Connect with us

ಸ್ಥಳೀಯ

Nagarthapet protest-ನಗರ್ತಪೇಟೆ ಪ್ರತಿಭಟನೆ: ಶೋಭಾ ಸೇರಿ 44 ಮಂದಿ ವಿರುದ್ಧ ಪ್ರಕರಣ-ಅನುಮತಿ ಇಲ್ಲದೆ ಪ್ರತಿಭಟಿಸಿ, ಸಂಚಾರಕ್ಕೆ ಅಡಚಣೆ ಆರೋಪ

Published

on



Ad Widget

Ad Widget

Ad Widget

Ad Widget

ಇತ್ತೀಚೆಗೆ ನಗರ್ತಪೇಟೆಯಲ್ಲಿ ಅಕ್ರಮವಾಗಿ ರಸ್ತೆ ಬಂದ್ ಮಾಡಿ ಪ್ರತಿಭಟಿಸಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಆರೋಪದ ಅಡಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಸೇರಿ 44 ಮಂದಿ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಭಜನೆ ಹಾಕಿದ ಕಾರಣಕ್ಕೆ ಪುಂಡರ ಗುಂಪೊಂದು ಆತನ ಮೇಲೆ ಹಲ್ಲೆ ಮಾಡಿದ್ದ ಘಟನೆ ಖಂಡಿಸಿ ಮಾ.19ರಂದು ನಗರ್ತಪೇಟೆಯ ಸಿದ್ದಣ್ಣಗಲ್ಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಯಾವುದೇ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ನೂರಾರು ಕಾರ್ಯಕರ್ತರ ಜತೆಗೆ ಪ್ರತಿಭಟನೆ ಮಾಡಲಾಗಿತ್ತು. ಇದರಿಂದ ಜನರು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಆದೇಶದ ಅನ್ವಯ ನಗರದಲ್ಲಿ ಸ್ವಾತಂತ್ರ್ಯ ಉದ್ಯಾನ ಹೊರತು ಪಡಿಸಿ ಬೇರೆ ಕಡೆ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಹೀಗಾಗಿ ಸರ್ಕಾರದ ಸುತ್ತೋಲೆ ಉಲ್ಲಂಘನೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ, ಕಾನೂನು-ಸುವ್ಯವಸ್ಥೆಗೆ ಭಂಗ ಮಾಡಿದ ಆರೋಪದಡಿ ಹಲಸೂರು ಗೇಟ್ ಠಾಣೆ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget <> Ad Widget

Ad Widget
Click to comment

Leave a Reply

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading