. ರಾಮಯ್ಯ ಪೂಜಾರಿ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರ. ಅವರು ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿ ಮುಂದೆ ಬಿ.ಎ. ಪದವಿಯನ್ನು ಬೆಳ್ತಂಗಡಿಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು

1995ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿಯವರೊಂದಿಗೆ ಪ್ರಾರಂಭಿಸಿದ ಇವರು ನಾಲ್ಕು ವರ್ಷಗಳ ಬಳಿಕ ಮಂಗಳೂರಿನ ಬಳ್ಳಾಲ್‌ಬಾಗ್‌ನಲ್ಲಿ ಸ್ವಂತ ಕಚೇರಿ ಪ್ರಾರಂಭಿಸಿದರು. ವೃತ್ತಿ ಜೀವನದ ಆರಂಭದ ಸಮಯದಲ್ಲಿ ಹಿರಿಯ ವಕೀಲರಾದ ಪಿ.ಗಂಗಾಧರ್ ಅವರ ಸಲಹೆಯಂತೆ ಆಗಿನ ಬಿಲ್ಲವರ ಯೂನಿಯನ್ ಸದಸ್ಯರಾದರು. ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದಿದ್ದರೂ ಬಿ.ಜನಾರ್ದನ ಪೂಜಾರಿಯವರು ಸ್ಪರ್ಧಿಸಿದ ಎಲ್ಲಾ ಚುನಾವಣೆ ಸಂದರ್ಭದಲ್ಲೂ ಅವರಿಗಾಗಿ ದುಡಿದಿದ್ದಾರೆ.

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡಿರುವ ಪದ್ಮರಾಜ್ ಅವರಿಗೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ, ಭಕ್ತಿ. ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿಪದ್ಮರಾಜ್ ರವರು ಮಂಗಳೂರಿನ ನವರಾತ್ರಿ ಉತ್ಸವ ವಿಶ್ವ ಪ್ರಸಿದ್ಧಿ ಪಡೆಯಲು ಶ್ರಮ ಪಟ್ಟಿದ್ದಾರೆ.
ಕೊರೊನಾ ಮಹಾಮಾರಿಯಿಂದಾಗಿ 40 ದಿನಗಳ ಲಾಕ್‌ಡೌನ್ ಉಂಟಾದ ಸಂದರ್ಭ ಬಿ.ಜನಾರ್ದನ ಪೂಜಾರಿಯವರ sUcneyMte ದಿನಂಪ್ರತಿ ದೇವಸ್ಥಾನದ ವತಿಯಿಂದ ಸುಮಾರು 1000 ಬಡವರು, ನಿರಾಶ್ರಿತರಿಗೆ ಹಾಗೂ ವಲಸೆ ಕೂಲಿ ಕಾರ್ಮಿಕರಿಗೆ ಅನ್ನದಾನ ನಡೆಯುತ್ತಿತ್ತು. ಈ ಸಂದರ್ಭ ಪದ್ಮರಾಜ್ ಅವರೇ ಖುದ್ದಾಗಿ ಸೇವಾದಳದವರೊಂದಿಗೆ ವಿವಿಧ ಪ್ರದೇಶಗಳಿಗೆ ತೆರಳಿ ಅನ್ನದಾನ ವಿತರಣೆಯಲ್ಲಿ ಭಾಗಿಯಾಗುತ್ತಿದ್ದರು
ಪದ್ಮರಾಜ್ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ದೇವಸ್ಥಾನದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 300 ಕ್ವಿಂಟಾಲ್ ಅಕ್ಕಿದಾನ ಮಾಡಲಾಗಿತ್ತು. ಎರಡನೇ ಲಾಕ್‌ಡೌನ್ ಸಂದರ್ಭದಲ್ಲಿ ತನ್ನ ಮುಂದಾಳತ್ವದ ಗುರು ಬೆಳದಿಂಗಳು ಪೌಂಡೇಶನ್ ಮೂಲಕ ಸಹಸ್ರಾರು ನೊಂದವರಿಗೆ ದಿನಸಿ, ಆಹಾರ ಸಾಮಾಗ್ರಿ ತಲುಪಿಸಿದರು. ಗುರು ಬೆಳದಿಂಗಳು ಪೌಂಡೇಶನ್ ಅಶಕ್ತರ ಕಣ್ಣೀರು ಒರೆಸಲು ಪದ್ಮರಾಜ್ ಆರಂಭಿಸಿದ ಪೌಂಡೇಷನ್. ಇದರ ಮೂಲಕ ಸಾವಿರಾರು ನೊಂದವರಿಗೆ ಸಹಾಯ ಮಾಡಲಾಗಿದೆ.
ಯುವವಾಹಿನಿ ಕೇಂದ್ರ ಸಮಿತಿಯ ಗೌರವ ಸಲಹೆಗಾರರು, ಜೆ.ಸಿ. ಪ್ರತಿಷ್ಠಾನ ದ.ಕ. ಜಿಲ್ಲಾ ಗೌರವ ಸಂಚಾಲಕ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಂಘ ಸಂಸ್ಥೆಗಳಿಂದ ಇವರ ಸಮಾಜಮುಖಿ ಸೇವೆಗೆ ಗೌರವ ಸಂದಿದೆ. ನಮ್ಮ ಕುಡ್ಲ ವಾಹಿನಿ ನೀಡುವ ಪ್ರಶಸ್ತಿಗೂ ಭಾಜನರಾಗಿದ್ದಾರೆ.
ಪದ್ಮರಾಜ್‌ರವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಅದರ್ಶಗಳನ್ನು ಮೈಗೂಡಿಸಿಕೊಂಡವರು. 2 ವರ್ಷಗಳ ಹಿಂದೆ ಗಣ ರಾಜ್ಯೋತ್ಸವದ ಸಂದರ್ಭ ಕೇಂದ್ರ ಸರಕಾರ ನಾರಾಯಣ ಗುರುಗಳ ಟ್ಯಾಬ್ಲೊ ಪ್ರದರ್ಶನವನ್ನು ನಿರಾಕರಿಸಿದಾಗ ಅದರ ವಿರುದ್ಧ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ದ್ದವರು. ಇವರ ಮುಂದಾಳತ್ವದಲ್ಲಿ ಗುರುಗಳಿಗೆ ಆದ ಅವಮಾನದ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿತ್ತು. ಹಿಂದಿನ ರಾಜ್ಯ ಸರಕಾರದ ಅವಧಿಯಲ್ಲಿ 10ನೇ ತರಗತಿಯ ಪಠ್ಯಪುಸ್ತಕದ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಠ್ಯ ಕೈಬಿಟ್ಟದ್ದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವ ಮೂಲಕ ಗುರುಗಳ ಪಠ್ಯವನ್ನು ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
-
Uncategorized15 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್10 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ14 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ14 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ13 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್14 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















