Connect with us

ರಾಜಕೀಯ

Brijesh Chowta-ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆ : ಬ್ರೀಜೇಶ್‌ ಚೌಟ

Published

on

Ad Widget

Ad Widget

Ad Widget

Ad Widget

ವಿಟ್ಲ: ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ ಮಾಡಬೇಕೆಂಬ ಕಲ್ಪನೆಯನ್ನು ಕಾಂಗ್ರೆಸ್ ಇಟ್ಟುಕೊಂಡಿದೆ. ವ್ಯಕ್ತಿ ಮುಖ್ಯವಾಗಿರದೆ ಸಮಾಜದ ಕೆಲಸವನ್ನು ಒಗ್ಗಟ್ಟಿನಿಂದ ಮಾಡಬೇಕು. ಹಿಂದುತ್ವದ ವಿಚಾರಧಾರೆಯಲ್ಲಿ ಬದುಕು ನಡೆಸಿದರೆ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ. ಕಾರ್ಯಕರ್ತರ ಬೆಂಬಲ ಇಲ್ಲದೆ ಜಿಲ್ಲೆಯಲ್ಲಿ ಯಾವುದೇ ಕೆಲಸ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಷ್ ಚೌಟ ಹೇಳಿದರು.

Ad Widget

Ad Widget

Ad Widget

Ad Widget

ಕಂಬಳಬೆಟ್ಟು ಧರ್ಮನಗರ ಭಜನಾ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ತುಳುನಾಡಿನ ದೈವ ದೇವರ ಆಶೀರ್ವಾದಿಂದ ಟಿಕೆಟ್ ಲಭಿಸಿದೆ. ಯಾವುದೇ ಭ್ರಮೆಯಲ್ಲಿ ಇರದೆ, ಹಿಂದುತ್ವದ ವಿಚಾರದಲ್ಲಿ ಸ್ಪಷ್ಟವಾಗಿದ್ದೇವೆ. ದಕ್ಷಿಣ ಕನ್ನಡ ದೇವರು ಪ್ರೀತಿಸುವ ಜಿಲ್ಲೆಯಾಗಿದ್ದು, ಇಲ್ಲಿನ ಜನರು ಸಾಮರ್ಥ್ಯವಂತರಾಗಿದ್ದಾರೆ. ಮುಂದಿನ 25ವರ್ಷ ಭಾರತದ ಅಮೃತ ಕಾಲವಾಗಿದ್ದು, ಜನರಿಗೆ ಸಾಧನೆಗಳಿಗೆ ವೇದಿಕೆ ನೀಡುವ ಕಾರ್ಯ ಮಾಡಲಾಗುವುದು. ಕಾರ್ಯಕರ್ತರನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಾಗುವುದು. ಕಾರ್ಯಕರ್ತರ ಚುನಾವಣೆಯಾಗಿದ್ದು, ಮೋದಿಗೆ ಶಕ್ತಿ ತುಂಬುವ ಕಾರ್ಯವಾಗಬೇಕು. ಕನಸಿನ ದಕ್ಷಿಣ ಕನ್ನಡ ನಿರ್ಮಾಣವನ್ನು ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರಬೇಕು.

Ad Widget

Ad Widget <> Ad Widget

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಚುನಾವಣೆಯ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಸಮರ್ಥ ಅಭ್ಯರ್ಥಿಯನ್ನು ಕ್ಷೇತ್ರಕ್ಕೆ ನೀಡಿದ್ದು, 4ಲಕ್ಷ ಮತದ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿದೆ. ಹತ್ತು ವರ್ಷದಿಂದ ಪಕ್ಷದ ಯೋಚನೆಗಳೊಂದಿಗೆ ದೇಶವನ್ನು ಮುನ್ನಡೆಸುವ ಕಾರ್ಯವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ. ಮುಂದೆಯೂ ಮೋದಿಯವರು ಹಿಂದುತ್ವದ ನೆಲೆಗಟ್ಟಿನಲ್ಲಿ ದೇಶವನ್ನು ಮುನ್ನಡೆಸುವಂತಾಗಬೇಕು. ದಿನದ ಮೂರು ಗಂಟೆ ಪಕ್ಷದ ಕೆಲಸಕ್ಕಾಗಿ ಇಡುವ ಮೂಲಕ ಕೇಂದ್ರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವಾಗಬೇಕು. ಮುಂದಿನ ವಿಧಾನ ಸಭಾ ಕ್ಷೇತ್ರ ಬಿಜೆಪಿಯದ್ದು ಎಂಬ ರೀತಿಯಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು.

ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹರಳೆ, ಚುನಾವಣಾ ಸಂಚಾಲಕ ಚಣಿಲ ತಿಮ್ಮಪ್ಪ ಶೆಟ್ಟಿ, ಸಹ ಸಂಚಾಲಕ ಉಮೇಶ್ ಗೌಡ, ಉಸ್ತುವಾರಿಗಳಾದ ಸುಲೋಚನಾ ಭಟ್, ಶಂಭು ಭಟ್, ಆರ್. ಸಿ. ನಾರಾಯಣ, ಸುನಿಲ್, ಹರೀಶ್, ವಿದ್ಯಾ ಗೌರಿ, ಸಹಜ್ ರೈ, ಅರುಣ್ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

Ad Widget

Ad Widget

ಸಾಜ ರಾಧಾಕೃಷ್ಣ ಆಳ್ವ ಸ್ವಾಗತಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು ಪ್ರಸ್ತಾವನೆಗೈದರು. ಹರಿಪ್ರಸಾದ್ ಯಾದವ್ ವಂದಿಸಿದರು. ಗೋವಿಂದರಾಜ್, ಕಾರ್ತಿಕ್ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಮಂಗಳೂರು

Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget alt="Ad Widget"/>

Ad Widget

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.

Ad Widget

Ad Widget <> Ad Widget

ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

Ad Widget

Ad Widget

ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.

ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.

ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ

ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.

ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.

ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು

ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.

ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.

ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!