ಶಿಕ್ಷಣ
Krishna Prasad-ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್
ಪುತ್ತೂರು: ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದ ಮೂಲೆ ಮೂಲೆಗೂ ಅವರ ತತ್ವ ಹಾಗೂ ಯುವಪೀಳಿಗೆಗೆ ನೀಡಿದ ಸ್ಪೂರ್ತಿಯ ಕರೆಗಳಿಂದಾಗಿ ಇಡೀ ಪ್ರಪಂಚಕ್ಕೇ ಆಧ್ಯಾತ್ಮಿಕ ಗುರುವಾಗಿ ಮಾರ್ಪಟ್ಟವರು. ಹಾಗೆಯೇ ಭಾರತೀಯ ತತ್ವ ಹಾಗೂ ಮಹತ್ವವನ್ನು ಪಾಶ್ಚಿಮಾತ್ಯ ದೇಶಗಳಿಗೆ ಪರಿಚಯಿಸುವಲ್ಲಿ ಮೊದಲಿಗರೆಂದರೆ ತಪ್ಪಾಗುವುದಿಲ್ಲ. ಜೊತೆಗೆ ನುಡಿದಂತೆ ನಡೆದವರು ಸ್ವಾಮಿ ವಿವೇಕಾನಂದರು ಎಂದು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಲ್ಲಡ್ಕ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು, ಇಲ್ಲಿ ನಡೆದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವದ ಸವಿನೆನಪಿಗಾಗಿ ಜಗತ್ತಿಗೆ ಭಾರತದ ಆಧ್ಯಾತ್ಮಿಕ ಚಿಂತನೆಯನ್ನು ಪರಿಚಯಿಸಿದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದರ ಕುರಿತಾದ ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.
ವಿವೇಕಾನಂದರ ವ್ಯಕ್ತಿತ್ವ ನಮಗೆಲ್ಲ ಆದರ್ಶವಾಗಬೇಕು. ನಮಗೂ ಈ ನೆಲಕ್ಕೂ ಇರುವ ಸಂಬAಧವನ್ನು ಸದಾ ಅವರು ನೆನಪಿಸುತ್ತಾ ಇದ್ದವರು. ತನಗಾಗಿ ಏನನ್ನೂ ಮಾಡಿಕೊಳ್ಳದೆ, ನಮ್ಮನ್ನು ಕೀಳಾಗಿ ಕಾಣುತ್ತಿದ್ದವರ ಮುಂದೆ ಭಾರತದ ಹಿರಿಮೆಯನ್ನು ಸಾರಿ ಭಾರತೀಯರ ಉದ್ಧಾರಕ್ಕಾಗಿ ಹಗಲಿರುಳು ಶ್ರಮಿಸಿದವರು. ವಿದ್ಯಾರ್ಥಿಗಳು ಬದುಕಿಗೆ ವಿವೇಕಾನಂದರ ತತ್ತ್ವಗಳನ್ನು ಪ್ರತಿನಿತ್ಯ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ. ವಿಷ್ಣು ಗಣಪತಿ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಆಧ್ಯಯನ ಕೇಂದ್ರದ ಸಂಯೋಜಕಿ ಹಾಗೂ ಸಮಾಜಶಾಸ್ತç ವಿಭಾಗ ಮುಖ್ಯಸ್ಥೆ ವಿದ್ಯಾ ಎಸ್ ಸ್ವಾಗತಿಸಿ, ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ವಂದಿಸಿದರು.
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.
4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.
4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.
ವೈಯಕ್ತಿಕ ವಿಭಾಗ:
- ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
- ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.
ಪುತ್ತೂರು ನ. 24: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆಯಿಷತ್ ಶಮಾ ಎ, ಸಿಂಚನ ಬಿ ಹಾಗೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅದಿತಿ, ಶ್ರೀದೇವಿ ಎನ್, ಗಣೇಶ್ ಟಿ ಡಬ್ಲ್ಯೂ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳಾದ ರಂಜನ್ ಎಸ್, ರತನ್ ಎನ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದವರು. ಈ ಮೂಲಕ ವಿದ್ಯಾರ್ಥಿಗಳು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾದ್ಯಾಪಕರುಗಳಾದ ಸಂತೋಷ್ ಶೆಟ್ಟಿ ಅವರು ರಾಜಕೀಯ ಶಾಸ್ತ್ರ, ರಶ್ಮಿ ವಿ, ಶ್ರದ್ಧಾ ಎ ಎಸ್ ಅವರು ಕಂಪ್ಯೂಟರ್ ಸೈನ್ಸ್, ಪೃಥ್ವಿ ಕೆ ಅವರು ಕಾಮರ್ಸ್, ಸುಜಿತ್ ಎಸ್, ಕೃತಿ ಎ ಅವರು ಭೌತಶಾಸ್ತ್ರ ಹಾಗೂ ಅಂಜು ಜೇಮ್ಸ್ ಅವರು ಗಣಿತ ಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಸಂಚಾಲಕ ರೆ. ಡಾ. ಜೆ. ಬಿ. ಸಲ್ದಾನ್ಹ, ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಡಾ. ವಿನಯಚಂದ್ರ, ಡಾ. ವಿಪಿನ್ ನಾಯ್ಕ್, ಪ್ರತೀಕ್ಷಾ ಅಭಿನಂದಿಸಿದ್ದಾರೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
-
ಶಿಕ್ಷಣ22 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು22 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್24 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಅಪರಾಧ6 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಕಾರ್ಯಕ್ರಮಗಳು23 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ22 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಸ್ಥಳೀಯ4 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಬಿಗ್ ನ್ಯೂಸ್3 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!















