ದಕ್ಷಿಣ ಕನ್ನಡ
Vitla Theft: ವಿಟ್ಲ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಸರಣಿ ಕಳ್ಳತನ ? ಬೆಳಿಗ್ಗೆ ದೂರು ನೀಡುವಾಗಷ್ಟೆ ಬಂತು ಪೊಲೀಸರ ಗಮನಕ್ಕೆ ?!
ವಿಟ್ಲ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಎರಡು ಅಂಗಡಿಗಳಿಗೆ ಹಾಗೂ ವಿಟ್ಲದ ಮೇಗಿನ ಪೇಟೆಯಲ್ಲಿರುವ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೂಯ್ದ ಘಟನೆ ನಡೆದಿದ್ದು ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಚುನಾವಣೆ ಹಿನ್ನಲೆ ವಿಟ್ಲ ಸುತ್ತಮುತ್ತಲಿನ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು,ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕೃತ್ಯ ನಡೆಸಿ, ಅಷ್ಟೇ ಸಲೀಸಾಗಿ ವಾಪಸ್ಸು ಆಗಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.
ವಿಟ್ಲ ಪೊಲೀಸ್ ಠಾಣೆಯ ಹಿಂಭಾಗ, ವಶ ಪಡಿಸಿಕೊಂಡ ವಾಹನಗಳನ್ನು ಸಂಗ್ರಹಿಸುಡುವ ಸ್ಥಳವಿದ್ದು, ಅದಕ್ಕೆ ತೆರಳುವ ರಸ್ತೆಯಲ್ಲೇ ದಿನಸಿ ಅಂಗಡಿಯೊಂದಿದೆ. , ಅದಕ್ಕೆ ಕಳ್ಳರು ಕನ್ನ ಹಾಕಿದ್ದು. ಈ ಮೂಲಕ ವಿಟ್ಲ ಠಾಣಾ ಪೊಲೀಸರ ಭಯ ತಮ್ಮಗಿಲ್ಲ ಎಂದು ಕಳ್ಳರು ಘಂಟಘೋಷವಾಗಿ ಸಾರಿದ್ದಾರೆ.
ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ.ಶುಕ್ರವಾರ ರಾತ್ರಿ ಗಂಟೆ 11.15ರ ಸುಮಾರಿಗೆ ಇಬ್ಬರು ಕಳ್ಳರು ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಕಾಣಿಸುತ್ತಿದೆ. ದಿನಸಿ ಅಂಗಡಿಯ ಹಿಂಭಾಗದಲ್ಲಿ ಛಾವಣಿಯ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ನಲ್ಲಿದ್ದ ರೂ ೮೦೦೦ ಮತ್ತು ಕಟ್ಟಿಟ್ಟಿದ್ದ ದಿನಸಿ ಸಾಮಾಗ್ರಿಯನ್ನು ಹೊತ್ತೊಯ್ದಿದ್ದಾರೆ.

ಬಳಿಕ ಪಕ್ಕದ ದೀಪಕ್ ಬೀಡಿ ಕಂಟ್ರಾಕ್ಟರ್ ನಿಸಾರ್ ವಿ.ಎಸ್. ಅವರಿಗೆ ಸೇರಿದ ಬೀಡಿ ಬ್ರ್ಯಾಂಚ್ ಹಿಬ್ಬಂದಿ ಬಾಗಿಲು ಮುರಿದು, ಒಳ ನುಗ್ಗಿದ್ದ ಕಳ್ಳರು, ಸಂಪೂರ್ಣ ಜಾಲಾಡಿ ಅಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಬಳಿಕ ಠಾಣೆಯಿಂದ ತುಸು ದೂರವಿರುವ ಮೇಗಿನ ಪೇಟೆಯಲ್ಲಿರುವ ಫೆಲಿಸ್ ಪಾಯಸ್ ಅವರಿಗೆ ಸೇರಿದ ಕೋಳಿಯ ಅಂಗಡಿಯ ಕಿಟಕಿ ಕಿತ್ತು ತೆಗೆದು ಒಳ ನುಗ್ಗಿದ ಕಳ್ಳರು, ಅಲ್ಲಿ ಕೂಡ ಒಂದಷ್ಟು ನಗದು ದೋಚಿದ್ದಾರೆ.

ಶುಕ್ರವಾರ ರಾತ್ರಿಯಿಂದ ಶನಿವಾರ ನಸಕಿನ ಜಾವದ ಮಧ್ಯೆ ಮೂರು ಅಂಗಡಿಯಲ್ಲಿ ಕಳ್ಳತನ ನಡೆದರೂ, ಅಂಗಡಿ ಮಾಲೀಕರು ಠಾಣೆಗೆ ತೆರಳಿ ದೂರು ನೀಡುವವರೆಗೆ ಕೃತ್ಯ ಪೊಲೀಸರ ಗಮನಕ್ಕೆ ಬಂದಿಲ್ಲದಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ. ಇನ್ನು ಕೃತ್ಯ ಎಸಗಲು ಇಬ್ಬರು ಕಳ್ಳರು ದಿನಸಿ ಅಂಗಡಿ ಹೋಗುವ ವೇಳೆ ಅಲ್ಲಿ ಮಲಗಿದ್ದ ವೃದ್ದರೊರ್ವರು ಕಳ್ಳರನ್ನು ಪ್ರಶ್ನಿಸಿದಾಗ, ಅವರು “ ಅಂಗಡಿ ಖಾಲಿ ಮಾಡಲು “ ಎಂದು ಉತ್ತರಿಸಿರುವುದಾಗಿ ತಿಳಿದು ಬಂದಿದೆ
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized17 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್20 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















