ಮಂಗಳೂರು
pilikula Zoo : ಪಿಲಿಕುಳ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ ಸರ್ಪ ! ಹೌಹಾರಿದ ಸ್ಥಳೀಯರು – ಅಷ್ಟಕ್ಕೂ ಈ ವಿಷಕಾರಿ ಹಾವು ತಪ್ಪಿಸಿಕೊಂಡಿದ್ದು ಯಾಕೆ ಗೊತ್ತೆ ?
ಮಂಗಳೂರು : ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಿಂದ ಬೃಹತ್ ಕಾಳಿಂಗ ಸರ್ಪ ತಪ್ಪಿಸಿಕೊಂಡ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಬಳಿಕ ಸಿಬ್ಬಂದಿಗಳು ಈ ವಿಷಪೂರಿತ ಹಾವನ್ನು ಸುರಕ್ಷಿತವಾಗಿ ಉದ್ಯಾನವನಕ್ಕೆ ಮರಳಿ ಸೇರಿಸಿ ನಿಟ್ಟುಸಿರು ಬಿಟ್ಟಿದ್ದಾರೆ. ಆದರೇ ಈ ಘಟನೆ ಕೆಲ ಗಂಟೆಗಳ ಕಾಲ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಯಿತು.
ಶುಕ್ರವಾರ ಮುಂಜಾನೆ ಜೈವಿಕ ಉದ್ಯಾನವನದ ಟಿಕೆಟ್ ಕೌಂಟರ್ ಬಳಿ ಕಾಳಿಂಗ ಸರ್ಪ ಕಾಣಿಸಿದೆ. ಗುರುವಾರ ರಾತ್ರಿ ಬ್ರೀಡಿಂಗ್ ವೇಳೆ ಹೆಣ್ಣು ಕಾಳಿಂಗ ಸರ್ಪ, ಬಲೆಯಿಂದ ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಟಿಕೆಟ್ ಕೌಂಟರ್ ಬಳಿ ಸರ್ಪವನ್ನು ನೋಡಿದ ಸ್ಥಳೀಯರು ಹೌಹಾರಿದ್ದಾರೆ. ಬಳಿಕ ಅದು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ.
ಈ ಬಗ್ಗೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಳಿಂಗ ಸರ್ಪ ತಪ್ಪಿಸಿಕೊಳ್ಳಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ್ದಾರೆ. ವಿಷಪೂರಿತ ಹಾವು ಕಾಳಿಂಗ ಸರ್ಪವಾಗಿರುವುದರಿಂದ ಸ್ಥಳದಲ್ಲಿ ಸೇರಿದ ಮಂದಿ ಆತಂಕಗೊಂಡಿದ್ದರು. ಸುಮಾರು 7 ಅಡಿಗಿಂತಲೂ ಅಧಿಕ ಗಾತ್ರದ ಕಾಳಿಂಗವೆಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. , ಬಳಿಕ ಕಾಳಿಂಗ ಸರ್ಪ ಹಿಡಿಯುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಬಿಸಿಲ ಧಗೆಯಿಂದ ಪಿಲಿಕುಳ ಜೈವಿಕ ಉದ್ಯಾನವನದ ಜೀವಿಗಳು ಇರಲಾಗದೆ ಶಕ್ತಿಮೀರಿ ಹೊರಬರಲು ಪ್ರಯತ್ನಿಸುತ್ತಿದೆ, ಕೆಲವೆಡೆ ಸಮರ್ಪಕ ಭದ್ರತಾ ವ್ಯವಸ್ಥೆಗಳಿಲ್ಲದ ಕಾರಣ ಜೀವಿಗಳು ಕಣ್ಣಪ್ಪಿಸಿ ಹೊರಬರುತ್ತಿದೆ ಎಂಬ ಆರೋಪವೂ ಇದೆ.
ಗುರುವಾರ ರಾತ್ರಿ ಬ್ರೀಡಿಂಗ್ ವೇಳೆ ಹೆಣ್ಣು ಕಾಳಿಂಗ ಸರ್ಪ, ಬಲೆಯ ನಡುವೆ ತಪ್ಪಿಸಿಕೊಂಡಿದ್ದು ಶುಕ್ರವಾರ ಸಿಬ್ಬಂದಿ ಅದನ್ನು ಪತ್ತೆ ಮಾಡಿ ಮೃಗಾಲಯಕ್ಕೆ ವಾಪಸ್ ಕಳುಹಿಸಿದ್ದಾರೆ. ಶುಕ್ರವಾರ ಪ್ರವಾಸಿಗರು ಆಗಮಿಸುವುದಕ್ಕೂ ಮುನ್ನ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜೈವಿಕ ಉದ್ಯಾನವನದ ಅಧಿಕಾರಿಗಳು ಸ್ಪಷ್ಪಪಡಿಸಿದ್ದಾರೆ.
ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಸಮಯ
ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಕೇಂದ್ರ ಎಂಬ ಮನ್ನಣೆಗೆ ಪಾತ್ರವಾಗಿರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಾನಾಭಿವೃದ್ಧಿಗೆ ಪೂರಕ ವಾತವರಣ, ಆರೈಕಾ ವ್ಯವಸ್ಥೆಯಿದ್ದು, ಇಲ್ಲಿ ಅವುಗಳಿಗೆ ಕಾಡಿನಲ್ಲಿ ಇರುವ ವಾತವರಣ ನಿರ್ಮಾಣ ಮಾಡಲಾಗಿದೆ. ಪ್ರಸ್ತುತ ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಸಮಯವಾಗಿದ್ದರಿಂದ ಸರ್ಪಗಳು ಸೂಕ್ತ ಸಂಗಾತಿಯ ಹುಡುಕಾಟದಲ್ಲಿರುತ್ತದೆ. ಇದೇ ಕಾರಣದಿಂದ ಶುಕ್ರವಾರ ಕಾಳಿಂಗ ಸರ್ಪವು ತಪ್ಪಿಸಿಕೊಂಡು ಹೊರಬಂದಿದೆ ಎಂದು ಪಿಲಿಕುಳ ಅಧಿಕಾರಿಗಳು ತಿಳಿಸಿದ್ದಾರೆ.
ಸಂತಾನೋತ್ಪತ್ತಿ ಸಮಯವಾಗಿದ್ದರಿಂದ ಕಾಳಿಂಗ ಸರ್ಪವು ಪಿಲಿಕುಳದ ಜೈವಿಕ ಉದ್ಯಾನವನದಿಂದ ಹೊರಬಂದ ವಿಚಾರ ತಿಳಿಯಿತು. ತಕ್ಷಣದಲ್ಲಿ ಅದನ್ನು ಹಿಡಿದು ಸಂರಕ್ಷಣೆ ಮಾಡಲಾಗಿದೆ. ಸೂಕ್ತ ತಪಾಸಣೆ ಮಾಡಿ ಜೈವಿಕ ಉದ್ಯಾನದದಲ್ಲಿರಿಸಲಾಗಿದೆ. ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಾಳಿಂಗ ಸರ್ಪದ ಸಂತಾನೋತ್ಪತ್ತಿಗೆ ಪೂರಕವಾದ ವ್ಯವಸ್ಥೆ ಇದೆ. ಈಗಾಗಲೇ 180 ಸರ್ಪದ ಮರಿಗಳನ್ನು ಬ್ರೀಡಿಂಗ್ ಮಾಡಲಾಗಿದೆ ಎಂದು ಪಿಲಿಕುಲ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
-
ಬಿಗ್ ನ್ಯೂಸ್23 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್22 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್22 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ22 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ21 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು20 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















